• Tag results for Basavaraja Bommai

ತಿರುಪತಿಗೆ ಸಿಎಂ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಭೇಟಿ: ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿ ವೀಕ್ಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶುಕ್ರವಾರ ತಿರುಮಲದಲ್ಲಿ ತಿರುಪತಿ ತಿಮ್ಮಪ್ಪ ನ ದರ್ಶನದ ಬಳಿಕ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.

published on : 19th August 2022

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮಾರ್ಗಸೂಚಿ: ಬೊಮ್ಮಾಯಿ, ಕಟೀಲ್‌ ಗೆ ಟಾಸ್ಕ್; ತಲಾ 50 ಕ್ಷೇತ್ರದಲ್ಲಿ ಪ್ರವಾಸಕ್ಕೆ ಸೂಚನೆ!

2023 ರ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಬಿಜೆಪಿ ಗುರುವಾರ ತನ್ನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿತು. ಮೊದಲು ಪಕ್ಷ ದುರ್ಬಲವಾಗಿರುವ ವಿಧಾನಸಭಾ ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸಲು  ಸಭೆಯಲ್ಲಿ ನಿರ್ಧರಿಸಲಾಗಿದೆ.

published on : 19th August 2022

ಆ.28ಕ್ಕೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ: ಮುಖ್ಯಮಂತ್ರಿ ಬೊಮ್ಮಾಯಿ

ಕಳೆದ ತಿಂಗಳು ಜುಲೈಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಒಂದು ವರ್ಷದ ಜನೋತ್ಸವ ಸಮಾರಂಭ ಇದೇ ತಿಂಗಳು 28ರಂದು ನಡೆಯಲಿದೆ. 

published on : 14th August 2022

ಅಂಗಾಂಗ ದಾನ ಮಾಡಿ ಮಾದರಿಯಾಗಿ; ಯುವಜನತೆ ಈ ದೇಶದ ಭವಿಷ್ಯ: 'ಹರ್ ಘರ್ ತಿರಂಗ' ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ದೇಶದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಅಂಗವಾಗಿ ಇಂದು ಶನಿವಾರದಿಂದ ಮೂರು ದಿನಗಳ ಕಾಲ 'ಹರ್ ಘರ್ ತಿರಂಗ' ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮಕ್ಕೆ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧ ಮುಂದೆ ಚಾಲನೆ ನೀಡಿದರು.

published on : 13th August 2022

ರಾಯರು ನನಗೆ ಎಲ್ಲ ಕೊಟ್ಟಿದ್ದಾರೆ, ಸಂತೋಷವಾಗಿದ್ದೇನೆ, ನಿಶ್ಚಿತವಾಗಿಯೂ ಬೊಮ್ಮಾಯಿ ಅವಧಿ ಪೂರ್ಣಗೊಳಿಸುತ್ತಾರೆ: ಬಿ ಎಸ್ ಯಡಿಯೂರಪ್ಪ

ಇಂದು ಗುರುವಾರ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಮಕ್ಕಳು, ಕುಟುಂಬಸ್ಥರೊಂದಿಗೆ ಭೇಟಿ ನೀಡಿ ರಾಯರ ದರ್ಶನ ಪಡೆದರು. 

published on : 11th August 2022

ಸಿಎಂ ಬೊಮ್ಮಾಯಿ ಕೋವಿಡ್ ನಿಂದ ಗುಣಮುಖ; ಇಂದು ಮೈಸೂರು, ಮಂಡ್ಯ ಪ್ರವಾಸ; ಮುಖ್ಯಮಂತ್ರಿ ಬದಲಾವಣೆ ವದಂತಿ ಬಗ್ಗೆ ಹೇಳಿದ್ದೇನು?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಾರದ ನಂತರ ಹೋಂ ಕ್ವಾರಂಟೈನ್ ನಿಂದ ಹೊರಬಂದು ಎಂದಿನಂತೆ ಸಾರ್ವಜನಿಕ ಸಭೆ, ಸಮಾರಂಭ ಕಾರ್ಯಕ್ರಮಗಳಲ್ಲಿ ಇಂದು ಗುರುವಾರದಿಂದ ಭಾಗವಹಿಸುತ್ತಿದ್ದಾರೆ. 

published on : 11th August 2022

ಸಿಎಂ ಬದಲಾವಣೆ ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು: ಎಸ್ ಟಿ ಸೋಮಶೇಖರ್

ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಸೃಷ್ಟಿಸಿರುವ ಊಹಾಪೋಹ ಅಷ್ಟೇ. ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಇದು ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು

published on : 11th August 2022

ಬೊಮ್ಮಾಯಿ ಬದಲಾವಣೆ, ಕಾಂಗ್ರೆಸ್ ಟ್ವೀಟ್ ಬಗ್ಗೆ ನನಗೆ ಗೊತ್ತಿಲ್ಲ, ಟ್ವೀಟ್ ಮಾಡಿದವರನ್ನೇ ಕೇಳಿ: ಸಿದ್ದರಾಮಯ್ಯ

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣ ಮಾಡಿದೆ. 

published on : 10th August 2022

ಸಿಎಂ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್: ದೆಹಲಿ ಪ್ರವಾಸ ರದ್ದು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

published on : 6th August 2022

ಸರ್ಕಾರದ ವಿರುದ್ಧ ಕಟ್ಟೆಯೊಡೆದ ಕಾರ್ಯಕರ್ತರ ಆಕ್ರೋಶ; ಬುಧವಾರ ಬೆಂಗಳೂರಿಗೆ ಅಮಿತ್ ಶಾ! ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆ ಸಂದೇಶ?

ಕೇಂದ್ರ ಗೃಹ  ಸಚಿವ ಅಮಿತ್‌ ಶಾ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸಾಂಸ್ಕೃತಿಕ ಇಲಾಖೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದಾರೆ. ಆದರೂ, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ

published on : 3rd August 2022

'ಆಕ್ಸಿಡೆಂಟಲ್ ಸಿಎಂ' ಆಗಿರುವ ಬೊಮ್ಮಾಯಿ ಅವರ ಡಬಲ್ ಇಂಜಿನ್ ಸರ್ಕಾರಕ್ಕೆ ಆ್ಯಕ್ಸಿಡೆಂಟ್: ಕಾಂಗ್ರೆಸ್ ಟೀಕೆ

ಬಿಜೆಪಿ ಸರ್ಕಾರ ರೈತರ ಮತ್ತು ವಿದ್ಯಾರ್ಥಿಗಳ ವಿಶ್ವಾಸ ಗಳಿಸಲಿಲ್ಲ, ಬಡವರ ವಿಶ್ವಾಸ ಗಳಿಸಲಿಲ್ಲ, ಹೂಡಿಕೆದಾರರ ವಿಶ್ವಾಸ ಗಳಿಸಲಿಲ್ಲ, ಉದ್ಯೋಗಾಕಾಂಕ್ಷಿಗಳ ವಿಶ್ವಾಸ ಗಳಿಸಲಿಲ್ಲ, ಕನಿಷ್ಠ ತಮ್ಮದೇ ಪಕ್ಷದ ಕಾರ್ಯಕರ್ತರ ವಿಶ್ವಾಸವನ್ನೂ ಉಳಿಸಿಕೊಳ್ಳಲಿಲ್ಲ. ಬಸವರಾಜ ಬೊಮ್ಮಾಯಿ ಅವರೇ ಇನ್ನೂ ಏಕೆ ಕುರ್ಚಿ ಆಸೆ? ಎಂದು ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ.

published on : 31st July 2022

ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ, ಅವರು ಜಿಲ್ಲೆಯಲ್ಲಿದ್ದಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ: ಸಿದ್ದರಾಮಯ್ಯ

ಕಳೆದ ರಾತ್ರಿ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಫಾಜಿಲ್ ಮಂಗಲಪೇಟೆ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. 

published on : 29th July 2022

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯನ್ನು ಸರ್ಕಾರ ಕೇವಲ ಕೊಲೆಯಾಗಿ ನೋಡುವುದಿಲ್ಲ, ಸಿದ್ದರಾಮಯ್ಯ ಹೇಳಿದ್ದು ವೇದವಾಕ್ಯ ಅಲ್ಲ: ಸಿಎಂ ಬೊಮ್ಮಾಯಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಮೂರೂ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳುತ್ತದೆ. ಪ್ರಕರಣ ತನಿಖೆಯಲ್ಲಿ ಹಿಂದೆ ಬಿದ್ದಿಲ್ಲ, ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 29th July 2022

ರಾಜ್ಯದಲ್ಲಿ ಅಗತ್ಯ ಬಿದ್ದರೆ ಯೋಗಿ ಮಾಡೆಲ್ ರೂಲ್ಸ್ ಜಾರಿ, ಕೋಮು ಸೌಹಾರ್ದ ಕದಡುವ ಶಕ್ತಿಗಳಿಗೆ ಕಡಿವಾಣ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಅಗತ್ಯ ಬಿದ್ದರೆ ಉತ್ತರ ಪ್ರದೇಶದ ಯೋಗಿ ಸರ್ಕಾರ ನಿಯಮವನ್ನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 28th July 2022

ಪಿಎಫ್ಐ ಸಂಘಟನೆ ನಿಷೇಧಿಸುವ ಕುರಿತು ಎಲ್ಲರ ಅಭಿಪ್ರಾಯ ಪಡೆದು ನಿರ್ಧಾರ: ಸಿಎಂ ಬೊಮ್ಮಾಯಿ

ಹಿಂದೂ ಕಾರ್ಯಕರ್ತರ ಹತ್ಯೆಯಾದ ಸಂದರ್ಭದಲ್ಲಿ, ಉಗ್ರ ಚಟುವಟಿಕೆಗಳು ನಡೆದಾಗ ಪಿಎಫ್ಐಯಂತಹ (PFI) ಸಂಘಟನೆಗಳನ್ನು ನಿಷೇಧ ಮಾಡಬೇಕೆಂಬ ಕೂಗು ಹಲವು ಸಮಯಗಳಿಂದ ಕೇಳುತ್ತಾ ಬಂದಿದೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾದಾಗಲೂ ಇದೇ ರೀತಿಯ ಆಗ್ರಹ ಕೇಳಿಬಂದಿದೆ.

published on : 28th July 2022
1 2 3 4 5 6 > 

ರಾಶಿ ಭವಿಷ್ಯ