• Tag results for BS Yediyurappa

ಕೆಪಿಎಸ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಪ್ರತಿ ನೀಡುವಂತೆ ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 10th July 2020

ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಸಚಿವರಿಂದ ಗೌರವ ಅರ್ಪಣೆ

ಭಾರತದ ಸಂಸ್ಕೃತಿ, ಪರಂಪರೆಗಳನ್ನು ದೇಶ, ವಿದೇಶಗಳಲ್ಲಿ ಬೆಳಗಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಅವರ ತತ್ತ್ವ ಮತ್ತು ಆದರ್ಶಗಳನ್ನು ಪಾಲಿಸುವ ಪಣ ತೊಡೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

published on : 4th July 2020

ಕೊರೋನಾ ಸಂಕಷ್ಟದ ನಡುವೆಯೂ ಮುಳ್ಳಯ್ಯನ ಗಿರಿ ರೆಸಾರ್ಟ್ ನಲ್ಲಿ ಬಿಜೆಪಿ ಸಚಿವರ ಗುಪ್ತಸಭೆ?

ಕೇಸರಿ ಪಕ್ಷದ ಪ್ರಭಾವಿ ನಾಯಕರು ಕಾಫಿನಾಡಿನ ರೆಸಾರ್ಟ್ ವೊಂದರಲ್ಲಿ ಸಭೆ ಸೇರಿ ರಹಸ್ಯ ಮೀಟಿಂಗ್ ಮಾಡಿರೋದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬರೀ ಕುತೂಹಲ ಮಾತ್ರವಲ್ಲದೇ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

published on : 3rd July 2020

ಮುಂದಿನ ದಿನಗಳಲ್ಲಿ ಕೊರೋನಾ ಮತ್ತಷ್ಟು ಉಲ್ಬಣ: ಸಮಸ್ಯೆ ತಪ್ಪಿಸಲು ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

ದಿನೇ ದಿನೇ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಪ್ರಕರಣಗಳ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸಕಲ ಸಿದ್ದತೆ ಆರಂಭಿಸಿದೆ, ಹೆಚ್ಚುತ್ತಿರುವ ರೋಗಿಗಳ ಹಿನ್ನೆಲೆಯಲ್ಲಿ ಪ್ರತಿದಿನ ಟೆಸ್ಟ್ ಮಾಡುವ ಸಂಖ್ಯೆ ಹೆಚ್ಚಿಸಲು ನಿರ್ಧರಿಸಿದೆ.

published on : 27th June 2020

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್!

ಮಹಿಳಾ ಕಾನ್ ಸ್ಟೇಬಲ್ ಒಬ್ಬರ ಪತಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಆತಂಕ ಸೃಷ್ಟಿಸಿತ್ತು. ನಂತರ ಸಿಎಂ ಗೃಹ ಕಚೇರಿ ಕೃಷ್ಣಾವನ್ನು ತಾತ್ಕಾಲಿಕವಾಗಿ ಸೀಲ್ ಡೌನ್ ಆಗಿತ್ತು. ಆದರೆ ಅಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. 

published on : 25th June 2020

ಕೊರೋನಾ ಸೋಂಕಿತ ನಾಗರಿಕರು, ಸರ್ಕಾರಿ ಸಿಬ್ಬಂದಿ ಧೃತಿಗೆಡುವ ಅಗತ್ಯವಿಲ್ಲ: ಸಿಎಂ ಯಡಿಯೂರಪ್ಪ

ಕೋರೋನಾ ಸೋಂಕು ಹಿನ್ನಲೆಯಲ್ಲಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಸಶಸ್ತ್ರ ಪೇದೆ ಸಾವಿಗೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೊರೋನಾ ಸೋಂಕಿತ ನಾಗರಿಕರು, ಸರ್ಕಾರಿ ಸಿಬ್ಬಂದಿ ಧೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ.

published on : 23rd June 2020

ಪ್ರವಾಸೋದ್ಯಮ ಪುನಶ್ಚೇತನಕ್ಕೆ ಅಗತ್ಯ ಕ್ರಮ: ಕಾರವಾನ್ ಮಿನಿ ಬಸ್‌ಗೆ ಮುಖ್ಯಮಂತ್ರಿ ಚಾಲನೆ

ಮುಖ್ಯಮಂತ್ರಿ ಬಿ.ಎಸ್,.ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸ್ಮಾರ್ಟ್ ಆಪ್ ಯೋಜನೆಯಡಿ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿರುವ ನೂತನ ಕಾರವಾನ್ (ಮಿನಿ ಬಸ್‌)ಗಳಿಗೆ ಹಸಿರುನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

published on : 17th June 2020

ಜೂನ್ 14ರ ಬದಲಾಗಿ ಮತ್ತೊಂದು ದಿನ ಡಿಕೆಶಿ ಪದಗ್ರಹಣ

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಕೊನೆಗೂ ಅನುಮತಿ ನೀಡಿದ್ದು, ಡಿಕೆಶಿ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಪದಗ್ರಹಣ ಕಾರ್ಯಕ್ರಮಕ್ಕೆ ಜೂನ್ 14ರ ಬದಲಾಗಿ ಮತ್ತೊಂದು ದಿನಾಂಕ ನಿಗದಿಪಡಿಸುವುದಾಗಿ ಶಿವಕುಮಾರ್ ಹೇಳಿದ್ದಾರೆ.

published on : 11th June 2020

ಬಿಜೆಪಿಯಿಂದ ಕಾರ್ಯಕರ್ತರಿಗೆ ಉತ್ತಮ ಕೊಡುಗೆ: ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ ಕುರಿತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ ಮಾಡುವ ಮೂಲಕ ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ.ಪಕ್ಷ ನಿಷ್ಠ ಕಾರ್ಯಕರ್ತರನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್ ಬಿಜೆಪಿಯ ರಾಜ್ಯ ಮುಖಂಡರಿಗೆ ಪ್ರಬಲ ಸಂದೇಶ ರವಾನಿಸಿದೆ. 

published on : 9th June 2020

ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್ ಹಿಂತಿರುಗಿಸಿ: ಸರ್ಕಾರದ ನಿಲುವಿಗೆ ಕುಮಾರಸ್ವಾಮಿ ಗರಂ

 ಟ್ರ್ಯಾಕ್ಟರ್‌, ವಾಹನ ಇರುವ ರೈತರು ಬಿಪಿಎಲ್‌ ಕಾರ್ಡ್‌ಗಳನ್ನು ಹಿಂದಿರುಗಿಸಬೇಕು, ಇಲ್ಲವಾದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎನ್ನುವ ಸಿಎಂ ಯಡಿಯೂರಪ್ಪ ಅವರ ಸೂಚನೆ ಮೂರ್ಖತನದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 7th June 2020

ಜುಲೈನಿಂದ ಶಾಲೆ ತೆರೆಯುವ ಸರ್ಕಾರದ ನಿರ್ಧಾರಕ್ಕೆ ತಜ್ಞರ ವಿರೋಧ, ಪೋಷಕರಿಂದ ಆನ್ ಲೈನ್ ಅಭಿಯಾನ!

ರಾಜ್ಯದಲ್ಲಿ ಕೊರೋನಾ ಸೋಂಕು ಆತಂಕಕಾರಿಯಾಗಿ ವ್ಯಾಪಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಶಾಲೆಗಳನ್ನು ತೆರೆಯಲು ಮುಂದಾಗಿರುವುದಕ್ಕೆ ಸಾರ್ವಜನಿಕರು, ಶಿಕ್ಷಕರು ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 

published on : 3rd June 2020

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಬಿಎಸ್ ವೈ ಮಾಜಿ ಆಪ್ತ ಸಹಾಯಕ ಸಂತೋಷ್ ನೇಮಕ

ಆಪರೇಷನ್‌ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಸಂಬಂಧಿ ಹಾಗೂ ಮಾಜಿ ಆಪ್ತ ಸಹಾಯಕ ಎನ್‌ಆರ್‌ ಸಂತೋಷ್‌ ಅವರನ್ನು ಮುಖ್ಯಮಂತ್ರಿಗಳ ನಾಲ್ಕನೇ  ರಾಜಕೀಯ ಕಾರ್ಯದರ್ಶಿಯಾಗಿ ಶನಿವಾರ ನೇಮಿಸಲಾಗಿದೆ. 

published on : 30th May 2020

ಬಿಎಸ್ ವೈ ಸಂಪುಟಕ್ಕೆ ಭರ್ಜರಿ ಸರ್ಜರಿ; ಕೆಲ ಸಚಿವರಿಗೆ ಈಗಲೇ ಎದೆ ಡವ, ಡವ!

ರಾಜ್ಯ ಸಚಿವ ಸಂಪುಟಕ್ಕೆ ಭರ್ಜರಿ ಸರ್ಜರಿ ನಡೆಸಲು ಬಿಜೆಪಿ ವರಿಷ್ಟರು ಮುಂದಾಗಿದ್ದಾರೆ.  ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ವರಿಷ್ಠರು ಆಲೋಚಿಸಿದ್ದಾರೆ. 

published on : 26th May 2020

ಸೋಂಕು ನಿಯಂತ್ರಣ ಮತ್ತು ಮರಣ ಪ್ರಮಾಣ ತಗ್ಗಿಸುವಲ್ಲಿ ಮುಂಚೂಣಿಯಲ್ಲಿ ಬೆಂಗಳೂರು: ಸಿಎಂ ಯಡಿಯೂರಪ್ಪ

ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

published on : 25th May 2020

ವಿಶೇಷ ಟಾಸ್ಕ್ ಫೋರ್ಸ್ ರಚನೆ: ಪ್ರತಿ ವಾರ ಕಾರ್ಯಚಟುವಟಿಕೆ ಪರಿಶೀಲಿಸಲಿರುವ ಸಿಎಂ ಬಿಎಸ್ ಯಡಿಯೂರಪ್ಪ

ಚೀನಾದಲ್ಲಿರುವ ಕೈಗಾರಿಕೋದ್ಯಮಿಗಳು ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿರುವ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್  ಫೋರ್ಸಿನ ಕಾರ್ಯ ಚಟುವಟಿಕೆಗಳನ್ನು ಪ್ರತಿ ವಾರ ಪರಿಶೀಲನೆ ನಡೆಸುತ್ತೇವೆ.

published on : 21st May 2020
1 2 3 4 5 6 >