• Tag results for Basavaraj Bommai

ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50 ರಷ್ಟು ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

published on : 22nd April 2021

ಡಿ.ಕೆ. ಶಿವಕುಮಾರ್ ಮೊಸರಿನಲ್ಲಿ ಕಲ್ಲು ಹುಡುಕಬಾರದು: ಬಸವರಾಜ ಬೊಮ್ಮಾಯಿ 

ನಮ್ಮ ಲಕ್ಷ್ಯ ಕೊರೋನಾ ನಿಯಂತ್ರಣ ಮಾಡುವುದರಲ್ಲಿ ಇರಬೇಕೇ ಹೊರತು ಪ್ರತಿ ವಿಚಾರದಲ್ಲಿ ಕೊರೋನಾ ಸಮಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. 

published on : 20th April 2021

ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರಗಳ ನಡುವೆ ಸಮನ್ವಯ ಅಗತ್ಯ: ಬೊಮ್ಮಾಯಿ

ಕೊರೋನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸಮನ್ವಯ ಅಗತ್ಯ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

published on : 20th April 2021

ರೆಮ್'ಡೆಸಿವಿರ್ ಔಷಧ ಕಳ್ಳ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ

ಕೋವಿಡ್'ಗೆ ಪರಿಣಾಮಕಾರಿ ಔಷಧಿಯಾದ ರೆಮ್'ಡೆಸಿವಿರ್'ನ್ನು ದುರ್ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 

published on : 17th April 2021

ಮೀಸಲಾತಿ ಪ್ರಮಾಣ ಹೆಚ್ಚಳದ ಬಗ್ಗೆ 'ಸುಪ್ರೀಂ'ಗೆ ಅಫಿಡವಿಟ್ ಸಲ್ಲಿಕೆ: ಗೃಹ ಸಚಿವ ಬೊಮ್ಮಾಯಿ

ಹಿಂದುಳಿದ ವರ್ಗದವರ ಹಿತ ಕಾಪಾಡಲು ಈಗಿರುವ ಮೀಸಲಾತಿ ಪ್ರಮಾಣವನ್ನು ಶೇ.50ಕ್ಕಿಂತ ಹೆಚ್ಚು ಮಾಡುವುದು ಅಗತ್ಯ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ.

published on : 4th April 2021

ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕೋ, ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ: ಬಸವರಾಜ ಬೊಮ್ಮಾಯಿ

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ವಶಕ್ಕೆ ಪಡೆಯಬೇಕೋ ಬೇಡವೋ ಎಂಬುದನ್ನು ಎಸ್ಐಟಿ ನಿರ್ಧರಿಸುತ್ತದೆ. ತಾವು ಕಾನೂನು ಮತ್ತು ಗೃಹ ಸಚಿವನಾದರೂ ಎಸ್ಐಟಿ ತನಿಖೆ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 31st March 2021

ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿಹಾಕಿದ್ದ ಸಿದ್ದರಾಮಯ್ಯ- ಬಸವರಾಜ್ ಬೊಮ್ಮಾಯಿ

ಮೇಟಿ ಪ್ರಕರಣವನ್ನು ಸಿಐಡಿಗೆ ಕೊಟ್ಟು ಮುಚ್ಚಿ ಹಾಕಿಸಿದ್ದು ಸಿದ್ದರಾಮಯ್ಯ ಅವರಿಗೆ  ಮರೆತು ಹೋಗಿದೆ ಎಂದು ಹೇಳುವ ಮೂಲಕ ಗೃಹ ಸಚಿವ ಬಸವರಾಜ್  ತಿರುಗೇಟು ನೀಡಿದ್ದಾರೆ. 

published on : 28th March 2021

ಸಿಡಿ ಪ್ರಕರಣ: ಯಾರ ಒತ್ತಡ, ಪ್ರಭಾವಕ್ಕೂ ತಲೆಕೆಡಿಸಿಕೊಳ್ಳದೆ ಎಸ್‌ಐಟಿ ತನಿಖೆ ನಡೆಯುತ್ತೆ ಎಂದ ಬಸವರಾಜ ಬೊಮ್ಮಾಯಿ

ರಾಸಲೀಲೆ ಸಿಡಿ ಪ್ರಕರಣದಲ್ಲಿ ಯಾರ ಒತ್ತಡ, ಪ್ರಭಾವಕ್ಕೆ ತಲೆಕೆಡಿಸಿಕೊಳ್ಳದೇ ಎಸ್‌ಐಟಿ ತನಿಖೆ ನಡೆಸಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

published on : 27th March 2021

ಸಿಡಿ ಯುವತಿ ತಂದೆತಾಯಿ ಇದ್ದೆಡೆಯೇ ರಕ್ಷಣೆಗೆ ಸೂಚನೆ: ಗೃಹ ಸಚಿವ ಬೊಮ್ಮಾಯಿ

ಸ್ವತಃ ಯುವತಿಯೇ ಬರಲಿ ಅಥವಾ ವಕೀಲರು, ಬೇರೆ ಯಾರು ಬಂದು ದೂರು ನೀಡಿದರೂ ಎಸ್ಐಟಿಯವರು ಕ್ರಮ ವಹಿಸಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

published on : 26th March 2021

ಸಿಡಿ ಪ್ರಕರಣದ ಸಂತ್ರಸ್ತೆ ಡಿಕೆಶಿ- ಸಿದ್ದರಾಮಯ್ಯ ರಕ್ಷಣೆ ಕೋರಿರುವ ಬಗ್ಗೆ ಮಾಹಿತಿ ಇಲ್ಲ: ಬಸವರಾಜ ಬೊಮ್ಮಾಯಿ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 25th March 2021

ಕೆಪಿಎಸ್‌ಸಿ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲು ಸರ್ಕಾರ ಚಿಂತನೆ

ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್‌ಸಿ) ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. 

published on : 19th March 2021

ಕೆಪಿಎಸ್‍ಸಿ ಅಕ್ರಮ ತಡೆಗೆ ಪರೀಕ್ಷಾ ವಿಧಾನದಲ್ಲಿಯೇ ಬದಲಾವಣೆಗೆ ಚಿಂತನೆ: ಬಸವಾಜ ಬೊಮ್ಮಾಯಿ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗಟ್ಟಲು ಪರೀಕ್ಷಾ ವಿಧಾನದಲ್ಲಿಯೇ ಬದಲಾವಣೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಮತ್ತು ಕಾನೂನು ಸಂಸದೀಯ ವ್ಯವಹಾರಗಳ...

published on : 18th March 2021

ಭೂ ಕಬಳಿಕೆ ಪ್ರಕರಣಗಳಿಗೆ ಮೀಸಲಾದ ಕಾನೂನು ತಂಡ ರಚನೆ: ಸದನದಲ್ಲಿ ಸಚಿವ ಬೊಮ್ಮಾಯಿ ಭರವಸೆ

ಕರ್ನಾಟಕದಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ ಭೂ ಮಾಫಿಯಾ, ಅತಿಕ್ರಮಣ ಸಂಬಂಧ ತೀವ್ರ ಚರ್ಚೆಯ ಮಧ್ಯೆ, ಗೃಹ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ, ಕಂದಾಯ ಇಲಾಖೆ ಪ್ರಕರಣವನ್ನು ಹುಡುಕಿದ್ದಾದರೆ ಭೂ ಸಂಬಂಧಿತ ಪ್ರಕರಣಗಳಿಗೆ ಮೀಸಲಾದ ವಕೀಲರ ತಂಡವನ್ನು ರಚಿಸುವುದಾಗಿ ಹೇಳಿದರು.

published on : 18th March 2021

ಸಾಹಿತಿ ಭೈರಪ್ಪ ವಿರುದ್ಧದ ದೂರು ಪರಿಶೀಲಿಸಿ ಕ್ರಮ: ಸಚಿವ ಬೊಮ್ಮಾಯಿ ಭರವಸೆ

ದ್ರೌಪದಿ ಕುರಿತು ಅವಮಾನಕರ ಹೇಳಿಕೆ ನೀಡಿದ್ದಾರೆನ್ನಲಾದ ಖ್ಯಾತ ಸಾಹಿತಿ ಎಸ್.ಎಲ್.ಭಐರಪ್ಪ ಅವರ ವಿರುದ್ಧದ ದೂರು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಭರವಸೆ ನೀಡಿದ್ದಾರೆ.

published on : 17th March 2021

ಒಪ್ಪದಿದ್ದರೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ವಿಪಕ್ಷಗಳು ಬರಲೇಬೇಕು: ಸಚಿವ ಬಸವರಾಜ ಬೊಮ್ಮಾಯಿ

ಒಪ್ಪದಿದ್ದರೂ ಕೂಡ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷಗಳು ಬರಲೇಬೇಕೆಂದು ರಾಜ್ಯ ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. 

published on : 14th March 2021
1 2 3 4 >