• Tag results for Districts

ಚುನಾವಣೆಗೂ ಮುನ್ನ ಜಿಲ್ಲಾ ಉಸ್ತುವಾರಿ ಮಂತ್ರಿ ಅದಲು-ಬದಲು: ಬೊಮ್ಮಾಯಿ ಸಂಪುಟ ಸಚಿವರ ಅಸಮಾಧಾನ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಮ್ಮ ಸಂಪುಟದ ಇಬ್ಬರು ಸಚಿವರ ಉಸ್ತುವಾರಿ ಬದಲಾವಣೆ ಆದೇಶವನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಜಿಲ್ಲೆಗಳ ಹಂಚಿಕೆ ಕುರಿತು ಕೆಲವು ಸಚಿವರು ಅಸಮಾಧಾನವನ್ನು ಬಹಿರಂಗಪಡಿಸಿದ್ದಾರೆ

published on : 6th August 2022

ಕೇರಳದಲ್ಲಿ ಭಾರೀ ಮಳೆ, ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ

ಕೇರಳದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಏಳು ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಿಸಿದೆ.

published on : 1st August 2022

'ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ': ಶಾಲಾ ಶಿಕ್ಷಕರಿಂದ ಸರ್ಕಾರಕ್ಕೆ ಬೇಡಿಕೆ, ಪ್ರತಿಭಟನೆ

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರ್ಕಾರದ ವಿರುದ್ಧ ನೂರಾರು ಸರ್ಕಾರಿ ಶಾಲಾ ಶಿಕ್ಷಕರು  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. 

published on : 3rd June 2022

'ವೋಕಲ್‌ ಫಾರ್‌ ಲೋಕಲ್‌': ಜಿಲ್ಲೆಗಳಲ್ಲಿ ಉದ್ಯೋಗ ಮೇಳ ನಡೆಸಲು ರಾಜ್ಯ ಸರ್ಕಾರ ಮುಂದು!

ಬೆಂಗಳೂರಿನಿಂದ ಹೊರಗಿರುವ ಸ್ಥಳೀಯರಿಗೆ ಉದ್ಯೋಗ ಒದಗಿಸಲು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆಎಸ್‌ಡಿಸಿ) ಪ್ರತಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳಗಳನ್ನು ನಡೆಸಲು ಮುಂದಾಗಿದೆ.

published on : 8th May 2022

ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ

ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

published on : 5th May 2022

ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ವಿಮಾನ ನಿಲ್ದಾಣ, ಗಡಿ ಜಿಲ್ಲೆಗಳಲ್ಲಿ ಮತ್ತೆ ಕಣ್ಗಾವಲು: ಸಿಎಂ ಬೊಮ್ಮಾಯಿ ಸುಳಿವು

ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾಂಕ್ರಾಮಿಕ ರೋಗದ ನಾಲ್ಕನೇ ಅಲೆಯ ಭೀತಿ ಆವರಿಸಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರದ...

published on : 26th April 2022

ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಳ ಸಾಧ್ಯತೆ: ಸಂಶೋಧನೆಯಲ್ಲಿ ಬಹಿರಂಗ

ನಗರದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್‌ಸ್ಟಿಟ್ಯೂಟ್ (ISI) ಸಂಶೋಧಕರು ಅಭಿವೃದ್ಧಿಪಡಿಸಿದ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಮುಂಚಿನ ಎಚ್ಚರಿಕೆಯಲ್ಲಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಳವಾಗಬಹುದೆಂದು ತೋರಿಸುತ್ತದೆ.

published on : 20th April 2022

ಭ್ರಷ್ಟಾಚಾರ ಆರೋಪ: ಸರ್ಕಾರದ ವಿರುದ್ಧ ಪ್ರತಿ ಜಿಲ್ಲೆಯಲ್ಲೂ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್

40 ಪರ್ಸೆಂಟ್ ಕಮಿಷನ್ ಆರೋಪದ ಹೋರಾಟವನ್ನು ತೀವ್ರಗೊಳಿಸಲು ನಿರ್ಧರಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರು, ಶನಿವಾರ ರಾಜ್ಯಾದ್ಯಂತ ರ್ಯಾಲಿಗಳು ಮತ್ತು ಪಾದಯಾತ್ರೆಗಳನ್ನು ನಡೆಸಿದರು.

published on : 17th April 2022

ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿತ- ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ  ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಮಳೆಯಾಗುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

published on : 20th March 2022

ರಾಜ್ಯದ 11 ಜಿಲ್ಲೆಗಳಲ್ಲಿ ಇಂದ್ರಧನುಷ್‌ 4.0 ಲಸಿಕೆ ಅಭಿಯಾನ

2 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಸಂಪೂರ್ಣ ಲಸಿಕಾಕರಣ ಉದ್ದೇಶದಿಂದ ಇಂಟೆನ್ಸಿಫೈಡ್ ಮಿಷನ್ ಇಂದ್ರಧನುಷ್ 4.0 ಅನ್ನು ಜಾರಿಗೆ ತರಲು ಆರೋಗ್ಯ ಇಲಾಖೆಯು ರಾಜ್ಯದ 11 ಜಿಲ್ಲೆಗಳನ್ನು ಆಯ್ಕೆ ಮಾಡಿದೆ.

published on : 7th March 2022

ರಾಜ್ಯದ 8 ಜಿಲ್ಲೆಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ: ಸಚಿವ ಮುರುಗೇಶ್ ನಿರಾಣಿ

ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ರಾಜ್ಯದ 8 ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದ್ದಾರೆ.

published on : 16th February 2022

10 ಜಿಲ್ಲೆಗಳಿಗೆ ವ್ಯಾಪಿಸಿದ ಹಿಜಾಬ್ v/s ಕೇಸರಿ ವಿವಾದದ ಕಿಚ್ಚು: ಬೋಧಕ ವರ್ಗ ಹೈರಾಣ; ರಾಜಕೀಯ ಬಣ್ಣ ಲೇಪನ

ಹಿಜಾಬ್-ಕೇಸರಿ ಶಾಲು ಧರಿಸಿಕೊಂಡು ಶಾಲೆ-ಕಾಲೇಜಿಗೆ ಬರುವ ವಿವಾದ ರಾಜಕೀಯ ಬಣ್ಣ ಪಡೆದುಕೊಂಡು ಇಂದು ರಾಜ್ಯದ 10 ಜಿಲ್ಲೆಗಳಿಗೆ ವ್ಯಾಪಿಸಿದೆ, ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ವಿಜಯಪುರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ ಮೊದಲಾದ ಜಿಲ್ಲೆಗಳಿಗೆ ವ್ಯಾಪಿಸಿದೆ.

published on : 7th February 2022

ಕೇಂದ್ರ ಬಜೆಟ್ 2022: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಲು ಬಿಜೆಪಿ ನಿರ್ಧಾರ

ಕೇಂದ್ರ ಬಜೆಟ್ ಕುರಿತು ಜಾಗೃತಿ ಮೂಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಸಭೆ ಹಾಗೂ ಚರ್ಚೆಗಳ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 1st February 2022

ಚುನಾವಣೆ ಹತ್ತಿರ ಇರುವಾಗ ಸ್ಥಳೀಯ ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆ ಉಸ್ತುವಾರಿ ನೀಡಿರುವುದು ಅನಾವಶ್ಯಕ: ಮಾಧುಸ್ವಾಮಿ

ಚುನಾವಣೆ ಹತ್ತಿರ ಇರುವಾಗ ಸ್ಥಳೀಯ ಜಿಲ್ಲೆ ಹೊರತುಪಡಿಸಿ ಇತರೆ ಜಿಲ್ಲೆ ಉಸ್ತುವಾರಿ ನೀಡಿರುವುದು ಸರಿಯಲ್ಲ ಎಂದು ಸಚಿವ ಮಾಧುಸ್ವಾಮಿ ಅವರು ಹೇಳಿದ್ದಾರೆ.

published on : 26th January 2022

ಗಣರಾಜ್ಯೋತ್ಸವ ಪರೇಡ್‌ಗೆ ನಾರಾಯಣ ಗುರು ಸ್ತಬ್ಧ ಚಿತ್ರ ತಿರಸ್ಕಾರ: ಕರಾವಳಿ ಜಿಲ್ಲೆಗಳಲ್ಲಿ ಆಕ್ರೋಶ

 ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಿಂದ ಸಮಾಜ ಸುಧಾರಕ  ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ತಿರಸ್ಕಾರ ವಿವಾದವು ದಕ್ಷಿಣ ಕನ್ನಡ ಮತ್ತು ಉಡುಪಿಯ ಅವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

published on : 24th January 2022
1 2 3 4 > 

ರಾಶಿ ಭವಿಷ್ಯ