- Tag results for Election comission
![]() | ಹೆಚ್ ಡಿ ರೇವಣ್ಣ ಮತ ಸಿಂಧು: ಚುನಾವಣಾಧಿಕಾರಿ ಕ್ಲೀನ್ ಚಿಟ್ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರು ಇಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಮತದಾನ ಮಾಡುವಾಗ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಗೆ ತೋರಿಸಿದ್ದರು ಅವರ ಮತವನ್ನು ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ದೂರು ನೀಡಿದ್ದರು. |
![]() | ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾಗಿ, ಅತಿ ಹಿರಿಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮೇ 15ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. |
![]() | ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚುವ ಪ್ರಶ್ನೆಯೇ ಇಲ್ಲ: ಸಿಇಸಿ ಸುಶಿಲ್ ಚಂದ್ರವಿದ್ಯುನ್ಮಾನ ಮತ ಯಂತ್ರ(EVM) ಬಗ್ಗೆ ಸಮಾಜವಾದಿ ಪಕ್ಷದ ನಾಯಕರು ಮಾಡಿರುವ ಆರೋಪಕ್ಕೆ ಉತ್ತರಿಸಿರುವ ಮುಖ್ಯ ಚುನಾವಣಾ ಆಯುಕ್ತ ಸುಶಿಲ್ ಚಂದ್ರ, ಚುನಾವಣಾ ಆಯೋಗ ಯಾವತ್ತಿಗೂ ಪಾರದರ್ಶಕತೆ ಕಾಪಾಡಿಕೊಂಡು ಬಂದಿರುವುದರಿಂದ ಇವಿಎಂನ್ನು ತಿರುಚುವ ಪ್ರಶ್ನೆಯೇ ಬರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. |
![]() | ವಿಧಾನ ಪರಿಷತ್ ಚುನಾವಣೆ ನಾಮಪತ್ರ ಸಲ್ಲಿಕೆಯಲ್ಲಿ ಆಕ್ಷೇಪ: ಹೆಚ್ ಡಿ ರೇವಣ್ಣ ಪುತ್ರ ಡಾ ಸೂರಜ್ ಗೆ ಹೈಕೋರ್ಟ್ ನೊಟೀಸ್ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧೆಗೆ ಹಾಸನ ಕ್ಷೇತ್ರದಿಂದ ಹೆಚ್ ಡಿ ರೇವಣ್ಣ(H D Revanna) ಅವರ ಪುತ್ರ ಡಾ ಸೂರಜ್(Dr Suraj) ಆರ್ ಅವರ ನಾಮಪತ್ರವನ್ನು ತಿರಸ್ಕರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. |
![]() | 'ಹೊಸ ಪಕ್ಷ ಕಟ್ಟುತ್ತೇನೆ, ಚುನಾವಣಾ ಆಯೋಗ ಅನುಮತಿ ನೀಡಿದ ಕೂಡಲೇ ಪಕ್ಷದ ಹೆಸರು, ಚಿಹ್ನೆ ಘೋಷಣೆ': ಕ್ಯಾ. ಅಮರಿಂದರ್ ಸಿಂಗ್ನಾನು ಹೊಸ ಪಕ್ಷ ಸ್ಥಾಪನೆ ಮಾಡುತ್ತಿದ್ದು ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಘೋಷಣೆ ಮಾಡುತ್ತೇನೆ, ನನ್ನ ವಕೀಲರು ಈ ಕುರಿತಂತೆ ಕೆಲಸದಲ್ಲಿ ತೊಡಗಿದ್ದಾರೆ ಎಂದು ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ ಸಿಂಗ್ ಹೇಳಿದ್ದಾರೆ. |
![]() | ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ಇತ್ತೀಚಿನ ಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತವಾಗಿ ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಹೈಕೋರ್ಟ್ ಭಾರತ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ. |
![]() | 'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ. |
![]() | ಕೋವಿಡ್ ನಿಯಮ ಪಾಲಿಸಿ, ಇಲ್ಲದಿದ್ದರೆ ರ್ಯಾಲಿಗಳನ್ನು ನಿಷೇಧಿಸುತ್ತೇವೆ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. |
![]() | ಚುನಾವಣಾ ಪ್ರಚಾರ ವೇಳೆ ಮಾಸ್ಕ್ ಕಡ್ಡಾಯ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್ಪ್ರಸ್ತುತ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶ ಹೊರಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ. |
![]() | ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿಲ್ಲ, ಭದ್ರತಾ ಸಿಬ್ಬಂದಿಯ ಲೋಪದೋಷದಿಂದ ಗಾಯವಾಗಿದೆ: ಚುನಾವಣಾ ಆಯೋಗಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದು ಗಾಯಗಳಾಗಿರುವ ಸಾಧ್ಯತೆಯನ್ನು ಭಾರತೀಯ ಚುನಾವಣಾ ಆಯೋಗದ ಮೂಲಗಳು ತಳ್ಳಿಹಾಕಿವೆ. ಪಶ್ಚಿಮ ಬಂಗಾಳ ರಾಜ್ಯದ ಚುನಾವಣಾ ವೀಕ್ಷಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ವರದಿ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ. |
![]() | 'ಸರ್ಕಾರಿ ಅಧಿಕಾರಿ ರಾಜ್ಯ ಚುನಾವಣಾ ಆಯುಕ್ತರಾಗಲು ಸಾಧ್ಯವಿಲ್ಲ': ಗೋವಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳೊಂದಿಗೆ ಸಹಯೋಗ ಹೊಂದಿರುವ ಅಥವಾ ಸರ್ಕಾರಿ ಉದ್ಯೋಗದಲ್ಲಿರುವ ವ್ಯಕ್ತಿ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಲು ಸಾಧ್ಯವಿಲ್ಲ, ಚುನಾವಣಾ ಆಯುಕ್ತರಾಗಲು ಸ್ವತಂತ್ರ ವ್ಯಕ್ತಿ ಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. |
![]() | ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ದೆಹಲಿಯಲ್ಲಿ ಚುನಾವಣಾ ಆಯೋಗ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಟಿಎಂಸಿ ನಿಯೋಗತೃಣಮೂಲ ಕಾಂಗ್ರೆಸ್ ನ ಆರು ಸದಸ್ಯರ ನೇತೃತ್ವದ ಸಂಸದೀಯ ನಿಯೋಗ ದೆಹಲಿಯಲ್ಲಿ ಶುಕ್ರವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದೆ. ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ಕಳೆದ ಮಂಗಳವಾರ ನಡೆದ ಹಲ್ಲೆಯ ಬಗ್ಗೆ ಮಾಹಿತಿ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |
![]() | ಚುನಾವಣೆ ಇರುವ ರಾಜ್ಯಗಳಲ್ಲಿ ಕೊರೋನಾ ಲಸಿಕೆ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಬೇಡಿ: ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆಮುಂಬರುವ ದಿನಗಳಲ್ಲಿ ಚುನಾವಣೆಯಿರುವ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೋನಾ ವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ. |
![]() | ಎಂಟು ಹಂತಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ: ಚುನಾವಣಾ ಆಯೋಗ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. |
![]() | ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: 5 ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಪರಾಹ್ನ ತಮಿಳು ನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಪ್ರಕಟಿಸುವ ನಿರೀಕ್ಷೆಯಿದೆ. |