- Tag results for AAP
![]() | ಕೇಂದ್ರದೊಂದಿಗೆ ಸಂಘರ್ಷದ ನಡುವೆ 78,800 ಕೋಟಿ ರೂಪಾಯಿ ದೆಹಲಿ ಬಜೆಟ್ ಮಂಡಿಸಿದ ಆಪ್ ಸರ್ಕಾರಕೇಂದ್ರ ಸರ್ಕಾರದೊಂದಿಗಿನ ಸಂಘರ್ಷದ ನಡುವೆ ದೆಹಲಿಯ ಆಮ್ ಆದ್ಮಿ ಸರ್ಕಾರ 2023-24 ನೇ ಸಾಲಿಗೆ 78,800 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದೆ. |
![]() | ಪಂಜಾಬ್‌ನಲ್ಲಿ ಶಾಂತಿ ಕದಡಲು ಯಾರಿಗೂ ಬಿಡುವುದಿಲ್ಲ: ಅಮೃತಪಾಲ್ ಸಿಂಗ್ ವಿರುದ್ಧ ಸಿಎಂ ಭಗವಂತ್ ಮಾನ್ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್ ಬಂಧನಕ್ಕೆ ಪೊಲೀಸರು ನಿರಂತರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಂಗಳವಾರ, ರಾಜ್ಯದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುವವರ ವಿರುದ್ಧ ತಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. |
![]() | ದಯವಿಟ್ಟು ದೆಹಲಿ ಬಜೆಟ್ ಮಂಡನೆಯನ್ನು ತಡೆಯಬೇಡಿ: ಪ್ರಧಾನಿ ನರೇಂದ್ರ ಮೋದಿಗೆ ಅರವಿಂದ್ ಕೇಜ್ರಿವಾಲ್ ಪತ್ರದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೆಹಲಿಯ ಬಜೆಟ್ ಅನ್ನು ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ. ಮಂಗಳವಾರ ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ರ ಬಜೆಟ್‌ನ ಮಂಡನೆಯನ್ನು ತಡೆಹಿಡಿಯಲಾಗಿದೆ. |
![]() | ಅದಾನಿ ಕಂಪನಿಗಳಿಂದ 10,000 ಕೋಟಿ ರೂ. ಹಗರಣ: ಎಎಪಿ ಆರೋಪರಾಜಸ್ಥಾನ ಮತ್ತು ಮಹಾರಾಷ್ಟ್ರದಲ್ಲಿ ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಲ್ಲಿ ಅದಾನಿ ಎಂಟರ್‌ಪ್ರೈಸ್ ಲಿಮಿಟೆಡ್ 10,000 ಕೋಟಿ ರೂ. ಮೊತ್ತದ ಹಗರಣ ಮಾಡಿದೆ ಎಂದು ಆಮ್ ಆದ್ಮಿ ಪಕ್ಷ ಶನಿವಾರ ಆರೋಪಿಸಿದೆ ಮತ್ತು ಈ ಬಗ್ಗೆ ಕೇಂದ್ರ ಏಜೆನ್ಸಿಗಳಿಂದ ತನಿಖೆಗೆ ಒತ್ತಾಯಿಸಿದೆ. |
![]() | ಶಾಸಕರಿಗೆ ಹಣ ನೀಡುವ ಮೂಲಕ ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಎಪಿದೆಹಲಿ ವಿಧಾನಸಭೆಯಲ್ಲಿ ಕೇವಲ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಹಣ ನೀಡುವ ಮೂಲಕ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. |
![]() | 224 ಕ್ಷೇತ್ರದ ಜನರಿಂದ ಮಾಹಿತಿ ಸಂಗ್ರಹ: 'ಜನರಿಂದ ಜನರಿಗಾಗಿ' ಪ್ರಣಾಳಿಕೆ ಸಿದ್ಧಪಡಿಸಲು ಆಪ್ ಮುಂದು!ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಮಾಹಿತಿ ಸಂಗ್ರಹಿಸಿ, ಜನರ ನಿಜವಾದ ಸಮಸ್ಯೆಗಳಿಗೆ ಪರಿಹಾರಗಳನ್ನು ಒಳಗೊಂಡ ʻಜನರಿಂದ ಜನರಿಗಾಗಿʼ ಪ್ರಣಾಳಿಕೆ ಸಿದ್ಧಪಡಿಸಲು ಆಮ್ ಆದ್ಮಿ ಪಕ್ಷ ಮುಂದಾಗಿದೆ. |
![]() | ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |
![]() | ಹಿರಣ್ಯ ಕಶಿಪುವಿನಂತೆ ಇಂದಿಗೂ ಕೆಲವರು ತಮ್ಮನ್ನು ತಾವು ದೇವರೆಂದು ಪರಿಗಣಿಸುತ್ತಿದ್ದಾರೆ: ಅರವಿಂದ ಕೇಜ್ರಿವಾಲ್ಹಿರಣ್ಯಕಶಿಪು ಮತ್ತು ಪ್ರಹ್ಲಾದನ ಪೌರಾಣಿಕ ಪ್ರಸಂಗಗಳೊಂದಿಗೆ ಇತ್ತೀಚಿನ ಘಟನೆಗಳನ್ನು ಹೋಲಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ, ದೇಶ ಮತ್ತು ಮಕ್ಕಳ ಸೇವೆ ಮಾಡುವವರನ್ನು ಕಂಬಿಯ ಹಿಂದೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. |
![]() | ಆಪ್ ಸಚಿವ ಮನೀಶ್ ಸಿಸೋಡಿಯಾ ಟ್ವಿಟರ್ ಖಾತೆ ಬ್ಲಾಕ್ ಮಾಡಿ: ಟ್ವಿಟರ್'ಗೆ ಬಿಜೆಪಿ ಆಗ್ರಹಆಪ್ ಸಚಿವ ಮನೀಶ್ ಸಿಸೋಡಿಯಾ ಅವರ ಟ್ವಿಟರ್ ಖಾತೆಯನ್ನು ಬ್ಲಾಕ್ ಮಾಡುವಂತೆ ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ಅವರಿಗೆ ಬಿಜೆಪಿ ಆಗ್ರಹಿಸಿದೆ. |
![]() | ಜೈಲಿನಲ್ಲಿ ಕೊಲೆಗಾರರ ಜತೆ ಸಿಸೋಡಿಯಾ ಇರಿಸಿದ್ದು ಏಕೆ?: 'ರಾಜಕೀಯ ಕೊಲೆ'ಗೆ ಸಂಚು ಎಂದ ಆಪ್ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನ ಸೆಲ್ ನಂಬರ್ 1ರಲ್ಲಿ ಇರಿಸಲಾಗಿದ್ದು, ಅದರ ಪಕ್ಕದ ವಾರ್ಡ್ ನಂ 9ರಲ್ಲಿ ಘೋರ ಕೊಲೆ ಅಪರಾಧಿಗಳನ್ನು ಇರಿಸಲಾಗಿದೆ. ಈ ಮೂಲಕ "ರಾಜಕೀಯ... |
![]() | ಸಿಬಿಐನಿಂದ ಸಿಸೋಡಿಯಾಗೆ ಚಿತ್ರಹಿಂಸೆ, ಸುಳ್ಳು ಆರೋಪಗಳಿರುವ ದಾಖಲೆಗಳಿಗೆ ಸಹಿ ಹಾಕುವಂತೆ ಒತ್ತಡ: ಎಎಪಿಸಿಬಿಐ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ಚಿತ್ರಹಿಂಸೆ ನೀಡುತ್ತಿದೆ ಮತ್ತು ಸುಳ್ಳು ಆರೋಪಗಳನ್ನು ಒಳಗೊಂಡಿರುವ ಪತ್ರಗಳಿಗೆ ಸಹಿ ಹಾಕುವಂತೆ ಒತ್ತಡ ಹೇರುತ್ತಿದೆ ಎಂದು ಎಎಪಿ ರಾಷ್ಟ್ರೀಯ ವಕ್ತಾರ ಸೌರಭ್ ಭಾರದ್ವಾಜ್ ಭಾನುವಾರ ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆ: ದಾವಣಗೆರೆ ಸಮಾವೇಶದಿಂದ ನೀಲನಕ್ಷೆ ಆರಂಭಿಸಲಿರುವ ಆಮ್ ಆದ್ಮಿ ಪಕ್ಷಭಾಸ್ಕರ್ ರಾವ್ ಅವರು ಬಿಜೆಪಿಗೆ ಜಿಗಿದಿದ್ದಾರೆ ಮತ್ತು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನದ ನಂತರ, ಎಎಪಿ ತನ್ನ ದಾವಣಗೆರೆ ಸಮಾವೇಶದಿಂದ ವಿಧಾನಸಭೆ ಚುನಾವಣೆಗೆ ದೊಡ್ಡ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ ಮತ್ತು ಚುನಾವಣಾ ಮಾರ್ಗಸೂಚಿಯನ್ನು ಹೊರಡಿಸಲಿದೆ. |
![]() | ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಕೆ: 6 ಎಎಪಿ ಮುಖಂಡರ ಬಂಧನಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ ಭಾಷೆ ಬಳಸಿ, ಬೆದರಿಕೆ ಮತ್ತು ಅವರ ಪ್ರತಿಕೃತಿ ದಹಿಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 6 ಮುಖಂಡರನ್ನು ಬಂಧಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ಅದಾನಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; ಮೋದಿ ಸರ್ಕಾರಕ್ಕೆ ಕಪಾಳಮೋಕ್ಷ: ಎಎಪಿಇತ್ತೀಚಿಗೆ ಅದಾನಿ ಗ್ರೂಪ್ ಷೇರುಗಳ ಕುಸಿತ ಸೇರಿದಂತೆ ಷೇರು ಮಾರುಕಟ್ಟೆಯ ವಿವಿಧ ನಿಯಂತ್ರಕ ಅಂಶಗಳನ್ನು ಪರಿಶೀಲಿಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ... |
![]() | ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿಯಿಂದ ದುಬಾರಿ ವಕೀಲರ ನೇಮಕ, 21 ಕೋಟಿ ರೂ. ಸಾರ್ವಜನಿಕ ಹಣ ವ್ಯರ್ಥ!ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರವು ಅಬಕಾರಿ ಮದ್ಯ ನೀತಿ ಮೇಲಿನ ಆರೋಪಗಳನ್ನು ತಳ್ಳಿಹಾಕಿದೆ. ಆದರೆ, ಈಗ ಹಗರಣ ಬೆಳಕಿಗೆ ಬಂದ ನಂತರ, ಎಎಪಿ ತನ್ನ ಸಮರ್ಥನೆಗಾಗಿ ಮತ್ತು ಅದರ ನಾಯಕರ ರಕ್ಷಣೆಗಾಗಿ ದುಬಾರಿ ವಕೀಲರನ್ನು ನೇಮಿಸಿಕೊಂಡು ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಆರೋಪಿಸಿದ್ದಾರೆ. |