- Tag results for Cabinet
![]() | ಕಾವೇರಿ ನೀರು ವಿವಾದ: ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಸಂಪುಟ ನಿರ್ಧಾರ5 ಸಾವಿರ ಕ್ಯೂಸೆಕ್ ನಂತೆ ತಮಿಳುನಾಡಿಗೆ ನಿತ್ಯ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದು, ಪ್ರಸ್ತುತ ಬಿಡುಗಡೆ ಮಾಡುತ್ತಿರುವ ಮಾದರಿಯಲ್ಲೇ ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. |
![]() | ಕಾವೇರಿ ವಿವಾದ: ಇಂದು ಸಂಜೆ ಮಹತ್ವದ ಸಚಿವ ಸಂಪುಟ ಸಭೆ, ಮುಂದಿನ ನಡೆ ಬಗ್ಗೆ ನಿರ್ಧಾರಕಾವೇರಿ ನದಿ ನೀರು ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆಯಾಗಿದ್ದು, ಇದರ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ ನಡೆಯಲಿದೆ. |
![]() | ಐತಿಹಾಸಿಕ! ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ, ಕಾಂಗ್ರೆಸ್ ಸ್ವಾಗತಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ಅಧಿವೇಶನದ ನಂತರ ಸೋಮವಾರ ಸಂಜೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿತು. |
![]() | ಅಸಮಾಧಾನಿತ ಹರಿಪ್ರಸಾದ್ ರಾಜ್ಯ ಪ್ರವಾಸ: ಹೈಕಮಾಂಡ್ ಮಧ್ಯ ಪ್ರವೇಶಿಸದಿದ್ದರೇ ಸಿಎಂಗೆ ಮತ್ತಷ್ಟು ಪ್ರಯಾಸ!ಸಿದ್ದರಾಮಯ್ಯ ಸಂಪುಟದಿಂದ ಹೊರಗುಳಿದ ಹಿನ್ನೆಲೆಯಲ್ಲಿ ಆಸಮಾಧಾನಗೊಂಡಿರುವ ಕಾಂಗ್ರೆಸ್‌ನ ಹಿರಿಯ ಎಂಎಲ್‌ಸಿ ಬಿಕೆ ಹರಿಪ್ರಸಾದ್ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. |
![]() | ದೀದಿ ಸಂಪುಟದಲ್ಲಿ ದೊಡ್ಡ ಬದಲಾವಣೆ: ಬಿಜೆಪಿಯಿಂದ ಬಂದಿದ್ದ ಸುಪ್ರಿಯೋ ಸೇರಿದಂತೆ 6 ಸಚಿವರ ಖಾತೆ ಬದಲಾಯಿಸಿದ ಮಮತಾ!ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಟಿಎಂಸಿಗೆ ಹೋಗಿದ್ದ ಬಾಬುಲ್ ಸುಪ್ರಿಯೊಗೆ ನೀಡಿದ್ದ ಪ್ರವಾಸೋದ್ಯಮ ಇಲಾಖೆ ಬದಲಿಗೆ ಮಾಹಿತಿ ತಂತ್ರಜ್ಞಾನ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ. |
![]() | 62 ಬರಪೀಡಿತ ತಾಲ್ಲೂಕುಗಳ ಘೋಷಣೆ: ಇಂದು ಸಚಿವ ಸಂಪುಟದ ಒಪ್ಪಿಗೆ ಸಾಧ್ಯತೆಕೇಂದ್ರದ ನಿಯಮಾನುಸಾರ 62 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ ಇದೆ. 113 ತಾಲ್ಲೂಕುಗಳ ಪೈಕಿ ಈ ವರ್ಷ ಕಡಿಮೆ ಮಳೆಯಾಗಿರುವ 62 ತಾಲ್ಲೂಕುಗಳನ್ನು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಗುರುತಿಸಲಾಗಿತ್ತು. |
![]() | ಬರಪೀಡಿತ ತಾಲ್ಲೂಕ್ ಘೋಷಣೆ, ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ- ಕೃಷ್ಣ ಬೈರೇಗೌಡಬರ ಪೀಡಿತ ತಾಲ್ಲೂಕ್ ಘೋಷಣೆ ಸಂಬಂಧ ನಾಳೆ ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರದ ಮಾನದಂಡದ ಅನ್ವಯ ಬರಪೀಡಿತ ತಾಲ್ಲೂಕು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. |
![]() | ಬರಗಾಲ ಕುರಿತು ಸಂಪುಟ ಉಪ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ, ಕೇಂದ್ರಕ್ಕೆ ಪರಿಹಾರಕ್ಕೆ ಮನವಿ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿದೆ. ಜೂನ್-ಜುಲೈ ಕೆಲವು ದಿನಗಳವರೆಗೆ ಮಳೆ ಬಂದಿದ್ದು ಬಿಟ್ಟರೆ ಕಳೆದ ಒಂದು ತಿಂಗಳಿನಿಂದ ರಾಜ್ಯದ ಯಾವ ಭಾಗಗಳಲ್ಲಿಯೂ ಉತ್ತಮ ಮಳೆಯಾಗಿಲ್ಲ. ರೈತರು, ಕೃಷಿಕರು ತಲೆ ಮೇಲೆ ಕೈಹೊತ್ತು ಕೂರುವಂತೆ ಮಾಡಿದೆ. |
![]() | ಇಂದಿರಾ ಕ್ಯಾಂಟೀನ್ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ನಲ್ಲಿ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ. |
![]() | ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ: ಕಾಂಗ್ರೆಸ್ ಶಾಸಕಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಎರಡೂವರೆ ವರ್ಷಗಳ ನಂತರ ಪುನಾರಚನೆಯಾಗುವ ಸಾಧ್ಯತೆ ಇದೆ ಎಂದು ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು... |
![]() | ಕೇಂದ್ರದಲ್ಲಿ ಸಚಿವ ಸ್ಥಾನದ ಆಫರ್ ವದಂತಿ ನಡುವೆ ಮೋದಿ ವಿರುದ್ಧ ಶರದ್ ಪವಾರ್ ತೀವ್ರ ವಾಗ್ದಾಳಿ!ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಇತ್ತೀಚಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಜೊತೆಗಿನ ಭೇಟಿಯು ರಾಜಕೀಯ ವಲಯಗಳಲ್ಲಿ ಗೊಂದಲ ಮೂಡಿಸಿರುವಂತೆಯೇ ಅವರು ವಿರೋಧ ಪಕ್ಷದ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಕೈಜೋಡಿಸಿದರೆ ಕೇಂದ್ರ ಸಚಿವ ಸ್ಥಾನವನ್ನು ನೀಡಲಾಗುವುದು ಎಂಬ ಆಫರ್ ತಿರಸ್ಕರಿಸಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. |
![]() | 'ಪಿಎಂ-ಇಬಸ್ ಸೇವೆ': 10,000 ಎಲೆಕ್ಟ್ರಿಕ್ ಬಸ್ ಖರೀದಿಗೆ ಕೇಂದ್ರ ಸಂಪುಟ ಅನುಮೋದನೆಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಸಿಟಿ ಬಸ್‌ಗಳ ಕಾರ್ಯಾಚರಣೆಯನ್ನು ಹೆಚ್ಚಿಸುವ 'ಪಿಎಂ-ಇಬಸ್ ಸೇವೆ' ಯೋಜನೆಗೆ ಅನುಮೋದನೆ ನೀಡಿದೆ. |
![]() | 'ಪಿಎಂ ವಿಶ್ವಕರ್ಮ' ಯೋಜನೆ, 32,500 ಕೋಟಿ ರೂ. ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅಸ್ತು13,000 ಕೋಟಿ ರೂಪಾಯಿ ಮೌಲ್ಯದ "ಪಿಎಂ ವಿಶ್ವಕರ್ಮ" ಯೋಜನೆ ಹಾಗೂ 32,500 ಕೋಟಿ ಮೌಲ್ಯದ ಹೊಸ ರೈಲ್ವೆ ಯೋಜನೆಗಳಿಗೆ ಆರ್ಥಿಕ ವ್ಯವಹಾರಗಳ ಕೇಂದ್ರ ಸಂಪುಟ ಸಮಿತಿ ಮಂಗಳವಾರ ಅನುಮೋದನೆ ನೀಡಿದೆ. |
![]() | ಕೇಂದ್ರ ಸಚಿವ ಸ್ಥಾನದ ಆಫರ್ ಬಗ್ಗೆ ಸುಪ್ರಿಯಾ ಸುಳೆ ಹೇಳಿದ್ದೇನು ಅಂದರೆ...ಎನ್ ಸಿಪಿ ನಾಯಕ ಶರದ್ ಪವಾರ್ ಅಥವಾ ಅವರ ಪುತ್ರಿ ಸುಪ್ರಿಯಾ ಸುಲೆಗೆ ಕೇಂದ್ರ ಸಚಿವ ಸ್ಥಾನದ ಆಫರ್ ನೀಡಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಎನ್ ಸಿಪಿ ನಾಯಕಿ ಸುಪ್ರಿಯಾ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಸಂಪುಟದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಹಿರಿಯ ಸಚಿವರಿಗೆ ಮುನಿಯಪ್ಪ ಸಲಹೆ!ಎರಡೂವರೆ ವರ್ಷಗಳ ಅಧಿಕಾರಾವಧಿಯ ನಂತರ ಹೊಸಬರಿಗೆ ಅವಕಾಶ ಮಾಡಿಕೊಡುವಂತೆ ಸಿದ್ದರಾಮಯ್ಯ ಸಂಪುಟದ ಹಿರಿಯ ಸಚಿವರಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಸಲಹೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. |