• Tag results for Arvind Kejriwal

2 ತಿಂಗಳು ಉಚಿತ ರೇಷನ್; ಆಟೋ, ಟ್ಯಾಕ್ಸಿ ಚಾಲಕರಿಗೆ 5,000 ರೂ. ಆರ್ಥಿಕ ನೆರವು: ದೆಹಲಿ ಸಿಎಂ ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು ತಿಂಗಳವರೆಗೆ ಉಚಿತ ಪಡಿತರ ನೀಡುವುದಾಗಿ ಮತ್ತು ಆಟೋರಿಕ್ಷಾ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ 5,000 ರೂ. ಆರ್ಥಿಕ ನೆರವು ನೀಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

published on : 4th May 2021

ಕೋವಿಡ್-19 ಲಾಕ್ಡೌನ್ ಮತ್ತೆ ಒಂದು ವಾರ ವಿಸ್ತರಣೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ಕೋವಿಡ್-19 2ನೇ ಅಬ್ಬರ ಮುಂದುವರೆದಿರುವಂತೆಯೇ ದೆಹಲಿಯಲ್ಲಿ ಹೇರಲಾಗಿರುವ ಲಾಕ್ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ಮುಂದುವರೆಸಲಾಗುತ್ತದೆ ಎಂದು ದೆಹಲಿ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

published on : 1st May 2021

ಜಿಎನ್‌ಸಿಟಿಡಿ ತಿದ್ದುಪಡಿಯಿಂದ ದೆಹಲಿಯಲ್ಲಿ ಚುನಾಯಿತ ಸರ್ಕಾರದ ಸಾಂವಿಧಾನಿಕ, ಕಾನೂನು ಕರ್ತವ್ಯಗಳು ಬದಲಾಗಲ್ಲ: ಎಂಹೆಚ್‌ಎ

ಜಿಎನ್‌ಸಿಟಿಡಿ ತಿದ್ದುಪಡಿಯಿಂದ ರಾಷ್ಟ್ರ ರಾಜಧಾನಿಯಲ್ಲಿ ಚುನಾಯಿತ ಸರ್ಕಾರದ ಸಾಂವಿಧಾನಿಕ ಮತ್ತು ಕಾನೂನು ಜವಾಬ್ದಾರಿಗಳನ್ನು ಯಾವುದೇ ರೀತಿಯಲ್ಲಿ ಬದಲಾಯಿಸುವುದಿಲ್ಲ ಎಂದು ಕೇಂದ್ರ ಗುರುವಾರ ಹೇಳಿದೆ.

published on : 29th April 2021

ದೆಹಲಿಯಲ್ಲಿ ಆಮ್ಲಜನಕದ ತೀವ್ರ ಬಿಕ್ಕಟ್ಟು: ಸಿಎಂ ಅರವಿಂದ್ ಕೇಜ್ರಿವಾಲ್

ನಗರದ ಕೆಲವು ಆಸ್ಪತ್ರೆಗಳಲ್ಲಿ ಕೆಲವೇ ಗಂಟೆಗಳ ವೈದ್ಯಕೀಯ ಆಮ್ಲಜನಕ ಉಳಿದಿರುವ ಕಾರಣ ತಕ್ಷಣವೇ ಆಮ್ಲಜನಕವನ್ನು ಪೂರೈಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

published on : 21st April 2021

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 13th April 2021

ದೆಹಲಿಯಲ್ಲಿ ಕೋವಿಡ್ 19 ನಾಲ್ಕನೇ ಅಲೆ: ಲಾಕ್ ಡೌನ್ ಬಗ್ಗೆ ಸಿಎಂ ಕೇಜ್ರಿವಾಲ್ ಸ್ಪಷ್ಟನೆ

ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ 19 ನಾಲ್ಕನೆ ಅಲೆ ಆರಂಭವಾಗಿದ್ದು,  ಲಾಕ್ ಡೌನ್ ಘೋಷಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

published on : 2nd April 2021

'ಪ್ರಜಾಪ್ರಭುತ್ವದ ಕರಾಳ ದಿನ': ರಾಜಧಾನಿ (ತಿದ್ದುಪಡಿ) ಮಸೂದೆ 2021 ಅಂಗೀಕಾರದ ಕುರಿತು ಸಿಎಂ ಕೇಜ್ರಿವಾಲ್ ಕಿಡಿ

ರಾಜಧಾನಿ (ತಿದ್ದುಪಡಿ) ಮಸೂದೆ 2021ಕ್ಕೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತ ಬೆನ್ನಲ್ಲೇ ಈ ಕುರಿತು ಕಿಡಿಕಾರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 'ಪ್ರಜಾಪ್ರಭುತ್ವದ ಕರಾಳದಿನ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

published on : 25th March 2021

ನೂತನ ಕೃಷಿ ಕಾನೂನುಗಳು ರೈತರಿಗೆ 'ಡೆತ್ ವಾರೆಂಟ್' - ಅರವಿಂದ್ ಕೇಜ್ರಿವಾಲ್ 

ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರೆಂಟ್ ಆಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

published on : 1st March 2021

ಗುಜರಾತ್ ನಲ್ಲಿ ಎಎಪಿಗೆ ಜನರ ಮತ: ಬಿಜೆಪಿ, ಕಾಂಗ್ರೆಸ್ ಗೆ ಭಯ ಶುರುವಾಗಿದೆ ಎಂದ ಅರವಿಂದ್ ಕೇಜ್ರಿವಾಲ್

ಗುಜರಾತ್  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಎಪಿಗೆ ಮತ ಹಾಕುವ ಜನರಿಂದಾಗಿ ಬಿಜೆಪಿ, ಕಾಂಗ್ರೆಸ್ ಭಯಭೀತಿಗೊಂಡಿವೆ ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಸಂಘಟಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

published on : 26th February 2021

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಗಳಿಗೆ ವಂಚಿಸಿದ್ದ ಮೂವರ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಗಳಿಗೆ ವಂಚಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.

published on : 15th February 2021

ಇ-ಕಾಮರ್ಸ್ ನಲ್ಲಿ ಸೋಫಾ ಮಾರಲು ಹೋಗಿ 34 ಸಾವಿರ ಕಳೆದುಕೊಂಡ ಸಿಎಂ ಕೇಜ್ರಿವಾಲ್ ಪುತ್ರಿ ಹರ್ಷಿತಾ!

ಇ-ಕಾಮರ್ಸ್ ಪೋರ್ಟಲ್ ನಲ್ಲಿ ಸೆಕೆಂಡ್ ಹ್ಯಾಂಡ್ ಸೋಫಾ ಮಾರಲು ಹೋಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಮೋಸ ಹೋಗಿದ್ದಾರೆ.

published on : 9th February 2021

ಗಣರಾಜ್ಯೋತ್ಸವ ಹಿಂಸಾಚಾರ: ದೆಹಲಿ ಸಿಎಂ ಕೇಜ್ರಿವಾಲ್ ಭೇಟಿ ಮಾಡಿದ ರೈತರ ನಿಯೋಗ, ನ್ಯಾಯಾಂಗ ತನಿಖೆಗೆ ಒತ್ತಾಯ

ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ರೈತರ ನಿಯೋಗ, ರೈತರ ವಿರುದ್ಧದ "ಪಿತೂರಿ"ಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

published on : 3rd February 2021

ಕೇಂದ್ರ ಸರ್ಕಾರಕ್ಕೆ ಆಗದಿದ್ದರೆ ನಾವು ದೆಹಲಿ ಜನತೆಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್

ಕೇಂದ್ರ ಸರ್ಕಾರ ಕೈಯಲ್ಲಿ ಆಗದಿದ್ದರೆ ಆಮ್ ಆದ್ಮಿ ಪಕ್ಷ(ಎಎಪಿ) ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

published on : 13th January 2021

ದಯಮಾಡಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ: ಅರವಿಂದ್ ಕೇಜ್ರಿವಾಲ್ ಮನವಿ

ರೈತರು ತಮ್ಮ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದು, ದಯಮಾಡಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 27th December 2020

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಹಕ್ಕುಚ್ಯುತಿ ನೋಟೀಸ್ ದಾಖಲಿಸಿದ ಸಂಸದೆ ಸೋನಾಲ್ ಮಾನ್ಸಿಂಗ್

ವಿವಾದಾತ್ಮಕ ಕೃಷಿ ಮಸೂದೆಗಳ ಕುರಿತು ದೆಹಲಿ ವಿಧಾನಸಭೆಯಲ್ಲಿ ಮಾಡಿದ ಭಾಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ರಾಜ್ಯಸಭಾ ಸಂಸದೆ ಸೋನಾಲ್ ಮಾನ್ಸಿಂಗ್ ಆರೋಪಿಸಿದ್ದು ಕೇಜ್ರಿವಾಲ್ ವಿರುದ್ಧ ಹಕ್ಕುಚ್ಯುತಿ ನೋಟೀಸ್ ದಾಖಲಿಸಿದ್ದಾರೆ.

published on : 24th December 2020
1 2 3 >