• Tag results for BJP Leaders

ರೌಡಿ ಸುನೀಲ್ ಮುಂದೆ ಪೊಲೀಸರೇ ಸೈಲೆಂಟ್! ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಕಾಂಗ್ರೆಸ್ ತರಾಟೆ

ಬಿಜೆಪಿ ನಾಯಕರಿದ್ದ ವೇದಿಕೆಯಲ್ಲಿ ರೌಡಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ರಾಜ್ಯ ರಾಜಕೀಯವನ್ನು ವಿಶ್ಲೇಷಿಸುತ್ತಿದ್ದಾರೆ. 

published on : 28th November 2022

ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ.

published on : 12th November 2022

ಭ್ರಷ್ಟಾಚಾರದಲ್ಲಿ ಕರ್ನಾಟಕ ಇಂದು ದೇಶಕ್ಕೇ ರಾಜಧಾನಿ, ನಮ್ಮ ಪ್ರಶ್ನೆಗೆ ಉತ್ತರಿಸುವಿರಾ: ಡಿಕೆ ಶಿವಕುಮಾರ್

ಅಭಿವೃದ್ಧಿ ಹೆಸರಲ್ಲಿ ಸುಳ್ಳಿನ ಕಹಳೆ ಊದುತ್ತಿರುವ ಬಿಜೆಪಿ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರ ನೀಡುತ್ತೀರಾ? ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮಾತು ಏನಾಯಿತು? ಉದ್ಯೋಗ ಸೃಷ್ಟಿ ಬಗ್ಗೆ ನೀವು ನೀಡಿದ್ದ ಭರವಸೆ ಏನಾಯಿತು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

published on : 29th August 2022

ಉತ್ತರ ಪ್ರದೇಶ: ಕಾಲೇಜ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋ ತೆಗೆದು ಬಿಜೆಪಿ ನಾಯಕರ ಫೋಟೋ

ಗುರುಕುಲ ಸಂಸ್ಕೃತ ಮಹಾವಿದ್ಯಾಲಯದ ಪ್ರವೇಶದ್ವಾರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಫೋಟೋಗಳನ್ನು ತೆಗೆದುಹಾಕಿ ಆ ಜಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಥಳೀಯ ಬಿಜೆಪಿ ನಾಯಕರ ಚಿತ್ರಗಳನ್ನು ಹಾಕಲಾಗಿದೆ.

published on : 22nd August 2022

'ಮುಸ್ಲಿಮರ ಏರಿಯಾ' ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ: ಕೆರಳಿ ಕೆಂಡವಾದ ಬಿಜೆಪಿ ನಾಯಕರು

ವೀರ ಸಾವರ್ಕರ್ ಪೋಸ್ಟರ್ ವಿವಾದ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್ ಪೋಸ್ಟರ್ ನ್ನು ಹಾಕುವ ಕೆಲಸ ಏಕೆ ಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಪ್ರಶ್ನಿಸಿದ್ದರು.

published on : 17th August 2022

ನಿತೀಶ್ ಕುಮಾರ್ ಅವಕಾಶವಾದಿ ರಾಜಕಾರಣಿ: ಬಿಜೆಪಿ ಮುಖಂಡರು ವಾಗ್ದಾಳಿ

ನಿತೀಶ್ ಕುಮಾರ್ ಪ್ರಧಾನ ಮಂತ್ರಿ ಮಹತ್ವಾಕಾಂಕ್ಷೆಯಿಂದ ಎನ್ ಡಿಎ ತೊರೆದು ಆರ್ ಜೆಡಿ ನೇತೃತ್ವದ ಪ್ರತಿಪಕ್ಷದೊಂದಿಗೆ ಕೈ ಜೋಡಿಸಿರುವುದಾಗಿ ದೂಷಿಸಿರುವ ಬಿಜೆಪಿ, ಜನಾದೇಶವನ್ನು ಅಪಮಾನಿಸಿ ದ್ರೋಹ ಬಗೆದಿದ್ದಾರೆ ಎಂದು  ಮಂಗಳವಾರ ಆರೋಪಿಸಿದೆ.

published on : 9th August 2022

ಕರ್ನಾಟಕಕ್ಕೆ ನೂತನ ಮುಖ್ಯಸ್ಥರ ನೇಮಕ ಸುಳಿವು ನೀಡಿದ ಅಮಿತ್ ಶಾ, ಕಾನೂನು ಸುವ್ಯವಸ್ಥೆ ಬಗ್ಗೆ ಬಿಜೆಪಿ ನಾಯಕರಿಗೆ ತರಾಟೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಬೆಂಗಳೂರು ಭೇಟಿ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾವಣೆ ಮಾಡುವ ಸುಳಿವು ನೀಡಿದ್ದು, ಸಚಿವ ವಿ ಸುನೀಲ್ ಕುಮಾರ್ ಅವರನ್ನು ನೂತನ

published on : 5th August 2022

ಸಾಯಿ ಲೇಔಟ್‌ ತೇಲುತ್ತಿದೆ, ಅರ್ಕಾವತಿ ಆರ್ತನಾದ ಕೇಳುತ್ತಿಲ್ಲವೆ? ನಾಯಿ ಸತ್ತ ದೃಶ್ಯ ನೋಡಿ ಕಣ್ಣೀರಕೋಡಿ ಹರಿಸಿದ ಮಹಾಶಯರು ಯಾರು?: HDK

ಅಳುವೇ ನಮ್ಮ ಸಹಜ ಧರ್ಮ. ಆದರೆ ನಿಮ್ಮಂತೆ ಇನ್ನೊಬ್ಬರನ್ನು ಅಳಿಸುವ ರಾವಣ ಸಂಸ್ಕೃತಿಯಲ್ಲ. ಬದುಕಿಗೆ ಬೆಂಕಿ ಇಡಲ್ಲ. ಮತ್ತೊಬ್ಬರ ಮಕ್ಕಳ ಸಾವಿನಿಂದ ಉನ್ಮಾದಗೊಂಡು ರಣಕೇಕೆ ಹಾಕುತ್ತಿಲ್ಲ. ಹಿಂಸೆ, ಕಗ್ಗೊಲೆಯೇ ನಿಮ್ಮ ಧರ್ಮ, ಹೌದಲ್ಲವೇ?  ಕೊಲೆಗಳನ್ನೇ ಸೋಪಾನ ಮಾಡಿಕೊಂಡು ʼಕಾಶಿ ಕಾರಿಡಾರುʼ ಮಾಡಿ ಮೆರೆದರೆ ಆ ಶಿವ ಮೆಚ್ಚುತ್ತಾನೆಯೇ?

published on : 3rd August 2022

ಪ್ರವೀಣ್ ನೆಟ್ಟಾರ್ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಮಟ್ಟದ ನಾಯಕರ ಸಾಮೂಹಿಕ ರಾಜೀನಾಮೆ 

ಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. 

published on : 27th July 2022

ಗಾಂಧಿ ಕುಟುಂಬದ ಬೆಂಬಲಕ್ಕೆ ನಿಲ್ಲದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ: ರಮೇಶ್ ಕುಮಾರ್ 'ಋಣ ಸಂದಾಯ' ಹೇಳಿಕೆ ಬಿಜೆಪಿ ನಾಯಕರ ಅಸ್ತ್ರ!

ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಕಾಂಗ್ರೆಸ್‌ ಶಾಸಕ ಕೆ.ಆರ್‌. ರಮೇಶ್‌ ಕುಮಾರ್‌  ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ.

published on : 22nd July 2022

ನಡ್ಡಾ, ಅಮಿತ್ ಶಾ ಭೇಟಿ ಮಾಡಿದ ಹರ್ಯಾಣ ಶಾಸಕ: ಬಿಜೆಪಿ ಸೇರ್ತಾರಾ ಕುಲ್ದೀಪ್ ಬಿಷ್ಣೋಯಿ?

ಇತ್ತಿಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಹರ್ಯಾಣ ಕಾಂಗ್ರೆಸ್ ಶಾಸಕ ಕುಲ್ದೀಪ್ ಬಿಷ್ಣೋಯ್ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. 

published on : 10th July 2022

ನವದೆಹಲಿ: ಮೊಯಿತ್ರಾ, ಮಣಿಮೇಕಲೈ ವಿರುದ್ಧ ಪೊಲೀಸರಿಗೆ ಬಿಜೆಪಿ ಮುಖಂಡರ ದೂರು

ಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

published on : 7th July 2022

ಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಸಿದ್ದರಾಮಯ್ಯ: ನಾಯಿಗೆ ಇರುವ ನಿಯತ್ತು ಬೇರೆಯವರಿಗೆ ಇಲ್ಲ ಎಂದ ರೇಣಕಾಚಾರ್ಯ

ಬಿಜೆಪಿ ನಾಯಕರನ್ನು ಸೀಳುನಾಯಿಗೆ ಹೋಲಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿರುವ...

published on : 9th June 2022

ಪರಿಷತ್ ಚುನಾವಣೆ: ಬಿಜೆಪಿಯಲ್ಲಿ ಶುರುವಾಯ್ತು ಒಳಜಗಳ, ಭಿನ್ನಮತ ಶಮನಗೊಳಿಸಲು ಪ್ರಹ್ಲಾದ್ ಜೋಶಿ ಸಭೆ

ವಿಧಾನಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಒಳಜಗಳ, ಮನಸ್ತಾಪಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶನಿವಾರ ಸಭೆಯೊಂದನ್ನು ನಡೆಸುವ ಭಿನ್ನಮತ ಶಮನಗೊಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ. 

published on : 21st May 2022

'ಧರ್ಮ ರಾಜಕಾರಣದ ಹಸು ಬರಡಾಗಿದೆ: ಬಿಜೆಪಿ ನಾಯಕರು ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ'

ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

published on : 29th April 2022
1 2 > 

ರಾಶಿ ಭವಿಷ್ಯ