• Tag results for ಸಮನ್ಸ್

ಮೋದಿ ಕಳ್ಳ ಹೇಳಿಕೆ ವಿವಾದ: ರಾಹುಲ್ ಗೆ ರಾಂಚಿ ಕೋರ್ಟ್ ನಿಂದ ಸಮನ್ಸ್ 

ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ರಾಂಚಿ ಸಿವಿಲ್ ನ್ಯಾಯಾಲಯವೊಂದು ಸಮನ್ಸ್ ನೀಡಿದೆ. ಫೆಬ್ರವರಿ 22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ

published on : 19th January 2020

ನಾಯರ್ ಮಹಿಳೆಯರ ಕುರಿತು ಅವಹೇಳನ: ಶಶಿ ತರೂರ್'ಗೆ ಬಂಧನ ವಾರಂಟ್

30 ವರ್ಷಗಳ ಹಿಂದೆ ಬರೆದಿದ್ದ ಪುಸ್ತಕವೊಂದರಲ್ಲಿ ನಾಯರ್ ಮಹಿಳೆಯರ ಬಗ್ಗೆ ಅಪಮಾನಕಾರಿ ಅಂಶ ಉಲ್ಲೇಖಿಸಿದ್ದಾರೆಂಬ ಪ್ರಕರಣ ಸಂಬಂಧ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರಿಗೆ ಕೇರಳ ನ್ಯಾಯಾಲಯವೊಂದು ಬಂಧನ ವಾರಂಟ್ ಜಾರಿ ಮಾಡಿದೆ. 

published on : 22nd December 2019

ಶಾಸಕ ರಾಮದಾಸ್ ಪ್ರೇಮ ಪ್ರಕರಣ: ಬಿ ರಿಪೋರ್ಟ್ ರದ್ದುಗೊಳಿಸಿ ಸಮನ್ಸ್ ಜಾರಿಗೊಳಿಸಿದ ಕೋರ್ಟ್

ಪ್ರೇಮ ಕುಮಾರಿ ಎಂಬ ಮಹಿಳೆಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರ ವಿರುದ್ಧ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ರದ್ದುಗೊಳಿಸಿದ್ದು, ಮಾಜಿ ಸಚಿವರಿಗೆ ಸಮನ್ಸ್ ಜಾರಿಗೊಳಿಸಿದೆ.

published on : 21st October 2019

ಪಿಎಂಎಲ್‌ಎ ಪ್ರಕರಣ: ಡಿಕೆ ಶಿವಕುಮಾರ್ ಪತ್ನಿ, ತಾಯಿಗೆ ಹೊಸ ಸಮನ್ಸ್ ನೀಡಲು ಇಡಿ ತಯಾರಿ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಅವರ ಪತ್ನಿ ಮತ್ತು ತಾಯಿಗೆಜಾರಿ ನಿರ್ದೇಶನಾಲಯ (ಇಡಿ) ಹೊಸದಾಗಿ ಸಮನ್ಸ್ ಜಾರಿ ಗೊಳಿಸಲಿದೆ. ಈ ಕುರಿತಂತೆ ಇಡಿ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 21st October 2019

ಸಮನ್ಸ್ ಹಿಂಪಡೆದ ಇಡಿ: ಡಿಕೆಶಿ ಪತ್ನಿ, ತಾಯಿಗೆ ತಾತ್ಕಾಲಿಕ ರಿಲೀಫ್

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕೆಂದು ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಅವರಿಗೆ ನೀಡಿದ್ದ ಸಮನ್ಸ್ ಅನ್ನು ಸದ್ಯದ ಮಟ್ಟಿಗೆ ಹಿಂದಕ್ಕೆ...

published on : 17th October 2019

ದಾವೂದ್‌ ಬಂಟನ ಜತೆ ಭೂ ನಂಟು: ಪ್ರಫುಲ್‌ ಪಟೇಲ್ ಗೆ ಇಡಿ ಸಮನ್ಸ್

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಟ ಇಕ್ಬಾಲ್‌ ಮಿರ್ಚಿ ಜತೆ ಅಕ್ರಮ ಭೂ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

published on : 15th October 2019

ಡಿಕೆ ಶಿವಕುಮಾರ್ ತಾಯಿ, ಪತ್ನಿಗೂ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ.

published on : 14th October 2019

ಲಕ್ಷ್ಮಿ ಹೆಬ್ಬಾಳ್ಕರ್ ಬಳಿಕ ಮತ್ತೊಬ್ಬ ಕೈ ನಾಯಕನಿಗೆ ಇಡಿ ಗಾಳ! ಕೆ.ಎಸ್.ರಾಜಣ್ಣಗೆ ಸಮನ್ಸ್ ಜಾರಿ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಳಿಕ ಇದೀಗ ಮತ್ತೊಬ್ಬ ಕೈ ನಾಯಕನಿಗೆ ಇಡಿ ಕಂಟಕ ಎದುರಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ಮಾಜಿ ಕಾಂಗ್ರೆಸ್ ಶಾಸಕ ಕೆ.ಎಸ್. ರಾಜಣ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

published on : 1st October 2019

338 ಕೋಟಿ ರೂ. ಆಸ್ತಿ ಘೋಷಣೆ, ಡಿಕೆಶಿ ಸಹೋದರ ಡಿಕೆ ಸುರೇಶ್ ಗೆ ಇ.ಡಿ. ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 

published on : 30th September 2019

ಡಿ.ಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ: ಲಕ್ಷ್ಮೀ‌ ಹೆಬ್ಬಾಳ್ಕರ್  

ಮಂಗಳವಾರ ಜಾರಿ ನಿರ್ದೆಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ

published on : 18th September 2019

ಡಿಕೆಶಿ ಅಕ್ರಮ ಹಣ ಪ್ರಕರಣ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಇಡಿ ಸಮನ್ಸ್

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಜಾರಿ....

published on : 17th September 2019

ಸಂಸದ ಪ್ರಜ್ವಲ್ ರೇವಣ್ಣಗೆ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೊಳಿಸಿದ ಹೈಕೋರ್ಟ್!

ಲೋಕಸಭೆ ಚುನಾವಣೆ ಸಮಯದಲ್ಲಿ ನಾಮಪತ್ರ ಸಲ್ಲಿಕೆ ಮಾಡುವಾಗ ತಮ್ಮ ಪ್ರಮಾಣಪತ್ರದಲ್ಲಿ ಆಸ್ತಿ ಗೆ ಸಂಬಂಧಿಸಿ ಸುಳ್ಳು ಮಾಹಿತಿ ನೀಡಲಾಗಿದೆ ಎಂದು ಆರೋಪವಿದ್ದು ಈ ಕುರಿತ ವಿಚಾರಣೆಗೆ ಸೆ. 30ರಂದು ಹಾಜರಾಗಬೇಕೆಂದು ಸಂಸದ ಪ್ರಜ್ವಲ್ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ನೀಡಿದೆ,

published on : 11th September 2019

ಡಿಕೆ ಶಿವಕುಮಾರ್ ಪುತ್ರಿಗೆ ಸಂಕಷ್ಟ: ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಡಿಕೆ ಶಿವಕುಮಾರ್ ಸದ್ಯ ಜಾರಿ ನಿರ್ದೇಶನಾಲಯ(ಇಡಿ) ವಶದಲ್ಲಿದ್ದು ಈ ಮಧ್ಯೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಪುತ್ರಿಗೆ ಇಡಿ ನೋಟಿಸ್ ನೀಡಿದೆ. 

published on : 10th September 2019

ಡಿನೋಟಿಫಿಕೇಷನ್ ಪ್ರಕರಣ:ಮಾಜಿ ಮುಖ್ಯಮಂತ್ರಿ ಎಚ್ ಡಿಕೆಗೆ ಸಮನ್ಸ್ ಜಾರಿ  

ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

published on : 5th September 2019

ಮೂಡಾ ಡೀನೋಟಿಫಿಕೇಷನ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ...

published on : 5th September 2019
1 2 3 >