• Tag results for ವಿದ್ಯಾರ್ಥಿಗಳು

ದಕ್ಷಿಣ ಕನ್ನಡ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: ಉತ್ತರ ಕರ್ನಾಟಕ ವಿದ್ಯಾರ್ಥಿಗಳ ಗುರುತರ ಸಾಧನೆ!

ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿಗಳು ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧನೆ ಮಾಡಿದ್ದಾರೆ.

published on : 11th August 2020

ಇಂದು ಎಸ್ಎಸ್ಎಲ್ ಸಿ ಫಲಿತಾಂಶ: ಕೊರೋನಾ ವಾತಾವರಣದಲ್ಲಿ ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ; ಸುರೇಶ್ ಕುಮಾರ್

ಇಂದು ಮಧ್ಯಾಹ್ನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದ್ದು, ಬೇರೆಯವರೊಂದಿಗೆ ಹೋಲಿಕೆ ಮಾಡಿ ಮಕ್ಕಳ ಮನಸ್ಸಿಗೆ ನೋವಾಗುವಂತೆ ಮಾಡಬೇಡಿ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಸೋಮವಾರ ಬೆಳಿಗ್ಗೆ ಪೋಷಕರಲ್ಲಿ ಮನವಿ ಮಾಡಿದ್ದಾರೆ.

published on : 10th August 2020

ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ

ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು ಜಾಗತಿಕ ಶೈಕ್ಷಣಿಕ ಕೇಂದ್ರವನ್ನಾಗಿ ಬದಲಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

published on : 1st August 2020

ನೌಕರಿ ಕಳೆದುಕೊಂಡ ಶಿಕ್ಷಕನನಿಗೆ ವಿದ್ಯಾರ್ಥಿಗಳಿಂದ ನೆರವಿನ ಗಿಫ್ಟ್!

ಸಂಕಷ್ಟಕ್ಕೆ ಸಿಲುಕಿದ ಶಿಕ್ಷಕರ ನೆರವಿಗೆ ಹಳೆಯ ವಿದ್ಯಾರ್ಥಿಗಳು ಧಾವಿಸಿ, ಕೊರೋನಾ ಕಾಲದಲ್ಲಿ ಜೀವನ ನಿರ್ವಹಣೆಗೆ ಸಹಾಯ ಹಸ್ತ ಚಾಚಿದ್ದಾರೆ. 

published on : 31st July 2020

ಎಂಬಿಬಿಎಸ್ ವಿದ್ಯಾರ್ಥಿಗಳಿಂದ ಕೋವಿಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನ

ಕೋವಿಡ್ ಪರೀಕ್ಷೆಯನ್ನು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ನಡೆಸಲು ಹೆಚ್ಚಿನ ಮಾನವ ಶಕ್ತಿಯ ಅಗತ್ಯವಿದ್ದು ಇದಕ್ಕಾಗಿ ರಾಜ್ಯ ಸರ್ಕಾರ ಅಂತಿಮ ವರ್ಷದ ವಿಜ್ಞಾನ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲು ತೀರ್ಮಾನಿಸಿದೆ.

published on : 31st July 2020

ಕೋವಿಡ್ ಕೇರ್ ಕೇಂದ್ರದಲ್ಲಿಯೇ ಸಿಇಟಿ ಬರೆಯಲಿದ್ದಾರೆ 41 ಮಂದಿ ಕೊರೋನಾ ಪಾಸಿಟಿವ್ ವಿದ್ಯಾರ್ಥಿಗಳು!

ವೃತ್ತಿ ಶಿಕ್ಷಣ ಕೋರ್ಸ್'ಗಳ ಪ್ರವೇಶಾತಿ ಸಂಬಂಧ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸುವಂತೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವ ಹಿನ್ನೆಲೆಯಲ್ಲಿ ಕೊರೋನಾ ಪಾಸಿಟಿವ್ ಬಂದಿರುವ 41 ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರದಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ತಿಳಿದುಬಂದಿದೆ. 

published on : 30th July 2020

ವಾಣಿಜ್ಯ, ಕಲಾ ವಿಭಾಗದವರಿಗೂ 'ಗೇಟ್' ಓಪನ್!

ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಬರೆಯಬೇಕಾದ 'ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಎಂಜಿನಿಯರಿಂಗ್'  (ಗೇಟ್) ನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. 

published on : 27th July 2020

ನಿಗದಿಪಡಿಸಿದ ದಿನಾಂಕವೇ ಸಿಇಟಿ: ವಿದ್ಯಾರ್ಥಿಗಳು, ಪೋಷಕರ ಅಸಮಾಧಾನ

ನಿಗದಿಯಾಗಿರುವಂತೆ ಈ ತಿಂಗಳ ಅಂತ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

published on : 22nd July 2020

'ಸತ್ತವರ ದೇಹ ಮುಟ್ಟಲು ಹೆದರುವ ಸರ್ಕಾರ ಸೋಂಕಿತರು ಬಳಸಿದ ಬೆಡ್ ಗಳನ್ನು ವಿದ್ಯಾರ್ಥಿಗಳಿಗೆ ನೀಡುವುದು ಸರಿಯೇ?'

ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ   ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಎಚ್ಚರಿಕೆ ನೀಡಿದ್ದಾರೆ.

published on : 21st July 2020

ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದುತ್ತಿರುವ ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳ ಸಂಖ್ಯೆ ಶೇ.50ರಷ್ಟು ಮಾತ್ರ!

ಕಳೆದ ವರ್ಷಕ್ಕೆ ಹೋಲಿಸಿದರೆ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹೋಲಿಸಿದರೆ ಈ ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಸಾಧನೆ ಕಳಪೆಯಾಗಿದೆ.

published on : 15th July 2020

ಟ್ರಂಪ್ ಆಡಳಿತದಿಂದ ಯು-ಟರ್ನ್: ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕಾ ವೀಸಾ ನಿರಾಕರಿಸಿದ್ದ ಆದೇಶ ರದ್ದು!

ಕನಿಷ್ಟ ಒಂದಾದರೂ ಕೋರ್ಸ್ ಗಳಲ್ಲಿ ನೇರವಾಗಿ ತರಗತಿಗಳಿಗೆ ಹಾರಜಾಗದೇ ಇದ್ದ ವಿದೇಶಿ ವಿದ್ಯಾರ್ಥಿಗಳು ಅಮೆರಿಕಾದಲ್ಲಿರುವುದನ್ನು ನಿರ್ಬಂಧಿಸಲು ವೀಸಾ ನಿರಾಕರಿಸಿದ್ದ ಆದೇಶವನ್ನು ಟ್ರಂಪ್ ಸರ್ಕಾರ ವಾಪಸ್ ಪಡೆದಿದೆ.

published on : 15th July 2020

ರಷ್ಯಾದಿಂದ 209 ವಿದ್ಯಾರ್ಥಿಗಳು ತಾಯ್ನಾಡಿಗೆ ವಾಪಸ್!

ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ರಾಷ್ಟ್ರಗಳು ಲಾಕ್'ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡ ಪರಿಣಾಮ ರಷ್ಯಾದ ಮಾಸ್ಕೋದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯ 209 ವಿದ್ಯಾರ್ಥಿಗಳು ಕೊರೋನೆಗೂ ಮಂಗಳವಾರ ತಾಯ್ನಾಡಿಗೆ ಬಂದಿಳಿದಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

published on : 15th July 2020

ವಿದೇಶಿ ವಿದ್ಯಾರ್ಥಿಗಳಿಗೆ ನೂತನ ನೀತಿ: ಟ್ರಂಪ್ ಆಡಳಿತ ವಿರುದ್ಧ ಗೂಗಲ್ ಸೇರಿದಂತೆ ಅಮೆರಿಕದ 17 ಕಂಪನಿಗಳ ಮೊಕದ್ದಮೆ

ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ಉಳಿಯುವುದನ್ನು ತಡೆಯುವ ಟ್ರಂಪ್ ಆಡಳಿತದ ಇತ್ತೀಚಿನ ಹೊಸ ನೀತಿಯ ವಿರುದ್ಧ ಹಾರ್ವಡ್ ವಿಶ್ವವಿದ್ಯಾಲಯ ಮತ್ತು ಎಂಐಟಿ ಸಲ್ಲಿಸಿರುವ ಮೊಕದ್ದಮೆಗೆ ಇದೀಗ ಗೂಗಲ್, ಫೇಸ್ ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕಾದ ಒಂದು ಡಜನ್ ಗೂ ಹೆಚ್ಚು ತಂತ್ರಜ್ಞಾನ ಕಂಪನಿಗಳು ಕೂಡಾ ಸೇರಿಕೊಂಡಿವೆ.

published on : 14th July 2020

ವಿದ್ಯಾರ್ಥಿ ವೀಸಾ ನಿಯಮ: ಮೊಕದ್ದಮೆ ಹೂಡಿದ ಹಾರ್ವರ್ಡ್, ಎಂಐಟಿ ವಿವಿ, ಅಮೆರಿಕಾ ಸರ್ಕಾರದ ಜೊತೆ ಭಾರತ ಮಾತುಕತೆ

ಅಮೆರಿಕದಲ್ಲಿ ನೆಲೆಸಿರುವ ವಿದೇಶಗಳ ವಿದ್ಯಾರ್ಥಿಗಳು ಕೋರ್ಸ್ ಗಳ ಕಲಿಕೆಗೆ ಖುದ್ದಾಗಿ ತರಗತಿಗೆ ಹೋಗಬೇಕು, ಆನ್ ಲೈನ್ ನಲ್ಲಿ ಕೋರ್ಸ್ ತೆಗೆದುಕೊಳ್ಳುವವರು ದೇಶ ಬಿಟ್ಟು ಹೋಗಬೇಕು ಎಂಬ ವಲಸೆ ಮತ್ತು ಸುಂಕ ನಿರ್ದೇಶನಾಲಯದ ನೀತಿಯನ್ನು ಪ್ರಶ್ನಿಸಿ ಹಾರ್ವರ್ಡ್ ಯೂನಿವರ್ಸಿಟಿ ಮತ್ತು ಮಸ್ಸಚುಸೆಟ್ಸ್ ತಾಂತ್ರಿಕ ಸಂಸ್ಥೆ ಕಾನೂನು ಮೊಕದ್ದಮೆ ಹೂಡಿದೆ.

published on : 9th July 2020

ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ: 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

published on : 4th July 2020
1 2 3 4 5 6 >