• Tag results for Central Government

ಭಾರತಕ್ಕೆ ರಾಫೆಲ್ ಯುದ್ಧ ವಿಮಾನ ಆಗಮನ: ಕೇಂದ್ರ ಸರ್ಕಾರಕ್ಕೆ ರಾಹುಲ್ ಗಾಂಧಿ ಮೂರು ಪ್ರಶ್ನೆ!

ಫ್ರಾನ್ಸ್ ನೊಂದಿಗೆ ಕೇಂದ್ರ ಸರ್ಕಾರ 2016ರಲ್ಲಿ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಮಾಡಿಕೊಂಡಲ್ಲಿಂದ ವಿರೋಧ ಪಕ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಟೀಕಿಸುತ್ತಲೇ ಬಂದಿದ್ದರು. ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಲೋಕಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದರು. ಅವರ ಆರೋಪಗಳನ್ನು ಸರ್ಕಾರ ಅಲ್ಲಗಳೆಯುತ್ತಾ ಬಂದಿತ್ತು.

published on : 30th July 2020

ಕೊರೊನಾ ವಿರುದ್ಧ ಸಮರದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಎಲ್ಲ ನೆರವು: ಸಚಿವ ಡಿ.ವಿ. ಸದಾನಂದ ಗೌಡ

ಕೊರೊನಾ ಮಹಾಮಾರಿಯನ್ನು  ಮಣಿಸಲು ರಾಜ್ಯ ಸರಕಾರಗಳಿಗೆ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರವು ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ  ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ. 

published on : 18th July 2020

ಕೇಂದ್ರ ಸರ್ಕಾರ ಮಾರ್ಗಸೂಚಿ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಸಚಿವ ಸುರೇಶ್ ಕುಮಾರ್

ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್'ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ. 

published on : 31st May 2020

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಷದಲ್ಲಿ 15 ದಿನ ವರ್ಕ್ ಫ್ರಂ ಹೋಂ?

ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಕುಳಿತು ಕೆಲಸ ಮಾಡುವಂತಾಗಿದೆ. ಇನ್ನು ಕೊರೋನಾ ನಂತರವೂ ಕೇಂದ್ರ ಸರ್ಕಾರ ತನ್ನ ನೌಕರಿಗಾಗಿ ವರ್ಕ್ ಫ್ರಂ ಹೋಂ ಸೌಲಭ್ಯ ನೀಡುವ ಬಗ್ಗೆ ಕರಡು ರೂಪಿಸಿದೆ.

published on : 14th May 2020

ಕೇಂದ್ರ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ಪ್ರಸ್ತಾವನೆ ಇಲ್ಲ: ಕೇಂದ್ರ ಹಣಕಾಸು ಸಚಿವಾಲಯ

ಕೊರೋನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳ ವೇತನ ಕಡಿತಗೊಳಿಸಲಿದೆ ಎಂಬ ವರದಿಗಳನ್ನು ಕೇಂದ್ರ ಹಣಕಾಸು ಸಚಿವಾಲಯ ಸೋಮವಾರ ತಳ್ಳಿಹಾಕಿದೆ. ಈ ವರದಿಗಳು ನಿರಾಧಾರ, ಅವಾಸ್ತವ ಎಂದು ಸ್ಪಷ್ಟಪಡಿಸಿದೆ.

published on : 11th May 2020

ರೆಡ್ ಜೋನ್ ಪರಾಮರ್ಶೆಗೆ ಕೇಂದ್ರಕ್ಕೆ ಮೊರೆ ಹೋಗಲು ರಾಜ್ಯ ನಿರ್ಧಾರ:ಆರ್ಥಿಕ ಚಟುವಟಿಕೆ ಆರಂಭಕ್ಕೆ ಒಲವು

ಲಾಕ್ ಡೌನ್ ವಿಸ್ತರಣೆ ಮಾಡಿ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಮೂರು ಜಿಲ್ಲೆಗಳನ್ನು ರೆಡ್ ಜೋನ್(ಕೆಂಪು ವಲಯ) ಎಂದು ಗುರುತಿಸಿದೆ. ಹೀಗೆ ಕೇಂದ್ರ ಸರ್ಕಾರ ಗುರುತಿಸಿರುವ ವಲಯಗಳನ್ನು ಮರುಪರಿಶೀಲನೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ.

published on : 3rd May 2020

ಎಂಎಸ್‌ಎಂಇಗಳಿಗೆ ವೇತನ ಸುರಕ್ಷತಾ ನೆರವು ಒದಗಿಸುವಂತೆ ಕೇಂದ್ರಕ್ಕೆ ಚಿದಂಬರಂ ಒತ್ತಾಯ

ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮ (ಎಂಎಸ್ಎಂಇ) ವಲಯಕ್ಕೆ ವೇತನ ಸುರಕ್ಷತಾ ನೆರವು ಮತ್ತು ಸಾಲ ಖಾತರಿ ನಿಧಿಗಾಗಿ ತಲಾ 1 ಲಕ್ಷ ಕೋಟಿ ರೂ.ಗಳ ಎರಡು ಹಣಕಾಸು ಪ್ಯಾಕೇಜ್‌ಗಳನ್ನು ಒದಗಿಸುವಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 29th April 2020

ಮೇ.03 ನಂತರವೂ ಲಾಕ್ ಡೌನ್ ಮುಂದುವರೆಸಬೇಕೇ?: ಹೌದು ಎನ್ನುತ್ತಿವೆ 5 ರಾಜ್ಯಗಳು!: ವಿವರ ಹೀಗಿದೆ

ದೇಶಾದ್ಯಂತ ಕೊರೋನಾ ಹಾಟ್ ಸ್ಪಾಟ್ ಗಳು ಹೆಚ್ಚುತ್ತಿದ್ದು, ಮೇ.03ರ ನಂತರವೂ ಲಾಕ್ ಡೌನ್ ಮುಂದುವರೆಸುವ ಸಂಬಂಧ ಕೈಗೊಳ್ಳಲಾಗುವ ನಿರ್ಧಾರ ಕೊರೋನಾ ತಡೆಗೆ ನಿರ್ಣಾಯಕವಾಗಿರಲಿದೆ. 

published on : 26th April 2020

ತುಟ್ಟಿಭತ್ಯೆ ಕಡಿತ ಅಮಾನವೀಯ ಮತ್ತು ಅಸೂಕ್ಷ್ಮ ನಿರ್ಧಾರ: ರಾಹುಲ್ ಗಾಂಧಿ ಸೇರಿ ಕಾಂಗ್ರೆಸ್ ನಾಯಕರ ಟೀಕೆ

ಕೊರೋನಾ ವೈರಸ್ ಲಾಕ್ ಡೌನ್ ಮಧ್ಯೆ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸರ್ಕಾರಿ ನೌಕರರ ಮತ್ತು ಸೇನಾ ಯೋಧರ ತುಟ್ಟಿಭತ್ಯೆ ಮತ್ತು ತುಟ್ಟಿ ಪರಿಹಾರ ಸೌಲಭ್ಯಕ್ಕೆ ಕಡಿತ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

published on : 25th April 2020

ಕೋವಿಡ್ ಬಿಕ್ಕಟ್ಟು: ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ತಡೆ

ಕೊರೋನಾವೈರಸ್ ಲಾಕ್‌ಡೌನ್ ಸಮಯದಲ್ಲಿ ತೆರಿಗೆ ಸಂಗ್ರಹಕ್ಕೆ ಸಮಸ್ಯೆಯಾಗಿರುವ ಹಿನ್ನೆಲೆ ಕೇಂದ್ರ ನೌಕರರ ಹೆಚ್ಚುವರಿ ತುಟ್ಟಿಭತ್ಯೆ (ಡಿಎ ಮತ್ತು ಡಿಆರ್‌) ಹೆಚ್ಚಳ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ.   

published on : 23rd April 2020

ಉದ್ಯಮಗಳ ಆರಂಭಕ್ಕೆ ಕೇಂದ್ರದ ಅನುಮತಿಗಾಗಿ ಕಾದು ನಿಂತಿರುವ ರಾಜ್ಯ ಸರ್ಕಾರ

ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆಗಳ ಆರಂಭಕ್ಕೆ ಕಾದು ನಿಂತಿದೆ.  21 ದಿನಗಳ ಲಾಕ್ ಡೌನ್ ಅವಧಿ ಮುಗಿದಿದ್ದು, ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ.

published on : 15th April 2020

ಕೋವಿಡ್-19 ಪರೀಕ್ಷೆ ಶುಲ್ಕ ರಹಿತ ಮಾಡಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ 

ಕೋವಿಡ್-19 ಪರೀಕ್ಷೆಯನ್ನು ಶುಲ್ಕ ರಹಿತವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. 

published on : 8th April 2020

ಏ.14 ರ ನಂತರವೂ ಮುಂದುವರೆಯಲಿದೆ ಲಾಕ್ ಡೌನ್?: ಸಲಹೆ ಪರಿಗಣಿಸಿರುವ ಕೇಂದ್ರ ಸರ್ಕಾರ!

ಏ.14 ರ ನಂತರವೂ ದೇಶಾದ್ಯಂತ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. 

published on : 7th April 2020

ಕೋವಿಡ್-19: ದೇಶಾದ್ಯಂತ 4500 ಸೋಂಕಿತರು; ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸರ್ಕಾರ ಚಿಂತನೆ

ಜಗತ್ತಿನಾದ್ಯಂತ ತೀವ್ರ ಆತಂಕ ಹಾಗೂ ಭಯ ಭೀತಿ ಸೃಷ್ಟಿಸಿರುವ ಮಾರಕ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

published on : 7th April 2020

ಲಾಕ್ ಡೌನ್: ರೈತರು ಬೆಳೆದ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಅವಕಾಶ

ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಜಾರಿಗೊಳಿಸಿರುವ ಲಾಕ್ ಡೌನ್ ನಿಂದ ರೈತರು ಬೆಳೆದ ಕೃಷಿ ಪರಿಕರಗಳನ್ನು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ

published on : 3rd April 2020
1 2 3 4 5 6 >