• Tag results for Citizenship Act

ಸಿಎಎ ಪ್ರತಿಭಟನೆಯಲ್ಲಿ ಬಾಗವಹಿಸಿದ್ದ ಪೋಲಿಷ್ ವಿದ್ಯಾರ್ಥಿಗೆ ಭಾರತವನ್ನು ತೊರೆಯುವಂತೆ ಸೂಚನೆ

ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಸಿಎಎ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಿದ ಜಾದವ್‌ಪುರ್ ವಿಶ್ವವಿದ್ಯಾಲಯದ ಪೋಲಿಷ್ ವಿದ್ಯಾರ್ಥಿಯನ್ನು  ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ) ದೇಶವನ್ನು ತೊರೆಯುವಂತೆ ಕೇಳಿದೆ ಎಂದು ವಿಶ್ವವಿದ್ಯಾನಿಲಯ  ಮೂಲಗಳು ಭಾನುವಾರ ತಿಳಿಸಿವೆ.

published on : 1st March 2020

ಶಾಲೆಯಲ್ಲಿ ಸಿಎಎ ವಿರೋಧಿ ನಾಟಕ: ಮುಖ್ಯ ಶಿಕ್ಷಕಿ ಮತ್ತು ಪೋಷಕರ ಬಂಧನ

ಸಿಎಎ ವಿರುದ್ಧ ವಿದ್ಯಾರ್ಥಿಗಳಿಂದ ನಾಟಕ ಪ್ರದರ್ಶನ ಮಾಡಿಸಿದ ಆರೋಪದಲ್ಲಿ ಇತ್ತೀಚೆಗೆ ಬೀದರ್ ನ ಶಾಹಿನ್ ಶಿಕ್ಷಣಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಘಟನೆಗೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ.

published on : 31st January 2020

ಹೈದರಾಬಾದ್: ಸಿಎಎ ವಿರುದ್ಧ ಪ್ರತಿಭಟನೆಗೆ ತೆರಳುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಪೋಲೀಸರ ವಶಕ್ಕೆ

ಪೌರತ್ವ  ಕಾಯ್ದೆ   ಭೀಮ್ ಆರ್ಮಿ ಚಂದ್ರಶೇಖರ್ ಆಜಾದ್ ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಭೀಮ್ ಆರ್ಮಿಯ  ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು ಹೈದರಾಬಾದ್ ನಗರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

published on : 26th January 2020

ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬನ್ನಿ: ರಾಹುಲ್ ಗೆ ಅಮಿತ್ ಶಾ ಸವಾಲು

 ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾರದೇ ನಾಗರೀಕತೆ ಕಿತ್ತುಕೊಳ್ಳುವ ಪ್ರಸ್ತಾಪವಿಲ್ಲ ಎಂದು ಮತ್ತೊಮ್ಮೆ ಪ್ರತಿಪಾದಿಸಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿ ಒಮ್ಮೆ ಕಾಯ್ದೆಯನ್ನು ಪೂರ್ತಿಯಾಗಿ ಓದಲಿ ಎಂದು ಸವಾಲು ಹಾಕಿದ್ದಾರೆ. 

published on : 18th January 2020

'ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ಬುದ್ಧಿಜೀವಿಗಳು ದೆವ್ವಗಳು, ಬೆನ್ನುಮೂಳೆ ಇಲ್ಲದವರು':ದಿಲೀಪ್ ಘೋಷ್ 

ತಮ್ಮ ವಿವಾದಾತ್ಮಕ ಹೇಳಿಕೆಗೆ ಹೆಸರಾಗಿರುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಇದೀಗ ಮತ್ತೊಮ್ಮೆ ತಮ್ಮ ಮಾತನ್ನು ಬೇಕಾಬಿಟ್ಟಿಯಾಗಿ ಹರಿಬಿಟ್ಟಿದ್ದಾರೆ. 

published on : 18th January 2020

ಸಿಎಎ ಪರ ರ್ಯಾಲಿ: ಕೋಲಾರದಲ್ಲಿ ಪೋಲೀಸರಿಂದ ಲಾಠಿ ಚಾರ್ಜ್

ಪೂರ್ವಾನುಮತಿ ಇಲ್ಲದೆ ಸಿಎಎ ಪರ ರ್ಯಾಲ, ಮೆರವಣಿಗೆ ನಡೆಸಿದ್ದ  ಬಿಜೆಪಿ ಮತ್ತು ಹಿಂದೂ ಪರ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ  ಎಸ್‌ಎನ್‌ಆರ್ ಸರ್ಕಲ್ ಬಳಿ ಪೋಲೀಸರು ಮೆರವಣಿಗೆ ನಡೆಸುತ್ತಿದ್ದವರ ಮೇಲೆ ಲಾಠಿ ಬೀಸಿದ್ದಾರೆ.

published on : 4th January 2020

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಸಂಸತ್ತನ್ನು ವಿರೋಧಿಸುತ್ತಿದೆ: ತುಮಕೂರಿನಲ್ಲಿ ಪ್ರಧಾನಿ ಮೋದಿ

 ನಾಗರಿಕ ತಿದ್ದುಪಡಿ ಕಾಯ್ದೆಯನ್ನು ಮತ್ತೊಮ್ಮೆ ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ  ಮೋದಿ ಅವರು, ಕಾಯ್ದೆ ವಿರುದ್ಧ ಆಂಧೋಲನ ಆರಂಭಿಸುವ ಮೂಲಕ ವಿಪಕ್ಷ  ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಂಸತ್ತಿನ ವಿರುದ್ಧವೇ ಆಂಧೋಲನ ನಡೆಸುತ್ತಿದೆ ಎಂದು ಕಿಡಿಕಾರಿದರು. 

published on : 2nd January 2020

ಪೌರತ್ವ ಕಾಯ್ದೆ ವಿರುದ್ಧ ಶಾಂತಿಯುತ ಪ್ರತಿಭಟನೆ: 2 ಲಕ್ಷ ಜನತೆ ಭಾಗಿ

ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರೀಕ ನೋಂದಣಿ ವಿರೋಧಿಸಿ ಸೋಮವಾರ ರಾಜಧಾನಿಯಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. 

published on : 24th December 2019

ಮಂಗಳೂರು ಗೋಲಿಬಾರ್; ಗೃಹ ಸಚಿವ ಬೊಮ್ಮಾಯಿ ವಜಾಗೊಳಿಸಲು ಹೆಚ್.ಡಿ ಕುಮಾರಸ್ವಾಮಿ ಒತ್ತಾಯ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 22nd December 2019

ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ 

ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ. 

published on : 22nd December 2019

ಚೆನ್ನೈನಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ: 300 ಜನರು ಪೊಲೀಸ್ ವಶಕ್ಕೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಚೆನ್ನೈ ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ 300 ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

published on : 21st December 2019

ಸಿಎಎ ವಿರುದ್ಧ ಪ್ರತಿಭಟನೆ: ಕೇರಳ ಸಂಸದ ಮಂಗಳೂರು ಪೋಲೀಸ್ ವಶಕ್ಕೆ

ಕೇರಳದ ಸಿಪಿಐ ರಾಜ್ಯಸಭಾ ಸಂಸದ ಬಿನೊಯ್ ವಿಶ್ವಂ ಸೇರಿ ಪಕ್ಷದ ಕಾರ್ಯಕರ್ತರನ್ನು ಕರ್ಫ್ಯೂ ಧಿಕ್ಕರಿಸಿ ಸಿಎಎ ವಿರುದ್ಧ ಇಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಮಂಗಳೂರು ಪೋಲೀಸರು ವಶಕ್ಕೆ ಪಡೆದಿದ್ದಾರೆ.

published on : 21st December 2019

ಪೌರತ್ವ ಪ್ರತಿಭಟನೆ: ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ, ಸಾವಿನ ಸಂಖ್ಯೆ 15ಕ್ಕೇರಿಕೆ

ಪೌರತ್ವ ಕಾಯ್ದೆ ವಿರೋಧಿಸಿ ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪ್ರತಿಭಟನೆ ವೇಳೆ 8 ವರ್ಷದ ಬಾಲಕ ಸೇರಿದಂತೆ ಒಟ್ಟು 15 ಮಂದಿ ಬಲಿಯಾಗಿರುವುದಾಗಿ ವರದಿಗಳು ತಿಳಿಸಿವೆ. 

published on : 21st December 2019

ಉತ್ತರಪ್ರದೇಶದಲ್ಲಿ ಹೊತ್ತಿ ಉರಿದ ಪೌರತ್ವದ ರೋಷಾಗ್ನಿ: ಹಿಂಸಾಚಾರಕ್ಕೆ 9 ಮಂದಿ ಬಲಿ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆಯುತ್ತಿರುವ ಹಿಂಸಾತ್ಮಕ ಹೋರಾಟಗಳು ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಶುಕ್ರವಾರ ಕೂಡ ಅನೇಕ ರಾಜ್ಯಗಳಲ್ಲಿ ಹಿಂಸಾಚಾರ ಮುಂದುವರೆದಿದ್ದು, ಉತ್ತರಪ್ರದೇಶದಲ್ಲಿಯೇ ಅತೀ ಹೆಚ್ಚು ಹಿಂಸಾಚಾರ ಸಂಭವಿಸಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ನಡೆಸಿರುವ ಗೋಲಿಬಾರ್'ಗೆ 9 ಮಂದಿ ಸಾವನ್ನಪ್ಪಿದ್ದಾರೆ.

published on : 21st December 2019

ದೇಶದ ಹಿತಾಸಕ್ತಿ ನಿಮ್ಮ ಆದ್ಯತೆಯಾಗಲಿ, ಹಿಂಸಾಚಾರ ಬೇಡ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ದೇಶದ ಜನರು ತಮ್ಮ ಕ್ರಿಯೆಗಳಲ್ಲಿ ಮುಂದಿರಿಸಿಕೊಂಡು ರಾಷ್ಟ್ರೀಯ ಹಿತಾಸಕ್ತಿಯನ್ನು ಮುಂದಿರಿಸಿಕೊಂಡು ಹಿಂಸಾಚಾರದಿಂದ ದೂರವುಳಿಯಬೇಕು ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ದು ಕರೆ ನೀಡಿದ್ದಾರೆ.

published on : 21st December 2019
1 2 3 4 >