- Tag results for Assembly poll
![]() | ಕರ್ನಾಟಕ ಗೆಲುವಿನ ನಂತರ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜುಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿದೆ. |
![]() | ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ: ಪ್ರಶಾಂತ್ ಕಿಶೋರ್ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ.. ಕರ್ನಾಟಕ ಗೆದ್ದಾಕ್ಷಣ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರ್ಥವಲ್ಲ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. |
![]() | ಸಿಎಂ ಆಯ್ಕೆ ಮಧ್ಯೆ ಹೆಚ್ಚಿದ ಡಿಸಿಎಂ ಕೂಗು, ಶುರುವಾಯ್ತು ಪೈಪೋಟಿ: ಸತೀಶ್ ಜಾರಕಿಹೊಳಿಗೆ ಸ್ಥಾನ ನೀಡುವಂತೆ ಹಲವರು ಒತ್ತಾಯರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಸಿದ್ಧಗೊಂಡಿದೆ. ಅಧಿಕಾರಕ್ಕೇರುವ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಈ ನಡುವಲ್ಲೇ ಉಪ ಮುಖ್ಯಮಂತ್ರಿ ಸ್ಥಾನಕ್ಕೂ ಪೈಪೋಟಿ ಶುರುವಾಗಿದೆ. |
![]() | ಚುನಾವಣಾ ಫಲಿತಾಂಶ ಬಳಿಕ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆಗೆ ಬಿಜೆಪಿ ಖಂಡನೆಮೇ 13 ರಂದು ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಾದ್ಯಂತ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಸಂಬಂಧ ರಾಜ್ಯ ಬಿಜೆಪಿ ಖಂಡನೆ ವ್ಯಕ್ತಪಡಿಸಿದೆ. |
![]() | ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು: ಕಾನೂನು ಹೋರಾಟಕ್ಕೆ ಸೌಮ್ಯ ರೆಡ್ಡಿ ತೀರ್ಮಾನತೀವ್ರ ರೋಚಕ ಫಲಿತಾಂಶಕ್ಕೆ ಕಾರಣವಾದ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ಸಿ. ರಾಮಮೂರ್ತಿ 16 ಮತಗಳ ಅಂತರದಿಂದ ಗೆದ್ದಿರುವುದಾಗಿ ಚುನಾವಣಾಧಿಕಾರಿಗಳು ಪ್ರಕಟಿಸಿದ್ದಾರೆ. ಆದರೆ, ಈ ಫಲಿತಾಂಶದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಸೋತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದ್ದಾರೆ. |
![]() | ಸಿದ್ದು ಅಥವಾ ಡಿಕೆಶಿ ಯಾರಾಗ್ತಾರೆ ನೂತನ ಸಿಎಂ? ಇಂದು ಸಂಜೆ ನಿರ್ಧಾರರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ. |
![]() | ಕರ್ನಾಟಕ ಚುನಾವಣೆ: ಭಾರೀ ಅಂತರದ ಮತಗಳಿಂದ ಗೆದ್ದ, ಸೋತ ಪ್ರಮುಖ ನಾಯಕರು!ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹಲವು ಘಟಾನುಘಟಿ ನಾಯಕರು ಸಹಸ್ರಾರು ಮತಗಳ ಅಂತರದಿಂದ ಸೋತಿದ್ದಾರೆ. ಈ ಪೈಕಿ ಸೋಮಣ್ಣ, ಆರ್, ಅಶೋಕ, ಸುಧಾಕರ್, ಸಿ.ಟಿ. ರವಿ. ಜೆ.ಸಿ. ಮಾಧುಸ್ವಾಮಿ ಮತ್ತಿತರ ನಾಯಕರಿದ್ದಾರೆ. |
![]() | ಇದು ದೊಡ್ಡ ಗೆಲುವು; ಇದರಿಂದ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ: ಮಲ್ಲಿಕಾರ್ಜುನ ಖರ್ಗೆರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಇದರೊಂದಿಗೆ ಇಡೀ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. |
![]() | ಡಿಕೆ ಶಿವಕುಮಾರ್ ಸಿಎಂ ಆದರೆ ಹೆಚ್ಚಿನ ಸಂತೋಷ- ಡಿಕೆ ಸುರೇಶ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸುತ್ತಿದ್ದಂತೆಯೇ, ಮುಂದಿನ ಸಿಎಂ ಯಾರು ಎಂಬ ಪ್ರಶ್ನೆಯೂ ಹುಟ್ಟುಕೊಂಡಿದೆ. |
![]() | ಕರ್ನಾಟಕದಲ್ಲಿ ಕಾಂಗ್ರೆಸ್ ಜಯಭೇರಿ: ಜನರ ಹೃದಯಕ್ಕೆ ಕಾಲಿಟ್ಟ ರಾಹುಲ್- ಕಮಲ್ ಹಾಸನ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಗಳಿಸುತ್ತಿದ್ದಂತೆಯೇ ಹಿರಿಯ ನಟ-ರಾಜಕಾರಣಿ ಕಮಲ್ ಹಾಸನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶುಭಾಶಯ ಸಲ್ಲಿಸಿದ್ದಾರೆ. |
![]() | ಗೆಲುವಿನ ಸಂಭ್ರಮದಲ್ಲಿ ರಾಮನಗರದಲ್ಲಿ ರೋಡ್ ಶೋ ನಡೆಸಿದ ಡಿಕೆಶಿ! ವಿಡಿಯೋರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಪ್ರಚಂಡ ಜಯಭೇರಿ ಬಾರಿಸುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. |
![]() | ಕರ್ನಾಟಕ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಪ್ರಧಾನಿಯಾಗುವ ವಿಶ್ವಾಸವಿದೆ: ಸಿದ್ದರಾಮಯ್ಯರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದ್ದು, ರಾಹುಲ್ ಗಾಂಧಿ ದೇಶದ ಪ್ರಧಾನಮಂತ್ರಿಯಾಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. |
![]() | ಬಿಜೆಪಿ ಸೋಲಿನ ಹೊಣೆ ಹೊತ್ತುಕೊಂಡ ನಳಿನ್ ಕುಮಾರ್ ಕಟೀಲ್ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. |
![]() | ಸೋಲು, ಗೆಲುವು ಸಹಜ, ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್: ಶೋಭಾ ಕರಂದ್ಲಾಜೆಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ. |
![]() | ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ: ಹೆಚ್‌ಡಿ.ಕುಮಾರಸ್ವಾಮಿರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆಂದು ಜೆಡಿಎಸ್ ನಾಯಕ ಹೆಚ್'ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ. |