social_icon
  • Tag results for D K Shivakumar

ಕಾವೇರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರ ಭೇಟಿ ಮಾಡಲು ಸರ್ವಪಕ್ಷಗಳ ಒಮ್ಮತದ ತೀರ್ಮಾನ- ಡಿ ಕೆ ಶಿವಕುಮಾರ್

ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಕರ್ನಾಟಕದಿಂದ ಸರ್ವ ಪಕ್ಷಗಳ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದರು. ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

published on : 20th September 2023

ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಡಿ ಕೆ ಶಿವಕುಮಾರ್; ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟು ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳು ನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶಗಳ ರೈತರಿಂದ ನಿತ್ಯವೂ ಪ್ರತಿಭಟನೆ ವ್ಯಕ್ತವಾಗುತ್ತಿದೆ. 

published on : 20th September 2023

ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಪುನರ್ ಅವಲೋಕನ ಮಾಡುವಂತೆ ಕೇಂದ್ರಕ್ಕೆ ಡಿಸಿಎಂ ಮನವಿ

ಕಾವೇರಿ ನೀರು ಬಿಡುಗಡೆ ಅಸಾಧ್ಯವೆಂಬ ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಕೋರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದ್ದಾರೆ

published on : 15th September 2023

ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗೆ ಅನುಕೂಲ, ಐ ವಿಶ್ ದೆಮ್ ಆಲ್ ದಿ ಬೆಸ್ಟ್: ಡಿ ಕೆ ಶಿವಕುಮಾರ್

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರವಾಗಿ ಮಾತನಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮೈತ್ರಿಯಾದರೆ ಬಹಳ ಸಂತೋಷ; ಈ ಹಿಂದೆ ಕುಮಾರಣ್ಣ, ಅಶೋಕಣ್ಣ ಮೈತ್ರಿ ಮಾಡಿಕೊಂಡಿದ್ದರು. ಈಗ ಮೈತ್ರಿಯಾದರೆ ಸಿದ್ಧಾಂತ ಹೇಗೆ ಉಳಿಸಿಕೊಳ್ತಾರೋ ಗೊತ್ತಿಲ್ಲ ಎಂದರು.

published on : 8th September 2023

'ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇರುತ್ತಿದ್ದೇನೆ': ಮಾಜಿ ಶಾಸಕ ಬಿ ಎಂ ಸುಕುಮಾರ ಶೆಟ್ಟಿ 'ಕೈ' ಸೇರ್ಪಡೆ ಖಚಿತ

ಕಾಂಗ್ರೆಸ್ ನಿಂದ 2024ರ ಲೋಕಸಭೆ ಚುನಾವಣೆಗೆ ಮುನ್ನ ಆಪರೇಷನ್ ಹಸ್ತ ನಡೆಯಲಿದೆ, ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹದ ನಡುವೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ಮಾಜಿ ಶಾಸಕ ಬಿಎಂ ಸುಕುಮಾರ್ ಶೆಟ್ಟಿ (BM Sukumar Shetty) ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಪಕ್ಕಾ ಆಗಿದೆ. 

published on : 8th September 2023

ನಿಗಮ ಮಂಡಳಿಗೆ ಶಾಸಕರು, ಕಾಂಗ್ರೆಸ್ ಕಾರ್ಯಕರ್ತರ ನೇಮಕ: ಡಿಸಿಎಂ ಡಿಕೆಶಿ

ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. 

published on : 5th September 2023

ಕಾವೇರಿ ಜಲ ವಿವಾದ: ರಾಜ್ಯದ ಕಾನೂನು ತಂಡದ ಜೊತೆ ಚರ್ಚಿಸಲು ನಾಳೆ ದೆಹಲಿಗೆ ಪ್ರಯಾಣ- ಡಿಸಿಎಂ ಡಿ ಕೆ ಶಿವಕುಮಾರ್

ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವ ಸಂದರ್ಭದಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ. ನಿನ್ನೆ ಮಂಗಳವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಹೇಳಿದಷ್ಟೇ ನೀರು ಬಿಡಬೇಕು, ಮಂಗಳವಾರದಿಂದಲೇ ತ

published on : 30th August 2023

ಬಿಜೆಪಿಯವರು ನನ್ನ ಮೇಲಿನ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಡಿ ಕೆ ಶಿವಕುಮಾರ್ ಸವಾಲು

ನೂರು ದಿನಗಳ ಆಡಳಿತ ಪೂರೈಸಿರುವ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರ ಇಂದು ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತಿದೆ. ಕಾಂಗ್ರೆಸ್ ನ ರಾಷ್ಟ್ರ ನಾಯಕರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.

published on : 30th August 2023

'ಗೃಹಲಕ್ಷ್ಮಿ'ಯೋಜನೆಗೆ ಕೌಂಟರ್ ಕೊಡಲು ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಡಿ ಕೆ ಶಿವಕುಮಾರ್ ಟೀಕೆ

ಕರ್ನಾಟಕದಲ್ಲಿ ಸುಮಾರು 1,100 ರೂಪಾಯಿ ಇದ್ದ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿನ್ನೆ ಮಂಗಳವಾರ ಕೇಂದ್ರ ಸರ್ಕಾರ ಮೊದಲಿನಂತೆ ಸಬ್ಸಿಡಿ ಮೊತ್ತ ನೀಡಿ 900 ರೂಪಾಯಿಗೆ ಇಳಿಸಿದೆ.

published on : 30th August 2023

ಚಾಮುಂಡಿ ದೇವಿಗೆ ಹರಕೆ ತೀರಿಸಿದ ಸರ್ಕಾರದ 'ಜೋಡೆತ್ತು'ಗಳು; 'ಗೃಹಲಕ್ಷ್ಮಿ' ಕಾರ್ಡ್ ಇಟ್ಟು 2,000 ಕಾಣಿಕೆ ನೀಡಿದ ಸಿಎಂ, ಡಿಸಿಎಂ!

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿ ಅಧಿಕಾರಕ್ಕೆ ಬರಬೇಕೆಂದು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಬೇಕೆಂದು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಮುಂದೆ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಹರಕೆ ಹೊತ್ತುಕೊಂಡಿದ್ದರು.

published on : 29th August 2023

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು CWRC ಆದೇಶ: ಸಿಎಂ ಮತ್ತು ಡಿಸಿಎಂ ಹೇಳಿದ್ದೇನು?

ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯಿದಿಂದ ಸೂಚನೆ ಬರುತ್ತಿದ್ದಂತೆ ನಿನ್ನೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ.

published on : 29th August 2023

'ನಮ್ಮ ನಾಯಕನನ್ನು ಮುಖ್ಯಮಂತ್ರಿ ಮಾಡಪ್ಪಾ'; ದೇವರ ಮೊರೆ ಹೋದ ಡಿಕೆಶಿ, ಪರಮೇಶ್ವರ್; ಬೆಂಬಲಿಗರ ಪ್ರಾರ್ಥನೆ!

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಜಿಲ್ಲೆಗೆ ಭೇಟಿ ನೀಡಿ ನಿನ್ನೆ ಭಾನುವಾರ ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ 100 ದಿನ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ದೇವರ ದರ್ಶನ ಪಡೆದರು.

published on : 28th August 2023

ದೇಶದ ಪ್ರಧಾನ ಮಂತ್ರಿಗೆ ಹೇಗೆ ಗೌರವ ಕೊಡಬೇಕೆಂದು ನಮಗೆ ಗೊತ್ತಿದೆ, ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಡಿ ಕೆ ಶಿವಕುಮಾರ್

ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ದಕ್ಷಿಣ ಆಫ್ರಿಕಾ, ಗ್ರೀಸ್ ದೇಶಗಳ ಪ್ರವಾಸ ಮುಗಿಸಿ ಇಂದು ಶನಿವಾರ ಬೆಳಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಅವರನ್ನು ಸ್ವಾಗತಿಸಲು ಶಿಷ್ಠಾಚಾರ ಪ್ರಕಾರವಾಗಿ ಮುಖ್ಯಮಂತ್ರಿ, ಇಲ್ಲದಿದ್ದರೆ ಉಪ ಮುಖ್ಯಮಂತ್ರಿಗಳು, ರಾಜ್ಯಪಾಲರು ಸಾಮಾನ್ಯವಾಗಿ ಹೋಗುತ್ತಾರೆ.

published on : 26th August 2023

ಸರ್ವಪಕ್ಷ ಸಭೆಯ ನಂತರ ಕಾವೇರಿ ಜಲ ವಿವಾದ ಬಗ್ಗೆ ತೀರ್ಮಾನ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ತಮಿಳು ನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಇಂದು ಬುಧವಾರ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

published on : 23rd August 2023

ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿದ್ದೇನೆ: ಆಯನೂರು ಮಂಜುನಾಥ್

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದೇನೆ ಎನ್ನುವ ಮೂಲಕ ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ ಶಾಕ್ ನೀಡಿದ್ದಾರೆ. 

published on : 20th August 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9