• Tag results for Farm Bills

ರೈತ ವಿರೋಧಿ ಮಸೂದೆ ವಿರುದ್ಧ ರಣಕಹಳೆ ಊದಿದ ಕಾಂಗ್ರೆಸ್!

ಕೃಷಿ ಮಸೂದೆ ವಿರುದ್ಧ ಶನಿವಾರ ಕಾಂಗ್ರೆಸ್ ನಡೆಸಿದ ರೈತ ಸಮ್ಮೇಳನವು ಉಪಚುನಾವಣೆಗೆ ನಾಂದಿ ಹಾಡಿದ್ದು, ಸಮ್ಮೇಳನದಲ್ಲಿ ಕೇಂದ್ರ ಮತ್ತು ರಾಜ್ಯದ ಸರ್ಕಾರದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದರು. 

published on : 11th October 2020

ರೈತರ ಆದಾಯ ದುಪ್ಪಟ್ಟು ಮಾಡಲು ಕೃಷಿ ಕಾಯ್ದೆಗಳ ಜಾರಿ: ಸಚಿವ ಡಿವಿ ಸದಾನಂದ ಗೌಡ

ರೈತರ ಆದಾಯವನ್ನು ದುಪ್ಪಟ್ಟು ಮಾಡಲು ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ ಕೃಷಿ ಸುಧಾರಣಾ ಮಸೂದೆಗಳು ಇವುಗಳಲ್ಲಿ ಪ್ರಮುಖವಾಗಿವೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 9th October 2020

ಬಿಜೆಪಿಗೆ ಅಧಿಕಾರ, ಹಣದ ಮದ ನೆತ್ತಿಗೇರಿದೆ: ಮಲ್ಲಿಕಾರ್ಜುನ ಖರ್ಗೆ ಟೀಕೆ

ಬಿಜೆಪಿಯವರಿಗೆ ಅಧಿಕಾರ ಮತ್ತು ಹಣದ ಅಹಂ ನೆತ್ತಿಗೇರಿದೆ. ಅಭಿವೃದ್ಧಿಯನ್ನೆ ಮರೆತು ಬಿಟ್ಟಿದ್ದಾರೆ. ಕೇವಲ ದೂಷಣೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾಲ ಕಳೆಯುತ್ತಿದ್ದಾರೆ ಎಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

published on : 2nd October 2020

ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ: ರಾಹುಲ್ ಗಾಂಧಿಯಿಂದ ಅ. 4 ರಿಂದ 6 ರವರೆಗೆ ಟ್ರಾಕ್ಟರ್ ರ್ಯಾಲಿ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇತ್ತೀಚಿಗೆ ಸಂಸತ್ತಿನಲ್ಲಿ ಅಂಗೀಕಾರಗೊಂಡ ನೂತನ ಕೃಷಿ ಮಸೂದೆ ವಿರುದ್ಧದ ಹೋರಾಟದಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಂಡಿದ್ದು, ವಿವಾದಾತ್ಮಕ ಕೃಷಿ ಮಸೂದೆ ವಿರೋಧಿಸಿ ಅಕ್ಟೋಬರ್ 4 ರಿಂದ 6 ರವರೆಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಗಳನ್ನು ನಡೆಸಲಿದ್ದಾರೆ.

published on : 2nd October 2020

ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಒಪ್ಪಂದ ಆಧಾರಿತ ಕೃಷಿಯ ಮೂಲಕ ರೈತರ ಬದುಕನ್ನು ನಾಶ ಮಾಡಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

published on : 29th September 2020

ಬಿಜೆಪಿ ಮುಕ್ತಗೊಳಿಸುವುದಕ್ಕಾಗಿ ಮತ್ತೊಂದು ಸ್ವಾತಂತ್ರ್ಯ ಹೋರಾಟ: ಡಿ.ಕೆ.ಶಿವಕುಮಾರ್

ಇತಿಹಾಸ ಸೃಷ್ಟಿಸಿದ್ದು ಕಾಂಗ್ರೆಸ್. ಇತಿಹಾಸವನ್ನು ಕಿತ್ತುಕೊಳ್ಳುವುದು ಬಿಜೆಪಿ. ಅಂದು ಬ್ರಿಟಿಷ್ ರಿಂದ ಮುಕ್ತಿ ಹೊಂದಲು ಹೋರಾಟ ಮಾಡಿದ ಮಾದರಿಯಲ್ಲಿಯೇ ಪ್ರಸಕ್ತ ಬಿಜೆಪಿ ಸರ್ಕಾರಗಳ ವಿರುದ್ಧ ಮತ್ತೆ ಹೋರಾಟ ಮಾಡಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ ನೀಡಿದ್ದಾರೆ.

published on : 28th September 2020

ವಿಪಕ್ಷಗಳ ವಿರೋಧದ ನಡುವೆಯೂ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ, ಇನ್ನು ಮುಂದೆ ಕಾನೂನು

ವಿಪಕ್ಷಗಳ ವಿರೋಧದ ನಡುವೆಯೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ಸಹಿ ಹಾಕಿದ್ದು, ಇಂದಿನಿಂದ ಕಾನೂನಾಗಿ ಮಾರ್ಪಾಡಾಗಲಿದೆ.

published on : 27th September 2020

ನೂತನ ಕೃಷಿ ಮಸೂದೆಗಳಿಗೆ ವಿರೋಧ: ಎನ್ ಡಿಎ ಒಕ್ಕೂಟ ತೊರೆದ ಅಕಾಲಿದಳ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿದ್ದ ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿ ತೊರೆದು ಎನ್ಡಿಎ ಒಕ್ಕೂಟದಿಂದ ಹೊರ ಬರಲು ನಿರ್ಧರಿಸಿದೆ.

published on : 26th September 2020

ಮೋದಿ ಸರ್ಕಾರ ಕೃಷಿ ಮಸೂದೆ ಹಿಂಪಡೆದು, ಎಂಎಸ್‌ಪಿ ಗ್ಯಾರಂಟಿ ನೀಡಬೇಕು: ರಾಹುಲ್ ಗಾಂಧಿ

ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಸರ್ಕಾರ ಯಾವುದೇ ವಿಳಂಬ ಮಾಡದೆ ಕೃಷಿ ವಲಯದ ಮಸೂದೆಗಳನ್ನು ಹಿಂಪಡೆದು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

published on : 26th September 2020

ಕೃಷಿ ಮಸೂದೆಗೆ ಮಹಾ ವಿಕಾಸ್ ಅಗಾಡಿ ವಿರೋಧ, ರಾಜ್ಯದಲ್ಲಿ ಜಾರಿ ಅಸಂಭವ: ಕಾಂಗ್ರೆಸ್

ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರ ವಿಕಾಸ್ ಅಗಾಡಿ ಸಹ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯ ಸಚಿವ ಬಾಲಾಸಾಹೇಬ್ ಥೋರತ್ ಅವರು ಶುಕ್ರವಾರ ಹೇಳಿದ್ದಾರೆ.

published on : 25th September 2020

ಕೃಷಿ ಮಸೂದೆ ವಿರೋಧಿಸಿ ಬಂದ್: ಪಂಜಾಬ್, ಹರಿಯಾಣದಲ್ಲಿ ಉತ್ತಮ ಪ್ರತಿಕ್ರಿಯೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕೆಲವು ರಾಜ್ಯಗಳಲ್ಲಿ ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. 

published on : 25th September 2020

ರಾಜ್ಯಸಭೆಯಲ್ಲಿ ಕಲಾಪ ಬಹಿಷ್ಕಾರ ನಿಲ್ಲಿಸಲು ಕೃಷಿ ಮಸೂದೆಗಳಲ್ಲಿ ಮೂರು ಬೇಡಿಕೆ ಇಟ್ಟ ಕಾಂಗ್ರೆಸ್ 

ಕೃಷಿ ಮಸೂದೆಗಳಿಗೆ ಮೂರು ಬೇಡಿಕೆಗಳು ಈಡೇರುವವರೆಗೂ ಪ್ರತಿಪಕ್ಷಗಳು ರಾಜ್ಯಸಭಾ ಕಲಾಪ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ತಿಳಿಸಿದ್ದಾರೆ.

published on : 22nd September 2020

ಕೃಷಿ ಮಸೂದೆಗಳು: ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ, ಬೃಹತ್ ಸಹಿ ಸಂಗ್ರಹ ಅಭಿಯಾನ

 ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಸೋಮವಾರ ಹೇಳಿದೆ.

published on : 21st September 2020

ರಾಷ್ಟ್ರಪತಿ ಭೇಟಿಗೆ ಪ್ರತಿಪಕ್ಷಗಳ ಪ್ರಯತ್ನ, ಕೃಷಿ ಮಸೂದೆಗೆ ಅಂಕಿತ ಹಾಕದಂತೆ ಒತ್ತಾಯ

ತೀವ್ರ ವಿರೋಧದ ನಡುವೆ ವಿವಾದಾತ್ಮಕ ಕೃಷಿ ಮಸೂದೆಗಳು ರಾಜ್ಯಸಭೆಯಲ್ಲಿ ಅಂಗೀಕಾರ ಗೊಂಡ ಬೆನ್ನಲ್ಲೇ, ಸರ್ಕಾರ ತನ್ನ ಕಾರ್ಯಸೂಚಿಯನ್ನು ವಿಧಾನದ ಬಗ್ಗೆ ಎನ್ ಡಿಯಯೇತರ ಪಕ್ಷಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು, ಪ್ರಸ್ತಾವಿತ ಮಸೂದೆಗಳಿಗೆ ಅಂಕಿತ ಹಾಕದಂತೆ ಒತ್ತಾಯಿಸಿವೆ.

published on : 21st September 2020

ಕೃಷಿ ಸಂಬಂಧಿತ ಮಸೂದೆ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲಾತ್ಕಾರದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪ

published on : 21st September 2020
1 2 >