• Tag results for Budget 2022

ಬಜೆಟ್‌ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಶೀಘ್ರದಲ್ಲಿಯೇ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ.

published on : 26th March 2022

ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ: ಸರ್ಕಾರದ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಇದು ಡಬಲ್‌ ಇಂಜಿನ್‌ ಸರ್ಕಾರ ಅಲ್ಲ, ಡಬ್ಬಾ ಸರ್ಕಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ಮಂಡಿಸಿರುವ 2022-23ನೇ ಸಾಲಿನ ಬಜೆಟ್‌ ಮೇಲಿನ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು  ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

published on : 7th March 2022

ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಅತ್ಯಲ್ಪ ಪ್ರಮಾಣದ ಹಂಚಿಕೆ: ಮೇಕೆದಾಟು ಪಾದಯಾತ್ರೆ ಲಾಭ ಕಾಂಗ್ರೆಸ್ ಗೆ ತಪ್ಪಿಸಲು ಸಿಎಂ ಪ್ಲಾನ್!

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ, ಭದ್ರಾ ಮೇಲ್ದಂಡೆ, ಕಳಸಾ-ಬಂಡೂರಿ, ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅಂದಾಜು ವೆಚ್ಚ ಹಲವು ಲಕ್ಷ ಕೋಟಿ ರೂ.ಗಳಾಗಿದೆ.

published on : 5th March 2022

ಸ್ಟಾರ್ಟ್ ಅಪ್ ಕಂಪೆನಿಗಳಿಗೆ ಕರ್ನಾಟಕ ಬಜೆಟ್-2022ರಲ್ಲಿ ಉತ್ತೇಜನ: 12 ಕೋಟಿ ರೂ. ಮೀಸಲು

ಕರ್ನಾಟಕದಾದ್ಯಂತ ಸ್ಟಾರ್ಟ್‌ಅಪ್ ಮತ್ತು ತಂತ್ರಜ್ಞಾನ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಂಡಿಸಿರುವ ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ, ಬೆಂಗಳೂರು ಬಿಯಾಂಡ್ ಕ್ಲಸ್ಟರ್ ಸೀಡ್ ಫಂಡ್ ಗಳನ್ನು ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

published on : 5th March 2022

ರಾಜ್ಯ ಬಜೆಟ್ 2022: ಬಿಜೆಪಿ ನಾಯಕರಿಂದ ಮೆಚ್ಚುಗೆ; ವಿರೋಧ ಪಕ್ಷಗಳಿಂದ ಟೀಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ ಚೊಚ್ಚಲ ಬಜೆಟ್ ಬಗ್ಗೆ ಆಡಳಿತ ಹಾಗೂ ವಿಪಕ್ಷಗಳ ಮುಖಂಡರು ಪ್ರತಿಕ್ರಿಯೆ ನೀಡಿದ್ದು, ಆಡಳಿತ ಪಕ್ಷದ ಮುಖಂಡರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದರೆ, ಕಾಂಗ್ರೆಸ್ ಮುಖಂಡರು ಬಜೆಟ್‌ ಬಗ್ಗೆ ಟೀಕೆ ಮಾಡಿದ್ದಾರೆ.

published on : 5th March 2022

ಬೊಮ್ಮಾಯಿ ಬಜೆಟ್‌ಗೆ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದಿಂದ ಖಂಡನೆ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಬಾರಿ ಮಂಡಿಸಿರುವ 2022-23  ರ ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ  ಶಾಂತಾರಾಮ ಖಂಡಿಸಿದ್ದಾರೆ.

published on : 5th March 2022

ರಾಜ್ಯ ಬಜೆಟ್ 2022: ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ- ದಿನೇಶ್ ಗೂಳಿಗೌಡ

ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ. ಮಂಡ್ಯ ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಈ ಸರ್ಕಾರ ಹುಸಿಗೊಳಿಸಿದೆ. ಮಂಡ್ಯ ಜಿಲ್ಲೆಯ ಬಹುಪಾಲು ವರ್ಗದ ಜೀವನೋಪಾಯಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದ್ದ ಬಹು ಆಕಾಂಕ್ಷಿತ ಮೈಸೂರು ಸಕ್ಕರೆ ಕಾರ್ಖಾನೆಗೆ...

published on : 5th March 2022

ದೇವಾಲಯಗಳ ಅಭಿವೃದ್ಧಿಯ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಆನೆ ಬಲ ತುಂಬಿದ ಬಜೆಟ್‌: ಸಚಿವೆ ಶಶಿಕಲಾ ಜೊಲ್ಲೆ

ದೇವಾಲಯಗಳನ್ನು ಸಮಗ್ರ ಅಭಿವೃದ್ದಿ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವ ನನ್ನ ಉದ್ದೇಶಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ ಆನೆ ಬಲ ತುಂಬಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

published on : 5th March 2022

ರಾಜ್ಯ ಬಜೆಟ್ 2022-23: ಮೀನುಗಾರರಿಗೆ 5,000 ಮನೆ, ಮಂಗಳೂರು ಬಂದರು ವಿಸ್ತರಣೆಗೆ 350 ಕೋಟಿ ರೂ. ಅನುದಾನ ಘೋಷಣೆ 

ರಾಜ್ಯ ಬಜೆಟ್-2022-23 ನ್ನು ಮಂಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ನಿರಾಶ್ರಿತ ಮೀನುಗಾರರಿಗೆ 5,000 ಮನೆಗಳನ್ನು ರಾಜೀವ್ ಗಾಂಧಿ ಆವಾಸ್ ಯೋಜನೆಯಡಿ ಘೋಷಿಸಿದ್ದಾರೆ. 

published on : 4th March 2022

ಕರ್ನಾಟಕ ಬಜೆಟ್ 2022: ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ; 'ಸ್ವಾಗತಾರ್ಹ' ಎಂದ ಡಿಕೆಶಿ

ಮೇಕೆದಾಟು ಯೋಜನೆಗಾಗಿ ಪಾದಾಯಾತ್ರೆ ಮಾಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಅನುದಾನ ಘೋಷಣೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

published on : 4th March 2022

ಕರ್ನಾಟಕ ಬಜೆಟ್ 2022: ಮುಜರಾಯಿ ಇಲಾಖೆಗೆ ಪ್ರಮುಖ ಘೋಷಣೆಗಳು; ರಿಯಾಯಿತಿ ದರದಲ್ಲಿ ಯಾತ್ರಾ ಪ್ಯಾಕೇಜ್

ಸಿಎಂ ಬಸವರಾಜ ಬೊಮ್ಮಾಯಿ ಅವರು ತಾವು ಇಂದು ಮಂಡಿಸಿದ ಕರ್ನಾಟಕ ಬಜೆಟ್ 2022ರಲ್ಲಿ ಮುಜರಾಯಿ ಇಲಾಖೆಗೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.

published on : 4th March 2022

ಕರ್ನಾಟಕ ಬಜೆಟ್ 2022: ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ, ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ 2022ರಲ್ಲಿ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಚಿಗೆ ಒತ್ತು ನೀಡಲಾಗಿದ್ದು, ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ ಮೀಸಲಿರಿಸಲಾಗಿದೆ.

published on : 4th March 2022

ಕರ್ನಾಟಕ ಬಜೆಟ್ 2022: ಗದಗ-ಯಲವಿಗಿ ನೂತನ ರೈಲು ಮಾರ್ಗ, ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಘೋಷಣೆ

ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ನಲ್ಲಿ ರೈಲ್ವೇ ಯೋಜನೆಗಳಿಗೆ ಉತ್ತೇಜನ ನೀಡಲಾಗಿದ್ದು, ಅಷ್ಟೇನೂ ಹೊಸ ಯೋಜನೆಗಳು ಘೋಷಣೆಯಾಗದಿದ್ದರೂ ಹಳೆಯೋಜನೆಗಳ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ.

published on : 4th March 2022

ರಾಜ್ಯ ಬಜೆಟ್ 2022: ದುರ್ಬಲ ವರ್ಗಗಳ ಸಬಲೀಕರಣಕ್ಕೆ 800 ಕೋಟಿ, ಅಬ್ದುಲ್ ಕಲಾಂ, ನಾರಾಯಣ ಗುರು ಹೆಸರಲ್ಲಿ ವಸತಿ ಶಾಲೆ!

ಈ ಬಾರಿ ಬಜೆಟ್ ನಲ್ಲಿ ಎಸ್‌ಸಿ, ಎಸ್‌ಟಿ, ಇತರೇ ವರ್ಗಗಳ ಜನರ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. 

published on : 4th March 2022

ರಾಜ್ಯ ಬಜೆಟ್ 2022: ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ ಧನ ಹೆಚ್ಚಳ, ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಾಣ

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಂಡಿಸಿರುವ 2022-23ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೇಷ್ಮೆ ಬೆಳೆಗಾರರಿಗೆ ಹೆಚ್ಚಿನ ಪ್ರೋತ್ಸಾಹ ಧನವನ್ನು ಪ್ರಕಟಿಸಲಾಗಿದೆ.

published on : 4th March 2022
1 2 3 4 5 > 

ರಾಶಿ ಭವಿಷ್ಯ