- Tag results for Farmer protest
![]() | ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ರದ್ದತಿಗೆ ರೈತರ ಹೋರಾಟ: ಕಾಂಗ್ರೆಸ್ ಬೆಂಬಲಎಪಿಎಂಸಿ ಕಾಯ್ದೆ ಮತ್ತು ರಾಜ್ಯ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರದ್ದತಿಗೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಹೋರಾಟವನ್ನು ತೀವ್ರಗೊಳಿಸಲು, ರೈತರು, ದಲಿತ ಮತ್ತು ಕಾರ್ಮಿಕ ಸಂಘಟನೆಗಳನ್ನೊಳಗೊಂಡ ಸಂಯುಕ್ತ ಹೋರಾಟ ಕರ್ನಾಟಕ ನಿರ್ಧರಿಸಿದೆ. |
![]() | ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಟಿಕಾಯತ್ ಎಚ್ಚರಿಕೆಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಟೆಂಟ್ ಗಳನ್ನು ತೆರವುಗೊಳಿಸುವುದರ ವಿರುದ್ಧ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ. |
![]() | ಸಿಂಘು ಗಡಿ ಹತ್ಯೆ: ಸೋನಿಪತ್ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಿದ ಹರಿಯಾಣ ಪೊಲೀಸರುಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಿಂಘು ಗಡಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರ್ಯಾಣ ಪೊಲೀಸರು ಸೋನಿಪತ್ನಲ್ಲಿ ಒಬ್ಬನನ್ನು ಬಂಧಿಸಿದ್ದಾರೆ. |
![]() | ಸೆ. 27ರ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ: ಬೆಂಗಳೂರಿನಲ್ಲಿ ಖಾಕಿ ಸರ್ಪಕಾವಲುದೇಶದ ಅನ್ನದಾತ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೋಮವಾರ (ಸೆ.27) ನಡೆಯುತ್ತಿರುವ 'ಭಾರತ್ ಬಂದ್' ಕರೆಗೆ ರಾಜ್ಯ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 'ರೈತರ ಹಕ್ಕೊತ್ತಾಯದ ಶಾಂತಿಯುತ ಬಂದ್ ಕರೆಗೆ ಪಕ್ಷದ ಬೆಂಬಲವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ- ರಾಷ್ಟ್ರೀಯ ಕಿಸಾನ್ ಮಂಚ್ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಭಟನಾನಿರತ ರೈತರು ಆಡಳಿತರೂಢ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮತ ಚಲಾಯಿಸುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪಾಠ ಕಲಿಸಲಿದ್ದಾರೆ ಎಂದು ರಾಷ್ಟ್ರೀಯ ಕಿಸಾನ್ ಮಂಚ್ ಮಂಗಳವಾರ ಹೇಳಿದೆ. |
![]() | ಪ್ರತಿಭಟನಾ ಮೆರವಣಿಗೆಗಾಗಿ ರೈತರ ವಿರುದ್ಧದ ಕೇಸ್ ಹಿಂಪಡೆಯುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಒತ್ತಾಯಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧದ ಏಳು ತಿಂಗಳ ಹೋರಾಟದ ಅಂಗವಾಗಿ ಶನಿವಾರ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ರೈತರ ಮೇಲೆ ದಾಖಲಾಗಿರುವ ಕೇಸ್ ಗಳನ್ನು ವಾಪಸ್ ಪಡೆಯುವಂತೆ ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಒತ್ತಾಯಿಸಿದೆ. |
![]() | 500 ರೈತರು ಮೃತಪಟ್ಟರು ಎದೆಗುಂದದೆ ರೈತರಿಂದ ನಿರಂತರ ಪ್ರತಿಭಟನೆ: ರಾಹುಲ್ ಗಾಂಧಿಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 500 ಮಂದಿ ರೈತರು ಜೀವ ಕಳೆದುಕೊಂಡಿದ್ದರೂ ರೈತರು ಎದೆಗುಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ರೈತರ ಪ್ರತಿಭಟನೆಗೆ ಆರು ತಿಂಗಳು: ಕರಾಳ ದಿನಾಚರಣೆಗೆ ಸಜ್ಜು, ಜನ ಗುಂಪಾಗಿ ಸೇರದಂತೆ ದೆಹಲಿ ಪೊಲೀಸರ ಎಚ್ಚರಿಕೆ!ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗೆ ಆರು ತಿಂಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಬುಧವಾರ ಕರಾಳ ದಿನವನ್ನಾಗಿ ಆಚರಿಸಲು ರೈತ ಸಂಘಟನೆಗಳು ಮುಂದಾಗಿರುವಂತೆಯೇ, ಕೋವಿಡ್ ಪರಿಸ್ಥಿತಿ ಹಾಗೂ ಲಾಕ್ ಡೌನ್ ಕಾರಣದಿಂದಾಗಿ ಜನರು ಗುಂಪಾಗಿ ಸೇರದಂತೆ ದೆಹಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. |
![]() | ಮಾನವೀಯತೆ ಆಧಾರದ ಮೇಲೆ ಪ್ರತಿಭಟನೆ ಹಿಂಪಡೆಯಿರಿ: ರೈತರರಿಗೆ ಹರಿಯಾಣ ಮುಖ್ಯಮಂತ್ರಿ ಕೋರಿಕೆಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಾನವೀಯತೆ ಆಧಾರದಲ್ಲಿ ಪ್ರತಿಭಟನೆ ಹಿಂಪಡೆಯುವಂತೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮನವಿ ಮಾಡಿದ್ದಾರೆ. |
![]() | ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆ ಒಪ್ಪಿಕೊಳ್ಳುವ ಭರವಸೆಯಿದೆ-ರಾಕೇಶ್ ಟಿಕಾಯತ್ಮುಂದಿನ ಐದಾರು ತಿಂಗಳುಗಳಲ್ಲಿ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳುವ ವಿಶ್ವಾಸವಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಭಾನುವಾರ ಹೇಳಿದ್ದಾರೆ. |
![]() | ಕೃಷಿ ಕಾನೂನುಗಳ ವಿರುದ್ಧ ರಾಜ್ಯದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ರೈತ ಮುಖಂಡ ಟಿಕಾಯತ್ ಭಾಗಿಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳು ಮತ್ತು ವಿದ್ಯುತ್ ವಲಯ ಖಾಸಗೀಕರಣ ವಿರುದ್ಧದ ಹೋರಾಟವನ್ನು ವಿಸ್ತರಿಸುವ ಭಾಗವಾಗಿ ರೈತ ಪಂಚಾಯತ್ ಸಹಯೋಗದೊಂದಿಗೆ ಬೆಳಗಾವಿ ಸೇರಿದಂತೆ ರಾಜ್ಯದ ಮೂರು ಕಡೆಗಳಲ್ಲಿ ರೈತ ಚಳುವಳಿ ನಡೆಸಲು ಯೋಜಿಸಲಾಗಿದ್ದು, ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತ್ ಕಿಸಾನ್ ಮೋರ್ಚಾ ಮುಖಂಡೆ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದ್ದಾರೆ. |
![]() | ರೈತರ ಪ್ರತಿಭಟನೆ 100ನೇ ದಿನಕ್ಕೆ: ಇನ್ನೂ ಪ್ರಬಲರಾಗಿ ಸಾಗುತ್ತಿದ್ದೇವೆ ಎಂದ ಯೂನಿಯನ್ ಮುಖಂಡರುಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಶನಿವಾರ ನೂರನೇ ದಿನಕ್ಕೆ ಕಾಲಿಡಲಿದೆ.ತಮ್ಮ ಚಳವಳಿ ಮುಗಿದಿಲ್ಲ, ಗಟ್ಟಿ ದನಿಯೊಂದಿಗೆ ಸಾಗುತ್ತಿರುವುದಾಗಿ ಯೂನಿಯನ್ ಮುಖಂಡರು ಹೇಳಿದ್ದಾರೆ. |
![]() | ನೂತನ ಕೃಷಿ ಕಾನೂನುಗಳು ರೈತರಿಗೆ 'ಡೆತ್ ವಾರೆಂಟ್' - ಅರವಿಂದ್ ಕೇಜ್ರಿವಾಲ್ವಿವಾದಾತ್ಮಕ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರೆಂಟ್ ಆಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ. |
![]() | ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿಡುವಂತೆ ರೈತರಿಗೆ ಸೂಚಿಸಿದ ಟಿಕಾಯತ್!ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ರದ್ಧತಿಗೆ ಪ್ರತಿಭಟನೆ ಮುಂದುವರೆದಿರುವಂತೆಯೇ, ಯಾವುದೇ ವೇಳೆಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳುವ ಸಾಧ್ಯತೆಯಿದ್ದು, ಟ್ರ್ಯಾಕ್ಟರ್ ಗಳನ್ನು ಸಜ್ಜಾಗಿ ಇಟ್ಟುಕೊಳ್ಳುವಂತೆ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, ರೈತರಿಗೆ ಹೇಳಿದ್ದಾರೆ. |
![]() | ಮೂರು ವಿವಾದಾತ್ಮಕ ಕಾನೂನುಗಳ ಕುರಿತು ರೈತರೊಂದಿಗೆ ಮಾತುಕತೆಗೆ ಸರ್ಕಾರ ಸಿದ್ಧ: ತೋಮರ್ವಿವಾದಾತ್ಮಕ ಮೂರು ಕಾನೂನುಗಳನ್ನು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲು ರೈತರ ಒಪ್ಪಿಕೊಂಡರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. |