• Tag results for ಸಾಹಿತ್ಯ

ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡಿ: ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ದನಿ

3 ದಿನಗಳ ಕಾಲ ಅದ್ದೂರಿಯಾಗಿ ನಡೆದ 845ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಶುಕ್ರವಾರ ಮುಕ್ತಾಯಗೊಂಡಿದ್ದು, ಸಮ್ಮೇಳನದಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಕಲಿಕಾ ಮಾಧ್ಯಮವನ್ನಾಗಿ ಮಾಡುವಂತೆ ಒತ್ತಾಯಗಳು ಕೇಳಿ ಬಂದವು. 

published on : 8th February 2020

ಸಿಎಎ ಹೋರಾಟದಿಂದ ಅಖಂಡ ಭಾರತಕ್ಕೆ ಧಕ್ಕೆಯಾಗಬಾರದು: ಎಚ್.ಎಸ್. ವೆಂಕಟೇಶ ಮೂರ್ತಿ

ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ದೇಶದಲ್ಲಿ ಬಹು ಚರ್ಚೆಗೆ ಒಳಗಾಗಿದ್ದು, ಇಂತಹ ಸಂದರ್ಭದಲ್ಲಿ ದೇಶ ಒಡೆಯದೇ ಅಖಂಡ ಭಾರತದ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ ಎಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಎಚ್.ಎಸ್. ವೆಂಕಟೇಶ ಮೂರ್ತಿ ಹೇಳಿದ್ದಾರೆ.  

published on : 7th February 2020

6 ನಿರ್ಣಯಗಳೊಂದಿಗೆ ಕಲಬುರಗಿ ನುಡಿಜಾತ್ರೆಗೆ ಅದ್ದೂರಿ ತೆರೆ

ಕಲಬುರಗಿಯಲ್ಲಿ ಕಳೆದ ಮೂರು ದಿನಗಳಿಂದ ನಡೆದಿದ್ದ ಎಂಬತ್ತೈದನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಕ್ರವಾರ ಅದ್ದೂರಿ ತೆರೆ ಬಿದ್ದಿದೆ. ಸಮ್ಮೇಳನ ಕೊನೆಯ ದಿನವಾದ ಇಂದು ಆರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಿದೆ.

published on : 7th February 2020

ಸಂವಿಧಾನದ ಆಶಯಕ್ಕೆ ವಿರುದ್ಧವಾದ  ಕೇಂದ್ರದ ಸಿಎಎ ಕಾಯ್ದೆಗೆ ನನ್ನ ವಿರೋಧವಿದೆ: ಚಿತ್ರ ನಿರ್ದೇಶಕ ಬಿ.ಸುರೇಶ್

ಕೇಂದ್ರ ಸರಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ.  

published on : 7th February 2020

ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ:ಕಸಾಪ ಅಧ್ಯಕ್ಷ ಮನು ಬಳಿಗಾರ್ ಘೋಷಣೆ

ಮುಂಬರುವ 86ನೇ ಅಖಿಲ‌ ಭಾರತ ಸಾಹಿತ್ಯ ಸಮ್ಮೇಳನದ ಪಟ್ಟ ಹಾವೇರಿ ಪಾಲಾಗಿದೆ.ಸಮ್ಮೇಳನದ ಹೊಣೆಗಾರಿಕೆ ಹೊತ್ತುಕೊಳ್ಳಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಾವೇರಿ,  ಚಿಕ್ಕಬಳ್ಳಾಪುರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯ ಮಧ್ಯೆ ತೀವ್ರ  ಪೈಪೋಟಿ ಏರ್ಪಟ್ಟಿತ್ತು.

published on : 6th February 2020

ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಆರಾಧಿಸಿ: ಗೋವಿಂದ ಕಾರಜೋಳ

 ಕನ್ನಡ ಭಾಷೆಯ ಆರಾಧನೆ ಸಾಹಿತ್ಯ ಸಮ್ಮೇಳನದ ಧ್ಯೇಯ. ಪರಭಾಷೆ ವ್ಯಾಮೋಹ ಬಿಟ್ಟು ಕನ್ನಡ ಭಾಷೆಯನ್ನು ಮನೆ ಮನಗಳಲ್ಲಿ ಬಳಸಬೇಕು. ಕನ್ನಡಲ್ಲೇ ವ್ಯವಹರಿಸಿ, ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸಲು ಎಲ್ಲಾ ಕನ್ನಡಿಗರು ಶ್ರಮಿಸಿ, ಆರಾಧಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಕರೆ ನೀಡಿದ್ದಾರೆ.  

published on : 5th February 2020

ರಾಜ್ಯದಲ್ಲಿ ಕನ್ನಡಿಗರಿಗೆ ಸಿಂಹ ಪಾಲು ಉದ್ಯೋಗಕ್ಕಾಗಿ ಮೀಸಲಾತಿ ಅಗತ್ಯ: 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ.ಎಚ್‌.ಎಸ್. ವೆಂಕಟೇಶಮೂರ್ತಿ

ಪ್ರತಿಯೊಂದು ಮಗುವೂ ಮಾತೃಭಾಷೆಯಲ್ಲಿ ಕಲಿಯುವುದು ಅಗತ್ಯವೆಂದಾದಲ್ಲಿ ನೀವು ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿ ಹೇರಿದಲ್ಲಿ ಕನ್ನಡೇತರ ಅನ್ಯಭಾಷಿಕರ ಮೂಲಭೂತ ಹಕ್ಕಿಗೆ, ಮಕ್ಕಳು ಅವರವರ ಮಾತೃ ಭಾಷೆಯಲ್ಲಿ ಕಲಿಯುವ ಹಕ್ಕಿಗೆ ಚ್ಯುತಿಯೊದಗುತ್ತದೆ, ನಮ್ಮ ಮೂಲಭೂತ ಹಕ್ಕನ್ನು ನಾವು ಅನುಭವಿಸಲು ಬಿಡಿ ಎಂಬುಬುದ ಮುಖವಾಡದ ಮಾತು. ಯಾವುದು ಪರಿಸರ ಭಾಷೆಯೋ ಅದರಲ್ಲಿ ಮಾತ್ರ ಮಕ್ಕಳ

published on : 5th February 2020

ಕನ್ನಡ ನಾಡು ನುಡಿ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಸಿಎಂ ಯಡಿಯೂರಪ್ಪ

ಕನ್ನಡ ನಾಡು, ನುಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

published on : 5th February 2020

ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ

ಕಲ್ಯಾಣ ಕರ್ನಾಟಕ, ಶರಣರ ನಾಡು ಕಲಬುರಗಿಯಲ್ಲಿ ಇಂದಿನಿಂದ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವೈಭವದ ಚಾಲನೆ ಸಿಕ್ಕಿದೆ,  

published on : 5th February 2020

ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಕಲಬುರಗಿ; ಬಿಸಿಲ ನಗರಿಗೆ ಆಗಮಿಸಿದ ಸಮ್ಮೇಳನಾಧ್ಯಕ್ಷ ಡಾ.ಎಚ್‌.ಎಸ್.ವೆಂಕಟೇಶಮೂರ್ತಿ

ಬಿಸಿಲ ನಗರಿ ಕಲಬುರಗಿಯಲ್ಲಿ ಫೆಬ್ರವರಿ 5 ರಿಂದ  ಮೂರು ದಿನಗಳ ಕಾಲ  ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಸಮ್ಮೇಳನದ ನೇತೃತ್ವದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಎಚ್.ಎಸ್ ವೆಂಕಟೇಶಮೂರ್ತಿ ಮಂಗಳವಾರ ಕಲಬುರಗಿಗೆ ಆಗಮಿಸಿದರು.

published on : 4th February 2020

ಕಲಬುರಗಿ: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ರಾಜಕೀಯದ ಕರಿನೆರಳು

ಗುರುವಾರ ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಹಾಗೂ ಪ್ರಮಾಣ ವಚನ ಸಮಾರಂಭವಿದೆ, ಹೀಗಾಗಿ ಕಲಬುರಗಿಯಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

published on : 4th February 2020

ಸರ್ಕಾರಕ್ಕಿಂತ ಮನು ಬಳಿಗಾರ್ ನೇತೃತ್ವದ ಸಾಹಿತ್ಯ ಪರಿಷತ್ ಬಲು ಅಪಾಯಕಾರಿ; ಕುಂ.ವೀ.

ಸರ್ಕಾರಕ್ಕಿಂತ ಮನು ಬಳಿಗಾರ್ ನೇತೃತ್ವದ ಸಾಹಿತ್ಯ ಪರಿಷತ್ ಬಲು ಅಪಾಯಕಾರಿ ಎಂದು ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

published on : 10th January 2020

ವಿರೋಧದ ನಡುವೆಯೂ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಶೃಂಗೇರಿಯಲ್ಲಿ ಚಾಲನೆ

ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಉಂಟಾದ ಸೈದ್ಧಾಂತಿಕ ಭಿನ್ನಾಭಿಪ್ರಾಯದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಚಿಕ್ಕಮಗಳೂರು ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ವಿರೋಧದ ನಡುವೆಯೂ ಶುಕ್ರವಾರ ಚಾಲನೆ ದೊರೆತಿದೆ.

published on : 10th January 2020

ಸೈದ್ಧಾಂತಿಕ  ಭಿನ್ನಾಭಿಪ್ರಾಯ ಸಾಹಿತ್ಯಕ್ಕೆ ಸಲ್ಲದು, ಕನ್ನಡ, ಸಂಸ್ಕೃತಿ ಬಗ್ಗೆ ಸಿ.ಟಿ.ರವಿಗೆ ಗಂಧಗಾಳಿಯೇ ಇಲ್ಲ: ವಿಠ್ಠಲ್ ಹೆಗ್ಡೆ

ಅಕ್ಷರ ಹಬ್ಬವಾಗಬೇಕಿರುವ ಚಿಕ್ಕಮಗಳೂರಿನ ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನಕ್ಕೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಗ್ರಹಣ ಬಡಿದಿದ್ದು, ಅಧ್ಯಕ್ಷರ ಆಯ್ಕೆ  ವಿಚಾರದಲ್ಲಿ ಜಿಲ್ಲಾಡಳಿತ ಮತ್ತು ಸಾಹಿತ್ಯ ಪರಿಷತ್ತಿನ ನಡುವೆ ಗುದ್ದಾಟ  ಆರಂಭವಾಗಿದೆ‌. 

published on : 9th January 2020

ಪ್ರಶಸ್ತಿ ವಾಪಸ್ ಮಾಡುವುದಿಲ್ಲ, ಆದರೆ ಇದು ಸರ್ವಾಧಿಕಾರಿ ಸರ್ಕಾರ: ಡಾ ವಿಜಯಾ

ಕೇಂದ್ರ  ಸಾಹಿತ್ಯ ಅಕಾಡೆಮಿ ನನ್ನ 'ಕುದಿ ಎಸರು' ಕೃತಿಗೆ ಕೊಟ್ಟಿರುವ ಪ್ರಶಸ್ತಿಯನ್ನು ನಾನು ಹಿಂದಿರುಗಿಸುವುದಿಲ್ಲ ಎಂದು ಲೇಖಕಿ ಡಾ. ವಿಜಯಾ ಖಚಿತ ಮಾತುಗಳಲ್ಲಿ ತಿಳಿಸಿದ್ದಾರೆ.

published on : 19th December 2019
1 2 3 >