• Tag results for Basavaraj Horatti

ನಡೆಯದ ಪರಿಷತ್ ಸಭಾಪತಿ ಚುನಾವಣೆ; ಕೊಟ್ಟ ಮಾತಿಗೆ ತಪ್ಪಿದ ಬೊಮ್ಮಾಯಿ-ಜೋಶಿ; ಬಿಜೆಪಿ ಹಿಂದೇಟಿನಿಂದ ಬಸವರಾಜ ಹೊರಟ್ಟಿ ಅತಂತ್ರ!

ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರನ್ನು ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ನೇಮಿಸಲು ‘ಮೂಲ’ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

published on : 21st September 2022

ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಫಲಿತಾಂಶ: ಬಸವರಾಜ ಹೊರಟ್ಟಿಗೆ ಗೆಲುವು; 8ನೇ ಬಾರಿಗೆ ಮೇಲ್ಮನೆ ಪ್ರವೇಶ

ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದ್ದು, ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರು ಗೆಲವು ಸಾಧಿಸುವ ಮೂಲಕ 8ನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದ್ದಾರೆ.

published on : 15th June 2022

ರಾಷ್ಟ್ರ ಲಾಂಛನ ದುರ್ಬಳಕೆ: ಬಸವರಾಜ ಹೊರಟ್ಟಿ ವಿರುದ್ಧ ನೋಟಿಸ್ ಜಾರಿ

ಬಸವರಾಜ ಪಥ ಎಂಬ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಛನ ಬಳಸಿದ ಆರೋಪ ಮತ್ತು ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಮಾಡಿದ ಆರೋಪದ ಮೇಲೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ನೋಟಿಸ್​ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.

published on : 12th June 2022

ಪರಿಷತ್ ಚುನಾವಣೆಗೆ ಅಭ್ಯರ್ಥಿ ಘೋಷಿಸದ ಬಿಜೆಪಿ: 8ನೇ ಬಾರಿಗೆ ಬಸವರಾಜ ಹೊರಟ್ಟಿ ಆಯ್ಕೆ ಮಾಡಲು ಶಿಕ್ಷಕರ ಪ್ರತಿಜ್ಞೆ!

ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ತಿನ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಎಂಟನೇ ಬಾರಿಗೆ ಆಯ್ಕೆ ಮಾಡುವುದಾಗಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಆಶ್ರಯದಲ್ಲಿ ಶಿಕ್ಷಕರು ಪ್ರತಿಜ್ಞೆ ಮಾಡಿದ್ದಾರೆ.

published on : 24th May 2022

ಸಭಾಪತಿಯಾಗಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ತೀನಿ ಅನ್ನೋದು ಮಹಾ ಅಪರಾಧ: ಬಿಕೆ ಹರಿಪ್ರಸಾದ್

ಸಭಾಪತಿ ಬಸವರಾಜ ಹೊರಟ್ಟಿಯವರು ಮೇಲ್ಮನೆ ಗೌರವ ಕಾಪಾಡಿಲ್ಲ ಸಭಾಪತಿಯಾಗಿ ಬಿಜೆಪಿ ಪಕ್ಷ ಸೇರ್ತೀನಿ ಅನ್ನೋದು ಮಹಾ ಅಪರಾಧ, ತಕ್ಷಣವೇ ಸಭಾಪತಿ ಹುದ್ದೆಗೆ ರಾಜೀನಾಮೆ ಕೊಡಲಿ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಒತ್ತಾಯಿಸಿದರು.

published on : 5th May 2022

ಬಿಜೆಪಿ ಸೇರ್ಪಡೆ ಬಗ್ಗೆ ಎಂದಿಗೂ ಆಲೋಚಿಸಿರಲಿಲ್ಲ: ಬಸವರಾಜ ಹೊರಟ್ಟಿ

ಬಿಜೆಪಿ ಸೇರುವ ಯೋಚನೆಯೇ ಇರಲಿಲ್ಲ. ಆದರೆ ಅನಿವಾರ್ಯ ಸಂದರ್ಭಗಳು ಮತ್ತು ಚುನಾವಣೆಗೆ ಮುನ್ನ ನನ್ನ ಮತದಾರರ ಪ್ರತಿಕ್ರಿಯೆ ನನ್ನ ಮನಸ್ಸನ್ನು ಬದಲಾಯಿಸುವಂತೆ ಮಾಡಿತು. ಬಿಜೆಪಿ ಸೇರ್ಪಡೆಯಿಂದ ದೀರ್ಘಾವಧಿ ರಾಜಕೀಯ ಲಾಭದ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಹೇಳಿದ್ದಾರೆ.

published on : 5th May 2022

ಜೆಡಿಎಸ್ ತೊರೆದು ಬಿಜೆಪಿ ಸೇರಿದ ಬಸವರಾಜ ಹೊರಟ್ಟಿ: ಶೀಘ್ರವೇ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ರಾಜಿನಾಮೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.‌

published on : 3rd May 2022

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ತಕ್ಷಣ ನೆರವಿಗೆ ಬಂದ ಹೊರಟ್ಟಿ

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಕುಲಕುಂಟೆ ಗ್ರಾಮದ ಬಳಿ ನಡೆದ ಈ ಅಪಘಾತದಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಬಡಿದು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನೆರವಾಗಿದ್ದಾರೆ.

published on : 10th April 2022

ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ನಾನೇ, ಹೊರಟ್ಟಿ ಅಲ್ಲ: ಮೋಹನ ಲಿಂಬಿಕಾಯಿ

ಸಭಾಪತಿ ಸ್ಥಾನದಲ್ಲಿದ್ದು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವ ಬಸವರಾಜ ಹೊರಟ್ಟಿಯವರ ಹೇಳಿಕೆ ಕಾನೂನು ಹಾಗೂ ಸಂವಿಧಾನ ಬಾಹಿರವಾಗಿದೆ. ಪಕ್ಷ ಸೇರಿ ಅಭ್ಯರ್ಥಿಯಾಗುತ್ತೇನೆ ಎಂದಿರುವುದು ಹೊರಟ್ಟಿಯವರ ಸ್ವಯಂ ಹೇಳಿಕೆ ಅಷ್ಟೇ...

published on : 6th April 2022

ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಪ್ರಕರಣ; ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿದ ವಿಷಯ ವಿಧಾನಪರಿಷತ್‌ನಲ್ಲಿ ಗುರುವಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಯಿತು

published on : 18th March 2022

ಸರ್ಕಾರಿ ನೌಕರರಿಗೆ ರಾಜಸ್ಥಾನ ಮಾದರಿಯಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಿ: ಬಸವರಾಜ ಹೊರಟ್ಟಿ

ರಾಜಸ್ಥಾನ ಸರ್ಕಾರವು ಬುಧವಾರ ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವ ದಿಟ್ಟ ನಿರ್ಧಾರ ತೆಗೆದುಕೊಳ್ಳುವ...

published on : 23rd February 2022

ಬಿಜೆಪಿ ಸೇರ್ಪಡೆ ಊಹಾಪೋಹ ತಳ್ಳಿಹಾಕಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ವಿಧಾನಪರಿಷತ್ ಸಭಾಪತಿ ಹಾಗೂ ಜೆಡಿಎಸ್ ಹಿರಿಯ ಶಾಸಕ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರುವ ಸಾಧ್ಯತೆಯನ್ನು ಶನಿವಾರ ತಳ್ಳಿ ಹಾಕಿದ್ದು, ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

published on : 20th February 2022

ಬಸವರಾಜ ಹೊರಟ್ಟಿ ವಿರುದ್ಧದ ಜಾತಿ ನಿಂದನೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ, ಸಭಾಪತಿ ನಿರಾಳ

ಜಾತಿ ನಿಂದನೆ ಆರೋಪ ಸಂಬಂಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

published on : 31st January 2022

ರಾಶಿ ಭವಿಷ್ಯ