• Tag results for ಸುರೇಶ್ ಅಂಗಡಿ

ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಕೊರೋನಾ ದೃಢ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

published on : 11th September 2020

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಹೆಸರು ನಾಮಕರಣಕ್ಕೆ ಕೇಂದ್ರ ಅಸ್ತು

ಕರ್ನಾಟಕದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀಸಿದ್ದಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಗೃಹ ಇಲಾಖೆ ಆದೇಶಿಸಿದೆ.  ಈ ಸಂಬಂಧ ಕೇಂದ್ರವು ರಾಜ್ಯದ ಕಂದಾಯ ಇಲಾಖೆಗೆ ಪತ್ರ ಕಳಿಸಿದೆ. 

published on : 9th September 2020

927 ಕೋಟಿ ರೂ ವೆಚ್ಚದ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

ಬಹು ವರ್ಷಗಳಿಂದ ನೆನೆ ಗುದಿಗೆ ಬಿದ್ದಿದ್ದ ಬೆಳಗಾವಿ-ಧಾರವಾಡ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ್ದು, ಈ ಮೂಲಕ ಮುಂಬೈ ಕರ್ನಾಟಕ ಭಾಗದ ಜನರ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

published on : 7th September 2020

ದೇಶದ ಮೊದಲ ಕಿಸಾನ್ ರೈಲಿಗೆ ಚಾಲನೆ; ರಾಜ್ಯ ಪ್ರಸ್ತಾವ ಸಲ್ಲಿಸಿದರೆ ಪರಿಶೀಲನೆ: ಸಚಿವ ಅಂಗಡಿ

ದೇಶದ ಮೊಟ್ಟ ಮೊದಲ ಕಿಸಾನ್ ರೈಲು ಸಂಚಾರಕ್ಕೆ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಶುಕ್ರವಾರ ಹಸಿರು ನಿಶಾನೆ ತೋರಿಸಿದರು. ಮಹಾರಾಷ್ಟ್ರದ ದೇವಲಾಲಿ ಮತ್ತು ಬಿಹಾರದ ದಾನಾಪುರ ನಡುವೆ ಸಂಚರಿಸಲಿರುವ ಮೊದಲ ಕಿಸಾನ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ನವದೆಹಲಿಯಿಂದ ಚಾಲನೆ ನೀಡಲಾಯಿತು.

published on : 7th August 2020

ರಾಜ್ಯದಲ್ಲಿ ರೈಲು ಸಂಚಾರ ಸಂಬಂಧ ಶೀಘ್ರವೇ ತೀರ್ಮಾನ: ಸುರೇಶ್ ಅಂಗಡಿ

ಕರ್ನಾಟಕದಲ್ಲಿ ರೈಲು ಸಂಚಾರಕ್ಕೆ ಸಂಬಂಧಿಸಿದಂತೆ ಮುಂದಿನ 2-3 ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

published on : 20th May 2020

ಮನವಿಗೆ ಸ್ಪಂದಿಸಿದ ಸುರೇಶ್ ಅಂಗಡಿ: ಗೂಡ್ಸ್ ರೈಲು ಮೂಲಕ ಬೆಳಗಾವಿ ಬಾಲಕಿಗೆ ಪುಣೆಯಿಂದ ಔಷಧಿ ವ್ಯವಸ್ಥೆ!

ಐದು ವರ್ಷದ ಮಗುವಿಗೆ ಅಗತ್ಯವಿದ್ದ ಔಷಧಗಳನ್ನು ರೈಲಿನ ಮೂಲಕ ತರಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಗುವಿನ ಜೀವ ಉಳಿಸಿದರು.

published on : 22nd April 2020

ಕೊರೋನಾ: ರೈಲ್ವೆ ಇಲಾಖೆಗೆ 10 ದಿನದಲ್ಲಿ 1, 390 ಕೋಟಿ ರೂ. ನಷ್ಟ- ಸುರೇಶ್ ಅಂಗಡಿ

ದೇಶಾದ್ಯಂತ ಮಾರಕ ಕೊರೋನಾ ಸೋಂಕಿನ ಕಾರಣ ರೈಲುಗಳ ಚುಕುಬುಕ್ ಸಪ್ಪಳ ನಿಂತಿದೆ ಪರಿಣಾಮ, 10 ದಿನಗಳ ಅವಧಿಯಲ್ಲಿ ಭಾರತೀಯ ರೈಲ್ವೆ ಇಲಾಖೆಗೆ 1, 390 ಕೋಟಿ ರೂಪಾಯಿ ನಷ್ಟವಾಗಿದೆ...

published on : 9th April 2020

ಕೋರೋನಾ ವೈರಸ್: ಗ್ರಾಮೀಣ ಭಾಗದ ರೋಗಿಳಿಗೆ ಚಿಕಿತ್ಸೆ ಒದಗಿಸಲು ರೈಲ್ವೆ ಸಿದ್ಧ: ಸುರೇಶ್ ಅಂಗಡಿ

ಕೊರೋನಾ ವೈರಸ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಹಾಗೂ ರೈಲು ಸಂಪರ್ಕವಿರುವ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ ಒದಗಿಸಲು ಇಲಾಖೆ ಸರ್ವ ಸನ್ನದ್ಧವಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ತಿಳಿಸಿದ್ದಾರೆ.

published on : 5th April 2020

ಶಿವಮೊಗ್ಗ-ಚೆನ್ನೈ ರೈಲುಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಚೆನ್ನೈಗ ನೇರ ರೈಲು ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗ-ಚೆನ್ನೈ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿರುವುದು ಗಮನಾರ್ಹ. ವಾರದಲ್ಲಿ ಎರಡು ದಿನ ಈ ವಿಶೇಷ ರೈಲು ಎರಡೂ ನಗರಗಳ ನಡುವೆ ಸಂಚರಿಸಲಿದೆ.

published on : 27th February 2020

ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು: ಸುರೇಶ್ ಅಂಗಡಿ

ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು ಒದಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಶನಿವಾರ ಹೇಳಿದ್ದಾರೆ.

published on : 15th February 2020

ಪೌರತ್ವ ಕಿಚ್ಚು: ಸಾರ್ವಜನಿಕ ಆಸ್ತಿ ನಾಶಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ, ಕೇಂದ್ರ ಸಚಿವ ಸುರೇಶ್ ಅಂಗಡಿ

ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿಗಳನ್ನು ನಾಪಡಿಸಿದರೆ ಕಂಡಲ್ಲಿ ಗುಂಡಿಕ್ಕಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ವಿವಾದಿತ ಹೇಳಿಕೆ ನೀಡಿದ್ದಾರೆ.

published on : 17th December 2019

ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ- ಕೇಂದ್ರ ಸಚಿವ ಸುರೇಶ್ ಅಂಗಡಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ  ಲೇವಡಿ ಮಾಡಿದ್ದಾರೆ.

published on : 12th November 2019

ಶತಮಾನದ ಇತಿಹಾಸ ಹೊಂದಿರುವ ದಾಂಡೇಲಿ-ಧಾರವಾಡ ರೈಲು ಮಾರ್ಗಕ್ಕೆ ಚಾಲನೆ

ಶತಮಾನದ ಇತಿಹಾಸ ಹೊಂದಿರುವ ಹಲವು ವರ್ಷಗಳಿಂದ ನಿಂತು ಹೋಗಿದ್ದ  ದಾಂಡೇಲಿ-ಅಳ್ನಾವರ-ಧಾರವಾಡ ಪ್ರಯಾಣಿಕರ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಭಾನುವಾರ ಚಾಲನೆ ನೀಡಿದ್ದಾರೆ.

published on : 3rd November 2019

ಈಗ....ಕಿತ್ತೂರು ಹುಡುಗ, ಕಾಶ್ಮೀರಿ ಹೆಣ್ಣನ್ನು ಲಗ್ನವಾಗಬಹುದು..; ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿ

ಜಮ್ಮು-ಕಾಶ್ಮೀರದ ವಿಶೇಷಾಧಿಕಾರ ರದ್ದುಪಡಿಸುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಜನರು ಕ್ಷಿಪ್ರಗತಿಯಲ್ಲಿ ಸ್ವೀಕರಿಸಿದ್ದು, ಸರ್ಕಾರದ ಕ್ರಮ ಯಶಸ್ವಿಯಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

published on : 26th October 2019

ವಿಜಯಪುರ- ಯಶವಂತಪುರ ನಡುವೆ ನೇರ ರೈಲಿಗೆ ಸಚಿವ ಸುರೇಶ್ ಅಂಗಡಿ ಹಸಿರು ನಿಶಾನೆ

ವಿಜಯಪುರದಿಂದ ಬೆಂಗಳೂರಿನ ಯಶವಂತಪುರ ನಡುವೆ ನೇರ ರೈಲು ಸೇವೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಸಿ ಅಂಗಡಿ ಅವರು ಹಸಿರು ನಿಶಾನೆ ತೋರಿದರು.

published on : 24th October 2019
1 2 >