• Tag results for Exgratia

ಮಳೆ ನೀರು ನುಗ್ಗಿ 3,453 ಮನೆಗಳಿಗೆ ಹಾನಿ: ಸಿಎಂ ಆದೇಶದಂತೆ ಅಗತ್ಯ ದಾಖಲೆ ಪಡೆದು ಸಂತ್ರಸ್ತರಿಗೆ ರೂ.25 ಸಾವಿರ ಪರಿಹಾರ- ಬಿಬಿಎಂಪಿ

ಮಳೆಯಿಂದ ನಗರದ 3,453 ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದ್ದು, ಶನಿವಾರದಿಂದಲೇ ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ತಲಾ ರೂ.25 ಸಾವಿರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಶರತ್ ಅವರು ಮಾಹಿತಿ ನೀಡಿದ್ದಾರೆ.

published on : 22nd May 2022

ಮುಂಡ್ಕಾ ಬೆಂಕಿ ದುರಂತ: ತನಿಖೆಗೆ ಆದೇಶ, ಮೃತರ ಕುಟುಂಬಕ್ಕೆ ರೂ.10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕೇಜ್ರಿವಾಲ್

27 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡ ಬೆಂಕಿ ದುರಂತದ ಸ್ಥಳಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಭೇಟಿ ನೀಡಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ ರೂ.10 ಲಕ್ಷ ಪರಿಹಾರ ಘೋಷಿಸಿದ್ದಾರೆ.

published on : 14th May 2022

ಕುಶಿನಗರ ಮದುವೆ ಸಮಾರಂಭದಲ್ಲಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ನೆಬುವಾ ನೌರಂಗಿಯಾ ಪ್ರದೇಶದಲ್ಲಿ ವಿವಾಹ ಮಹೋತ್ಸವದ ವೇಳೆ ಬಾವಿಗೆ ಬಿದ್ದು 13 ಮಂದಿ ದುರ್ಮರಣವನ್ನಪ್ಪಿದ ಪ್ರಕರಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

published on : 17th February 2022

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಸೇತುವೆ ಮೇಲಿಂದ ಕೆಳಗೆ ಬಿದ್ದ ಕಾರು; ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ಸಾವು!

ವಾರ್ಧಾ: ಮಹಾರಾಷ್ಟ್ರದ ವಾರ್ಧಾ-ಯವತ್ಮಾಲ್​ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಶಾಸಕನ ಪುತ್ರ ಸೇರಿ 7 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

published on : 25th January 2022

ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಕೊರೋನಾದಿಂದ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ: ರಾಜ್ಯ ಸರ್ಕಾರ ಆದೇಶ

ಡೆಲ್ಟಾ ರೂಪಾಂತರಿ ಮತ್ತು ಓಮಿಕ್ರಾನ್​ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದು, ಕೋವಿಡ್ ಸೋಂಕಿನಿಂದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ ರೂ.1 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.

published on : 3rd December 2021

ಟೌಕ್ಟೇ ಚಂಡಮಾರುತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ತಲಾ 5 ಲಕ್ಷ ರೂ. ಪರಿಹಾರ

ರಾಜ್ಯದ ಕರಾವಳಿ ಪ್ರದೇಶ ಹಾಗೂ ಇತರೆ ಪ್ರದೇಶಗಳ ಮೇಲೆ ಟೌಕ್ಟೇ ಚಂಡಮಾರುತ ಗಂಭೀರ ಪರಿಣಾಮ ಬೀರಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. 

published on : 18th May 2021

ಮೃತ ರೈತರ ಕುಟುಂಬಕ್ಕೆ ಪರಿಹಾರ: ನಿಲುವು ಸ್ಪಷ್ಟಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ರೈತರು ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡರೆ ಅಂತಹ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ರೀತಿ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.

published on : 3rd March 2021

ರಾಶಿ ಭವಿಷ್ಯ