• Tag results for Ashish Mishra

ಲಖಿಂಪುರ: ಆಶಿಶ್ ಮಿಶ್ರಾ ಶರಣಾಗತಿ, ಮತ್ತೆ ಜೈಲಿಗೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಜಾಮೀನನ್ನು ಸುಪ್ರೀಂಕೋರ್ಟ್ ನಿರಾಕರಿಸಿದ ನಂತರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಭಾನುವಾರ ಸ್ಥಳೀಯ ನ್ಯಾಯಾಲಯವೊಂದರಲ್ಲಿ ಶರಣಾಗಿದ್ದಾರೆ.

published on : 24th April 2022

ಲಖಿಂಪುರ್ ಹಿಂಸಾಚಾರ ಕೇಸು: ಅಲಹಾಬಾದ್ ಹೈಕೋರ್ಟ್ ತೀರ್ಪು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಶರಣಾಗುವಂತೆ ಆಶಿಶ್ ಮಿಶ್ರಾಗೆ ಆದೇಶ

ಲಖಿಂಪುರ್ ಕೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ.

published on : 18th April 2022

ಲಖೀಂಪುರ ಖೇರಿ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ, ಯುಪಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

published on : 16th March 2022

ಲಖಿಂಪುರ್ ಖೇರಿ ಪ್ರಕರಣ: ಆಶಿಶ್ ಮಿಶ್ರಾ ಜಾಮೀನು ವಿರುದ್ಧದ ಅರ್ಜಿ ಮಾ.15ಕ್ಕೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಾರ್ಚ್ 15ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.

published on : 11th March 2022

ಲಖಿಂಪುರ ಖೇರಿ ಪ್ರಕರಣ: ರೈತರ ಮೇಲೆ ಕಾರು ಹರಿಸಿದ ಆರೋಪಿ, ಕೇಂದ್ರ ಸಚಿವರ ಪುತ್ರ ಜೈಲಿನಿಂದ ಬಿಡುಗಡೆ

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಮಂಗಳವಾರ ಸಂಜೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

published on : 15th February 2022

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

published on : 10th February 2022

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

published on : 24th October 2021

ಲಖಿಂಪುರ್ ಖೇರಿ ಪ್ರಕರಣ: ಆಶಿಶ್ ಮಿಶ್ರಾಗೆ ಜಾಮೀನು ನಿರಾಕರಣೆ, ಮತ್ತೊಬ್ಬ ಆರೋಪಿ ಪೊಲೀಸ್ ವಶಕ್ಕೆ

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಲು ಕೋರ್ಟ್ ಬುಧವಾರ ನಿರಾಕರಿಸಿದೆ.

published on : 13th October 2021

ಲಖಿಂಪುರ್ ಖೇರಿ ಹಿಂಸಾಚಾರ: ಪ್ರಮುಖ ಆರೋಪಿ ಆಶಿಶ್ ಮಿಶ್ರಾ ತೀವ್ರ ವಿಚಾರಣೆ, ಶರಣಾಗತಿ ಅರ್ಜಿ ಸಲ್ಲಿಸಿದ ಅಂಕಿತ್ ದಾಸ್

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಮಂಗಳವಾರ ಎಸ್‌ಐಟಿ ಕ್ರೈಂ ಬ್ರಾಂಚ್ ಕಚೇರಿಗೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಿದೆ.

published on : 12th October 2021

ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್

ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.

published on : 11th October 2021

ಲಖಿಂಪುರ್ ಹಿಂಸಾಚಾರ: ಆರೋಪಿ ಆಶಿಶ್ ಮಿಶ್ರಾ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ 

ಕಳೆದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸಚಿವ ಅಜಯ್ ಮಿಶ್ರ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. 

published on : 10th October 2021

ಲಖಿಂಪುರ್ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಬಂಧನ!

ಲಖಿಂಪುರ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ನಾಯಕ ಆಶಿಶ್ ಮಿಶ್ರಾರನ್ನು ಉತ್ತರ ಪ್ರದೇಶದ ಎಸ್ಐಟಿ ತಂಡ ಬಂಧಿಸಿದೆ.

published on : 9th October 2021

ಲಖಿಂಪುರ್ ಹಿಂಸಾಚಾರ: 9 ಗಂಟೆಗಳ ವಿಚಾರಣೆ, 40 ಪ್ರಶ್ನೆಗಳು; ಶೀಘ್ರ ಆಶಿಶ್ ಮಿಶ್ರಾ ಬಂಧನ ಸಾಧ್ಯತೆ!

ಲಖಿಂಪುರ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ನಾಯಕ ಆಶಿಶ್ ಮಿಶ್ರಾ ಅವರನ್ನು ಪೊಲೀಸರು ಸುಮಾರು 9 ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಅವರನ್ನು ಯಾವುದೇ ಸಮಯದಲ್ಲಿ ಬಂಧಿಸಬಹುದು. 

published on : 9th October 2021

ಲಖಿಂಪುರ್ ಖೇರಿ ಪ್ರಕರಣ: ಕ್ರೈ ಬ್ರಾಂಚ್ ಅಧಿಕಾರಿಗಳ ಮುಂದೆ ಪ್ರಮುಖ ಆರೋಪಿ ಅಶೀಶ್ ಮಿಶ್ರಾ ಹಾಜರು, ಉಪವಾಸ ಸತ್ಯಾಗ್ರಹ ಕೈ ಬಿಟ್ಟ ಸಿಧು!

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಅಶೀಶ್ ಮಿಶ್ರಾ ಇಂದು ಕ್ರೈ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

published on : 9th October 2021

ಲಖಿಂಪುರ್ ಖೇರಿ ಹಿಂಸಾಚಾರ: ಇಬ್ಬರ ಬಂಧನ; ಮುಂದಿನ ಬೇಟೆ ಮುಖ್ಯ ಆರೋಪಿ ಆಶಿಶ್ ಮಿಶ್ರಾ ಎಂದ ಯುಪಿ ಪೊಲೀಸ್!

ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲವ್ ಕುಶ್ ಮತ್ತು ಆಶಿಶ್ ಪಾಂಡ್ಯ ಎಂಬುವರನ್ನು ಬಂಧಿಸಿದ್ದು ಶೀಘ್ರವೇ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸುತ್ತೇವೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

published on : 7th October 2021

ರಾಶಿ ಭವಿಷ್ಯ