- Tag results for Contaminated water
![]() | ತುಮಕೂರು: ಕಲುಷಿತ ನೀರು, ಆಹಾರ ಸೇವಿಸಿ 28 ಮಂದಿ ಅಸ್ವಸ್ಥ, ಆರು ಮಂದಿ ಜಿಲ್ಲಾಸ್ಪತ್ರೆಗೆ ದಾಖಲುತುಮಕೂರು ತಾಲೂಕಿನ ಗೋಳೂರು ಹೋಬಳಿಯ ಶೆಟ್ಟಪ್ಪನಹಳ್ಳಿಯಲ್ಲಿ ಕಲುಷಿತ ಆಹಾರ ಮತ್ತು ನೀರು ಸೇವಿಸಿದ 28 ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದು, 6 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. |
![]() | ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ; ಕವಾಡಿಗರ ಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ, ಪರಿಶೀಲನೆಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರಿಂದು ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದ ಕವಾಡಿಗರ ಹಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. |
![]() | ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲುಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. |
![]() | ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣ, ಪಂಪ್ ಆಪರೇಟರ್ ಸಸ್ಪೆಂಡ್ನಗರದ ಕವಾಡಿಗರಹಟ್ಪಿಯಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 100ಕ್ಕೂ ಅಧಿಕ ಮಂದಿ ಅಸ್ವಸ್ವರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಇಬ್ಬರ ಸಾವು, 36 ಮಂದಿ ಅಸ್ವಸ್ಥಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. |
![]() | ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಯುವತಿ ಸಾವು: ಸ್ಥಳೀಯರ ಪ್ರತಿಭಟನೆ, ಹಲವರು ಅಸ್ವಸ್ಥಕೋಟೆನಾಡು ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಯುವತಿ ನಿನ್ನೆ ಮೃತಪಟ್ಟು ಅಸ್ವಸ್ಥಕ್ಕೀಡಾಗಿರುವವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ. |
![]() | ನಗರದಲ್ಲಿ ಅತಿಸಾರ ಪ್ರಕರಣಗಳಲ್ಲಿ ಹೆಚ್ಚಳ: ನೀರಿನ 59 ಮಾದರಿಗಳು ಸೇವನೆಗೆ ಯೋಗ್ಯವಲ್ಲ!ಮುಂಗಾರು ಅವಧಿಯಲ್ಲಿ ನಗರದಲ್ಲಿ ಅತಿಸಾರದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಬಿಬಿಎಂಪಿ ನೀರಿನ ಮಾದರಿ ಪರೀಕ್ಷೆಯ ವರದಿಯ ಪ್ರಕಾರ ಬೆಂಗಳೂರು ದಕ್ಷಿಣ ಪ್ರದೇಶದಲ್ಲಿ ಕುಡಿಯಲು ಯೋಗ್ಯವಲ್ಲದ ನೀರಿನ ಮಾದರಿಗಳು ಅತಿ ಹೆಚ್ಚಾಗಿ ಕಂಡುಬಂದಿದೆ. |
![]() | ಬಳ್ಳಾರಿ: ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 45 ಮಂದಿ ಆಸ್ಪತ್ರೆಗೆ ದಾಖಲುಮೂರು ದಿನಗಳ ಹಿಂದೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 45 ಗ್ರಾಮಸ್ಥರು ಆಸ್ಪತ್ರೆಗೆ ದಾಖಲಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಜಿಲ್ಲಾಡಳಿತ ಗ್ರಾಮಕ್ಕೆ ದೌಡಾಯಿಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. |
![]() | ವಿಜಯನಗರ: ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು!ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣವು ಮುಂದುವರಿದಿದ್ದು ಕೂಡ್ಲಿಗಿ ತಾಲೂಕಿನ ಬಡೇಲಡಕು ಗೊಲ್ಲರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. |
![]() | ಕೊಪ್ಪಳ: ಕಲುಷಿತ ನೀರು ಸೇವನೆಯಿಂದ ಮೂವರು ಸಾವು ಪ್ರಕರಣ; ಇಬ್ಬರು ಪಿಡಿಒಗಳ ಅಮಾನತುಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಸೇರಿದಂತೆ ಮೂವರು ಸಾವಿಗೀಡಾದ ಮತ್ತು ನೂರಾರು ಜನರು ಅಸ್ವಸ್ಥರಾದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಬಿಜಕಲ್ ಮತ್ತು ಬಸರಿಹಾಳ್ ಗ್ರಾಮಗಳ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಅಮಾನತುಗೊಳಿಸಿದೆ. |
![]() | ಬೀದರ್‌ನಲ್ಲಿ ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 18 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲುಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 18 ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. |
![]() | ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ, ಆದ್ಯತೆ ಮೇಲೆ ಕುಡಿಯುವ ನೀರಿನ ಸಮಸ್ಯೆ ಸರಿಪಡಿಸಿ: ಸಿದ್ದರಾಮಯ್ಯಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದು, ಯಾವುದೇ ಕುಂಟು ನೆಪವೊಡ್ಡಿ ಬೇಜವಾಬ್ದಾರಿ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೇರಿದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. |
![]() | ಕಲುಷಿತ ನೀರು ಸೇವಿಸಿ ಸಾವು: ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಇಂದು ಮಹತ್ವದ ಸಭೆಕಲುಷಿತ ನೀರು ಸೇವಿಸಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪರಿಶೀಲನಾ ಸಭೆ ನಡೆಸಲಿದ್ದಾರೆ. ಕುಡಿಯುವ ನೀರಿನ ಪರಿಸ್ಥಿತಿ ಮತ್ತು ಜಲ ಜೀವನ್ ಮಿಷನ್ ಅನುಷ್ಠಾನದ ಬಗ್ಗೆಯೂ ಮುಖ್ಯಮಂತ್ರಿ ಪರಿಶೀಲಿಸಲಿದ್ದಾರೆ. |
![]() | ಕೊಪ್ಪಳ: ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ!ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ. |
![]() | ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು: ಜಲ ಜೀವನ್ ಮಿಷನ್ ಪೈಪ್‌ಲೈನ್ ಕಾಮಗಾರಿಗೆ ಗ್ರಾಮಸ್ಥರ ಆರೋಪಜಿಲ್ಲೆಯ ಬಸರಿಹಾಳ್ ಮತ್ತು ಬಿಚ್ಚಲ್ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 19 ತಿಂಗಳ ಮಗು ಹಾಗೂ 10 ವರ್ಷದ ಬಾಲಕಿ ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಬಸರಿಹಾಳ್ ಗ್ರಾಮದ ಹೊನ್ನಮ್ಮ ಶಿವಪ್ಪ (65ವ) ಎಂಬ ವೃದ್ಧೆ ಮೃತಪಟ್ಟಿದ್ದು, ಕಳೆದ ನಾಲ್ಕು ದಿನಗಳಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 3ಕ್ಕೇರಿದೆ. |