• Tag results for ಶ್ರೀನಗರ

ಶ್ರೀನಗರದಿಂದ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕರನ್ನು ವಾಪಸ್ ಕಳುಹಿಸಿದ ಕಾಶ್ಮೀರ ಸರ್ಕಾರ

ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವುದಕ್ಕಾಗಿ ಶನಿವಾರ ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ 11 ಪ್ರತಿಪಕ್ಷ ನಾಯಕರನ್ನು ಕಾಶ್ಮೀರ ಸರ್ಕಾರ ದೆಹಲಿಗೆ ವಾಪಸ್ ಕಳುಹಿಸಿದೆ.

published on : 24th August 2019

ಶ್ರೀನಗರ ಹೋಟೆಲ್ ಗೆ ಬಂಧಿತ ಮಾಜಿ ಐಎಎಸ್ ಅಧಿಕಾರಿ-ರಾಜಕಾರಣಿ ಶಾ ಫಸಲ್ ಸ್ಥಳಾಂತರ

ಜಮ್ಮು ಮತ್ತು ಕಾಶ್ಮೀರದ ಮಾಜಿ ಅಧಿಕಾರಿ ಮಾಜಿ ಐಎಎಸ್ ಶಾ ಫಜಲ್ ಅವರನ್ನು ಶ್ರೀನಗರದ ಸೆಂಟೌರ್ ಹೋಟೆಲ್‌ನಲ್ಲಿ ತಾತ್ಕಾಲಿಕ ಬಂಧನದಲ್ಲಿರಿಸಲಾಗಿದೆ ಎಂದು  ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

published on : 15th August 2019

ಕಾಶ್ಮೀರದಲ್ಲಿ ಎಲ್ಲವೂ ಸುಸೂತ್ರವಾಗಿದೆ, ಯಾವುದೇ ರೀತಿಯ ಪ್ರತಿಭಟನೆ ಇಲ್ಲ; ವರದಿ ತಳ್ಳಿ ಹಾಕಿದ ಗೃಹ ಸಚಿವಾಲಯ

ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಆರ್ಟಿಕಲ್ 370 ರದ್ಧತಿ ಬಳಿಕವೂ ರಾಜಧಾನಿ ಶ್ರೀನಗರ ಶಾಂತಿಯುತವಾಗಿದ್ದು, ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ ನೀಡಿದೆ.

published on : 10th August 2019

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸೀತಾರಾಮ್ ಯೆಚೂರಿ ಬಂಧನ

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಇಂದು ಬಂಧಿಸಲಾಗಿದೆ.

published on : 9th August 2019

ಶ್ರೀನಗರದಲ್ಲಿ ಗುಲಾಂ ನಬಿ ಆಜಾದ್‌ಗೆ ತಡೆ, ಬಲವಂತವಾಗಿ ಹಿಂದಕ್ಕೆ ಕಳುಹಿಸಲಾಗಿದೆ: ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿದ್ದು ಇದನ್ನು ತೀವ್ರವಾಗಿ ಕಾಂಗ್ರೆಸ್ ವಿರೋಧಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್...

published on : 8th August 2019

ಶ್ರೀನಗರ: ಕರ್ಫ್ಯೂ ಜಾರಿ, ಮೆಹಬೂಬಾ, ಒಮರ್ ಗೆ ಗೃಹ ಬಂಧನ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಪ್ತಿ ಹಾಗೂ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

published on : 5th August 2019

ವಿಶೇಷ ಸ್ಥಾನಮಾನಕ್ಕೆ ಧಕ್ಕೆಯಾದರೆ ಕಣಿವೆ ರಾಜ್ಯ ಹೊತ್ತಿ ಉರಿಯಲಿದೆ: ಕೇಂದ್ರಕ್ಕೆ ಒಮರ್ ಅಬ್ದುಲ್ಲಾ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನಕ್ಕೆ ಧಕ್ಕೆಯಾದರೆ ಕಣಿವೆ ರಾಜ್ಯ ಹೊತ್ತಿ ಉರಿಯಲಿದೆ ಎಂದು ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

published on : 5th August 2019

ಮೊಬೈಲ್, ಇಂಟರ್ನೆಟ್, ಟಿವಿ, ದೂರವಾಣಿ ಸೇವೆ ಬಂದ್: ಏನಾಗ್ತಿದೆ ಕಾಶ್ಮೀರದಲ್ಲಿ..?

ಸೇನೆ ಮೊಬೈಲ್, ಇಂಟರ್ನೆಟ್, ಟಿವಿ, ದೂರವಾಣಿ ಸೇವೆಯನ್ನೂ ಕೂಡ ಬಂದ್ ಮಾಡಿದೆ. ಹೀಗಾಗಿ ಸ್ಥಳೀಯರಷ್ಟೇ ಅಲ್ಲ... ಇಡೀ ದೇಶದ ಜನತೆ ಕಾಶ್ಮೀರದಲ್ಲಿ ಏನಾಗ್ತಿದೆ ಎಂಬ ಪ್ರಶ್ನೆ ಮುಂದಿಡುತ್ತಿದ್ದಾರೆ.

published on : 5th August 2019

ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ: ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆತಂಕ

ಕಲಂ 370ರದ್ದುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ, ಭಾರತೀಯ ಪ್ರಜಾಪ್ರಭುತ್ವದ ಕರಾಳ ದಿನ, ಕಾಶ್ಮೀರ ಹೊತ್ತಿ ಉರಿಯಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

published on : 5th August 2019

ಆರ್ಟಿಕಲ್ 370 ರದ್ದು; ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚುವರಿ 8 ಸಾವಿರ ಸೈನಿಕರ ರವಾನೆ

ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯಸ್ಥೆಯ ತೊಂದರೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕಣಿವೆ ರಾಜ್ಯಕ್ಕೆ 8 ಸಾವಿರ ಸೈನಿಕರನ್ನು ರವಾನೆ ಮಾಡಲಾಗಿದೆ.

published on : 5th August 2019

ಜಮ್ಮು- ಕಾಶ್ಮೀರ ಜನರ ನಂಬಿಕೆಗೆ ದ್ರೋಹ- ಒಮರ್ ಅಬ್ದುಲ್ಲಾ

ಸಂವಿಧಾನದ 370 ನೇ ವಿಧಿ ರದ್ದುಪಡಿಸಿ ಆದೇಶ ಹೊರಡಿಸಿರುವ ಕೇಂದ್ರಸರ್ಕಾರದ ಕ್ರಮಕ್ಕೆ ಆಘಾತಕಾರಿಯಾಗಿದೆ ಎಂದಿರುವ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇದು ಜಮ್ಮು- ಕಾಶ್ಮೀರದ ಜನರ ನಂಬಿಕೆಗೆ ಬಗೆದ ದ್ರೋಹ ಎಂದು ಟೀಕಿಸಿದ್ದಾರೆ.

published on : 5th August 2019

ಜಮ್ಮು ಮತ್ತು ಕಾಶ್ಮೀರ ಬಿಟ್ಟು ತೆರಳಿ: ಇರ್ಫಾನ್ ಪಠಾಣ್ ಸೇರಿದಂತೆ ಕ್ರಿಕೆಟಿಗರಿಗೆ ಭದ್ರತಾ ಎಚ್ಚರಿಕೆ

ತತ್ ಕ್ಷಣವೇ ಜಮ್ಮು ಮತ್ತು ಕಾಶ್ಮೀರ ಬಿಟ್ಟು ತೆರಳುವಂತೆ ಕ್ರಿಕೆಟಿಗ ಇರ್ಫಾನ್ ಪಠಾಣ್ ಮತ್ತು ಇತರೆ 100 ಕ್ರಿಕೆಟಿಗರಿಗೆ ಸೂಚನೆ ನೀಡಲಾಗಿದೆ.

published on : 4th August 2019

ಕಾಶ್ಮೀರ ವಿಚಾರ ದಿಕ್ಕು ಬದಲಾಯಿಸುವ ಪ್ರಯತ್ನ ಬೇಡ: ಉಗ್ರರು, ಸೈನಿಕರ ಶವ ಪಡೆಯಲು ನಿರಾಕರಿಸಿದ ಪಾಕ್!

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಸಮೀಪ ಗುಂಡಿನ ಚಕಮಕಿಯಲ್ಲಿ ಮೃತಪಟ್ಟ ಯೋಧರು ಮತ್ತು ಉಗ್ರರ ಶವಗಳನ್ನು ಕೊಂಡೊಯ್ಯುವ ಬಗ್ಗೆ ಪಾಕಿಸ್ತಾನ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

published on : 4th August 2019

ಪ್ರಕ್ಷುಬ್ಧತೆ ಹಿನ್ನಲೆ: 24 ಗಂಟೆಗಳಲ್ಲಿ ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸರ್ಕಾರದ ಸೂಚನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗಿರುವ ಪ್ರಕ್ಷುಬ್ಧತೆ ವಾತಾವರಣದ ಹಿನ್ನಲೆಯಲ್ಲಿ ಸರ್ಕಾರ 24 ಗಂಟೆಗಳಲ್ಲಿ ಕಾಶ್ಮೀರ ತೊರೆಯುವಂತೆ ಪ್ರವಾಸಿಗರಿಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

published on : 4th August 2019

ಅನಗತ್ಯ ಭಯ ಬೇಡ: ಕಾಶ್ಮೀರದಲ್ಲಿ ಸೇನೆ ಜಮಾವಣೆ ಕುರಿತು ರಾಜ್ಯಪಾಲರ ಅಭಯ

ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ವಾರದ ಅವಧಿಯಲ್ಲಿ ಅಪಾರ ಪ್ರಮಾಣದ ಸೈನಿಕರ ಜಮಾವಣೆ ಮಾಡಿರುವ ಹಿನ್ನಲೆಯಲ್ಲಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಕುರಿತಂತೆ ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಜನತೆ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

published on : 3rd August 2019
1 2 3 4 5 6 >