• Tag results for CBSE

ವಿದ್ಯಾರ್ಥಿಗಳ 10, 11 ಮತ್ತು 12ನೇ ತರಗತಿ ಸಾಧನೆ ಆಧರಿಸಿ 12ನೇ ತರಗತಿ ಫಲಿತಾಂಶ ಪ್ರಕಟ: 'ಸುಪ್ರೀಂ'ಗೆ ಸಿಬಿಎಸ್ ಇ ವರದಿ ಸಲ್ಲಿಕೆ

12ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ ನೀಡಲಾಗುತ್ತದೆ, ವಿದ್ಯಾರ್ಥಿಗಳ ಮೌಲ್ಯಮಾಪನ ಮಾನದಂಡ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ಸಮಿತಿ ಅಂತಿಮಗೊಳಿಸಿದ ವರದಿಯನ್ನು ಸುಪ್ರೀಂ ಕೋರ್ಟ್ ಮುಂದೆ ಮಂಡಿಸಿದೆ.

published on : 17th June 2021

"ಸಾಧ್ಯವಾದಷ್ಟು ತ್ವರಿತವಾಗಿ ಫಲಿತಾಂಶ ನೀಡುತ್ತೇವೆ": ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ

ಸಿಬಿಎಸ್ಇ 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ರದ್ದಾಗಿದ್ದು ಫಲಿತಾಂಶವನ್ನು ಸಾಧ್ಯವಾದಷ್ಟೂ ತ್ವರಿತವಾಗಿ ನೀಡುವುದಾಗಿ ಎಂದು ಸಿಬಿಎಸ್ಇ ಕಾರ್ಯದರ್ಶಿ ಅನುರಾಗ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ. 

published on : 3rd June 2021

'ಪರೀಕ್ಷೆ ಸಂಬಂಧ ಯಾವುದೇ ಸಭೆಯಲ್ಲಿ ಪಾಲ್ಗೊಂಡಿಲ್ಲ'; ನಕಲಿ ಸುದ್ದಿ ಕುರಿತು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಸ್ಪಷ್ಟನೆ

ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ.

published on : 3rd June 2021

12ನೇ ತರಗತಿ ಪರೀಕ್ಷೆ ರದ್ದು ಮಾಡಿದ್ದು ಸಂತೋಷ; ಅಂಕಗಳ ಮೌಲ್ಯಮಾಪನಕ್ಕೆ ವಸ್ತುನಿಷ್ಠ ಮಾನದಂಡ ಸಿದ್ದಪಡಿಸಿ: ಸುಪ್ರೀಂ ಕೋರ್ಟ್

ಕೋವಿಡ್ ಎರಡನೇ ಅಲೆಯ ಸಾವು-ನೋವು ಸಂಕಷ್ಟದ ನಡುವೆ 12ನೇ ತರಗತಿ ಪರೀಕ್ಷೆಯನ್ನು ರದ್ದುಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಸುಪ್ರೀಂ ಕೋರ್ಟ್, ಇನ್ನೆರಡು ವಾರಗಳಲ್ಲಿ ವಿದ್ಯಾರ್ಥಿಗಳ ಅಂಕಗಳ ಮೌಲ್ಯಮಾಪನಕ್ಕಾಗಿ ವಸ್ತುನಿಷ್ಠ ಮಾನದಂಡಗಳನ್ನು ನೀಡಲು ಸಿಬಿಎಸ್‌ಇ ಮತ್ತು ಸಿಐಸಿಎಸ್‌ಇಗೆ ನಿರ್ದೇಶನ ನೀಡಿದೆ.

published on : 3rd June 2021

'ನೇಹಾ'ಳನ್ನು ಸೀರೆಯಲ್ಲಿ ನೋಡ್ಬೇಕು, ಫೇರ್ ವೆಲ್ ಗೆ ಅನುಮತಿ ಕೊಡಿ: ಪ್ರಧಾನಿಗೆ 12 ನೇ ತರಗತಿ ವಿದ್ಯಾರ್ಥಿಯ ಬೇಡಿಕೆ ವೈರಲ್!

ದೇಶದಲ್ಲಿ ಕೊರೋನಾ ಎರಡನೇ ಅಲೆಯ ಕಾರಣದಿಂದ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಈ ವಿಷಯ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದರು. ಇದಕ್ಕೆ ವಿದ್ಯಾರ್ಥಿಯೊಬ್ಬ ನೀಡಿದ ಪ್ರತಿಕ್ರಿಯೆ ಇದೀಗ ವೈರಲ್ ಆಗಿದೆ.

published on : 2nd June 2021

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು; ಕಾದು ನೋಡುವ ಸಚಿವ ಸುರೇಶ್ ಕುಮಾರ್ ನಿರ್ಧಾರಕ್ಕೆ ಪೋಷಕರ ಕಿಡಿ

ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ರಾಜ್ಯ ಸರ್ಕಾರ ಮಾತ್ರ ಪರೀಕ್ಷೆಗಳನ್ನು ರದ್ದು ಮಾಡದೆ ಕಾದು ನೋಡುವ ನಿರ್ಧಾರಕ್ಕೆ ಬಂದಿರುವುದು ಪೋಷಕರು, ವಿದ್ಯಾರ್ಥಿಗಳ ವಿರೋಧಕ್ಕೆ ದಾರಿ ಮಾಡಿಕೊಟ್ಟಿದೆ. 

published on : 2nd June 2021

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು ಹಿನ್ನೆಲೆ: ಪರಿಸ್ಥಿತಿ ಅವಲೋಕಿಸಿ ನಿರ್ಧಾರ- ಸುರೇಶ್ ಕುಮಾರ್

ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಈ ಕುರಿತಂತೆ ರಾಜ್ಯದ ಪರಿಸ್ಥಿತಿ ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

published on : 1st June 2021

2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ರದ್ದು; ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ: ಪ್ರಧಾನಿ ಮೋದಿ

ಮಹಾಮಾರಿ ಕೊರೋನಾ ಎರಡನೇ ಅಲೆ ದೇಶದಲ್ಲಿ ಆತಂಕ ಸೃಷ್ಟಿಸುತ್ತಿದ್ದು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ 2021ನೇ ಸಾಲಿನ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. 

published on : 1st June 2021

12ನೇ ತರಗತಿ ಸಿಬಿಎಸ್ ಇ ಪರೀಕ್ಷೆ ಕುರಿತು 2 ದಿನಗಳಲ್ಲಿ ಕೇಂದ್ರದ ತೀರ್ಮಾನ: ಸುಪ್ರೀಂ ಕೋರ್ಟ್ ಗೆ ಅಟರ್ನಿ ಜನರಲ್ ಹೇಳಿಕೆ

ಕೋವಿಡ್-19 ಸಾಂಕ್ರಾಮಿಕ ಮಧ್ಯೆ 12ನೇ ತರಗತಿ ಪರೀಕ್ಷೆ ನಡೆಸಬೇಕೆ, ಬೇಡವೇ ಎಂದು ಇನ್ನೆರಡು ದಿನಗಳೊಳಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.

published on : 31st May 2021

ಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಕೇಂದ್ರಕ್ಕೆ 30 ರಾಜ್ಯಗಳ ಸಲಹೆ

ಎಲ್ಲಾ ವಿಷಯಗಳಿಗೆ  ಸರಳೀಕೃತ ಮಾದರಿಯಲ್ಲಿ ಸಿಬಿಎಸ್ಇ ದ್ವಿತೀಯ ಪಿಯುಸಿ ಪರೀಕ್ಷೆಗೆ ಆದ್ಯತೆ ನೀಡಿ ಸುಮಾರು 30 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಕೇಂದ್ರ ಶಿಕ್ಷಣ ಸಚಿವಾಲಯಕ್ಕೆ ತಿಳಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

published on : 28th May 2021

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ರದ್ದು ಕೋರಿ ಅರ್ಜಿ: ಮೇ 31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ 

ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ಕೋವಿಡ್ ಎರಡನೇ ಅಲೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

published on : 28th May 2021

ಕೋವಿಡ್-19: ಸಿಬಿಎಸ್‌ಇ 10 ನೇ ತರಗತಿ ಅಂಕಗಳ ನಿಗದಿಗೆ ಜೂನ್ 30 ರವರೆಗೆ ಶಾಲೆಗಳಿಗೆ ಗಡುವು ವಿಸ್ತರಣೆ!

10ನೇ ತರಗತಿ ಅಂಕಗಳನ್ನು ನಿಗದಿಪಡಿಸಿ ಬೋರ್ಡ್ ಗೆ ಸಲ್ಲಿಸಲು ಜೂನ್ 30ರವರೆಗೂ ಶಾಲೆಗಳಿಗೆ ಗಡುವನ್ನು ಸಿಬಿಎಸ್ ಇ ಮಂಗಳವಾರ ವಿಸ್ತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

published on : 18th May 2021

12ನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ 12ನೇ ತರಗತಿಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಲಾಗಿದೆ.

published on : 14th May 2021

12ನೇ ತರಗತಿ ಬೋರ್ಡ್ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಸಿಬಿಎಸ್‌ಇ

ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೆಲವು ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ 12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ಬಗ್ಗೆ ಇನ್ನೂ ಯಾವುದೇ...

published on : 14th May 2021

ಜೂನ್ 20ರ ವೇಳೆಗೆ 10ನೇ ತರಗತಿ ಫಲಿತಾಂಶ ಪ್ರಕಟ: ಇಂಟರ್ನಲ್ಸ್ ಆಧಾರದ ಮೇಲೆ ವಿದ್ಯಾರ್ಥಿಗಳ ಮೌಲ್ಯಮಾಪನ 

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಿಬಿಎಸ್ ಇ, ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲು ನೀತಿಯೊಂದನ್ನು ಅನುಸರಿಸುವುದಾಗಿ ಹೇಳಿದೆ.

published on : 2nd May 2021
1 2 >