• Tag results for ಸೋನಿಯಾ ಗಾಂಧಿ

ರೈತರ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ: ಸೋನಿಯಾ ಗಾಂಧಿ

ರೈತರ ವಿಷಯದಲ್ಲಿ ಕೇಂದ್ರ ಸರ್ಕಾರ ಸೂಕ್ಷ್ಮತೆ ಇಲ್ಲದೆ ವರ್ತಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

published on : 22nd January 2021

ನಾಳೆ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ನೂತನ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಡೆಸಲು ಶಿಫಾರಸು ಮಂಡನೆ? 

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಾಳೆ ನಡೆಯಲಿದ್ದು ಅದರಲ್ಲಿ ಪಕ್ಷದ ನೂತನ ಅಧ್ಯಕ್ಷರ ನೇಮಕ ವಿಚಾರವನ್ನು ಉನ್ನತ ನಾಯಕರು ಪ್ರಸ್ತಾಪಿಸಲಿದ್ದು, ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸುವ ಸಾಧ್ಯತೆಯಿದೆ.

published on : 21st January 2021

ಸೋನಿಯಾ ಗಾಂಧಿ, ಮಾಯಾವತಿಗೆ 'ಭಾರತ ರತ್ನ' ನೀಡಿ ಗೌರವಿಸಿ: ಉತ್ತರಾಖಂಡ ಮಾಜಿ ಸಿಎಂ ಹರೀಶ್ ರಾವತ್ ಒತ್ತಾಯ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ "ಭಾರತ ರತ್ನ" ನೀಡಬೇಕೆಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಒತ್ತಾಯಿಸಿದ್ದಾರೆ.

published on : 6th January 2021

ಅಹಂಕಾರ ಬದಿಗಿಟ್ಟು ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಿರಿ: ಕೇಂದ್ರಕ್ಕೆ ಸೋನಿಯಾ ಗಾಂಧಿ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ 39 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪರವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಧ್ವನಿ ಎತ್ತಿದ್ದು, ಕೇಂದ್ರ ಸರ್ಕಾರ ಅಹಂಕಾರ ಬದಿಗಿಟ್ಟು ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ. 

published on : 3rd January 2021

ಸೋನಿಯಾ ಗಾಂಧಿ, ರಾಹುಲ್ ವಿರುದ್ಧ ಟೀಕೆ: ಶಿವಸೇನೆ ಎಚ್ಚರಿಸಿದ ಕಾಂಗ್ರೆಸ್!

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರನ್ನು ಶಿವಸೇನಾ ಮುಖಂಡ ಸಂಜಯ್ ರಾವತ್ ಟೀಕಿಸಿರುವುದರ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 29th December 2020

'ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿಯೇ ಬೆಸ್ಟ್, ಅವರೇ ಪಕ್ಷವನ್ನು ಮುನ್ನಡೆಸಬೇಕು': ಕಾಂಗ್ರೆಸ್ ನಾಯಕರ ಪ್ರತಿಪಾದನೆ!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ಶನಿವಾರ ಪಕ್ಷದ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ. ಪಕ್ಷದಲ್ಲಿ ಮುಂದಿನ ಅಧ್ಯಕ್ಷರು ಯಾರು, ಅನೇಕ ಚುನಾವಣೆಗಳಲ್ಲಿ ಸೋತು ಹೀನಾಯ ಸ್ಥಿತಿಯಲ್ಲಿರುವ ಪಕ್ಷವನ್ನು ಪುನಶ್ಚೇತನಗೊಳಿಸುವುದು ಹೇಗೆ ಎಂಬ ಬಗ್ಗೆ ಚರ್ಚೆ ನಡೆಯಬಹುದು.

published on : 19th December 2020

ಬಂಡಾಯ ಕಾಂಗ್ರೆಸ್ ನಾಯಕರೊಂದಿಗೆ ಶನಿವಾರ ಸೋನಿಯಾ ಗಾಂಧಿ ಸಭೆ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ವಾರಾಂತ್ಯಕ್ಯೆ ಪಕ್ಷದ ಬಂಡಾಯ ನಾಯಕರನ್ನು ಮುಖಾಮುಖಿ ಭೇಟಿ ಮಾಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆ ಹಾಗೂ ತಮ್ಮ ನಾಯಕತ್ವ ಪ್ರಶ್ನಿಸಿ ಬರೆದಿದ್ದ ಪತ್ರದ ಬಗ್ಗೆಯೂ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 18th December 2020

'ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ': ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು.

published on : 12th December 2020

ಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ?

ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ ಮಧ್ಯಂತರ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಹೊಣೆ ಹೊತ್ತುಕೊಂಡರು.

published on : 11th December 2020

ರೈತರ ಪ್ರತಿಭಟನೆ, ಕೊರೋನಾ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧಾರ

ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಕೊರೋನಾ ಸಾಂಕ್ರಾಮಿಕದ ಕಾರಣದಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಡಿಸೆಂಬರ್ 9 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.

published on : 8th December 2020

'ಅಮರ್, ಅಕ್ಬರ್, ಆಂಟನಿ' ಎಂದು ಕರೆಸಿಕೊಳ್ಳುತ್ತಿದ್ದ ಕಾಂಗ್ರೆಸ್ ನ ಮೂವರು ನಾಯಕರು ಇವರು!

ಕೋವಿಡ್-19 ಮಹಾಮಾರಿಯಿಂದ 71 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ ಹೊಂದಿದ್ದಾರೆ. ಗಾಂಧಿ ಕುಟುಂಬದ ಬಲಗೈ ಬಂಟ, ನಿಷ್ಠಾವಂತ ಎಂದು ಕರೆಸಿಕೊಂಡಿದ್ದ ಅಹ್ಮದ್ ಪಟೇಲ್ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಕಾರ್ಯತಂತ್ರರಾಗಿದ್ದರು.

published on : 26th November 2020

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

published on : 26th November 2020

ಕಾಂಗ್ರೆಸ್ ಲ್ಲಿ ನಾಯಕತ್ವದ ಬಿಕ್ಕಟ್ಟು ಇಲ್ಲ, ಸೋನಿಯಾ-ರಾಹುಲ್ ಗಾಂಧಿಯವರಿಗೆ ಬೆಂಬಲ ಇದೆ: ಸಲ್ಮಾನ್ ಖುರ್ಷಿದ್ 

ಬಿಹಾರ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ನಲ್ಲಿ ಅಸಮಾಧಾನ, ಭಿನ್ನಾಭಿಪ್ರಾಯ ಹೆಚ್ಚಾಗಿರುವುದರ ಮಧ್ಯೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಮತ್ತೆ ಪ್ರಶ್ನೆ ಎದುರಾಗಿದೆ. ಕಾಂಗ್ರೆಸ್ ನ ಹಿರಿಯ ನಾಯಕರು ನಾಯಕತ್ವದ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಲೇ ಇವೆ.

published on : 22nd November 2020

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

published on : 20th November 2020

ಅತಿಯಾದ ವಾಯುಮಾಲಿನ್ಯ: ಕೆಲ ದಿನಗಳ ಮಟ್ಟಿಗೆ ದೆಹಲಿ ತೊರೆಯುವಂತೆ ಸೋನಿಯಾ ಗಾಂಧಿಗೆ ಸೂಚನೆ

ದೀರ್ಘಕಾಲದ ಎದೆಯ ಸೋಂಕಿನಿಂದ ಬಳಲುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೆಲವು ದಿನಗಳವರೆಗೆ ದೆಹಲಿಯಿಂದ ಬೇರೆಡೆ ಸ್ಥಳ ಬದಲಾವಣೆಗೆ ಸೂಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಪ್ರಮಾಣದ ವಾಯುಮಾಲಿನ್ಯವಿರುವ ಕಾರಣ ಸೋನಿಯಾ ಅವರ ಆರೋಗ್ಯದ ಮೇಲೆ ಅದು ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂಬ ಹಿನ್ನೆಲೆ ಈ ಸೂಚನೆ ನೀಡಲಾಗಿದೆ ಎಂದು ಪಕ್ಷದ ಮೂಲಗಳು

published on : 20th November 2020
1 2 3 4 >