• Tag results for Center

ಕಲಬುರಗಿಯಲ್ಲಿ ರಸ್ತೆ ಅಪಘಾತ: ಆರೋಗ್ಯ ಕೇಂದ್ರದ ಮಹಿಳಾ ಅಧಿಕಾರಿ ಸಾವು

ಕೆಲಸ ಮುಗಿಸಿ ಮರಳುತ್ತಿದ್ದ ವೇಳೆ ಎತ್ತಿನ ಗಾಡಿಗೆ ಸ್ಕೂಟಿ ಡಿಕ್ಕಿಯಾದ ಪರಿಣಾಮ ಆರೋಗ್ಯ ಕೇಂದ್ರದ ಮಹಿಳಾ ಅಧಿಕಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಹೊರವಲಯದಲ್ಲಿ ನಡೆದಿದೆ.

published on : 26th March 2021

ಎನ್ ಸಿ ಆರ್ ವಾಯು ಗುಣಮಟ್ಟ ನಿರ್ವಹಣೆಗಾಗಿ ರಚನೆಯಾದ ಕೇಂದ್ರದ ಆಯೋಗ ಐದು ತಿಂಗಳಲ್ಲಿಯೇ ಸ್ಥಗಿತ!

ರಾಷ್ಟ್ರೀಯ ರಾಜಧಾನಿ ಮತ್ತು ಅದಕ್ಕೆ ಹೊಂದಿಕೊಂಡಂತ ಪ್ರದೇಶಗಳಲ್ಲಿ ವಾಯು ಗುಣಮಟ್ಟ ನಿರ್ವಹಣೆಗಾಗಿ ರಚನೆಯಾದ ಕೇಂದ್ರ ಸರ್ಕಾರದ ಆಯೋಗ ಐದು ತಿಂಗಳಲ್ಲಿಯೇ ಸ್ಥಗಿತಗೊಂಡಿದೆ.

published on : 13th March 2021

ಕಾಶ್ಮೀರದಲ್ಲಿ ರಕ್ತದೋಕುಳಿ ನಿಲ್ಲಿಸಲು ಪಾಕ್ ನೊಂದಿಗೆ ಮಾತುಕತೆ ಆರಂಭಿಸಿ: ಕೇಂದ್ರಕ್ಕೆ ಮುಫ್ತಿ ಒತ್ತಾಯ

 ಕಾಶ್ಮೀರದಲ್ಲಿ ಇತ್ತೀಚಿಗೆ ಉಗ್ರರ ದಾಳಿ ನಡೆದ ನಂತರ, ಕೇಂದ್ರಾಡಳಿತ ಪ್ರದೇಶದಲ್ಲಿ ರಕ್ತದೋಕುಳಿ ನಿಲ್ಲಿಸಲು,  ಶಾಂತಿಯನ್ನು ಖಾತ್ರಿಪಡಿಸಲು ಪಾಕಿಸ್ತಾನದೊಂದಿಗೆ ಮಾತುಕತೆ ಆರಂಭಿಸುವಂತೆ ಕೇಂದ್ರ ಸರ್ಕಾರವನ್ನು ಫೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಒತ್ತಾಯಿಸಿದ್ದಾರೆ.

published on : 21st February 2021

ರೈತರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಪ್ರಚೋದನೆ: ಶಿವಸೇನೆ ಆರೋಪ

ಕೃಷಿ ಕಾನೂನುಗಳ ವಿರುದ್ಧ ನಿರಂತರ ರೈತರ ಆಂದೋಲನವನ್ನು ಅಪಖ್ಯಾತಿಗೊಳಿಸುವ ಸಲುವಾಗಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತರನ್ನು ಹಿಂಸಾಚಾರಕ್ಕೆ ಪ್ರಚೋದಿಸಿದೆ ಎಂದು ಶಿವಸೇನೆ ಗುರುವಾರ ಆರೋಪಿಸಿದೆ. 

published on : 28th January 2021

ಜ.18 ರಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್

ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

published on : 17th January 2021

ರಾಜ್ಯಾದ್ಯಂತ ಮಹಿಳಾ ಕಲ್ಯಾಣ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದು

 ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ತಕ್ಷಣ ಗಮನ ಹರಿಸುವಂತೆ ರಾಜ್ಯ ಸರ್ಕಾರ ಪೊಲೀಸ್, ಕಂದಾಯ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

published on : 12th January 2021

ಪ್ರತಿಭಟನಾನಿರತ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸಲಿ: ರಾಹುಲ್ ಗಾಂಧಿ

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಯನ್ನು ಸರ್ಕಾರ ಆಲಿಸುವಂತೆ  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

published on : 26th December 2020

ಕೊರೋನಾದಿಂದ ಸಮುದಾಯ ಉಳಿಸಿಕೊಳ್ಳಲು ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ ಸ್ಥಾಪನೆ: ಡಾ. ಸುಧಾಕರ್

ಸಮುದಾಯದ ಆರೋಗ್ಯವನ್ನು ಉಳಿಸಿಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುತ್ತಿದ್ದು, ಆರೋಗ್ಯ ಸೇವೆಯಲ್ಲಿ ಇಡೀ ದೇಶದಲ್ಲೇ ಕರ್ನಾಟಕ ಮಾದರಿಯಾಗುವಂತೆ ಹೆಜ್ಜೆ ಇಡುತ್ತಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

published on : 24th December 2020

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ತೀರ್ಮಾನ

ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣಕ್ಕೆ ಈ ಬಾರಿ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. 

published on : 24th December 2020

ಬೆಂಗಳೂರಿನ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಮಾನ್ಯತೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ (ಸ್ವತಂತ್ರ ಪ್ರಭಾರ) ಕಿರಣ್ ರಿಜಿಜು ಅವರು ಇಂದು ಬೆಂಗಳೂರು ವಿದ್ಯಾನಗರದಲ್ಲಿರುವ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರವೆಂದು ಘೋಷಿಸಿದರು.

published on : 22nd December 2020

ಶೀಘ್ರವೇ ತೊಗರಿ ಖರೀದಿ ಕೇಂದ್ರ ತೆರೆಯಿರಿ: ಸರ್ಕಾರಕ್ಕೆ ಅಜಯ್ ಸಿಂಗ್ ಆಗ್ರಹ

ಅಳಿದುಳಿದ ತೊಗರಿ ಬೆಳೆಯಿಂದ ಮಾತ್ರ ರೈತರು ತಮ್ಮ ಜೀವನವನ್ನು ಕಟ್ಟಿಕೊಳ್ಳಬೇಕಿದೆ. ಆದ್ದರಿಂದ ಪ್ರತಿ ಕ್ವಿಂಟಾಲ್‌ಗೆ 1500 ರು. ಪ್ರೋತ್ಸಾಹಧನ ನಿಗದಿ ಮಾಡಬೇಕು. ತಕ್ಷಣ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಅಜಯ್ ಸಿಂಗ್ ಒತ್ತಾಯಿಸಿದರು

published on : 16th December 2020

ರೈತರನ್ನು ಖಲಿಸ್ತಾನಿಗಳು ಎಂದ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಸುಖ್ಬೀರ್ ಸಿಂಗ್ ಬಾದಲ್

ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿ ಎಂದು ಕರೆದ ಎಲ್ಲಾ ಸಚಿವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.

published on : 12th December 2020

ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳನ್ನು ಪ್ರಕಟಿಸಿದ ಕೇಂದ್ರ ಸರ್ಕಾರ!

ಪ್ರಸಕ್ತ ಸಾಲಿನಲ್ಲಿ ದೇಶಾದ್ಯಂತ ಉತ್ತಮ ಸೇವೆ ನೀಡಿದ 10 ಪೊಲೀಸ್ ಠಾಣೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದೆ.  ಮಣಿಪುರದ ಥೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಇಡೀ ದೇಶದಲ್ಲೇ ಉತ್ತಮ ಸೇವೆ ಒದಗಿಸುವ ಪೊಲೀಸ್ ಠಾಣೆ ಎಂಬ ಖ್ಯಾತಿ ಪಡೆದರೆ, ತೆಲಂಗಾಣದ ಜಮ್ಮಿಕುಂಟಾ ಪೊಲೀಸ್ ಠಾಣೆ 10ನೇ ಸ್ಥಾನದಲ್ಲಿದೆ.

published on : 3rd December 2020

ರಾಜ್ಯದಲ್ಲಿ 29,451 ಕೋವಿಡ್ ಲಸಿಕೆ ವಿತರಣಾ ಕೇಂದ್ರಗಳ ಗುರುತು: ಸಚಿವ ಡಾ..ಕೆ.ಸುಧಾಕರ್

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಎಲ್ಲ ಬಗೆಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, 29, 451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

published on : 24th November 2020

ಮಂಗಳೂರು: ಪೋಸ್ಟ್-ಕೋವಿಡ್ ಕೇರ್ ಆಯುಷ್ ಕೇಂದ್ರ ಉದ್ಘಾಟನೆ

ಬಹು ನಿರೀಕ್ಷೆಯ ಪೋಸ್ಟ್-ಕೋವಿಡ್ ಆಯುಷ್ ಕೇರ್ ಕೇಂದ್ರವನ್ನು ಮಂಗಳೂರಿನ ತಲಪಾಡಿಯ ಶಾರದಾ ಆಯುರ್ಧಾಮ ಕ್ಯಾಂಪಸ್‌ನಲ್ಲಿ ಉದ್ಘಾಟಿಸಲಾಯಿತು.

published on : 21st November 2020
1 2 >