• Tag results for Centre

ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರದ ಸೂಚನೆ

ನಿರ್ದಿಷ್ಟ ಪ್ರದೇಶಗಳಲ್ಲಿ ಕೋವಿಡ್ ಪಾಸಿಟಿವಿಟಿ  ಪ್ರವೃತ್ತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪರೀಕ್ಷೆಯನ್ನು ಹೆಚ್ಚಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

published on : 18th January 2022

ಜನವರಿ 26ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ 'ಗ್ರಾಮ ಒನ್ ಯೋಜನೆ' ಜಾರಿ

ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜನವರಿ 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

published on : 18th January 2022

ಗಣರಾಜ್ಯೋತ್ಸವ 2022: ಸ್ತಬ್ಧ ಚಿತ್ರ ತಿರಸ್ಕಾರ ವಿವಾದ; ರಾಜ್ಯಗಳ ಟೀಕೆ ತಪ್ಪು ನಿದರ್ಶನ ಎಂದ ಕೇಂದ್ರ ಸರ್ಕಾರ

ಗಣರಾಜ್ಯೋತ್ಸವದ ಪರೇಡ್‌ನಿಂದ ತಮ್ಮ ಸ್ತಬ್ಧ ಚಿತ್ರಗಳನ್ನು ಹೊರಗಿಟ್ಟಿರುವುದು ಅವಮಾನ ಎಂದು ಆರೋಪಿಸಿದ್ದಕ್ಕಾಗಿ ರಾಜ್ಯಗಳನ್ನು ತರಾಟೆಗೆ ತೆಗೆದುಕೊಂಡಿರುವ  ಕೇಂದ್ರ ಸರ್ಕಾರ, ಇದು ತಪ್ಪು ನಿದರ್ಶನ ಎಂದು ಹೇಳಿದೆ ಮತ್ತು ಇದನ್ನು ನಿರ್ಧರಿಸುವುದು ಕೇಂದ್ರವಲ್ಲ, ತಜ್ಞರ ಸಮಿತಿ ಶಾರ್ಟ್ ಲಿಸ್ಟ್ ತಯಾರು ಮಾಡುತ್ತದೆ ಎಂದು ಹೇಳಿದೆ.

published on : 17th January 2022

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 14.84 ಕೋಟಿ ಬಳಕೆಯಾಗದ ಕೋವಿಡ್ ಲಸಿಕೆ ಡೋಸ್ ಲಭ್ಯ: ಕೇಂದ್ರ ಸರ್ಕಾರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಲೂ ಸುಮಾರು 14.84 ಕೋಟಿ ಡೋಸ್ ಬಳಕೆಯಾಗದ ಕೋವಿಡ್ ಲಸಿಕೆ ಲಭ್ಯವಿರುವುದಾಗಿ ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ.

published on : 15th January 2022

ದಕ್ಷಿಣ ಭಾರತದ ಆಧಾರ್ ಕೇಂದ್ರ ಕರ್ನಾಟಕದಿಂದ ತಮಿಳುನಾಡಿಗೆ ಸ್ಥಳಾಂತರ ಸಾಧ್ಯತೆ

 ಬೆಂಗಳೂರಿನ ಹೃದಯ ಭಾಗದಲ್ಲಿರುವ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ದಕ್ಷಿಣ ಭಾರತ ಪ್ರಾದೇಶಿಕ ಕಚೇರಿಯು ಶಾಶ್ವತ ಕಚೇರಿ ಸ್ಥಾಪಿಸಲು ತುಂಡು ಭೂಮಿಯನ್ನು ಪಡೆಯುವ ತೀವ್ರ ಹೋರಾಟದ ನಂತರ ತಮಿಳುನಾಡಿಗೆ ಸ್ಥಳಾಂತರಗೊಳ್ಳಲು ಚಿಂತನೆ ನಡೆಸಿದೆ.

published on : 15th January 2022

ಕೋವಿಡ್‌ಕೇರ್ ಸೆಂಟರ್‌ಗೆ ಸಚಿವ ಗೋಪಾಲಯ್ಯ ಚಾಲನೆ

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೋಂ ಐಸೋಲೇಷನ್ ಆಗಿರುವ ಕೋವಿಡ್ ಸೋಂಕಿತರಿಗೆ ಮನೆ ಮನೆಗೆ ಔಷಧಿ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸುವ ಕಾರ್ಯಕ್ರಮಕ್ಕೆ ಇದೇ ಭಾನುವಾರ ಚಾಲನೆ ನೀಡಲಾಗುವುದು ಎಂದು ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

published on : 15th January 2022

ತೃತೀಯಲಿಂಗಿಗಳಿಗೆ ಪ್ರತ್ಯೇಕ ಜೈಲು ವಾರ್ಡ್‌ ನಿರ್ಮಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ತೃತೀಯಲಿಂಗಿಗಳ ಹಕ್ಕುಗಳನ್ನು ಗುರುತಿಸಿರುವ ಕೇಂದ್ರ ಸರ್ಕಾರ, ಯಾವುದೇ ರೀತಿಯ ಶೋಷಣೆಯಿಂದ ಅವರನ್ನು ರಕ್ಷಿಸಲು ತೃತೀಯಲಿಂಗಿ ಕೈದಿಗಳಿಗೆ ಜೈಲುಗಳಲ್ಲಿ ಪ್ರತ್ಯೇಕ ವಾರ್ಡ್ ಗಳನ್ನು ನಿರ್ಮಿಸುವಂತೆ...

published on : 12th January 2022

ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಮಹಾಮಾರಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಅನುಮತಿ ನೀಡಿದೆ.

published on : 12th January 2022

ಗಾಂಜಾ ಸಂಪೂರ್ಣ ನಿಷೇಧಿಸಿಲ್ಲ, ವೈದ್ಯಕೀಯ ಬಳಕೆಗೆ ಅನುಮತಿ ಇದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

ದೇಶದಲ್ಲಿ ಗಾಂಜಾ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ. ವೈದ್ಯಕೀಯ ಮತ್ತು ವೈಜ್ಞಾನಿಕ ಬಳಕೆಯನ್ನು ಕಾನೂನಿನಡಿಯಲ್ಲಿ ಅನುಮತಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.

published on : 11th January 2022

ಇತ್ತೀಚಿಗೆ ಬಿಜೆಪಿಗೆ ಸೇರ್ಪಡೆಯಾದ ಪಂಜಾಬಿನ ಶಾಸಕನಿಗೆ ಕೇಂದ್ರದಿಂದ ವೈ+ ಭದ್ರತೆ

ಇತ್ತೀಚಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪಂಜಾಬ್ ಶಾಸಕ ಫತ್ತೇಜಾಂಗ್ ಸಿಂಗ್ ಬಾಜ್ವಾ ಅವರಿಗೆ ಕೇಂದ್ರ ಸರ್ಕಾರ ವೈ+ ವರ್ಗದ ವಿಐಪಿ ಭದ್ರತೆಯನ್ನು ಒದಗಿಸಿದೆ.

published on : 8th January 2022

ಬೆಂಗಳೂರು ಮೆಟ್ರೋ: ಐಟಿ ಹಬ್ ಮೊಬಿಲಿಟಿ ಯೋಜನೆಗಳ ಕುರಿತು ವಿವರ ನೀಡಿ- ಸರ್ಕಾರಕ್ಕೆ ಕೇಂದ್ರ ಪತ್ರ

ನಗರದ ಐಟಿ ಹಬ್‌ಗಳಾದ ಬೆಳ್ಳಂದೂರು ಮತ್ತು ಮಹದೇವಪುರದಲ್ಲಿ ಕೈಗೊಂಡಿರುವ ಸಮಗ್ರ ಚಲನಶೀಲತೆ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಣೆ ಕೋರಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ರಾಜ್ಯದ ನಗರಾಭಿವೃದ್ಧಿ ಇಲಾಖೆ ಮತ್ತು ಬಿಎಂಆರ್'ಸಿಎಲ್'ಗೆ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.

published on : 8th January 2022

ಭಾರತಕ್ಕೆ ಬರುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನ ಹೋಮ್ ಕ್ವಾರಂಟೈನ್ ಕಡ್ಡಾಯ: ಕೇಂದ್ರ

ಭಾರತಕ್ಕೆ ಬರುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 7 ದಿನಗಳ ಕಾಲ ಹೋಮ್ ಕ್ವಾರಂಟೈನ್ ಆಗಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

published on : 7th January 2022

ಈಗಿರುವ EWS ಮತ್ತು OBC ಮೀಸಲಾತಿ ಮಾದರಿಯಲ್ಲಿಯೇ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ಅನುಮತಿ 

ರಾಜ್ಯ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಅಖಿಲ ಭಾರತ ಕೋಟಾ (AIQ) ಸೀಟುಗಳಲ್ಲಿ ಕೇಂದ್ರ ಸರ್ಕಾರವು ತಂದಿರುವ ಆರ್ಥಿಕವಾಗಿ ದುರ್ಬಲ ವರ್ಗದವರು (EWS) ಮತ್ತು ಇತರ ಹಿಂದುಳಿದ ವರ್ಗ ( OBC) ಮೀಸಲಾತಿಯನ್ನು ಆಧರಿಸಿ 2021-2022 ನೇ ಸಾಲಿಗೆ NEET-PG ಕೌನ್ಸೆಲಿಂಗ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

published on : 7th January 2022

ಕೋವಿಡ್ ನಿಧಿ ಬಳಕೆಯಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ತಾನ ರಾಜ್ಯಗಳು ವಿಫಲ: ಮುಂಚೂಣಿಯಲ್ಲಿ ದೆಹಲಿ, ತಮಿಳು ನಾಡು

ಕೋವಿಡ್-19 ಅಲೆಯ ತಡೆಗೆ ಆರೋಗ್ಯ ಮೂಲಸೌಕರ್ಯಗಳನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಮಹಾರಾಷ್ಟ್ರ ಅತಿ ಹಿಂದುಳಿದಿದೆ ಎಂದು ಸರ್ಕಾರದ ಅಂಕಿಅಂಶ ಹೇಳುತ್ತದೆ.

published on : 5th January 2022

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಕೋವಿಡ್ ಕೇರ್ ಕೇಂದ್ರ ಆರಂಭ: ಗೌರವ್ ಗುಪ್ತಾ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಒಂದೊಂದು ಕೋವಿಡ್ ಕೇರ್ ಕೇಂದ್ರಗಳ ತೆರೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

published on : 5th January 2022
1 2 3 4 5 6 > 

ರಾಶಿ ಭವಿಷ್ಯ