• Tag results for CBI

ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಬೆಂಗಳೂರು, ದೆಹಲಿ ಕಚೇರಿ ಮೇಲೆ ಸಿಬಿಐ ದಾಳಿ

ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ಅಮ್ನೆಸ್ಟಿ ಇಂಟರ್‌ನ್ಯಾಷನಲ್‌ ಸೇರಿದ ಬೆಂಗಳೂರು ಹಾಗೂ ದೆಹಲಿ ಕಚೇರಿಗಳ ಮೇಲೆ ಶುಕ್ರವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

published on : 15th November 2019

ಐಎಂಎ ಪ್ರಕರಣ: ಜಿಲ್ಲಾಧಿಕಾರಿ ವಿಜಯ ಶಂಕರ್ ಸೇರಿ ಮೂವರ ವಿರುದ್ಧ ಸಿಬಿಐ ನಿಂದ ಎಫ್.ಐ.ಆರ್

ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಹೊತ್ತಿರುವ ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

published on : 10th November 2019

ಐಎಂಎ ಹಗರಣ: ಮತ್ತೊಂದು ಪ್ರಕರಣ ದಾಖಲಿಸಿದ ಸಿಬಿಐ

ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಮೀರತ್‌ನಲ್ಲಿ ನಿನ್ನೆ ಸಿಬಿಐ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

published on : 10th November 2019

ಐಎಂಎ ಹಗರಣ: ನಿಂಬಾಳ್ಕರ್ ನಿವಾಸ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ

ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ)  ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ನಿವಾಸಗಳು ಸೇರಿದಂತೆ 15 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

published on : 8th November 2019

ಡೆಲ್ ಉದ್ಯೋಗಿ ಪಾಯಲ್ ಕೊಲೆ ಪ್ರಕರಣ: ಜೇಮ್ಸ್ ಅಪರಾಧಿ-ಸಿಬಿಐ ಕೋರ್ಟ್ ತೀರ್ಪು

 ಸಿಲಿಕಾನ್ ಸಿಟಿಯನ್ನು ಬೆಚ್ಚಿ ಬೀಳಿಸಿದ್ದ ಡೆಲ್ ಬಿಪಿಒ ಉದ್ಯೋಗಿ ಪಾಯಲ್ ಸುರೇಖಾ ಹತ್ಯೆ ಪ್ರಕರಣದಲ್ಲಿ ಆಕೆಯ ಪತಿಯ ಸ್ನೇಹಿತ ಜೇಮ್ಸ್ ಕುಮಾರ್ ರಾಯ್ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಣೆ ಮಾಡಿದೆ. ಅಪರಾಧಿಗೆ ಶಿಕ್ಷೆ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ಹೇಳೀದೆ.

published on : 6th November 2019

ಬೆಂಗಳೂರಿನ ಒಪ್ಟೋ ಕಂಪನಿಯಿಂದ ಎಸ್ ಬಿಐ ಬ್ಯಾಂಕ್ ಗೆ 354 ಕೋಟಿ ರೂ. ವಂಚನೆ

ಒಪ್ಟೋ ಸರ್ಕ್ಯೂಟ್ಸ್ ಇಂಡಿಯಾ ಲಿಮಿಟೆಡ್ ಎಂಬ ಕಂಪನಿಯೊಂದು ನಗರದ ಎಸ್ ಬಿ ಐ ಬ್ಯಾಂಕ್ ನಿಂದ 354 ಕೋಟಿ ರೂ. ಸಾಲ ಪಡೆದು ಮರುಪಾವತಿಸದೇ ವಂಚಿಸಿದೆ ಎಂದು ಸಿಬಿಐ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

published on : 6th November 2019

ನಿವೃತ್ತಿ ಸೌಲಭ್ಯಕ್ಕಾಗಿ ಅಲೆದಾಡುತ್ತಿದ್ದಾರೆ ಸರ್ಕಾರಕ್ಕೆ ಸವಾಲಾಗಿದ್ದ ದಿಟ್ಟ ಅಧಿಕಾರಿ ಅಲೋಕ್ ವರ್ಮಾ!

ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಅಧಿಕಾರಿಗಳೂ ಕೂಡ ಅಲೆದಾಡುವಂತಹ ಪರಿಸ್ಥಿತಿ ಎದುರಾಗಿದೆ. ದೇಶದಲ್ಲಿಯೇ ಅತ್ಯಂತ ಕಠಿಣ ಪೊಲೀಸ್ ಅಧಿಕಾರಿ, ಸಿಬಿಐನಲ್ಲಿ ದಿಟ್ಟ ನಿರ್ದೇಶಕರಾಗಿದ್ದ ಅಲೋಕ್ ವರ್ಮಾ ಅವರು ನಿವತ್ತಿ ಸೌಲಭ್ಯಕ್ಕಾಗಿ ಅಲೆದಾಡುತ್ತಿದ್ದಾರೆಂದು ವರದಿಗಳು ತಿಳಿಸಿವೆ.

published on : 26th October 2019

ಐಎನ್ಎಕ್ಸ್ ಮೀಡಿಯಾ ಕೇಸ್: ಪಿ ಚಿದಂಬರಂ ಜಾಮೀನು ಅರ್ಜಿ ವಿರುದ್ಧ ಸಿಬಿಐ ಪರಾಮರ್ಶೆ ಅರ್ಜಿ 

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಕೇಸಿನಲ್ಲಿ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಅವರಿಗೆ ಜಾಮೀನು ನೀಡುವ ಕುರಿತು ತಾನು ನೀಡಿರುವ ಆದೇಶವನ್ನು ಪರಾಮರ್ಶೆ ನಡೆಸುವಂತೆ ಸಿಬಿಐ ಸುಪ್ರೀಂ ಕೋರ್ಟ್ ನ ಮೊರೆ ಹೋಗಿದೆ.

published on : 26th October 2019

ಐಎಂಎ ಹಗರಣ: 2 ಮೌಲ್ವಿಗಳ ವಿರುದ್ಧ ಸಿಬಿಐ 2ನೇ ಚಾರ್ಜ್'ಶೀಟ್

ಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡನೇ ಆರೋಪಪಟ್ಟಿ ಸಲ್ಲಿಸಿದೆ. 

published on : 18th October 2019

ಯಾವ ಪೆನ್ ಡ್ರೈವ್, ಅದರ ಬಗ್ಗೆ ನನಗೇನು ಗೊತ್ತಿಲ್ಲ: ಅಲೋಕ್ ಕುಮಾರ್ 

 ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಹಗರಣದ ಪೆನ್ ಡ್ರೈವ್ ಎಲ್ಲಿದೆ ಎಂಬದು ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

published on : 10th October 2019

ಅ.17ರವರೆಗೂ ಚಿದಂಬರಂಗೆ ಜೈಲೇ ಗತಿ

ಐಎನ್ ಎಕ್ಸ್  ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಕ್ಟೋಬರ್ 17ವರೆಗೂ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ನ್ಯಾಯಾಲಯ ವಿಸ್ತರಿಸಿದೆ. 

published on : 3rd October 2019

ಡಿಕೆಶಿ ವಿಚಾರಣೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 2nd October 2019

ರಾಜ್ಯದ 7 ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ: ಸಿಬಿಐ  

ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳಷ್ಟೇ ಅಲ್ಲದೆ, ರಾಜ್ಯ 7 ಪ್ರಮುಖ ಸ್ವಾಮೀಜಿಗಳ ಟೆಲಿಫೋನ್ ಗಳನ್ನೂ ಕದ್ದಾಲಿಕೆ ಮಾಡಲಾಗಿದೆ ಎಂದು ಕೇಂದ್ರೀಯ ತನಿಖೆ ಸಂಸ್ಥೆ ಸೋಮವಾರ ಹೇಳಿದೆ. 

published on : 1st October 2019

ನಕಲಿ ಎನ್ ಕೌಂಟರ್ ನಡೆದಿದೆ ಎಂದು ಆರೋಪಿಸಿ ಸಿಬಿಐ ಎಸ್ಪಿ ಪ್ರಧಾನಿಗೆ ಪತ್ರ, ಸಾಕ್ಷಿಗಳಿಲ್ಲ ಎಂದ ಸಿಬಿಐ 

ಸಿಬಿಐಯ ಉಪ ಪೊಲೀಸ್ ವರಿಷ್ಠಾಧಿಕಾರಿ ಆರೋಪಕ್ಕೆ ಸಂಬಂಧಪಟ್ಟಂತೆ ನಡೆದ ತನಿಖೆ ವೇಳೆ ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿ ನಕಲಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದ ಬಗ್ಗೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಸಿಬಿಐ ಹೇಳಿದೆ.

published on : 28th September 2019

ಚಿದಂಬರಂ-ಇಂದ್ರಾಣಿ ಭೇಟಿ ಸತ್ಯ, ಆದರೆ ಸಾಕ್ಷ್ಯ ನಾಶಪಡಿಸಲಾಗಿದೆ: ಸಿಬಿಐ

ಅಕ್ರಮ ಹಣ ವರ್ಗಾವಣೆ ಮತ್ತು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಇಂದ್ರಾಣಿ ಮುಖರ್ಜಿ ಅವರನ್ನು ಭೇಟಿಯಾಗಿದ್ದು ನಿಜ. ಆದರೆ ಈ ಕುರಿತ ದಾಖಲೆಗಳನ್ನು ನಾಶ ಪಡಿಸಲಾಗಿದೆ ಎಂದು ಹೇಳಿದ್ದಾರೆ.

published on : 28th September 2019
1 2 3 4 5 6 >