• Tag results for ಹೆಚ್ ಡಿ ದೇವೇಗೌಡ

ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡ

 ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆಯನ್ನು ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿರುವುದು ಸರಿಯಲ್ಲ. ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

published on : 17th August 2020

ಚೀನಾದೊಂದಿಗಿನ ಗಡಿ ಪರಿಸ್ಥಿತಿ ಸರಿಪಡಿಸಲಾಗದಷ್ಟು ಮೀರಿ ಹೋಗಿದೆ: ಹೆಚ್ ಡಿ ದೇವೇಗೌಡ

ಭಾರತ-ಚೀನಾ ಗಡಿಭಾಗದಿಂದ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಗೆ ಮುಂದಾಗಿರುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಡಿಯಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಬಹುದು ಎಂಬ ನಿಲುವು ಮತ್ತು ಅಂದಾಜಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

published on : 31st July 2020

87ರ ಇಳಿ ವಯಸ್ಸಿನಲ್ಲಿ ಯೋಗ ಮಾಡುತ್ತಿರುವ ದೇವೇಗೌಡರು, ರಾಜಕೀಯ ನಾಯಕರ ಉತ್ಸಾಹ

87 ವರ್ಷದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯೋಗ ಮಾಡುತ್ತಿರುವ ವಿಡಿಯೊವನ್ನು ಟ್ವಿಟ್ಟರ್ ನಲ್ಲಿ ಹಾಕಿ ಎಲ್ಲರೂ ಯೋಗ ಮಾಡಿ, ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂದಾಗ ಹಲವರು ಈ ಇಳಿ ವಯಸ್ಸಿನಲ್ಲಿ ಅವರ ಜೀವನೋತ್ಸಾಹ ನೋಡಿ ಹುಬ್ಬೇರಿಸಿದ್ದಂತೂ ಸುಳ್ಳಲ್ಲ.

published on : 22nd June 2020

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ

ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

published on : 8th June 2020

ವಿಧಾನಪರಿಷತ್ ಚುನಾವಣೆ ಮೇಲೆ ನಿಂತಿದೆ ದೇವೇಗೌಡರ ರಾಜ್ಯಸಭೆ ಪ್ರವೇಶದ ಭವಿಷ್ಯ?

ಕಾಂಗ್ರೆಸ್-ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯಸಭೆ ಚುನಾವಣೆ ಎದುರಿಸಲು ಸಿದ್ಧತೆ ನಡೆಯುತ್ತಿದ್ದು, ದೇವೇಗೌಡರು ರಾಜ್ಯಸಭೆ ಪ್ರವೇಶಿಸುವುದು ಜೂನ್ ನಲ್ಲಿ ನಡೆಯಲಿರುವ ಮೇಲ್ಮನೆ ಚುನಾವಣೆಯನ್ನು ಅವಲಂಬಿಸಿದೆ.

published on : 27th May 2020

ಅಲ್ಪಸಂಖ್ಯಾತರ ವಿರುದ್ಧ ಮಾಧ್ಯಮಗಳಲ್ಲಿ ಕೆಟ್ಟದಾಗಿ ಬಿಂಬಿಸುವವವರ ವಿರುದ್ಧ ಕ್ರಮ ಕೈಗೊಳ್ಳಿ: ಎಚ್‌.ಡಿ.ದೇವೇಗೌಡ

ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಕೆಟ್ಟದಾಗಿ ಬಿಂಬಿಸುತ್ತಿರುವುದು ತುಂಬಾ ದುರದೃಷ್ಟಕರ. ಸಮುದಾಯದ ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಇಡೀ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಟ್ಟದಾಗಿ ಬಿಂಬಿಸುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್

published on : 6th April 2020

ಐಕ್ಯತೆ ಪ್ರದರ್ಶನ ಓಕೆ, ಜೊತೆಗೆ ಕೊರೋನಾ ಸೋಂಕು ಪರೀಕ್ಷಾ ಕಿಟ್‌ಗಳನ್ನು ಹೆಚ್ಚೆಚ್ಚು ಒದಗಿಸಿ: ಮಾಜಿ ಪ್ರಧಾನಿ ದೇವೇಗೌಡ

ಇದೇ 5ರಂದು ರಾತ್ರಿ ದೀಪ ಆರಿಸಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ವಾಗತಿಸಿದ್ದಾರೆ.

published on : 3rd April 2020

ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆರೋಪ

ಹಿರಿಯ ಅಧಿಕಾರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆ, ಜನ ಸಾಮಾನ್ಯರು ಸಹ ಹೇಳುತ್ತಿದ್ದಾರೆ. ಬಿಜೆಪಿ ಪಕ್ಷದವರು ಸಹ ಭ್ರಷ್ಟಾಚಾರದ ಬಗ್ಗೆ ಹೈಕಮಾಂಡ್ ಗೆ ದೂರು ಕೊಟ್ಟಿದ್ದಾರೆ.

published on : 14th February 2020

ಎಸ್ ಎಂ ಕೃಷ್ಣ ನಿಂದನೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ: ಎಚ್ ಡಿ ದೇವೇಗೌಡ 

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಆತ್ಮಚರಿತ್ರೆ ಬಿಡುಗಡೆಯಾಗಿತ್ತು. ಪುಸ್ತಕದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪ್ರಸ್ತಾಪವಿದೆ.

published on : 26th January 2020

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭೆಗೆ...? ಮಲ್ಲಿಕಾರ್ಜುನ ಖರ್ಗೆ ಸ್ಥಿತಿಯೇನು!

ತಾವು ರಾಜ್ಯಸಭೆಗೆ ತೆರಳಬೇಕೋ?. ಬೇಡವೋ? ಎಂಬುದು ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

published on : 8th January 2020

ಉಪ ಚುನಾವಣೆ: ಮತ್ತೆ ಹಳೆ ಮೈತ್ರಿಗೆ ದೇವೇಗೌಡರು ಕಿಂಗ್ ಮೇಕರ್ ಹೇಗೆ ಮತ್ತು ಏಕೆ? 

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ರಾಜಕೀಯವಾಗಿ ಇರುವುದು ಸಮಾನ ಬಯಕೆ, ಅದು ಫೀನಿಕ್ಸ್ ನಂತೆ ಎದ್ದುಬಂದು ರಾಜಕೀಯವಾಗಿ ಮತ್ತೆ ಭವಿಷ್ಯ ಕಂಡುಕೊಳ್ಳುವುದು. ಈ ಬಾರಿಯ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಯತ್ನಿಸಿದರೂ ಕೂಡ ಎರಡೂ ಪಕ್ಷಗಳು ಬಹುವಾಗಿ ನೆಚ್ಚಿಕೊಂಡಿರುವುದು ಒಬ್ಬ ವ್ಯಕ್ತಿಯನ್ನು ಅದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ.

published on : 5th December 2019

ಮೈತ್ರಿ ಸರ್ಕಾರ ಪತನಕ್ಕೆ ಕಾಂಗ್ರೆಸ್ ನ ಕೆಲವರು ಕಾರಣ- ಹೆಚ್. ಡಿ. ದೇವೇಗೌಡ  

ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಕಾಂಗ್ರೆಸ್ ನ ಕೆಲ ಮುಖಂಡರು ಸಂಚು ನಡೆಸಿದ್ದು, ಶಾಸಕರನ್ನು ಮುಂಬೈಗೆ ಕಳುಹಿಸಿದ್ದು ಈ ಮುಖಂಡರೇ ಎಂದು  ಪರೋಕ್ಷವಾಗಿ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕಿಡಿಕಾರಿದ್ದಾರೆ.

published on : 18th November 2019

ಉಪಚುನಾವಣೆ ಫಲಿತಾಂಶ ಏನೇ ಆಗಲಿ, ಬಿಎಸ್ ವೈ ಸರ್ಕಾರ ಬೀಳಲು ಅವಕಾಶ ನೀಡುವುದಿಲ್ಲ: ಜೆಡಿಎಸ್ ವರಿಷ್ಠ ದೇವೇಗೌಡ

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಿದ್ದ ಬಳಿಕ ಬಿಜೆಪ-ಜೆಡಿಎಸ್ ನಡುವೆ ಒಳ ಒಪ್ಪಂದ ಆಗಿದ್ಯಾ? ಹೀಗೊಂದು ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. 

published on : 5th November 2019

ಅಡಿಯೋ ಅಸ್ತ್ರ, ಮುಖ್ಯಮಂತ್ರಿ ವಿರುದ್ಧ ದೂರು ದಾಖಲಾಗಲಿ- ಹೆಚ್. ಡಿ. ದೇವೇಗೌಡ  

ಉತ್ತರಾಂಚಲ ರಾಜ್ಯದಲ್ಲಿ  ಕುದುರ ವ್ಯಾಪಾರ ಆರೋಪದಡಿ ಅಲ್ಲಿನ ಮುಖ್ಯಮಂತ್ರಿ ವಿರುದ್ಧವೇ ದೂರು ದಾಖಲಿಸಲಾಗಿದೆ. ಅದರಂತೆ ಕರ್ನಾಟಕದಲ್ಲಿಯೂ ಕೂಡಾ ಆಪರೇಷನ್ ಕಮಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದೂರು ದಾಖಲಾಗುವುದು ಸೂಕ್ತ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಹೇಳಿದ್ದಾರೆ.

published on : 3rd November 2019

ಇತ್ತ ದೇವೇಗೌಡರು ಅತೃಪ್ತ ಶಾಸಕರ ಸಭೆ ಕರೆದರೆ, ಅತ್ತ ಲಂಡನ್ ಗೆ ಹಾರಲು ಸಜ್ಜಾಗಿದ್ದಾರೆ ಪುತ್ರ ಕುಮಾರಸ್ವಾಮಿ!

ಮಲೇಷಿಯಾ ಪ್ರವಾಸ ಯೋಜನೆ ವಿಫಲವಾದ ನಂತರ ಪುತ್ರ ಲಂಡನ್ ಕಡೆ ಮುಖ ಮಾಡಿದ್ದಾರೆ. ಜೆಡಿಎಸ್ ನಾಯಕರನ್ನು ಒಲಿಸಲು ಪುತ್ರ ಹೆಚ್ ಡಿ ಕುಮಾರಸ್ವಾಮಿ ಶಾಸಕರನ್ನು ಮಲೇಷಿಯಾಕ್ಕೆ ಕರೆದುಕೊಂಡು ಹೋಗುವ ಯೋಜನೆಯಲ್ಲಿದ್ದರು.

published on : 3rd November 2019
1 2 3 4 5 6 >