• Tag results for CM BS Yeddyurappa

ಸಚಿವ ಸ್ಥಾನಕ್ಕೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖ ಇಲ್ಲ: ಎಚ್.ವಿಶ್ವನಾಥ್

ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ಇಲ್ಲ ಎಂದು ಹೇಳುತ್ತಿರುವವರು ಯಾರೂ ಕೋರ್ಟ್ ತೀರ್ಪು ಓದಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಓದಿರುತ್ತಿದ್ದರೆ ಅವರಿಗೆ ಗೊತ್ತಾಗಿರುತ್ತಿತ್ತು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

published on : 7th January 2020

ಜನವರಿ 3ರಂದು ಸಚಿವ ಸಂಪುಟ ವಿಸ್ತರಣೆಗೆ ಚಿಂತನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಒಂದಾದ ನಂತರ ಒಂದು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ರೈತನ ಒಳಿತಿಗೆ ಹಾಗೂ ಅವರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 18th December 2019

ಹೆದ್ದಾರಿ ಸಂಚಾರಿ ಗಸ್ತು ವಾಹನಗಳಿಗೆ ಚಾಲನೆ‌; ರಾತ್ರಿ ಗಸ್ತು ಹೆಚ್ಚಳಕ್ಕೆ ಮುಖ್ಯಮಂತ್ರಿ ಸೂಚನೆ

ರಾಜ್ಯದಲ್ಲಿ ಸುರಕ್ಷತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಗೃಹ ಇಲಾಖೆ  ರಾತ್ರಿ ಹೊತ್ತು ಸಂಚರಿಸುವ ಪೊಲೀಸ್ ಗಸ್ತು ವಾಹನಗಳಿಗೆ ಹೆಚ್ಚು ಮಹತ್ವ ನೀಡಿದ್ದು, 15ಕೋಟಿ ರೂ.ವೆಚ್ಚದಲ್ಲಿ 88 ಹೊಸ ಗಸ್ತು ವಾಹನಗಳನ್ನು ಖರೀದಿಸಿದೆ.

published on : 17th December 2019

ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಈಶ್ವರಪ್ಪ: ಸಿಎಂ ನಡೆಗೆ ಮೆಚ್ಚುಗೆಯ ಮಹಾಪೂರ 

ಅನಾರೋಗ್ಯದ ನಿಮಿತ್ತ ನಗರದ ವೆಗಾಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಿ.12 ರಂದು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

published on : 12th December 2019

ನೆರೆ-ಬರ ಪರಿಹಾರಕ್ಕೆ ಮತ್ತಷ್ಟು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ: ಮುಖ್ಯಮಂತ್ರಿ ಬಿಎಸ್ ವೈ

ರಾಜ್ಯದಲ್ಲಿ ನೆರೆ ಹಾಗೂ ಬರಪರಿಹಾರಕ್ಕೆ ಈಗಾಗಲೇ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದ ಪರಿಹಾರ ದೊರಕಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

published on : 18th October 2019

ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ

ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

published on : 10th October 2019

ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಸಿಎಂ

ವಿಧಾನಸಭೆ ಕಲಾಪಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿ ಟ್ವೀಟ್ ಮಾಡಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೆಲವೇ ಕ್ಷಣಗಳಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ.

published on : 10th October 2019

ಸಿಎಂ ಪರಿಸ್ಥಿತಿ ನೋಡಿ ಅಯ್ಯೋ ಎನಿಸುತ್ತಿದೆ: ತಂತಿ ಮೇಲಿನ ನಡಿಗೆ ಹೇಳಿಕೆ ಕುರಿತು ಶಿವರಾಜ್ ತಂಗಡಗಿ ವ್ಯಂಗ್ಯ

ಅನರ್ಹ ಶಾಸಕರ ಬೆನ್ನಿಗೆ ನಿಂತ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪರಿಸ್ಥಿತಿ ನೋಡಿದರೆ ಅಯ್ಯೋ ಎನಿಸುತ್ತಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವ್ಯಂಗ್ಯ ಮಾಡಿದ್ದಾರೆ.

published on : 1st October 2019

ತಂತಿಯ ಮೇಲಿನ ನಡಿಗೆ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ : ಎಂ.ಪಿ.ರೇಣುಕಾಚಾರ್ಯ

ಸಿಎಂ ಬಿಎಸ್ ವೈ ಅವರ ತಂತಿ ಮೇಲಿನ ನಡಿಗೆ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.

published on : 1st October 2019

ತಂತಿ ಮೇಲೆ ನಡೆಯುತ್ತಿದ್ದೇನೆ: ಸಿಎಂ ಬಿಎಸ್ ಯಡಿಯೂರಪ್ಪ

ಹಾಲಿ ಕರ್ನಾಟಕ ಸರ್ಕಾರದ ಸಂಕಷ್ಟದ ಕುರಿತು ಮಾತನಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ನಾನು ಕತ್ತಿ ಮೇಲೆ ನಡೆಯುತ್ತಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

published on : 30th September 2019

ಪ್ರವಾಹ ಹಿನ್ನೆಲೆ: ಬೆಳಗಾವಿ ವಿಧಾನಮಂಡಲ ಅಧಿವೇಶನಕ್ಕೆ ಸರ್ಕಾರ ಹಿಂದೇಟು

ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹಲವು ಭಾಗಗಳಲ್ಲಿ ತಲೆದೋರಿರುವ ಭಾರೀ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಬಹುದು ಎನ್ನುವ ಕಾರಣಕ್ಕೆ ಈ ಬಾರಿ ಕುಂದಾನಗರಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸದೇ ಇರಲು ರಾಜ್ಯ ಸರ್ಕಾರ ಉದ್ದೇಶಿಸಿದೆ. 

published on : 14th September 2019

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ರೂ.ಲಕ್ಷಕ್ಕೆ ಹೆಚ್ಚಳ: ಸಿಎಂ ಯಡಿಯೂರಪ್ಪ

ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

published on : 11th September 2019

ಎಸ್ಆರ್ ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎಸ್ಆರ್ ವಿಶ್ವನಾಥ್ ಅವರನ್ನು ನೇಮಿಸಲಾಗಿದ್ದು, ಇವರಿಗೆ ಸಂಪುಟ ದರ್ಜೆ ನೀಡಿ ಆದೇಶ ಹೊರಡಿಸಲಾಗಿದೆ.

published on : 30th August 2019

ಕರ್ನಾಟಕ ಹೂಡಿಕೆದಾರರ ಆದ್ಯತೆಯ ತಾಣ: ಬಿ.ಎಸ್. ಯಡಿಯೂರಪ್ಪ

ಕರ್ನಾಟಕ ತನ್ನ ಸಮಗ್ರ ಹಾಗೂ ತಂತ್ರಗಾರಿಕೆಯ ಪ್ರಗತಿ ಯೋಜನೆಗಳ ಮೂಲಕ ಜಾಗತಿಕ ಮಟ್ಟದ ವಿವಿಧ ವಲಯಗಳಿಂದ ಬೃಹತ್ ಪ್ರಮಾಣದ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 30th August 2019

ಪ್ರವಾಹ: ಸಾವಿನ ಸಂಖ್ಯೆ 34ಕ್ಕೆ ಏರಿಕೆ, 10 ಸಾವಿರ ಕೋಟಿ ನಷ್ಟ

ಉತ್ತರ ಕರ್ನಾಟಕ, ಮಲ್ನಾಡು ಹಾಗೂ ಕರವಾಳಿ ಜಿಲ್ಲೆಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹಕ್ಕೆ ಸಾವಿಗೀಡಾದವರ ಸಂಖ್ಯೆ 34ಕ್ಕೇ ಏರಿಕೆ ಆಗಿದೆ.

published on : 12th August 2019