• Tag results for Apology

ಕೋವಿಡ್ ಮಧ್ಯೆ ಮೇಕೆದಾಟು ಪಾದಯಾತ್ರೆ: ಕ್ಷಮೆಯಾಚಿಸುವಂತೆ ಕಾಂಗ್ರೆಸ್'ಗೆ ಸಚಿವ ಗೋವಿಂದ ಕಾರಜೋಳ ಆಗ್ರಹ

ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವಿನ ಮಾತಿನ ಸಮರ ಬುಧವಾರವೂ ಮುಂದುವರಿದಿದ್ದು, ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ನಡುವಲ್ಲೇ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ನಾಯಕರು ಕ್ಷಮೆಯಾಚಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ.

published on : 13th January 2022

ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ: ಸೈನಾ ನೆಹ್ವಾಲ್

ಆಕ್ಷೇಪಾರ್ಹ ಹೇಳಿಕೆ ಕುರಿತು ನಟ ಸಿದ್ಧಾರ್ಥ್ ಕ್ಷಮೆ ಕೋರಿದ್ದು ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ. 

published on : 12th January 2022

ನನ್ನ ಜೋಕನ್ನು ಸಮರ್ಥನೆ ಮಾಡಿಕೊಳ್ಳಲು ಆಗುತ್ತಿಲ್ಲ: ಸೈನಾ ನೆಹ್ವಾಲ್ ಕ್ಷಮೆ ಕೋರಿದ ನಟ ಸಿದ್ಧಾರ್ಥ್

ಪ್ರಧಾನಿ ಭದ್ರತಾ ಲೋಪ ಕುರಿತಾಗಿ ಪ್ರಧಾನಿ ಪರ ಸಹಾನುಭೂತಿ ವ್ಯಕ್ತಪಡಿಸಿದ್ದ ಸೈನಾ ನೆಹ್ವಾಲ್ ಅವರನ್ನು ಸಿದ್ಧಾರ್ಥ್ ತಮ್ಮ ಟ್ವೀಟ್ ನಲ್ಲಿ ಹಾಸ್ಯ ಮಾಡಿದ್ದರು.

published on : 12th January 2022

ಸದನದಲ್ಲಿ ಇಂದು ಬೇಷರತ್ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನೆಂದರು?: ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನು?

ಆಡಬಾರದ ಮಾತುಗಳನ್ನು ಸದನದಲ್ಲಿ ಆಡಿ ಅದು ದೇಶ ಮಟ್ಟದಲ್ಲಿ ತೀವ್ರ ವಿವಾದವೆದ್ದ ಬಳಿಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ ಆರ್ ರಮೇಶ್ ಕುಮಾರ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ಕಲಾಪ ಆರಂಭದಲ್ಲಿಯೇ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯಹಾಡುವ ಪ್ರಯತ್ನ ಮಾಡಿದರು.

published on : 17th December 2021

ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೇಳಬೇಕು: ಅಖಾಡ ಪರಿಷತ್ ಬಿಗಿ ಪಟ್ಟು

ಹಿಂದುತ್ವವನ್ನು ಐಎಸ್ಐಎಸ್ ಹಾಗೂ ಬೊಕೊ ಹರಾಮ್ ನಂತಹ ಇಸ್ಲಾಮಿಕ್ ಉಗ್ರ ಸಂಘಟನೆಗಳಿಗೆ ಹೋಲಿಕೆ ಮಾಡಿರುವ ಸಲ್ಮಾನ್ ಖುರ್ಷಿದ್ ಹಿಂದೂಗಳ ಕ್ಷಮೆ ಕೋರಬೇಕು ಎಂದು ಅಖಾಡ ಪರಿಷತ್ ಬಿಗಿ ಪಟ್ಟು ಹಿಡಿದಿದೆ. 

published on : 17th November 2021

ಮಾನನಷ್ಟ ಪ್ರಕರಣ, ಸಂಜಯ್ ನಿರುಪಮ್‌ಗೆ ಬೇಷರತ್ ಕ್ಷಮೆಯಾಚಿಸಿದ ಮಾಜಿ ಸಿಎಜಿ ವಿನೋದ್ ರಾಯ್

ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮಾಜಿ ಸಿಎಜಿ ವಿನೋದ್ ರಾಯ್ ಗುರುವಾರ ಕ್ಷಮೆಯಾಚಿಸಿದ್ದಾರೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

published on : 28th October 2021

ರಾಹುಲ್ ಒಬ್ಬ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್ ಹೇಳಿಕೆ: ಕ್ಷಮೆಯಾಚಿಸುವಂತೆ ಬಿಜೆಪಿಗೆ ಕಾಂಗ್ರೆಸ್ ಆಗ್ರಹ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಡ್ರಗ್ ಅಡಿಕ್ಟ್ ಹಾಗೂ ಡ್ರಗ್ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಬುಧವಾರ ಆಗ್ರಹಿಸಿದೆ. 

published on : 20th October 2021

ಡಿಕೆ ಶಿವಕುಮಾರ್ ನನಗೆ ಗಾಡ್ ಫಾದರ್, ಅವರಿಗೆ ಕೈ ಮುಗಿದು ಕ್ಷಮೆ ಕೋರುತ್ತೇನೆ: ಸಲೀಂ

ಕೆಪಿಸಿಸಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿರುವ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಗುರುವಾರ ಕೈಮುಗಿದು ಕ್ಷಮೆ ಕೋರಿದ್ದಾರೆ.

published on : 14th October 2021

ನನ್ನ ಭಾಷೆಯನ್ನು ಸುಧಾರಿಸಿಕೊಳ್ಳುತ್ತೇನೆ: 'ಚಪ್ಪಲಿ' ಹೇಳಿಕೆ ನಂತರ ಉಮಾ ಭಾರತಿ ವಿಷಾದ

ಹಿರಿಯ ಬಿಜೆಪಿ ನಾಯಕಿ ಉಮಾಭಾರತಿ ಅವರು ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ.

published on : 22nd September 2021

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ ನಿಯಮ ಪರಿಷ್ಕರಿಸುವ ಕುರಿತು ಹೇಳಿಕೆ: ಡಿಸಿಪಿ ನಡೆ ಬಗ್ಗೆ ಆಯುಕ್ತ ಪಂತ್ ಕ್ಷಮೆ

ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದಿದ್ದ ಗುಪ್ತಚರ ವಿಭಾಗದ ಡಿಸಿಪಿಯ ನಡಾವಳಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನ್ಯಾಯಾಲಯದ ಬಳಿ ಶುಕ್ರವಾರ ಕ್ಷಮೆ ಕೋರಿದ್ದಾರೆ

published on : 3rd July 2021

ಮಲಯಾಳಂ ಮಾತಾಡಬೇಡಿ ಆದೇಶ: ವಿವಾದ ಭುಗಿಲೆದ್ದ ಬಳಿಕ ಆದೇಶ ವಾಪಸ್ ಪಡೆದ ದೆಹಲಿ ಆಸ್ಪತ್ರೆ!

ದೆಹಲಿಯ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಗೋವಿಂದ್ ವಲ್ಲಭ್ ಪಂತ್ ಇನ್​ಸ್ಟಿಟ್ಯೂಟ್ (ಜಿಐಪಿಎಂಇಆರ್) ತನ್ನ ಎಲ್ಲಾ ಶುಶ್ರೂಷಾ ಸಿಬ್ಬಂದಿಗೆ ಸಂವಹನಕ್ಕಾಗಿ ಹಿಂದಿ ಮತ್ತು ಇಂಗ್ಲಿಷ್ ಮಾತ್ರ ಬಳಸಬೇಕು, ಮಲಯಾಳಂನಲ್ಲಿ ಮಾತನಾಡಬಾರದು ಎಂದು ನೀಡಲಾಗಿದ್ದ ಆದೇಶವನ್ನು ಬುಧವಾರ ಹಿಂಪಡೆದುಕೊಂಡಿದೆ. 

published on : 9th June 2021

"ನನ್ನ ದೇಶದ ಭಾವನೆಗಳಿಗೆ ನೋವುಂಟು ಮಾಡಿದಕ್ಕೆ ಬೇಷರತ್ ಕ್ಷಮೆ ಕೋರುತ್ತಿದ್ದೇನೆ": ಹರ್ಭಜನ್ ಸಿಂಗ್

ಖಲಿಸ್ತಾನಿ ಉಗ್ರ ಬಿಂದ್ರನ್ ವಾಲೆಯ ಫೋಟೋ ಇದ್ದ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಹಾಕಿದ್ದಕ್ಕೆ ಭಾರತ ಕ್ರಿಕೆಟ್ ತಂಡದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬೇಷರತ್ ಕ್ಷಮೆ ಕೋರಿದ್ದಾರೆ. 

published on : 8th June 2021

ಆರೋಪ ಮಾಡಿದವರು ಇದೀಗ ಮೈಸೂರಿಗರ ಕ್ಷಮೆ ಕೇಳಲಿ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಗ್ರಹ

ಆಮ್ಲಜನಕ ಪೂರೈಕೆ ವಿಚಾರವಾಗಿ, ಮೈಸೂರಿನ ಮೇಲೆ ಕಳಂಕ ಹೊರಿಸಲು ಮುಂದಾದ ಎಲ್ಲರೂ ಮೈಸೂರಿಗರ ಕ್ಷಮೆ ಕೇಳಬೇಕು’ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಗ್ರಹಿಸಿದ್ದಾರೆ. 

published on : 15th May 2021

ತಾಂಡವ್ ವಿವಾದ: ಹಿಂದೂಗಳ ಬೇಷರತ್ ಕ್ಷಮೆಯಾಚಿಸಿದ ಅಮೆಜಾನ್

ತೀವ್ರ ವಿವಾದಕ್ಕೆ ಗುರಿಯಾಗಿದ್ದ ತಾಂಡವ್ ವೆಬ್ ಸೀರಿಸ್ ಕುರಿತಂತೆ ಅಮೆಜಾನ್ ಪ್ರೈಂ ಕೊನೆಗೂ ಹಿಂದೂಗಳ ಬೇಷರತ್ ಕ್ಷಮೆಯಾಚಿಸಿದೆ.

published on : 3rd March 2021

ಹಿಂದೂ ವಿರೋಧಿ ಟ್ವೀಟ್: ನೌಕರಿ ಕಳೆದುಕೊಂಡ ಗಾನಾ ಉದ್ಯೋಗಿ; ಕ್ಷಮೆ ಯಾಚನೆ!

ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ರೀತಿಯಲ್ಲಿ ಟ್ವೀಟ್ ಮಾಡಿದ್ದ ಉದ್ಯೋಗಿಯನ್ನು ಮ್ಯೂಸಿಕ್ ಸ್ಟ್ರೀಮಿಂಗ್ ಸೇವೆ ಒದಗಿಸುವ ಗಾನಾ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ. 

published on : 15th February 2021
1 2 > 

ರಾಶಿ ಭವಿಷ್ಯ