social_icon
  • Tag results for Election Commission

ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ!

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿ ಕುಮಾರ್ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

published on : 3rd December 2023

36 ಲಕ್ಷ ಮತದಾರರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೋಟಿಸ್

ಮತದಾರರ ಪಟ್ಟಿಯಲ್ಲಿ ಹೆಸರು ನಕಲು ಮಾಡಿರುವ ಅಥವಾ ಎರಡು ಕಡೆ ಮತದಾರರ ಪಟ್ಟಿಯಲ್ಲಿ ಹೆಸರಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. 

published on : 2nd December 2023

2022-23 ಹಣಕಾಸು ವರ್ಷದಲ್ಲಿ 720 ಕೋಟಿ ರೂ. ದೇಣಿಗೆ ಪಡೆದ ಬಿಜೆಪಿ: ಚುನಾವಣಾ ಆಯೋಗ

2022-23ರ ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ಚುನಾವಣಾ ಟ್ರಸ್ಟ್‌ಗಳು, ವ್ಯಕ್ತಿಗಳು ಮತ್ತು  ಶಾಸಕರಿಂದ ಸುಮಾರು 720 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ಸ್ವೀಕರಿಸಿದೆ.

published on : 30th November 2023

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನ; ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ದೂರು

ತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ  ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 'ಡೀಪ್‌ಫೇಕ್' ತಂತ್ರಜ್ಞಾನವನ್ನು ಬಳಸಿ ನಕಲಿ ಸುದ್ದಿಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

published on : 30th November 2023

ತೆಲಂಗಾಣ ಪತ್ರಿಕೆಗಳಲ್ಲಿ ಕರ್ನಾಟಕ ಸರ್ಕಾರದ ಜಾಹಿರಾತು: ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದ ಡಿಕೆ ಶಿವಕುಮಾರ್

ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ನೀಡಿದ ಜಾಹೀರಾತುಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ. ಏಕೆಂದರೆ, ಅವುಗಳಲ್ಲಿ ಮತ ಕೇಳಿಲ್ಲ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

published on : 28th November 2023

ತೆಲಂಗಾಣ ಪತ್ರಿಕೆಗಳಲ್ಲಿ ಗ್ಯಾರಂಟಿ ಬಗ್ಗೆ ಜಾಹಿರಾತು: ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ನೋಟಿಸ್

ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ಗ್ಯಾರಂಟಿ ಕುರಿತು ಜಾಹಿರಾತು ನೀಡುವುದನ್ನು ನಿಲ್ಲಿಸುವಂತೆ ಚುನಾವಣಾ ಆಯೋಗ ಸೋಮವಾರ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದ ಕಾರಣದಿಂದ ವಿವರಣೆಯನ್ನು ಕೇಳಿದೆ.

published on : 27th November 2023

ಬಾಂಗ್ಲಾದೇಶ ವಲಸಿಗರಿಗೂ ಮತದಾರರ ಗುರುತಿನ ಚೀಟಿ: ಟಿಎಂಸಿ ನಾಯಕಿ ಭರವಸೆ, ಭುಗಿಲೆದ್ದ ವಿವಾದ

ಇನ್ನು ಮೂರು ತಿಂಗಳಲ್ಲಿ ಚುನಾವಣೆ ಇದ್ದು, ರಾಜ್ಯದಲ್ಲಿರುವ ಎಲ್ಲ ಬಾಂಗ್ಲಾದೇಶಿ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಗ್ರಾಸವಾಗಿದೆ.

published on : 26th November 2023

Graduate Constituency Polls: ಒಂದು ತಿಂಗಳಲ್ಲಿ ಕೇವಲ 15 ಸಾವಿರ ಹೊಸ ಮತದಾರರ ನೋಂದಣಿ- BBMP

ಪ್ರತಿ ವರ್ಷ ಲಕ್ಷಾಂತರ ಪದವೀಧರರನ್ನು ಉತ್ಪಾದಿಸುವ ರಾಜ್ಯ ರಾಜಧಾನಿ ಬೆಂಗಳೂರು, ಸೆಪ್ಟೆಂಬರ್ 30 ರಂದು ಹೊಸ ಮತದಾರರ ನೋಂದಣಿಗೆ ಭಾರತೀಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದಾಗಿನಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಿತಿಯಲ್ಲಿ ಕೇವಲ 15,000 ಹೊಸ ಪದವೀಧರ ಮತದಾರರನ್ನು ಮಾತ್ರ ನೊಂದಾಯಿಸಿದೆ.

published on : 6th November 2023

ನ.30ಕ್ಕೆ ತೆಲಂಗಾಣ ವಿಧಾನಸಭಾ ಚುನಾವಣೆ; ಅಧಿಸೂಚನೆ ಹೊರಡಿಸಿದ ಆಯೋಗ, ಇಂದಿನಿಂದ ನಾಮಪತ್ರ ಸಲ್ಲಿಕೆ

ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಧಿಸೂಚನೆಯನ್ನು ಹೊರಡಿಸಿದ್ದು, ಇದನ್ನು ತೆಲಂಗಾಣ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದರೊಂದಿಗೆ 119 ವಿಧಾನಸಭಾ...

published on : 3rd November 2023

ಲೋಕಸಭೆ ಚುನಾವಣೆಗೆ ತಯಾರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಸಜ್ಜಾಗಿರುವ ಚುನಾವಣಾ ಆಯೋಗವು ಶುಕ್ರವಾರ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಆರಂಭಿಸಿದೆ.

published on : 27th October 2023

ಅಮಿತ್ ಶಾ, ಹಿಮಂತಾ ಶರ್ಮಾ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗದ ಮೊರೆ ಹೋಗಿದೆ. ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಅವರು ನೀಡಿದ ಹೇಳಿಕೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬುಧವಾರ ದೂರು ನೀಡಿದೆ.

published on : 25th October 2023

ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಂಎಸ್ ಗಿಲ್ ನಿಧನ

ಮಾಜಿ ಮುಖ್ಯ ಚುನಾವಣಾ ಆಯುಕ್ತ ಮನೋಹರ್ ಸಿಂಗ್ ಗಿಲ್ ಅವರು ನಿಧನರಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

published on : 15th October 2023

ಇಬ್ಬರು ಜಿಲ್ಲಾಧಿಕಾರಿ, ಮೂವರು ಎಸ್‌ಪಿಗಳನ್ನು ತಕ್ಷಣವೇ ವರ್ಗಾವಣೆ ಮಾಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಚುನಾವಣಾ ಆಯೋಗ

ಇಬ್ಬರು ಜಿಲ್ಲಾಧಿಕಾರಿಗಳು ಮತ್ತು ಮೂವರು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿದಂತೆ ಎಂಟು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡುವಂತೆ ಭಾರತ ಚುನಾವಣಾ ಆಯೋಗವು (ಇಸಿಐ) ಛತ್ತೀಸ್‌ಗಢ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ಅವರಿಗೆ ಯಾವುದೇ ಚುನಾವಣಾ ಸಂಬಂಧಿತ ಜವಾಬ್ದಾರಿಯನ್ನು ನೀಡಬಾರದು ಎಂದು ಸೂಚನೆ ನೀಡಿದೆ.

published on : 12th October 2023

ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು 'ಸರಿಯಾದ ಸಮಯಕ್ಕೆ' ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ: ಇಸಿ

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸರಿಯಾದ ಸಮಯಕ್ಕೆ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಸೋಮವಾರ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಅವರು, ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ ಬಳಿಕ ಈ ವಿಷಯ ತಿಳಿಸಿದರು.

published on : 9th October 2023

ಬಿಜೆಪಿ, ಮಿತ್ರಪಕ್ಷಗಳ ವಿದಾಯಕ್ಕೆ ಮುಹೂರ್ತ ಫಿಕ್ಸ್: ಪಂಚ ರಾಜ್ಯಗಳ ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮಲ್ಲಿಕಾರ್ಜುನ ಖರ್ಗೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬಳಿಗೆ ಹೋಗುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯನ್ನು ಭರವಸೆಯಾಗಿ ನೀಡುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಿಳಿಸಿದ್ದಾರೆ.

published on : 9th October 2023
1 2 3 4 5 6 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9