• Tag results for ಹಲ್ಲೆ

ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನಿಗೆ ಧರ್ಮದೇಟು: ಯುವಕನಿಂದ ಪ್ರತಿ ದೂರು, ಮಹಿಳೆ ಸೇರಿ ನಾಲ್ವರ ಬಂಧನ

ಮಹಿಳೆಯೊಬ್ಬರಿಗೆ ಅಸಭ್ಯ ರೀತಿಯಲ್ಲಿ ಸಂದೇಶ ರವಾನಿಸುತ್ತಿದ್ದ ಆರೋಪದಡಿ ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

published on : 17th September 2020

ಉದ್ಧವ್ ಠಾಕ್ರೆ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕೆ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ: ನಾಲ್ವರ ಬಂಧನ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.

published on : 12th September 2020

ಸ್ಫೋರ್ಟ್ಸ್ ಬ್ರಾ ಧರಿಸಿ ಪಾರ್ಕ್ ನಲ್ಲಿ ದೈಹಿಕ ಕಸರತ್ತು ಆರೋಪ; 'ಕಿರಿಕ್' ನಟಿ ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆಗೆ ಯತ್ನ

ಸ್ಫೋರ್ಟ್ಸ್ ಬ್ರಾ ಧರಿಸಿ ಪಾರ್ಕ್ ನಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ನಟಿ ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎಂದು ಹೇಳಲಾಗಿದೆ.

published on : 6th September 2020

ಜೈ ಶ್ರೀರಾಮ್ ಎನ್ನದ ಮುಸ್ಲಿಂ ಆಟೋ ಚಾಲಕನನ್ನು ಥಳಿಸಿ, ಹಲ್ಲು ಮುರಿದ ದುಷ್ಕರ್ಮಿಗಳು

ಭಯಾನಕ ಘಟನೆಯೊಂದರಲ್ಲಿ ಮುಸ್ಲಿಂ ಆಟೋ ಚಾಲಕರೊಬ್ಬರನ್ನು ಇಬ್ಬರು ವ್ಯಕ್ತಿಗಳು ಮನಬಂದಂತೆ ಥಳಿಸಿದ್ದು, ಜೈ ಶ್ರೀ ರಾಮ್ ಮತ್ತು ಮೋದಿ ಜಿಂದಾಬಾದ್ ಎಂದು ಕೂಗುವಂತೆ ಬಲವಂತಪಡಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ  ನಡೆದಿದೆ.

published on : 9th August 2020

'ರಾಖಿ ಕಟ್ಟಿ ಸೋದರನಂತೆ ನೋಡಿಕೊಳ್ಳುತ್ತೇನೆಂದು ಮಾತುಕೊಟ್ಟು ಬಾ': ಆರೋಪಿಗೆ ಮ.ಪ್ರ. ಹೈಕೋರ್ಟ್ ಷರತ್ತುಬದ್ಧ ಜಾಮೀನು!

ಮಹಿಳೆ ಮೇಲೆ ಲೈಂಗಿಕ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿಗೆ ರಕ್ಷಾಬಂಧನ ಸಮಯದಲ್ಲಿ ಷರತ್ತುಬದ್ಧ ಜಾಮೀನು ನೀಡಿದ ಮಧ್ಯ ಪ್ರದೇಶ ಕೋರ್ಟ್ ನ ಇಂದೋರ್ ಪೀಠ, ಇಂದು ದೂರು ಕೊಟ್ಟ ಮಹಿಳೆಯ ಮನೆಗೆ ಹೋಗಿ ರಾಖಿ ಕಟ್ಟಿಸಿಕೊಂಡು ಜೀವನಪೂರ್ತಿ ಸೋದರನಂತೆ ರಕ್ಷಣೆಯಿಂದ ನೋಡಿಕೊಳ್ಳುವುದಾಗಿ ಮಾತುಕೊಟ್ಟು ಬರುವಂತೆ ಸೂಚಿಸಿದೆ.

published on : 3rd August 2020

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಬಾಲಕಿ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ, ಮೂವರ ಬಂಧನ

ಅಪ್ರಾಪ್ತಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ವ್ಯಕ್ತಿಯೋರ್ವ ಪೋಷಕರ ಆಕ್ರೋಶಕ್ಕೆ ಬಲಿಯಾಗಿರುವ ಘಟನೆ ಮಂಡ್ಯ ತಾಲೂಕಿನ ಎಸ್.ಐ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

published on : 2nd August 2020

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ

108 ಆ್ಯಂಬುಲೆನ್ಸ್‌ ಚಾಲಕನಿಗೆ ಆಸ್ಪತ್ರೆ ಆವರಣದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಗುರುವಾರ ಜರುಗಿದೆ. ಚಾಲಕನ ಮೇಲಿನ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 31st July 2020

ಶ್ರೀಲಂಕಾ ಮೀನುಗಾರರಿಂದ 7 ತಮಿಳುನಾಡು ಮೀನುಗಾರರ ಮೇಲೆ ಹಲ್ಲೆ, ದರೋಡೆ

ಸಮುದ್ರ ಮಧ್ಯಭಾದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2 ತಮಿಳುನಾಡು ಮೀನುಗಾರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

published on : 28th July 2020

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ

ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ಮತ್ತು ಕರ್ನಾಟಕ ವೈದ್ಯರ ಸಂಘ ಖಂಡಿಸಿದೆ. ಇದರ ಜೊತೆಗೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆಗೆ ಆಕ್ಷೇಪ ವ್ಯಕ್ತಪಡಿಸಿವೆ.

published on : 24th July 2020

ಬೆಳಗಾವಿ ಆಸ್ಪತ್ರೆಯಲ್ಲಿ ದಾಂಧಲೆ ಪ್ರಕರಣ: ಎಂಟು ಮಂದಿ ಪೊಲೀಸ್‍ ವಶಕ್ಕೆ

ಕೋವಿಡ್ -19 ಸೋಂಕಿತ ರೋಗಿಯ ಸಾವಿನ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಆಂಬ್ಯುಲೆನ್ಸ್‌ಗೆ ಬೆಂಕಿ ಹಚ್ಚಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಟು ಜನರನ್ನು ವಶಕ್ಕೆ ಪಡೆದಿದ್ದಾರೆ.

published on : 23rd July 2020

ಕೊರೋನಾ ತಗುಲಿತೆಂಬ ಭಯ: ಗರ್ಭಿಣಿ ಸೇರಿದಂತೆ ಕುಟುಂಬಸ್ಥರ ಮೇಲೆ ನೆರೆಯವರಿಂದ ಹಲ್ಲೆ

ದಕ್ಷಿಣ ಭಾಗದ ಪಟೌಲಿ ಬಡಾವಣೆಯಲ್ಲಿ ಕೋವಿಡ್​-19 ಸೋಂಕು ತಗುಲಿದೆ ಎಂಬ ಕಾರಣಕ್ಕಾಗಿ ಗರ್ಭಿಣಿ ಹಾಗೂ ಮಗು ಸೇರಿ ಕುಟುಂಬದ ಮೂವರ ಮೇಲೆ ನೆರೆಹೊರೆಯವರು ಹಲ್ಲೆ ಮಾಡಿರುವ ಘಟನೆ ನಡೆದಿದೆ

published on : 23rd July 2020

ಬೆಂಗಳೂರು ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ!

ಚಿಕಿತ್ಸೆಗೆ ದಾಖಲಾದ ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ರೋಗಿಯ ಸಂಬಂಧಿಕರು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ನಡೆಸಿದ ಘಟನೆ ನಗರದ ಮಲ್ಲೇಶ್ವರದ ಕೆಸಿ.ಜನರಲ್ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.

published on : 23rd July 2020

ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಾಲ್ವರು ಆರೋಪಿಗಳಿಗೆ ಜಾಮೀನು

ಸಿಎಎ ಮತ್ತು ಎನ್ ಆರ್ ಸಿ ಕಾಯ್ದೆ ಬೆಂಬಲಿಸಿ ಟೌನ್ ಹಾಲ್ ಮುಂದೆ ಕೈಗೊಂಡಿದ್ದ ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.

published on : 22nd July 2020

ಮಂಗಳೂರು: ವೃದ್ಧ ತಾಯಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ ಮಗ, ಮೊಮ್ಮಗನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಎಂಬಲ್ಲಿ ವೃದ್ಧ ತಾಯಿ ಮೇಲೆ ಮಗ ಹಾಗೂ ಮೊಮ್ಮಕ್ಕಳು ಅಮಾನುಷವಾಗಿ ಹಲ್ಲೆ ಮಾಡಿದ ಪ್ರಕರಣ ವರದಿಯಾಗಿದೆ.

published on : 17th July 2020

ಮಧ್ಯಪ್ರದೇಶ: ಕೃಷಿಕ ದಂಪತಿ ಮೇಲೆ ಪೊಲೀಸರ ಅಮಾನುಷ ಹಲ್ಲೆ ವಿಡಿಯೋ, ವ್ಯಾಪಕ ಆಕ್ರೋಶ

ಬೆಳೆ ನಾಶಪಡಿಸಲು ಬಂದ ಕಂದಾಯ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸುತ್ತಿದ್ದ ಕೃಷಿಕ ದಂಪತಿಗಳ ಮೇಲೆ ಪೊಲೀಸರು ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸುವ ವಿಡಿಯೋವೊಂದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಟ್ವಿಟ್ ಮಾಡಿದ್ದು, ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

published on : 16th July 2020
1 2 3 4 5 6 >