• Tag results for By election

ರಾಜ್ಯ ಕಾಂಗ್ರೆಸ್ ನ ಸಿಂಹಾಸನ ಖಾಲಿ: ಯಾರಾಗುತ್ತಾರೆ ಮುಂದಿನ ಸಾರಥಿ? 

ಉಪ ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ನಾಯಕ ಸ್ಥಾನಕ್ಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬಳಿಕ ರಾಜ್ಯದ ಕಾಂಗ್ರೆಸ್ ನ ಚುಕ್ಕಾಣಿ ಯಾರು ಹಿಡಿಯುತ್ತಾರೆ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲಿಯೂ ಬಂದಿದೆ.

published on : 11th December 2019

ಉಪ ಸಮರದಲ್ಲಿ ಅನರ್ಹರಿಗೆ ಗೆಲುವು; 'ಭಾರತ ಸ್ವರ್ಗ' ಎಂದ ಚಿದಂಬರಂ ಹೇಳಿದ್ದೇನು?

ಅನರ್ಹ ಶಾಸಕರು ಮತ್ತು ಹಾಲಿ ಬಿಜೆಪಿ ಸರ್ಕಾರದ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಕರ್ನಾಟಕ ಉಪ ಚುನಾವಣಾ ಫಲಿತಾಂಶ ರಾಜ್ಯದಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಗ್ರಾಸವಾಗಿದೆ.

published on : 10th December 2019

ನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ: ಸಿಎಂಗೆ ಎಂ.ಟಿ.ಬಿ.ನಾಗರಾಜ್ ದೂರು 

ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಎರಡು ದಿನ ಬಾಕಿ ಇರುವ ಬೆನ್ನಲ್ಲೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಶನಿವಾರ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

published on : 7th December 2019

ಉಪ ಚುನಾವಣೆ ಮತದಾನ ಬೆನ್ನಲ್ಲೇ ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯಲಿರುವ ಎಚ್ ಡಿ ಕುಮಾರ ಸ್ವಾಮಿ

ಉಪಚುನಾವಣೆ ಪ್ರಚಾರದ ವೇಳೆ ಮಾಜಿ‌ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತೀವ್ರ ಬಳಲಿದ್ದು ವೈದ್ಯರ ಸೂಚನೆ ಮೇರೆಗೆ ಅವರು 10 ದಿನಗಳ ವಿಶ್ರಾಂತಿ ಪಡೆಯಲಿದ್ದಾರೆ.

published on : 5th December 2019

'ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿಗಾರನ ಮೇಲೆ ಪೊಲೀಸ್ ದಬ್ಬಾಳಿಕೆ!

ಕರ್ನಾಟಕ ಉಪಚುನಾವಣೆ ಮತದಾನ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಕೆಆರ್ ಪುರದಲ್ಲಿ ಅಮಾಯಕರ ಮೇಲೆ ಪೊಲೀಸರ ದಬ್ಬಾಳಿಕೆಯ ಕುರಿತು ವರದಿಯಾಗಿದೆ.

published on : 5th December 2019

ಬಿಜೆಪಿ ಪ್ರಯೋಜಿತ ದಾಳಿ: ಐಟಿ ದಾಳಿ ಕುರಿತು ಕೋಳಿವಾಡ ಆಕ್ರೋಶ

ತಮ್ಮ ಮನೆ ಮೇಲೆ ಆಗಿರುವ ಐಟಿ ದಾಳಿ ಕುರಿತು ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಬಿ ಕೋಳಿವಾಡ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಪ್ರಾಯೋಜಿತ ದಾಳಿ ಎಂದು ಕಿಡಿಕಾರಿದ್ದಾರೆ.

published on : 4th December 2019

ಕೈಗೆ ಮತ್ತೆ ಐಟಿ ಬಿಸಿ; ಕೆಬಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ, ಪರಿಶೀಲನೆ ಬಳಿಕ ಅಧಿಕಾರಿಗಳು ವಾಪಸ್

ಉಪ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆದಾಯ ತೆರಿಗೆ ಅಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದು, ಕೆಬಿ ಕೋಳಿವಾಡ ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

published on : 4th December 2019

ಕೆಆರ್ ಪೇಟೆಯಲ್ಲಿ ಮುಂಬೈನ ಕಾಮಾಟಿಪುರ: ವಿವಾದದ ಕಿಡಿ ಹೊತ್ತಿಸಿದ ಡಿಸಿ ತಮ್ಮಣ್ಣ ಹೇಳಿಕೆ!

ಉಪ ಚುನಾವಣೆ ರಣಕಣ ದಿನಕಳೆದಂತೆ ರಂಗೇರುತ್ತಿದ್ದು, ಜಿದ್ದಿಗೆ ಬಿದ್ದವರಂತೆ ಮೂರೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿಯಲ್ಲಿ ಮುಳುಗಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಡಿಸಿ ತಮಣ್ಣ..

published on : 29th November 2019

ನನ್ನ ಬಳಿ ಸಾಲ ತೆಗೆದುಕೊಳ್ಳುವಾಗ ಚೆನ್ನಾಗಿತ್ತು, ಈಗ ಟಗರು ಪೊಗರು ತೋರಿಸುತ್ತಿದೆ: ಎಂಟಿಬಿ

ಕಾಂಗ್ರೆಸ್ ನ ಕೆಲ ಹಿರಿಯ ನಾಯಕರೇ ನನ್ನ ಬಳಿ ಸಾಲ ತೆಗೆದುಕೊಂಡಿದ್ದರು ಎಂದು ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

published on : 20th November 2019

ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ: ಸಚಿವ ಶ್ರೀರಾಮುಲು

ಉಪಚುನಾವಣೆ ಬಳಿಕ ಬಿಎಸ್ ಯಡಿಯೂರಪ್ಪನವರ ಸರ್ಕಾರ ಇರುವುದಿಲ್ಲ ಎಂದು ವಿಪಕ್ಷದ ನಾಯಕರು ಭವಿಷ್ಯ ನುಡಿಯುತ್ತಿದ್ದು ಇದರ ಮಧ್ಯೆ ಸಚಿವ ಶ್ರೀರಾಮುಲು ಭವಿಷ್ಯದಲ್ಲಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

published on : 20th November 2019

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಬಚ್ಚೇಗೌಡ ಉಚ್ಛಾಟನೆ: ಬಿಎಸ್ ಯಡಿಯೂರಪ್ಪ ಗರಂ

ಬಿಜೆಪಿ ವಿರುದ್ಧ ಬಂಡಾಯ ಎದ್ದು ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿರುವ ಶರತ್ ಬಚ್ಚೇಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

published on : 17th November 2019

15 ಕ್ಷೇತ್ರಗಳ ಉ.ಚುನಾವಣೆಗೆ ಸಜ್ಜಾಗಿರುವ ಪಕ್ಷಗಳು: ರಾಜಕೀಯ ನಾಯಕರಿಂದ ಬಿರುಸಿನ ಪ್ರಚಾರ 

ಡಿಸೆಂಬರ್ 5ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿದ್ದು ಬಿರುಸಿನ ಪ್ರಚಾರ ಕಾರ್ಯದಲ್ಲಿ ನಿರತವಾಗಿವೆ. 

published on : 17th November 2019

ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಪರ,ವಿರೋಧ ಪ್ರಚಾರ ಮಾಡಲ್ಲ, ತಟಸ್ಥರಾಗಿರುತ್ತೇನೆ : ಜಿ.ಟಿ.ದೇವೇಗೌಡ

ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನು ಯಾರ ಪರವೂ ಇಲ್ಲ, ಯಾರ ವಿರುದ್ಧವೂ ಇಲ್ಲ, ಯಾರ ಪರವೂ ಪ್ರಚಾರಕ್ಕೆ ಹೋಗುವುದಿಲ್ಲ. ನನ್ನ ಮಗ ನಿಂತರೂ ಉಪಚುನಾವಣೆಯಲ್ಲಿ ಪ್ರಚಾರ ಮಾಡಲ್ಲ. ಅವನು ಚುನಾವಣೆಗೆ ನಿಲ್ಲಲು ಸ್ವತಂತ್ರನು ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

published on : 17th November 2019

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶರತ್ ಬಚ್ಚೇಗೌಡ, ಎಂಟಿಬಿಗೆ ಢವಢವ!

ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಶರತ್ ಬಚ್ಚೇಗೌಡ ಸ್ವಾಭಿಮಾನಿ ಅಭಿಯಾನದ ಮೂಲಕ ಭರ್ಜರಿ ರೋಡ್ ಶೋ ಬಳಿಕ ಪಕ್ಷೇತ್ತರನಾಗಿ ನಾಮಪತ್ರ ಸಲ್ಲಿಸಿದ್ದಾರೆ.

published on : 14th November 2019

ಉ.ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಸವಲತ್ತು ಸಿಂಹಪಾಲು: ಬಿಜೆಪಿಯದ್ದು ಚುನಾವಣಾ ರಾಜಕೀಯ ಎನ್ನುತ್ತಿದೆ ಕಾಂಗ್ರೆಸ್ 

ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಮೇಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೆಚ್ಚು ಒಲವನ್ನು ತೋರಿಸುತ್ತಿದ್ದಾರೆ. 

published on : 9th November 2019
1 2 3 >