• Tag results for Encounter

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಮೂವರು ಉಗ್ರರು ಹತ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. 

published on : 26th May 2022

ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಪಾಕ್ ಮೂಲದ 3 ಉಗ್ರರು ಹತ, ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

published on : 25th May 2022

ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಇಬ್ಬರು ಉಗ್ರರು ಹತ

ಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 13th May 2022

ಕುಲ್ಗಾಮ್ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಇಂದು ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ -ಎ- ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರ.

published on : 8th May 2022

ಪುಲ್ವಾಮಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

published on : 28th April 2022

ಕಾಶ್ಮೀರ: ಪುಲ್ವಾಮಾ ಎನ್‌ಕೌಂಟರ್ ನಲ್ಲಿ ಮೂವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪಹು ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆರಂಭಗೊಂಡ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

published on : 24th April 2022

ಕುಲ್ಗಾಂನಲ್ಲಿ ಎನ್ಕೌಂಟರ್: ಇಬ್ಬರು ಜೆಇಎಂ ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

published on : 24th April 2022

ಜಮ್ಮು ಎನ್‌ಕೌಂಟರ್: ಸೇನೆ ಸಕಾಲದಲ್ಲಿ ಸ್ಪಂದಿಸಿ ನಮ್ಮನ್ನು ರಕ್ಷಿಸಿತು - ಗುಂಡಿನ ಚಕಮಕಿಯಲ್ಲಿ ಸಿಲುಕಿದ ಕುಟುಂಬ

ಜಮ್ಮು ಮತ್ತು ಕಾಶ್ಮೀರದ ಜಲಾಲಾಬಾದ್ ನಲ್ಲಿ ಶುಕ್ರವಾರ ಬೆಳಗಿನ ಜಾವ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ತೀವ್ರ ಅಪಾಯಕ್ಕೆ ಸಿಲುಕಿದ್ದ ಕುಟುಂಬವನ್ನು ಭಾರತೀಯ ಸೇನೆ ರಕ್ಷಿಸಿದೆ.

published on : 22nd April 2022

ಸುಂಜ್ವಾನ್ ಎನ್ಕೌಂಟರ್: ಮೂರು ಉಗ್ರರ ಹೊಡೆದುರುಳಿಸಿದ ಸೇನೆ, ಸಿಐಎಸ್ಎಫ್ ಯೋಧ ಹುತಾತ್ಮ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಇನ್ನೆರಡು ದಿನಗಳಿರುವಂತೆಯೇ ಜಮ್ಮು ಮತ್ತು  ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು, ಇಂದು ನಡೆದ ಎನ್ ಕೌಂಟರ್ ನಲ್ಲಿ ಸೇನಾಪಡೆಗಳು ಮೂರು ಉಗ್ರರನ್ನು ಹೊಡೆದುರುಳಿಸಿವೆ.

published on : 22nd April 2022

ಬಾರಾಮುಲ್ಲ ಎನ್ಕೌಂಟರ್: ಮೋಸ್ಟ್ ವಾಂಟೆಡ್ ಉಗ್ರ ಕಾಂಟ್ರೂ ಸೇರಿ ಮೃತ ಉಗ್ರರ ಸಂಖ್ಯೆ 4ಕ್ಕೆ ಏರಿಕೆ

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾ ಎನ್ಕೌಂಟಕ್ ನಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಯೂಸುಫ್ ಕಾಂಟ್ರೂ ಸೇರಿ ನಾಲ್ಕು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಸೇನಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 22nd April 2022

ಪ್ರಧಾನಿ ಮೋದಿ ಭೇಟಿಗೆ ಕ್ಷಣಗಣನೆ; ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ, ಓರ್ವ ಯೋಧ ಹುತಾತ್ಮ, 4 ಮಂದಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯ ಪ್ರವಾಸಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಉಗ್ರರು ದಾಳಿ ಮಾಡಿ ಓರ್ವ ಯೋಧನನ್ನು ಕೊಂದು ಹಾಕಿದ್ದಾರೆ.

published on : 22nd April 2022

ಜಮ್ಮು-ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯಲ್ಲಿ ಎನ್ ಕೌಂಟರ್: ಎಲ್ ಇಟಿ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪರಿಸ್ವನಿ ಪ್ರದೇಶದಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಇ ತಯ್ಬಾ (LeT) ದ ಉನ್ನತ ಕಮಾಂಡರ್ ಯೂಸಫ್ ಕಂಟ್ರೂ ಸೇರಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 21st April 2022

ಕುಲ್ಗಾಮ್‌ ಎನ್‌ಕೌಂಟರ್‌: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 11th April 2022

ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಎಲ್ಇಟಿ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

ಏಪ್ರಿಲ್ 4ರಂದು ನಗರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಇಬ್ಬರು ಪಾಕಿಸ್ತಾನಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ.

published on : 10th April 2022

ಶ್ರೀನಗರದಲ್ಲಿ ಎನ್ಕೌಂಟರ್: ಓರ್ವ ಉಗ್ರ ಹತ

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ.

published on : 10th April 2022
1 2 3 4 5 6 > 

ರಾಶಿ ಭವಿಷ್ಯ