social_icon
  • Tag results for Delhi police

ದೆಹಲಿ: ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳ ಬಂಧನ

ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಖಲಿಸ್ತಾನಿ ಉಗ್ರ ಅರ್ಶ್‌ ದಲ್ಲಾ ಗ್ಯಾಂಗ್‌ನ ಇಬ್ಬರು ಶೂಟರ್‌ಗಳನ್ನು ದೆಹಲಿ ಪೊಲೀಸರು ತಡರಾತ್ರಿ ಶೂಟೌಟ್ ಮಾಡಿ ಬಂಧಿಸಿದ್ದಾರೆ.

published on : 27th November 2023

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಪ್ರಕರಣ; ದೆಹಲಿ ಪೊಲೀಸರಿಂದ ಬಿಹಾರದ ಯುವಕನ ವಿಚಾರಣೆ

ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವೀಡಿಯೊಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಿಹಾರದ 19 ವರ್ಷದ ಯುವಕನನ್ನು ಪ್ರಶ್ನಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

published on : 15th November 2023

ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು, ಯುಆರ್‌ಎಲ್ ನೀಡುವಂತೆ ಮೆಟಾಗೆ ಪತ್ರ

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 11th November 2023

ಭೀಕರ ವಿಡಿಯೋ: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಗೆ ಗುದ್ದಿದ ಎಸ್ ಯುವಿ, ಗಾಳಿಯಲ್ಲಿ ಹಾರಿ ಕೆಳಗೆಬಿದ್ದ ಸಿಬ್ಬಂದಿಗೆ ಗಾಯ

ಮತ್ತೊಂದು ಭೀಕರ ವಿಡಿಯೋ ವೈರಲ್ ಆಗುತ್ತಿದ್ದು, ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಎಸ್ ಯುವಿ ಕಾರು ಗುದ್ದಿದ ಪರಿಣಾಮ ಆತ ಮೇಲಕ್ಕೆ ಹಾರಿ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. 

published on : 27th October 2023

ನ್ಯೂಸ್‌ಕ್ಲಿಕ್: ಯುಎಪಿಎ ಅಡಿ ಬಂಧನ ಪ್ರಶ್ನಿಸಿದ ಪುರಕಾಯಸ್ಥ, ಚಕ್ರವರ್ತಿ; ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದ 'ಸುಪ್ರೀಂ'

ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಅದರ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಯುಎಪಿಎ ಅಡಿಯಲ್ಲಿ ತಮ್ಮನ್ನು ಬಂಧಿಸಿರುವುದನ್ನು ವಿರೋಧಿಸಿ ಸಲ್ಲಿಸಿದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ದೆಹಲಿ ಪೊಲೀಸರ ಪ್ರತಿಕ್ರಿಯೆ ಕೇಳಿದೆ.

published on : 19th October 2023

ಇಸ್ರೇಲ್-ಹಮಾಸ್ ಯುದ್ಧ; ಗುಪ್ತಚರ ಮಾಹಿತಿ ಹಿನ್ನೆಲೆ ದೆಹಲಿಯಲ್ಲಿ ಹೈ ಅಲರ್ಟ್, ಭದ್ರತೆ ಹೆಚ್ಚಿಸಿದ ಪೊಲೀಸರು

ಇಸ್ರೇಲ್ ಸೇನೆ ಮತ್ತು ಹಮಾಸ್ ಬಂಡುಕೋರರ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಭಾರತದಲ್ಲೂ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಬಗ್ಗೆ ಕೆಲವು ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದ ನಂತರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

published on : 13th October 2023

ನ್ಯೂಸ್‌ಕ್ಲಿಕ್ ಪ್ರಕರಣ: ಪತ್ರಕರ್ತ ಅಭಿಸಾರ್ ಶರ್ಮಾರನ್ನು ಮತ್ತೆ ವಿಚಾರಣೆಗೆ ಕರೆದ ದೆಹಲಿ ಪೊಲೀಸರು

ಚೀನಾ ಪರ ಪ್ರಚಾರಕ್ಕಾಗಿ ದೇಣಿಗೆ ಪಡೆದ ಆರೋಪದ ಮೇಲೆ ನ್ಯೂಸ್‌ಕ್ಲಿಕ್ ಪೋರ್ಟಲ್‌ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ...

published on : 5th October 2023

ಶಂಕಿತ ಐಸಿಸ್ ಉಗ್ರನಿಗೆ ಕರ್ನಾಟಕದ ನಂಟು: ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ; ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ

ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಎನ್ನಲಾಗಿರುವ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಹನವಾಜ್ ಅಲಿಯಾಸ್ ಶಫಿ ಉಜ್‌ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ದೆಹಲಿ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ.

published on : 3rd October 2023

ಚೀನಾದಿಂದ ಕಾನೂನುಬಾಹಿರ ದೇಣಿಗೆ ಸಂಗ್ರಹ ಆರೋಪ: ನ್ಯೂಸ್‌ಕ್ಲಿಕ್‌ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ

ಚೀನಾದಿಂದ ಹಣ ಹೂಡಿಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಡಿಜಿಟಲ್‌ ಮಾಧ್ಯಮ ಸಂಸ್ಥೆ ಪತ್ರಕರ್ತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ ನ್ಯೂಸ್‌ಕ್ಲಿಕ್‌ನ 30ಕ್ಕೂ ಅಧಿಕ ಪತ್ರಕರ್ತರ ನಿವಾಸಗಳ ಮೇಲೆ ದೆಹಲಿ ಪೊಲೀಸ್‌ ಸ್ಪೆಷಲ್‌ ಸೆಲ್‌ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ .

published on : 3rd October 2023

ಬಂಧಿತ ಮೂವರು ಮೂಲಭೂತವಾದಿಗಳು ಉನ್ನತ ಶಿಕ್ಷಣ ಪಡೆದಿದ್ದರು: ISIS ಉಗ್ರರ ಬಗ್ಗೆ ಪೊಲೀಸರ ಸ್ಫೋಟಕ ಮಾಹಿತಿ!

ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ. 

published on : 3rd October 2023

ದೆಹಲಿ ಪೊಲೀಸರಿಂದ ಮಹತ್ತರ ಕಾರ್ಯಾಚರಣೆ: ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನ ಬಂಧನ

ದೇಶಾದ್ಯಂತ ವಿಧ್ವಸಂಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೋಸ್ಟ್ ವಾಂಟೆಡ್ ಐಸಿಸ್ ಉಗ್ರನನನ್ನು ಬಂಧಿಸುವಲ್ಲಿ ದೆಹಲಿ ಪೊಲೀಸರು ಸೋಮವಾರ ಯಶಸ್ವಿಯಾಗಿದ್ದಾರೆ.

published on : 2nd October 2023

ದೆಹಲಿ: ಮಹಿಳಾ ಪೇದೆಯನ್ನು ಕೊಲೆಗೈದಿದ್ದ ಹೆಡ್ ಕಾನ್ಸ್‌ಟೇಬಲ್‌; 2 ವರ್ಷಗಳ ನಂತರ ಅಸ್ಥಿಪಂಜರ ಪತ್ತೆ, ಬಂಧನ!

ಎರಡು ವರ್ಷಗಳ ಹಿಂದೆ 28 ವರ್ಷದ ಮಹಿಳಾ ಪೇದೆಯನ್ನು ಕೊಲೆ ಮಾಡಿ ನಂತರ ಆಕೆಯ ಶವವನ್ನು ವಿಲೇವಾರಿ ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸ್‌ ಹೆಡ್ ಕಾನ್‌ಸ್ಟೆಬಲ್  42 ವರ್ಷದ ವ್ಯಕ್ತಿ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

published on : 2nd October 2023

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುವ ಯಾವುದೇ ಅವಕಾಶವನ್ನು ಬ್ರಿಜ್ ಭೂಷಣ್ ಸಿಂಗ್ ಕಳೆದುಕೊಂಡಿಲ್ಲ: ದೆಹಲಿ ಪೊಲೀಸರು

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ತಮಗೆ ಸಿಗುವ ಪ್ರತಿಯೊಂದು ಅವಕಾಶದಲ್ಲೂ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

published on : 24th September 2023

ದೆಹಲಿಯಲ್ಲಿ ಮತ್ತೊಂದು ಭೀಕರ ಹತ್ಯೆ: ಮೊಬೈಲ್ ಕಳ್ಳರಿಂದ ರಿಸೆಪ್ಷನಿಸ್ಟ್ ಗೆ ಇರಿದು ಕೊಲೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ಭೀಕರ ಕೊಲೆಯಾಗಿದ್ದು, ಮೊಬೈಲ್ ಕಳ್ಳರ ಗ್ಯಾಂಗ್ ವೊಂದು ರಿಸೆಪ್ಷನಿಸ್ಟ್ ಗೆ ಇರಿದು ಹತ್ಯೆ ಮಾಡಿದ್ದಾರೆ.

published on : 16th September 2023

ಮದುವೆಯಾಗುವುದಾಗಿ ನಂಬಿಸಿ ಜೆಎನ್‌ಯು ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ: ದೆಹಲಿ ಪೊಲೀಸರು

ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ಮದುವೆಯಾಗುವುದಾಗಿ ನಂಬಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

published on : 14th September 2023
1 2 3 4 5 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9