• Tag results for ಹೈಕೋರ್ಟ್

ವಿಚಾರಣಾ ನ್ಯಾಯಾಲಯವನ್ನು ಅಧೀನ ನ್ಯಾಯಾಲಯ ಎಂದು ಕರೆಯುವಂತಿಲ್ಲ;ಹೈಕೋರ್ಟ್

ಮೇಲ್ಮನವಿ ನ್ಯಾಯಾಲಯಗಳು ವಿಚಾರಣಾ ನ್ಯಾಯಾಲಯವನ್ನು ‘ಕೆಳ ಅಥವಾ ಅಧೀನ ನ್ಯಾಯಾಲಯ’ ಎಂದು ತನ್ನ ಆದೇಶ ಅಥವಾ ತೀಪಿ೯ನಲ್ಲಿ ಉಲ್ಲೇಖಿಸುವ೦ತಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ.  

published on : 23rd January 2020

ಜೋಪಡಿ ನೆಲಸಮಕ್ಕೆ ಆದೇಶಿಸಿದ್ದವರು ಯಾರು ಪತ್ತೆ ಹಚ್ಚಿ: ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ

ಅಕ್ರಮ ಬಾಂಗ್ಲಾ ವಲಸಿಗರ ತೆರವು ಕಾರ್ಯಾಚರಣೆ ಹೆಸರಿನಲ್ಲಿ ನಗರದ ದೇವರ ಬೀಸನಹಳ್ಳಿ, ಕುಂದನಹಳ್ಳಿ, ಕರಿಯಮ್ಮನ ಅಗ್ರಹಾರ ಹಾಗೂ ಬೆಳ್ಳಂದೂರಿನ ವಿವಿಧ ಭಾಗಗಳಲ್ಲಿನ ಜೋಪಡಿಗಳನ್ನು ನೆಲ ಮಾಡುವ ಕುರಿತು ಯಾರು ಆದೇಶ ನೀಡಿದ್ದರು ಎಂಬುದನ್ನು ಪತ್ತೆ ಹಚ್ಚಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಸೂಚನೆ ನೀಡಿದೆ. 

published on : 23rd January 2020

ಸಿಎಎ ವಿರುದ್ಧದ ಪಿಐಎಲ್ ವಜಾಗೊಳಿಸಿದ ಬಾಂಬೆ ಹೈಕೋರ್ಟ್

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದ ಕೆಲವೇ ಗಂಟೆಗಳಲ್ಲಿ, ಸಿಎಎ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಬಾಂಬೆ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

published on : 22nd January 2020

ಆನಂದ್ ಸಿಂಗ್, ಕಂಪ್ಲಿ ಗಣೇಶ್ ಖುದ್ದು ಹಾಜರಾಗಲೇಬೇಕು: ಹೈಕೋರ್ಟ್ ಆದೇಶ

ಬೆಂಗಳೂರು; ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ಪರಸ್ಪರ ರಾಜಿ-ಸಂಧಾನದ ಮೂಲಕ ಬಗೆಹರಿಸಿಕೊಂಡಿರುವ ಶಾಸಕರಾದ ಆನಂದ್ ಸಿಂಗ್ ಮತ್ತು ಜೆ.ಎನ್. ಗಣೇಶ್ ಖುದ್ದು ಹಾಜರಾಗಿ ಹೇಳಿಕೆ ನೀಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. 

published on : 22nd January 2020

ಜನಪ್ರತಿನಿಧಿಗಳ ಶಿಫಾರಸು ಪತ್ರ ಆಧರಿಸಿ ಮಾಡುವ ವರ್ಗಾವಣೆ ಕಾನೂನುಬಾಹಿರ; ಹೈಕೋರ್ಟ್ ಮಹತ್ವದ ಆದೇಶ

ಮುಖ್ಯಮಂತ್ರಿ ಸೇರಿದಂತೆ ಹಲವು ಜನಪ್ರತಿನಿಧಿಗಳ ಶಿಫಾರಸು ಆಧರಿಸಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಕಾನೂನುಬಾಹಿರ ಎಂದು ಹೈಕೋರ್ಟ್ ಹೇಳಿದೆ.  

published on : 21st January 2020

ಸಂತ್ರಸ್ತರಿಗೆ ಪರಿಹಾರ ನೀಡಲು ವಿಫಲ: ತನ್ನ ಆದೇಶ ಪಾಲಿಸದೇ ಸಭೆ ನಡೆಸಿದ್ದ ಬಿಬಿಎಂಪಿ ಆಯುಕ್ತರ ವಿರುದ್ಧ 'ಹೈ' ಕಿಡಿ

ನಗರದ ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ದೇಶಿಸಿ ತಾನು ಹೊರಡಿಸಿದ್ದ ಆದೇಶ ಪಾಲಿಸದೆಯೇ, ರಾಜಕಾರಣಿಗಳೊಂದಿಗೆ ಚರ್ಚಿಸಿ, ಆದೇಶವನ್ನು ಕೌನ್ಸಿಲ್ ಸಭೆ ಮುಂದಿಡಲು ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಹೈಕೋರ್ಟ್ ಸೋಮವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು. 

published on : 21st January 2020

ಎಲ್ಲಾ ಖಾಸಗಿ, ಸಾರ್ವಜನಿಕ ಪ್ರದೇಶಗಳಲ್ಲಿರುವ ಮರಗಳ ಎಣಿಕೆ ಆರಂಭಿಸಿ: ಬಿಬಿಎಂಪಿಗೆ 'ಹೈ' ಸೂಚನೆ

ನಗರದಲ್ಲಿ ಮರಗಳ ಗಣತಿ ಆರಂಭಿಸಲು ನ್ಯಾಯಾಲಯ ನೀಡಿದ್ದ ಆದೇಶ ಮತ್ತು ಕರ್ನಾಟಕ ಮರ ಸಂರಕ್ಷಣಾ ಕಾಯ್ದೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ ಎಂದು ಬಿಬಿಎಂಪಿ ಮತ್ತು ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯನ್ನು ಹೈಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿತ್ತು. 

published on : 21st January 2020

ಟಿಪ್ಪು ಜಯಂತಿ ರದ್ದು ಆದೇಶ ಪರಿಶೀಲನೆಗೆ 8 ವಾರ ಕಾಲಾವಕಾಶ ತೆಗೆದುಕೊಂಡ ಸರ್ಕಾರ

ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಆಚರಿಸುತ್ತಿದ್ದ ಟಿಪ್ಪು ಜಯಂತಿ ರದ್ದುಗೊಳಿಸಿ ಕಳೆದ 2019ರ ಜು.30ರಂದು ಹೊರಡಿಸಿದ್ದ ಆದೇಶದ ಮರು ಪರಿಶೀಲನೆಗಾಗಿ ರಾಜ್ಯ ಸರ್ಕಾರ ಹೈಕೋರ್ಟ್ ನಿಂದ ಮತ್ತೆ 8 ವಾರಗಳ ಕಾಲಾವಕಾಶ ಪಡೆದುಕೊಂಡಿದೆ. 

published on : 21st January 2020

ನಕಲಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್

ಲೋಕಸಭೆ ಚುನಾವಣೆಯ ಸಮಯದಲ್ಲಿ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಮಾಡಿದ್ದರೆಂಬ  ಆರೋಪದ ಕುರಿತು ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಸಂಸದರ ಸದಸ್ಯತ್ವ ಅಸಿಂಧುಗೊಳಿಸುವಂತೆ ಕೋರಿ ಮಾಜಿ ಸಚಿವ  ಎ.ಮಂಜು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.

published on : 17th January 2020

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ 10 ಕಿ.ಮೀ ವ್ಯಾಪ್ತಿಯಲ್ಲಿ ಅಭಿವೃದ್ಧಿ ಚಟುವಟಿಕೆಗೆ ತಡೆ ನೀಡಿದ ಹೈಕೋರ್ಟ್

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿಎನ್‌ಪಿ) 10 ಕಿ.ಮೀ ವ್ಯಾಪ್ತಿಯಲ್ಲಿ “ನಿರೀಕ್ಷಿತ” ವಾಣಿಜ್ಯ ಮತ್ತು ಅಭಿವೃದ್ಧಿ ಚಟುವಟಿಕೆಗಳನ್ನು ನಿರ್ಬಂಧಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.್ ಗುರುವಾರ ಈ ಸಂಬಂಧ ಮಧ್ಯಂತರ ಆದೇಶಾ ಹೊರಡಿಸಿದ್ದ ಹೈಕೋರ್ಟ್ ಈಗಾಗಲೇ ಕೈಗೊಂಡ ವಾಣಿಜ್ಯ ಮತ್ತು ಅಭಿವೃದ್ಧಿ ಚಟುವಟಿಕೆಗಳ ಮೇಲೆ ಈ ಆದೇಶ ಅನ್ವಯಿಸುವುದಿಲ್ಲ ಎಂದೂ ಹೇಳಿದೆ.

published on : 17th January 2020

ಪೊಲೀಸ್ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಮಾಡಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿ; ಹೈಕೋರ್ಟ್

ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಪರಿಗಣಿಸುವುದಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.

published on : 17th January 2020

ಹೆಚ್'ಡಿಕೆಗೆ ಭೂಕಬಳಿಕೆಯ ಸಂಕಷ್ಟ: ಲೋಕಾಯುಕ್ತ ಆದೇಶ ಪಾಲಿಸಲು ಸಿದ್ಧ ಎಂದ ಸರ್ಕಾರ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಸಂಬಂಧಿ ಸಾವಿತ್ರಮ್ಮ ಮತ್ತು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಮಾಡಿರುವ ಸಂಬಂಧ ಲೋಕಾಯುಕ್ತರು 2014ರಲ್ಲಿ ಹೊರಡಿಸಿರುವ ಆದೇಶವನ್ನು ಜಾರಿಗೊಳಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್'ಗೆ ತಿಳಿಸಿದೆ. 

published on : 15th January 2020

ಮಂಗಳೂರು ಗೋಲಿಬಾರ್: ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಶೀಘ್ರಗತಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ. 

published on : 15th January 2020

ಭೂ ಹಗರಣ: ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕ್ರಮ, ಹೈಕೋರ್ಟ್‌ಗೆ ಸರ್ಕಾರದ ಹೇಳಿಕೆ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ.ಕುಮಾರಸ್ವಾಮಿ ಹಾಗೂ  ಡಿ.ಸಿ.ತಮ್ಮಣ್ಣ ವಿರುದ್ಧದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ  ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

published on : 15th January 2020

ರಾಷ್ಟ್ರಪತಿಗಳ ಮುಂದೆ ಕ್ಷಮಾದಾನ ಅರ್ಜಿಯಿದೆ,ಮರಣದಂಡನೆ ಮುಂದೂಡಿ! ಡೆತ್ ವಾರಂಟ್ ವಿರುದ್ಧ ನಿರ್ಭಯಾ ಅಪರಾಧಿಯಿಂದ ಹೈಕೋರ್ಟಿಗೆ ಮೊರೆ

ಜನವರಿ 22 ರಂದು ಗಲ್ಲಿಗೇರಿಸಲಿರುವ ನಾಲ್ವರು ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಕ್ಯುರೇಟಿವ್ ಅರ್ಜಯನ್ನು ಸುಪ್ರೀಂ ವಜಾಗೊಳಿಸಿದ ಬೆನ್ನಲ್ಲೇ ಓರ್ವ ಆರೋಪಿ  ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಡೆತ್ ವಾರಂಟ್‌ ಅನ್ನು ವಜಾಗೊಳಿಸುವಂತೆ ಮತ್ತೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾನೆ.

published on : 14th January 2020
1 2 3 4 5 6 >