- Tag results for Central government
![]() | ಸಂಸತ್ತಿನ ಚಳಿಗಾಲದ ಅಧಿವೇಶನ: ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರಡಿಸೆಂಬರ್ 4 ರಂದು ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಸರ್ಕಾರವು ಡಿಸೆಂಬರ್ 2ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 22ರಂದು ಮುಕ್ತಾಯಗೊಳ್ಳಲಿದೆ. |
![]() | ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಕೊಡಿ: ಕೇಂದ್ರಕ್ಕೆ ಡಿ ಕೆ ಶಿವಕುಮಾರ್ ಒತ್ತಾಯರಾಜ್ಯದಲ್ಲಿ ಈ ವರ್ಷ ನೈರುತ್ಯ ಮುಂಗಾರು ಕೈಕೊಟ್ಟು ಬರ ಪರಿಸ್ಥಿತಿ ತೀವ್ರವಾಗಿದೆ. ಈಗಾಗಲೇ ಬರ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾವು ಭಿಕ್ಷೆ ಬೇಡುತ್ತಿಲ್ಲ, ಕಾನೂನು ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. |
![]() | ಐಫೋನ್ ಹ್ಯಾಕಿಂಗ್ ಬಗ್ಗೆ ವಿಪಕ್ಷಗಳ ಸಂಸದರಿಗೆ ಆ್ಯಪಲ್ ಎಚ್ಚರಿಕೆ ಸಂದೇಶ: ತನಿಖೆಗೆ ಆದೇಶಿಸಿದ ಕೇಂದ್ರಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್‌ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿದ ನಂತರ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆಗೆ ಆದೇಶಿಸಿದೆ. |
![]() | ಪಂಚರಾಜ್ಯಗಳ ಚುನಾವಣೆ: ಈರುಳ್ಳಿ ಬೆಲೆ ಕಡಿವಾಣಕ್ಕೆ ಕೇಂದ್ರ ಸರ್ಕಾರದ ಏನು ಮಾಡಬಹುದು?ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕೇಂದ್ರ ಸಾರ್ವತ್ರಿಕ ಚುನಾವಣೆಯಿದೆ. ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆಯನ್ನು ಗಂಭೀರವಾಗಿ ತೆಗೆದುಕೊಂಡು ಹಲವು ಕ್ರಮಗಳಿಗೆ ಮುಂದಾಗಿದೆ ಎನ್ನಬಹುದು. |
![]() | ಬರ ಪರಿಹಾರ ಬಿಡುಗಡೆ; ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಕಿಡಿರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಶನಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. |
![]() | 'ಕರ್ನಾಟಕದ ಮೇಲೆ ಪ್ರೀತಿ ಏಕಿಲ್ಲ': ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತು ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಎದುರಿಸುತ್ತಿರುವ ನಿರ್ಣಾಯಕ ಅಂತಾರಾಜ್ಯ ನದಿ ನೀರು ಹಂಚಿಕೆ ವಿವಾದವನ್ನು ಪರಿಹರಿಸುವಲ್ಲಿ ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರ ತೋರಿದ ನಿರಾಸಕ್ತಿಯ ಬಗ್ಗೆ ಕಿಡಿಕಾರಿದ್ದಾರೆ. |
![]() | ಕೈಗಾರಿಕಾ ನ್ಯಾಯಮಂಡಳಿಗೆ ನೇಮಕಾತಿ ವಿಳಂಬ: ₹10 ಲಕ್ಷ ದಂಡ ವಿಧಿಸುವುದಾಗಿ ಕೇಂದ್ರಕ್ಕೆ ಹೈಕೋರ್ಟ್ ಎಚ್ಚರಿಕೆಮುಂದಿನ ಮೂರು ವಾರಗಳಲ್ಲಿ ಬೆಂಗಳೂರಿನಲ್ಲಿರುವ ಕೇಂದ್ರ ಕೈಗಾರಿಕಾ ನ್ಯಾಯಮಂಡಳಿ ಕಮ್ ಕಾರ್ಮಿಕ ನ್ಯಾಯಾಲಯಕ್ಕೆ ಅಧಿಕಾರಿ ನೇಮಕಕ್ಕೆ ಸಕಾರಾತ್ಮಕ ಕ್ರಮ ಕೈಗೊಳ್ಳದಿದ್ದರೆ 10 ಲಕ್ಷ ರೂ. ದಂಡ ವಿಧಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. |
![]() | ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆ ಕುರಿತು ದಾಖಲೆ ಸಲ್ಲಿಸುವಂತೆ ಗುಜರಾತ್ ಸರ್ಕಾರಕ್ಕೆ ಸೂಚನೆ2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11 ಅಪರಾಧಿಗಳಿಗೆ ಕಳೆದ ವರ್ಷ ನೀಡಲಾದ ಕ್ಷಮಾಪಣೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಮೇಲಿನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. |
![]() | ಮುಂದಿನ ಎರಡು ವರ್ಷಗಳಲ್ಲಿ ದೇಶದಿಂದ ನಕ್ಸಲಿಸಂ ನಿರ್ಮೂಲನೆ: ಕೇಂದ್ರ ಸಚಿವ ಅಮಿತ್ ಶಾಎಡಪಂಥೀಯ ಉಗ್ರವಾದ (ಎಲ್‌ಡಬ್ಲ್ಯುಇ) ಮಾನವೀಯತೆಗೆ ಮಾರಕವಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಅದನ್ನು ದೇಶದಿಂದ ನಿರ್ಮೂಲನೆ ಮಾಡಲು ಸರ್ಕಾರ ದೃಢಸಂಕಲ್ಪ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | 'ಬೆಂಗಳೂರು ಗುಲಾಬಿ ಈರುಳ್ಳಿ' ರಫ್ತಿಗೆ ಸುಂಕ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ‘ಬೆಂಗಳೂರು ಗುಲಾಬಿ ಈರುಳ್ಳಿ’ ರಫ್ತಿಗೆ ಕೆಲವು ಷರತ್ತುಗಳೊಂದಿಗೆ ಕೇಂದ್ರ ಸರ್ಕಾರವು ಇತ್ತೀಚೆಗಷ್ಟೇ ವಿಧಿಸಿದ್ದ ಸುಂಕದಿಂದ ವಿನಾಯಿತಿ ನೀಡಲಾಗಿದೆ. ಈ ಅಧಿಸೂಚನೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ. |
![]() | ಕಾವೇರಿ ವಿವಾದ: ಕೇಂದ್ರ ಮಧ್ಯಸ್ಥಿಕೆ ವಹಿಸಿ, ರಾಜ್ಯಕ್ಕೆ ಪರಿಹಾರ ನೀಡಲಿ; ದೆಹಲಿಗೆ ಹೋಗುತ್ತೇನೆ ಎಂದ ಡಿಕೆ ಶಿವಕುಮಾರ್ತಮಿಳುನಾಡಿಗೆ ನೀರು ಬಿಡುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯವು ಅತಂತ್ರ ಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಒತ್ತಾಯಿಸಿದರು. |
![]() | ಬರ ಘೋಷಣೆ ವಿಳಂಬಕ್ಕೆ ಕೇಂದ್ರದ ಮಾರ್ಗಸೂಚಿಯೇ ಸಮಸ್ಯೆ: ಸಿಎಂ ಸಿದ್ದರಾಮಯ್ಯಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ -2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. |
![]() | ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರಹಲವಾರು ವರ್ಷಗಳ ಹಿಂದೆ ಎಲ್‌ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್‌ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ. |
![]() | ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ: ಕುಚಲಕ್ಕಿ ರಫ್ತಿಗೆ ಶೇ 20ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರದೇಶೀಯ ಮಾರುಕಟ್ಟೆಯಲ್ಲಿ ಅಗತ್ಯ ದಾಸ್ತಾನು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ. |
![]() | ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ. |