• Tag results for Cabinet Expansion

ಪಂಚರಾಜ್ಯ ಚುನಾವಣೆಯಲ್ಲಿ ವರಿಷ್ಠರು ಕಾರ್ಯಮಗ್ನ; ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸದ್ಯಕ್ಕೆ ಡೌಟ್!

ಬಿಜೆಪಿ ರಾಷ್ಟ್ರೀಯ ನಾಯಕತ್ವವು ಉತ್ತರ ಭಾರತದ ಐದು ರಾಜ್ಯಗಳಿಗೆ ಅದರಲ್ಲೂ ನಿರ್ಣಾಯಕವಾಗಿರುವ ಉತ್ತರ ಪ್ರದೇಶಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಲು ಕಾರ್ಯನಿರತವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗುವ ಸಾಧ್ಯತೆ ಕಡಿಮೆಯಿದೆ ಎಂದು ಹೇಳಲಾಗುತ್ತಿದೆ.

published on : 25th January 2022

ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ, ನಮಗೆ ಯೋಗ್ಯತೆ ಇಲ್ವ: ಶಾಸಕ ರೇಣುಕಾಚಾರ್ಯ ಬಹಿರಂಗ ಅಸಮಾಧಾನ

ಬಿಜೆಪಿ ಪಾಳಯದಲ್ಲಿ ಮತ್ತೆ ಸಂಪುಟ ವಿಸ್ತರಣೆ, ಪುನರ್ರಚನೆ ಮಾತುಗಳು, ಬಹಿರಂಗ ಹೇಳಿಕೆಗಳು, ಸಮಾನ ಮನಸ್ಕರ ಸಭೆಗಳು, ಅಸಮಾಧಾನಗಳು ಜೋರಾಗಿವೆ. ಸಿಎಂ ಕಾರ್ಯದರ್ಶಿ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಬಹಿರಂಗವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.ತಾವು ಪ್ರಬಲ ಸಚಿವಾಕಾಂಕ್ಷಿ ಎಂಬುದನ್ನು ಹೇಳಿಕೊಂಡಿದ್ದಾರೆ.

published on : 24th January 2022

ಸರ್ಕಾರಕ್ಕೆ ಸಂಪುಟ ವಿಸ್ತರಣೆಯ ಅಗತ್ಯವಿದೆ: ಕೆ ಎಸ್ ಈಶ್ವರಪ್ಪ

ಸರ್ಕಾರಕ್ಕೆ ಸಚಿವ ಸಂಪುಟ ವಿಸ್ತರಣೆ ಈಗ ಅನಿವಾರ್ಯವಾಗಿದ್ದು ನಾಲ್ಕು ಸಚಿವ ಸ್ಥಾನ ಖಾಲಿಯಿದೆ. ಸದ್ಯ ಸಚಿವ ಸ್ಥಾನಕ್ಕೆ ಸಾಕಷ್ಟು ಪೈಪೋಟಿಯಿದೆ. ನನಗೆ ಯಾವ ಹುದ್ದೆ ಕೊಟ್ಟರೂ ನಿಭಾಯಿಸಲು ಸಿದ್ಧನಿದ್ದೇನೆ ಎಂದು ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

published on : 24th January 2022

ಸಂಪುಟ ವಿಸ್ತರಣೆ ವರಿಷ್ಠರ ತೀರ್ಮಾನ; 6 ತಿಂಗಳ ಸಾಧನೆ ಪುಸ್ತಕ ರೂಪದಲ್ಲಿ ಬಿಡುಗಡೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಕೋವಿಡ್ ಸೋಂಕು ಯಾವ ರೀತಿ ಮುಂದುವರಿಯುತ್ತಿದೆ, ಸ್ಥಿತಿಗತಿಯೇನು ಎಂದು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಮಾಡುತ್ತೇವೆ. ಕೋವಿಡ್ ಸೋಂಕಿನ ಅಧ್ಯಯನ ಮಾಡಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 24th January 2022

ಪಕ್ಷದ ಮುಖಂಡರು ಹೊಸ ಜವಾಬ್ದಾರಿ ಕೊಟ್ಟರೆ ಒಪ್ಪಿಕೊಳ್ಳುವೆ: ಮಹೇಶ್ ಕುಮಟಳ್ಳಿ

ಪಕ್ಷದ ಮುಖಂಡರು ಹೊಸ ಜವಾಬ್ದಾರಿ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದು ಶಾಸಕ ಮಹೇಶ್​ ಕುಮಟಳ್ಳಿ ಹೇಳುವ ಮೂಲಕ ತಾನು ಕೂಡ ಸಚಿವಾಕಾಂಕ್ಷಿ ಎಂಬ ಆಸೆಯನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ.

published on : 18th January 2022

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟ ಸಂದೇಶ

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 7th December 2021

ಅ.8ಕ್ಕೆ ದೆಹಲಿಗೆ ಮುಖ್ಯಮಂತ್ರಿ ಬೊಮ್ಮಾಯಿ: ಸಂಪುಟ ವಿಸ್ತರಣೆ, ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಕುರಿತು ಚರ್ಚೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅ.8ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದು, ಈ ವೇಳೆ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳ ಅಧ್ಯಕ್ಷ ನೇಮಕ ಹಾಗೂ ರಾಜ್ಯದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಕೇಂದ್ರ ಸಚಿವರು, ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ. 

published on : 1st October 2021

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. 

published on : 9th September 2021

ಕಾಡೇ ಇಲ್ಲದ ಜಿಲ್ಲೆಯವರನ್ನು ಅರಣ್ಯ ಸಚಿವರಾಗಿ ಮಾಡಿದರೆ ಏನು ಲಾಭ?: ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ 

ಸಚಿವ ಸ್ಥಾನ ವಂಚಿತ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಮತ್ತೆ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರ ಹಾಕಿರುವುದು ಕೊಡಗು ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.

published on : 9th August 2021

ಮುಖ್ಯಮಂತ್ರಿಗೆ ಸಾಲು ಸಾಲು ಸಂಕಟ; ಬೊಮ್ಮಾಯಿಗೆ ತಲೆನೋವಾಯ್ತು ಸಂಪುಟ; ಅಸಮಾಧಾನಿತ ಶಾಸಕರು ಆಡಿದ್ದೇ ಆಟ!

ಸಂಪುಟ ವಿಸ್ತರಣೆ ಬೆನ್ನಲ್ಲಿ ಪ್ರಮುಖ ಖಾತೆಗಳಿಗಾಗಿ  ಹಲವು ಸಚಿವರ ಅಸಮಾಧಾನ ಭುಗಿಲೆದ್ದ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

published on : 9th August 2021

ಬೆಳಗಾವಿ ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಿತ್ತು: ಸತೀಶ್ ಜಾರಕಿಹೊಳಿ

ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿಯವರು ಅಭಿಪ್ರಾಯಪಟ್ಟಿದ್ದಾರೆ.

published on : 6th August 2021

ಕಾಮಿಡಿ 'ಕಟೀಲ್' ಗೆ ಮರ್ಮಾಘಾತ; ಬಡಮಕ್ಕಳ ಮೊಟ್ಟೆ ತಿಂದವರಿಗೆ ಝೀರೋ ಟ್ರಾಫಿಕ್ ಮರ್ಯಾದೆ; 'ಧವಳಗಿರಿ ಸರ್ಕಾರದ' ಅಧಃಪತನ!

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ತಮ್ಮ ಕಣ್ಣೀರಿಗೆ ಕಾರಣರಾದವರ ವಿರುದ್ಧ ತಕ್ಕ ಪ್ರತೀಕಾರ ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

published on : 5th August 2021

ಬೊಮ್ಮಾಯಿ ಸಂಪುಟದಲ್ಲಿ ವಿಜಯೇಂದ್ರಗೆ ಇಲ್ಲ ಸ್ಥಾನ: ಲಕ್ಷ್ಮಣ ಸವದಿ, ಶೆಟ್ಟರ್ ಸೇರಿ 6 ಸಚಿವರಿಗೆ ಕೊಕ್

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆಗೆ ಕೊನೆಗೂ ಮೂಹೂರ್ತ ಫಿಕ್ಸ್ ಆಗಿದ್ದು ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 4th August 2021

ದೆಹಲಿ ಯಾತ್ರೆ ಮುಗಿಸಿ ಬೆಂಗಳೂರಿಗೆ ಬಂದಿಳಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಕಟಿಸಲಿದ್ದಾರೆಯೇ ನೂತನ ಸಚಿವರ ಪಟ್ಟಿ?

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟಕ್ಕೆ ಸೇರ್ಪಡೆಯಾಗುವ ಸಚಿವರ ಪಟ್ಟಿಯನ್ನು ದೆಹಲಿಯಿಂದ ಹೊತ್ತು ತಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಅವರು ಅಲ್ಲಿಂದ ನೇರವಾಗಿ ವಿಧಾನ ಸೌಧಕ್ಕೆ ಆಗಮಿಸುತ್ತಿದ್ದು ಶಕ್ತಿಕೇಂದ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 

published on : 4th August 2021

ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟು: ಪುತ್ರನಿಗೆ ಸ್ಥಾನ ಕಲ್ಪಿಸಲು ಬಿಎಸ್ ವೈ ಬಿಗಿಪಟ್ಟು; ಸಿಎಂ ಬೊಮ್ಮಾಯಿಗೆ ಇಕ್ಕಟ್ಟು!

ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನಿಷ್ಠಾವಂತರನ್ನು ಸಂಪುಟಕ್ಕೆ ಸೇರಿಸುವ ಕುರಿತು ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ಗಂಭೀರ ಚರ್ಚೆಗಳು ನಡೆದಿವೆ.

published on : 4th August 2021
1 2 3 4 5 6 > 

ರಾಶಿ ಭವಿಷ್ಯ