- Tag results for Employees
![]() | ಸಿಬ್ಬಂದಿಗೆ ವೇತನ ನೀಡಲು ನಿಗಮದಲ್ಲಿ ಹಣವಿಲ್ಲ: ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿರಾಜ್ಯದಲ್ಲಿ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾದಿಂದ ಅನಾರೋಗ್ಯ, ಆರ್ಥಿಕ ದುಸ್ಥಿತಿ ಸಮಸ್ಯೆಗಳ ಮಧ್ಯೆ ಸಾರಿಗೆ ಇಲಾಖೆ ನೌಕರರ ಮುಷ್ಕರ ಸಾಮಾನ್ಯ ಜನತೆಗೆ ಮತ್ತು ಸರ್ಕಾರಕ್ಕೆ ಕೂಡ ತಲೆನೋವಾಗಿದೆ. |
![]() | ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ಇಲಾಖೆ ನೌಕರರ ಮುಷ್ಕರ: ಹಲವು ನೌಕರರ ವರ್ಗಾವಣೆ, ಮುಂದುವರಿದ ಪ್ರಯಾಣಿಕರ ಪರದಾಟವೇತನ ಹೆಚ್ಚಳಕ್ಕೆ ಆಗ್ರಹಿಸಿ, ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. |
![]() | 6ನೇ ವೇತನ ಆಯೋಗವನ್ನು ಜಾರಿಗೊಳಿಸದಿರಲು ವೈಜ್ಞಾನಿಕ ಕಾರಣ ನೀಡಿ: ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಕೆ.ಎಸ್.ಆರ್.ಟಿ.ಸಿ. ನೌಕರರಿಗೆ ಆರನೇ ವೇತನ ಆಯೋಗದನುಸಾರ ವೇತನ ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣವನ್ನು ನೀಡಬೇಕೆಂದು ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. |
![]() | ಕೆಲಸಕ್ಕೆ ಮರಳಿದ ಮತ್ತಷ್ಟು ಕೆಎಸ್ಆರ್ಟಿಸಿ ಸಿಬ್ಬಂದಿ: ಮುಷ್ಕರ ಮಾತ್ರ ಅನಿರ್ದಿಷ್ಟಾವಧಿ ಮುಂದುವರಿಕೆರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿದಿದ್ದು, ಎರಡನೇ ದಿನವಾದ ನಿನ್ನೆ ಹಲವು ಚಾಲಕರು ಮತ್ತು ನಿರ್ವಾಹಕರು ಕೆಲಸಕ್ಕೆ ಹಾಜರಾಗಿದ್ದರು. |
![]() | ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ನೊಟೀಸ್ ಗೆ ಕ್ಯಾರೇ ಎನ್ನದ ಸಿಬ್ಬಂದಿ, ಪ್ರಯಾಣಿಕರ ಪರದಾಟರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಕ್ಕೆ ಬಸ್ಸನ್ನೇ ನಂಬಿಕೊಂಡಿರುವ ಜನಸಾಮಾನ್ಯರ ಮೇಲೆ ಮುಷ್ಕರದ ಬಿಸಿ ತೀವ್ರವಾಗಿ ತಟ್ಟಿದೆ. |
![]() | ಸಾರಿಗೆ ಸಚಿವರ ತವರು ಜಿಲ್ಲೆಯಲ್ಲೇ ಇಲಾಖೆ ನೌಕರ ಆತ್ಮಹತ್ಯೆ: ಅಧಿಕಾರಿಗಳಿಂದ ಕಿರುಕುಳ ಆರೋಪವೇತನ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಪ್ರತಿಭಟನೆ ತೀವ್ರವಾಗಿದೆ. |
![]() | ಸಾರಿಗೆ ನೌಕರರ ಮುಷ್ಕರ: ಒಪ್ಪಂದದ ಆಧಾರದ ಮೇಲೆ ನಿವೃತ್ತ ಚಾಲಕ, ನಿರ್ವಾಹಕರ ನಿಯೋಜನೆ!ಸಾರಿಗೆ ನೌಕರರ ಮುಷ್ಕರಿಂದ ಸಾರ್ವಜನಿಕರ ಪ್ರಯಾಣಕ್ಕೆ ತೊಂದರೆಯುಂಟಾಗದಿರಲು ಹೊಸಹೊಸ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುತ್ತಿರುವ ಸಾರಿಗೆ ಇಲಾಖೆ, ಇದೀಗ ಸೇವೆಗೆ ನಿವೃತ್ತ ಚಾಲಕ ಹಾಗೂ ನಿರ್ವಾಹಕರನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನಿಯೋಜಿಸುತ್ತಿದೆ. |
![]() | ಶೇ.10ರಷ್ಟು ವೇತನ ಪರಿಷ್ಕರಣೆಗೆ ಸಿದ್ದ, ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಾರಿಗೆ ನೌಕರರಿಗೆ ಅಂಜುಂ ಪರ್ವೇಜ್ ಮನವಿಸಾರಿಗೆ ನೌಕರರು ತಮ್ಮ ಹಠ ಬಿಟ್ಟು ಕರ್ತವ್ಯಕ್ಕೆ ಬರಬೇಕು. ನಾವು ಈಗಲೂ ಅವರೊಂದಿಗೆ ಮಾತುಕತೆಗೆ ಸಿದ್ದ. ತಕ್ಷಣ ಮಧ್ಯಂತರ ಪರಿಹಾರವಾಗಿ ಶೇ.10ರಷ್ಟು ವೇತನ ಪರಿಷ್ಕರಣೆಗೆ ನಾವು ಸಿದ್ದ. |
![]() | 2ನೇ ದಿನಕ್ಕೆ ಕಾಲಿಟ್ಟ ಬಸ್ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ, ಖಾಸಗಿ ಬಸ್-ಆಟೋಗಳ ಆಟಾಟೋಪ!ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ನಡೆಸುತ್ತಿರುವ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಯಾಣಿಕರ ಪರದಾಟ ಮುಂದುವರಿದಿದೆ. |
![]() | ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಬೇಡಿ, ಕೆಲಸಕ್ಕೆ ಹಾಜರಾಗಿ: ಮುಷ್ಕರ ನಿರತ ಸಾರಿಗೆ ಇಲಾಖೆ ನೌಕರರಿಗೆ ಸಂಸದ ಪ್ರತಾಪ್ ಸಿಂಹ ಮನವಿರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದೆ, ಹೀಗಾಗಿ ಈ ಸಮಯದಲ್ಲಿ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ. |
![]() | ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಕೆ, ಪ್ರತಿಭಟನೆ ಬಿಟ್ಟು ಮಾತುಕತೆಗೆ ಬನ್ನಿ ಎಂದ ಸಿಎಂಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಯಲಿದ್ದು ಆರ್ಟಿಸಿ ನೌಕರರು ತಮ್ಮ ಹೋರಾಟವನ್ನು ಅನಿರ್ದಿಷ್ಟವಾಗಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸನ್ನು ಜಾರಿಗೆ ತರುವವರೆಗೆ, ಬೇಡಿಕೆ ಈಡೇರುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ. |
![]() | ಸಾರಿಗೆ ನೌಕರರ ಮುಷ್ಕರ ಅಂತ್ಯವಾಗುವವರೆಗೂ ಬಿಎಂಟಿಸಿ ಸಿಬ್ಬಂದಿ ಸಂಬಳಕ್ಕೆ ತಡೆ6ನೇ ವೇತನ ಶಿಫಾರಸ್ಸು ಜಾರಿಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಅಂತ್ಯವಾಗುವವರೆಗೂ ಬಿಎಂಟಿಸಿ ಸಿಬ್ಬಂದಿ ಸಂಬಳಕ್ಕೆ ತಡೆಯಾಗಲಿದ್ದು, ಕಾನೂನಿನ ಸಲಹೆ ಪಡೆದ ಬಳಿಕ ಸಂಬಳ ನೀಡುವ ಬಗ್ಗೆ ನಿರ್ಧರಿಸಲಾಗುತ್ತದೆ... |
![]() | 6ನೇ ವೇತನ ಆಯೋಗದ ಶಿಫಾರಸು ಜಾರಿ ಸಾಧ್ಯವಿಲ್ಲ; ಹಠ ಬಿಡಿ, ಮಾತುಕತೆಗೆ ಬನ್ನಿ: ಮುಷ್ಕರ ನಿರತರಿಗೆ ಸಿಎಂ ಯಡಿಯೂರಪ್ಪ ಮನವಿಬುಧವಾರದಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 6ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. |
![]() | 'ವೇತನ ಹೆಚ್ಚಿಸಲು ಸರ್ಕಾರ ಸಿದ್ಧ, ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ': ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿಯಾರದ್ದೋ ಮಾತು ಕೇಳಿ ಮುಷ್ಕರ ನಡೆಸಬೇಡಿ, ಅದರಿಂದ ನಾಳೆ ನಿಮಗೇ ತೊಂದರೆಯಾಗುತ್ತದೆ, ಮುಷ್ಕರ ನಿಲ್ಲಿಸಿ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನವಿ ಮಾಡಿಕೊಂಡಿದ್ದಾರೆ. |
![]() | 45 ವರ್ಷಕ್ಕೂ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚನೆಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, 45 ವರ್ಷಗಳ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಸೂಚನೆ ನೀಡಿದೆ |