• Tag results for ಹೆಚ್ ಡಿ ಕುಮಾರಸ್ವಾಮಿ

ಕೊರೋನಾ ಪರೀಕ್ಷಾ ದಿನವೇ ವರದಿ ನೀಡಿ: ರಾಮನಗರವನ್ನು ಲಾಕ್ ಡೌನ್ ಮಾಡಿ: ಎಚ್ ಡಿ ಕುಮಾರಸ್ವಾಮಿ 

ಕೊರೋನಾ ವೈರಸ್ ಪರೀಕ್ಷೆ ನಡೆಸಿದ ದಿನವೇ ವರದಿ ನೀಡಬೇಕೆಂದು ಹಾಗೂ ರಾಮನಗರ ಜಿಲ್ಲೆಯನ್ನು ಲಾಕ್ ಡೌನ್ ಮಾಡುವಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

published on : 13th July 2020

ಸರ್ಕಾರ ಈಗ ಇಂಗು ತಿಂದ ಮಂಗನಂತಾಗಿದೆ: ಹೆಚ್.ಡಿ. ಕುಮಾರಸ್ವಾಮಿ ಟೀಕೆ

ಸರ್ಕಾರ ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಯತ್ನಪಡಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 2nd July 2020

'ಚೀನಾದೊಂದಿಗೆ ಸ್ಪರ್ಧೆ ಯೋಜನೆ' ಏನಾಯಿತು: ಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ

ಕೊರೋನಾ ವೈರಸ್ ಮತ್ತು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಗೆ ಸಂಬಂಧಪಟ್ಟಂತೆ ಗಡಿ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾದ ನಂತರ ಚೀನಾ ದೇಶದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂಬ ಕೂಗು ಜೋರಾಗುತ್ತಿದೆ. 

published on : 19th June 2020

ಮಹಿಳೆಯರ ಆಸರೆಯಾಗಿದ್ದ ಸಾಂತ್ವನ ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ವಿಪರ್ಯಾಸ: ಹೆಚ್.ಡಿ. ಕುಮಾರಸ್ವಾಮಿ

ಕಳೆದ ಎರಡು ದಶಕಗಳಿಂದ ಯಶಸ್ವಿಯಾಗಿ ನಡೆಯುತ್ತಿರುವ ಸಾಂತ್ವನ ಯೋಜನೆಯನ್ನು ಸರ್ಕಾರ ಮುಚ್ಚಲು ಹೊರಟಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

published on : 16th May 2020

ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಸ್ಥಳಾಂತರ ಮಾಡದಿದ್ದರೆ ಉಗ್ರ ಹೋರಾಟ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿದ್ದು ಅವರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಕ್ಷಣವೇ ಸ್ಥಳಾಂತರಿಸದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

published on : 24th April 2020

ತಮ್ಮ ಉತ್ತಮ ಹವ್ಯಾಸವೊಂದನ್ನು ಹೇಳಿಕೊಂಡ ಹೆಚ್ ಡಿ ಕುಮಾರಸ್ವಾಮಿ, ಯಾವುದದು?

ಪುಸ್ತಕ ಓದುವ ಅಭ್ಯಾಸ ಉತ್ತಮ ಹವ್ಯಾಸಗಳಲ್ಲಿ ಒಂದು. ಪುಸ್ತಕ ಓದುವ ಅಭ್ಯಾಸವಿದ್ದರೆ ಜ್ಞಾನವೂ ಹೆಚ್ಚುತ್ತದೆ, ವ್ಯಕ್ತಿಯಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ, ಕೆಟ್ಟ ಯೋಚನೆಗಳು ಬರುವುದಿಲ್ಲ. ಸಮಯ ಕಳೆಯಲು ಮನುಷ್ಯನ ಒಂದು ಉತ್ತಮ ಸಂಗಾತಿ ಪುಸ್ತಕಗಳು. ಇದು ಅನುಭವಸ್ಥರು ಹೇಳುವ ಮಾತು.

published on : 23rd April 2020

ಪಾದರಾಯನಪುರ ಗಲಭೆ ಪುಂಡರನ್ನು ರಾಮನಗರಕ್ಕೆ ವರ್ಗಾವಣೆ, ಅನಾಹುತಗಳಾದರೆ ಸರ್ಕಾರವೇ ಹೊಣೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರಿನ ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ 54 ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

published on : 22nd April 2020

ದೇಶಕ್ಕೆ ಅನ್ವಯವಾಗುವಂತೆ 3 ತಿಂಗಳು ಬಾಡಿಗೆ ವಿನಾಯ್ತಿ ನೀಡಿ: ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕಿನಿಂದ ಲಾಕ್ ಡೌನ್ ಆಗಿರುವುದರಿಂದ ತೀವ್ರ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದು ಈ ಸಂದರ್ಭದಲ್ಲಿ ಬಾಡಿಗೆದಾರರನ್ನು ಕಾಪಾಡಲು ಕೇಂದ್ರ ಸರ್ಕಾರ ಬಾಡಿಗೆ ವಿನಾಯ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 13th April 2020

ರೈತರ ಉತ್ಪನ್ನಗಳನ್ನು ಸರ್ಕಾರ ಖರೀದಿಸಿ ಮಾರಾಟ ಮಾಡಲಿ, ನೇಕಾರರ ಸಂಕಷ್ಟಕ್ಕೆ ಸ್ಪಂದಿಸಿ:ಪ್ರತಿಪಕ್ಷ ನಾಯಕರ ಆಗ್ರಹ

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಆಗಿರುವುದರಿಂದ ವಾಹನ ಸಂಚಾರಗಳಿಲ್ಲದೆ ರೈತರ ಉತ್ಪನ್ನಗಳನ್ನು ಸರಿಯಾದ ಸಮಯಕ್ಕೆ ಮಾರುಕಟ್ಟೆಗೆ ತರಲು ಸಾಧ್ಯವಾಗುತ್ತಿಲ್ಲ, ತಾವು ಬೆಳೆದ ಉತ್ಪನ್ನಗಳು ಹಾಳಾಗುತ್ತಿವೆ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ, ಕೆಲವೆಡೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳೂ ನಡೆದಿವೆ.

published on : 12th April 2020

ಬಿಜೆಪಿ ಸ್ಥಾಪನೆ ದಿನ ಆಚರಿಸಲು ಮೋದಿಯವರು ಕೊರೋನಾವನ್ನು ದುರುಪಯೋಗಪಡಿಸಿಕೊಂಡರೆ:ಹೆಚ್ ಡಿ ಕುಮಾರಸ್ವಾಮಿ

ಭಾನುವಾರ ರಾತ್ರಿ 9 ಗಂಟೆಗೆ ಮನೆಯ ವಿದ್ಯುತ್ ದೀಪಗಳನ್ನು 9 ನಿಮಿಷ ಆರಿಸಿ ಬಾಗಿಲು, ಕಿಟಕಿ, ಬಾಲ್ಕನಿಗಳಲ್ಲಿ ನಿಂತು ದೀಪ, ಮೊಂಬತ್ತಿ ಹಚ್ಚಿ ದೇಶದ ಸುಭಿಕ್ಷೆಗಾಗಿ ಪ್ರಾರ್ಥಿಸಿ ಎಂದು ಪ್ರಧಾನಿ ಮೋದಿ ಕರೆ ನೀಡಿರುವುದಕ್ಕೆ ಸಮಾಜದ ವಿವಿಧ ವರ್ಗದ ಜನರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

published on : 5th April 2020

ದಲಿತರು, ಬಡವರ ವಿರೋಧಿ ಬಜೆಟ್, ಎಚ್.ಕೆ. ಕುಮಾರಸ್ವಾಮಿ; 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

published on : 5th March 2020

ದೇಶಭಕ್ತಿಯ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿಯಬೇಕಿಲ್ಲ: ಎಚ್‌.ಡಿ.ಕುಮಾರಸ್ವಾಮಿ   

ಪಾಕಿಸ್ತಾನ ಪರ ಅಮೂಲ್ಯ ಘೋಷಣೆ ಕೂಗಿರುವುದು ಖಂಡನೀಯ. ಆ ರೀತಿಯ ವರ್ಗಕ್ಕೆ ಸೇರಿದವರ ಬಗ್ಗೆ ಸಂಘಟಕರು ಎಚ್ಚರದಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 21st February 2020

ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು, ನನ್ನ‌ ಜೀನ್ ಈ ಮಣ್ಣಿನಲ್ಲಿದೆ: ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು

ನನ್ನನ್ನು ಅಪಮಾನಿಸುತ್ತಿರುವ ಬಿಜೆಪಿಗರೇ ಎಚ್ಚರ... ನಿಮ್ಮ ಜೀನ್ ಗಳು ಪಾಕಿಸ್ತಾನದಲ್ಲಿರಬಹುದು. ಅಥವಾ ಜರ್ಮನಿಯ ನಾಜಿಗಳಲ್ಲಿರಬಹುದು. ನನ್ನ‌ ಜೀನ್ ಈ ಮಣ್ಣಿನಲ್ಲಿದೆ. ನನ್ನನ್ನು ಕೊಲ್ಲಲೆತ್ನಿಸುವವರು ನವ ಉಗ್ರರು. ಅಪಮಾನಿಸಲು ಯತ್ನಿಸುತ್ತಿರುವವರು ಒಕ್ಕಲಿಗ ಅಸ್ಮಿತೆಯ ವಿರೋಧಿಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

published on : 25th January 2020

ಮಂಗಳೂರಿನಲ್ಲಿ ಬಾಂಬ್ ಪತ್ತೆ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಇದು

ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸಬೇಕೆಂದು ಹೇಳಿದ್ದಾರೆ. 

published on : 20th January 2020

ಮಂಗಳೂರು ಗೋಲಿಬಾರ್; ಗೃಹ ಸಚಿವ ಬೊಮ್ಮಾಯಿ ವಜಾಗೊಳಿಸಲು ಹೆಚ್.ಡಿ ಕುಮಾರಸ್ವಾಮಿ ಒತ್ತಾಯ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 22nd December 2019
1 2 3 4 5 6 >