- Tag results for Bihar
![]() | ಹೆಚ್ಚಿನ ಹಣ ನೀಡಲು ನಿರಾಕರಿಸಿದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಬಾಯಿಗೆ ಮೂತ್ರ ವಿಸರ್ಜನೆ!ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಸಾಲದಾತ ಮತ್ತು ಆತನ ಸಹಚರರು ದಲಿತ ಮಹಿಳೆಯೊಬ್ಬರನ್ನು ವಿವಸ್ತಗೊಳಿಸಿ, ಹಲ್ಲೆ ನಡೆಸಿ ಮತ್ತು ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ: 2 ಸಾವು, ಹಲವರು ಆಸ್ಪತ್ರೆಗೆ ದಾಖಲು!ಮದ್ಯನಿಷೇಧವಿರುವ ಬಿಹಾರದಲ್ಲಿ ಕಳ್ಳಬಟ್ಟಿ ದುರಂತ ಸಂಭವಿಸಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನಕಲಿ ಮದ್ಯ ಸೇವಿಸಿ ಇಬ್ಬರು ಸಾವನ್ನಪ್ಪಿ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. |
![]() | ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ನಿತೀಶ್ ಕುಮಾರ್ ಅವರಿಗಿಂತ ಸಮರ್ಥರು ಯಾರೂ ಇಲ್ಲ: ಮಹೇಶ್ವರ್ ಹಜಾರಿಪ್ರಧಾನಿ ಅಭ್ಯರ್ಥಿಗೆ ನಿತೀಶ್ ಕುಮಾರ್ ಅವರಿಗಿಂತ ಸಮರ್ಥ ನಾಯಕ ಮತ್ತೊಬ್ಬರು ಇಲ್ಲ ಎಂದು ಬಿಹಾರ ವಿಧಾನಸಭೆಯ ಉಪಸಭಾಪತಿ ಮಹೇಶ್ವರ್ ಹಜಾರಿ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು. |
![]() | 'ಡ್ರೈ' ಬಿಹಾರದಲ್ಲಿ ಮದ್ಯ ಮಾರಾಟ ಮಾಡಿದ SHO ಸೇರಿ ಆರು ಪೊಲೀಸರ ಅಮಾನತುಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಠಾಣಾಧಿಕಾರಿ(ಎಸ್‌ಎಚ್‌ಒ) ಸೇರಿದಂತೆ ಆರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. |
![]() | ರಾಮಚರಿತ ಮಾನಸವನ್ನು ಸೈನೈಡ್ ಗೆ ಹೋಲಿಸಿದ ಬಿಹಾರ ಸಚಿವ!ಸನಾತನ ಧರ್ಮದ ಬಗ್ಗೆ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಹೇಳಿಕೆ ಚರ್ಚೆಗೆ ಗುರಿಯಾಗಿರುವ ಬೆನ್ನಲ್ಲೇ, ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ಹೇಳಿಕೆ ಮತ್ತೊಂದು ವಿವಾದ ಹುಟ್ಟಿಸಿದೆ. |
![]() | ಬಿಹಾರ: 32 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಾಗ್ಮತಿ ನದಿಯಲ್ಲಿ ಪಲ್ಟಿ; 20 ಮಕ್ಕಳ ರಕ್ಷಣೆ, 10 ಮಂದಿ ನಾಪತ್ತೆಬಿಹಾರದ ಮುಜಾಫರ್‌ಪುರ ಜಿಲ್ಲೆಯ ಬಾಗ್ಮತಿ ನದಿಯಲ್ಲಿ ಗುರುವಾರ 30 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. |
![]() | ಬುಡಕಟ್ಟು ಮಹಿಳೆ ತಲೆ ಬೋಳಿಸಿದ ಪ್ರಕರಣ: ಬಿಹಾರ ಸರ್ಕಾರಕ್ಕೆ NHRC ನೋಟಿಸ್ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಬುಡಕಟ್ಟು ಮಹಿಳೆಯ ತಲೆ ಬೋಳಿಸಿದ್ದಾರೆ ಎಂಬ ವರದಿಗಳನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಬಿಹಾರ ಸರ್ಕಾರ ಮತ್ತು ಬಿಹಾರ ಪೊಲೀಸ್... |
![]() | ಮೂಲಸೌಕರ್ಯ ಕೊರತೆಯಿಂದ ರೊಚ್ಚಿಗೆದ್ದ ಶಾಲಾ ವಿದ್ಯಾರ್ಥಿನಿಯರು, ಬಿಇಒ ಕಾರು ಧ್ವಂಸ- ವಿಡಿಯೋಶಾಲೆಯಲ್ಲಿ ಮೂಲಸೌಕರ್ಯ ಕೊರತೆ ಹಾಗೂ ಸರಿಯಾದ ಆಸನ ವ್ಯವಸ್ಥೆ ಇಲ್ಲದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಬಿಇಒ ಕಾರಿಗೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. |
![]() | ಪಾಟ್ನಾ ವಿಶ್ವವಿದ್ಯಾಲಯದ ವೇದಿಕೆ ಮೇಲೆ ಕಾಲು ಜಾರಿ ಬಿದ್ದ ಸಿಎಂ ನಿತೀಶ್ ಕುಮಾರ್, ವಿಡಿಯೋ!ಪಾಟ್ನಾ ವಿಶ್ವವಿದ್ಯಾನಿಲಯದ ವೇದಿಕೆ ಮೇಲೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಠಾತ್ ಜಾರಿ ಬಿದ್ದಿದ್ದು, ಈ ವೇಳೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ವೇದಿಕೆಯಲ್ಲಿದ್ದರು. |
![]() | ಸನಾತನ ಧರ್ಮ ನಿರ್ಮೂಲನೆ ಹೇಳಿಕೆ: ಬಿಹಾರದ ಕೋರ್ಟ್ ನಲ್ಲಿ ಸ್ಟಾಲಿನ್, ಉದಯನಿಧಿ ಸ್ಟಾಲಿನ್ ವಿರುದ್ಧ ದೂರು ದಾಖಲುಸನಾತನ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮತ್ತು ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿರುದ್ಧ ಬಿಹಾರದ ನ್ಯಾಯಾಲಯವೊಂದರಲ್ಲಿ ಸೋಮವಾರ ದೂರು ದಾಖಲಿಸಲಾಗಿದೆ. |
![]() | 1995 ಜೋಡಿ ಕೊಲೆ ಪ್ರಕರಣ: ಬಿಹಾರ ಮಾಜಿ ಸಂಸದ ಪ್ರಭುನಾಥ್ ಸಿಂಗ್‌ಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ1995ರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಸಂಸದ, ಪ್ರಭುನಾಥ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ದೇಶದಲ್ಲಿ ಯಾವಾಗ ಬೇಕಾದರೂ ಲೋಕಸಭೆ ಚುನಾವಣೆ ನಡೆಯಬಹುದು: ನಿತೀಶ್ ಕುಮಾರ್ವಿಪಕ್ಷಗಳ ಒಗ್ಗಟ್ಟಿನಿಂದಾಗಿ ಬಿಜೆಪಿ ಹೆಚ್ಚು ನಷ್ಟ ಅನುಭವಿಸುವ ಭೀತಿಯಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆಯು ಯಾವಾಗ ಬೇಕಾದರೂ ನಡೆಯಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಹೇಳಿದ್ದಾರೆ. |
![]() | INDIA ಸಂಚಾಲಕನಾಗಲು ಇಷ್ಟವಿಲ್ಲ, ಒಗ್ಗಟ್ಟಿನ ಮೂಲಕ ಬೇರೆಯವರನ್ನು ಆಯ್ಕೆ ಮಾಡುತ್ತೇವೆ: ನಿತೀಶ್ ಕುಮಾರ್ಭಾರತದಲ್ಲಿನ ವಿರೋಧ ಪಕ್ಷಗಳ ಒಕ್ಕೂಟದ ಸಂಯೋಜಕ ಹುದ್ದೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹಗ್ಗಜಗ್ಗಾಟದ ನಡುವೆಯೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. |
![]() | ಪತ್ನಿಯನ್ನು ತೊರೆದು ಆರ್ ಎಸ್ಎಸ್ ಕಚೇರಿಯಲ್ಲಿದ್ದ ವ್ಯಕ್ತಿ: ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!ಪತ್ನಿಯ ವಿರುದ್ಧ ಕ್ರೂರತನದ ಆರೋಪ ಹೊರಿಸಿ ಸ್ಥಳೀಯ್ ಆರ್ ಎಸ್ಎಸ್ ಕಚೇರಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ವಿಚ್ಛೇದನವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. |
![]() | ಪತ್ನಿ ಸಾವು ಪ್ರಕರಣ: ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿರುದ್ಧ ದೂರು ದಾಖಲು; ಪೋಷಕರಿಂದ ವರದಕ್ಷಿಣೆ ಕಿರುಕುಳ ಆರೋಪ!ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿದ್ದಕ್ಕಾಗಿ ಪಾಟ್ನಾ ಸಿವಿಲ್ ನ್ಯಾಯಾಲಯದ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರತೀಕ್ ಶೈಲ್ ವಿರುದ್ಧ ದಾನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |