- Tag results for Cheating
![]() | ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲುಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. |
![]() | ಹಾಲಶ್ರೀ ಸ್ವಾಮಿಯ ಮತ್ತೊಂದು ದೋಖಾ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಿಡಿಒಗೆ ಕೋಟಿ ರು. ವಂಚನೆಟಿಕೆಟ್ ಕೊಡಿಸಲು ಒಂದು ಕೋಟಿ ರೂ.ಗೆ ಡೀಲ್ ಆಗಿತ್ತು. ಸಂಜಯ್ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು ಎನ್ನಲಾಗಿದೆ. |
![]() | ಚೈತ್ರಾ ಕುಂದಾಪುರ ಕೇಸ್: ಈ ಅಕ್ರಮದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ- ಕಾಂಗ್ರೆಸ್ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆದಿದ್ದು, ವಂಚನೆ ನಡೆದಿದ್ದು ಎಲ್ಲವೂ ಸಿಟಿ ರವಿ ಹಾಗೂ ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ತಿಳಿದಿತ್ತಂತೆ ಎಂದು ಹೇಳಿದೆ. |
![]() | ಚೈತ್ರಾ ಕುಂದಾಪುರ ಕೇಸ್: ಗುರುತು ಸಿಗದಂತೆ ಟಿ ಶರ್ಟ್- ಚಡ್ಡಿ ಧರಿಸಿದ್ದ ಹಾಲವೀರಪ್ಪ ಸ್ವಾಮೀಜಿ!ಇತ್ತೀಚಿಗೆ ಕಾವಿ ತೊಟ್ಟು ಸ್ವಾಮೀಜಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿರುವ ಪ್ರಕರಣ ಹೆಚ್ಚಾಗುತ್ತಿವೆ. ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ಆರೋಪಿಯಾಗಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಒಡಿಶಾದಲ್ಲಿ ಬಂಧಿಸಲಾಗಿದೆ. |
![]() | ಟಿಕೆಟ್ ವಂಚನೆ ಪ್ರಕರಣ: ಹಿಂದುತ್ವವಾದಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಬಿಡುಗಡೆ, ವಿಚಾರಣೆ ಆರಂಭವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಅಸ್ವಸ್ಥರಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕಿತ್ಸೆ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. |
![]() | ಚೈತ್ರಾ ಕುಂದಾಪುರಗೆ ಅನಾರೋಗ್ಯ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು; ಹಿಂದುತ್ವದ ಪ್ರಖರ ಪ್ರತಿಪಾದಕಿ ಆತ್ಮಹತ್ಯೆ ಯತ್ನ?ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. |
![]() | ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದ್ದಾರೆ. |
![]() | ಕುವೈತ್‌ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ವಂಚನೆ; ಆರು ತಿಂಗಳ ಸಂಕಷ್ಟದ ನಂತರ ತವರಿಗೆ ಮರಳಿದ ಯುವಕರುಉದ್ಯೋಗ ಅರಸಿ ಕುವೈತ್‌ಗೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಸಚಿನ್ ಜಂಗಮಶೆಟ್ಟಿ ಮತ್ತು ವಿಶಾಲ್ ಸೆಲಾರ್ ಎಂಬ ಇಬ್ಬರು ಯುವಕರು ಆರು ತಿಂಗಳ ಸಂಕಷ್ಟದ ನಂತರ ಭಾರತಕ್ಕೆ ಮರಳಿದ್ದಾರೆ. ಉತ್ತಮ ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಅವರು ಆರು ತಿಂಗಳ ಹಿಂದೆ ಅಲ್ಲಿಗೆ ತೆರಳಿದ್ದರು. |
![]() | ಮದುವೆಯಾಗುವುದಾಗಿ ಹೇಳಿ ವಂಚನೆ: 70 ವರ್ಷದ ವೃದ್ಧನ ಮೇಲೆ 63ರ ವೃದ್ಧೆಯಿಂದ ದೂರು ದಾಖಲು!ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ಬೆಂಗಳೂರು: ವೃದ್ಧೆಗೆ 3.5 ಕೋಟಿ ರೂಪಾಯಿ ವಂಚಿಸಿದ ನಾಲ್ವರ ಬಂಧನವೃದ್ಧೆಗೆ 3.5 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಮಾಜಿ ಉದ್ಯೋಗಿ ಸೇರಿದಂತೆ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. |
![]() | ಆರೋಪಿಗಳ ಬಂಧಿಸಲು ತೆರಳಿದ್ದ ಬೆಂಗಳೂರಿನ ನಾಲ್ವರು ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ; ಕೇರಳ ಪೊಲೀಸರ ವಶಕ್ಕೆ!ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಮಗಳನ್ನು ಡಾಕ್ಟರ್ ಮಾಡುವ ಕನಸು: ಸೀಟು ಕೊಡಿಸುವುದಾಗಿ 16 ಲಕ್ಷ ರು. ದೋಖಾ; ಬೀದರ್ ನ ಬಡಪಾಯಿ ತಂದೆಯ ಅಳಲುಮಗಳನ್ನು ಡಾಕ್ಟರ್ ಮಾಡುವ ಕನಸು ಕಟ್ಟಿಕೊಂಡಿದ್ದ ಬಡಪಾಯಿ ತಂದೆಗೆ ಮೂವರು ವಂಚಿಸಿ ಹಣ ಲಪಾಟಿಯಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿದ ಮೂವರು ಬೀದರ್ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ. |
![]() | ಸ್ಯಾಂಡಲ್ ವುಡ್ ಚಿತ್ರ ನಿರ್ಮಾಪಕನ ವಿರುದ್ಧ ವಂಚನೆ, ಬೆದರಿಕೆ ಆರೋಪಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿರ್ಮಾಪಕರೊಬ್ಬರು ತಮ್ಮ ಸಹೋದರನಿಗೆ ವಂಚಿಸಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. |
![]() | ಐಪಿಎಸ್ ಅಧಿಕಾರಿ ಸೋಗಿನಲ್ಲಿ ಹಲವರಿಗೆ ವಂಚನೆ; 45 ವರ್ಷದ ವ್ಯಕ್ತಿ ಬಂಧನಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಜನರಿಗೆ ಮತ್ತು ಹಲವಾರು ಪೊಲೀಸರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಕಾಟನ್‌ಪೇಟೆ ಪೊಲೀಸರು 45 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. |