• Tag results for Govind Karjol

ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಪರಿಸ್ಥಿತಿ ವಿವರಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಕಾರಜೋಳ

ರಾಜ್ಯದ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡಿದರು.

published on : 28th May 2021

ಕೋವಿಡ್ ನಿಯಂತ್ರಣ ಸಭೆ: ಆಕ್ಸಿಜನ್, ರೆಮಿಡಿಸಿವಿರ್ ಒದಗಿಸಲು ಕ್ರಮ- ಗೋವಿಂದ ಕಾರಜೋಳ

ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರಿಗೆ ಅಗತ್ಯವಿರುವ ಆಕ್ಸಿಜನ್, ರೆಮಿಡಿಸಿವಿರ್ ಒದಗಿಸುವುದರ ಜತೆಗೆ ಕೋವಿಡ್ ನಿಯಂತ್ರಣಕ್ಕೆ ಸರಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

published on : 7th May 2021

ವೆಬ್ ಸೈಟ್ ಮೂಲಕ ಸರಕಾರಿ-ಖಾಸಗಿ ಆಸ್ಪತ್ರೆಗಳ ಬೆಡ್ ಮಾಹಿತಿ ಒದಗಿಸಲು ಕಾರಜೋಳ ಸೂಚನೆ

ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್‌ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

published on : 4th May 2021

ಈಶ್ವರಪ್ಪ ಪತ್ರ ಸಮರ: ಬಿಎಸ್'ವೈ ಗೆ ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್ ಬೆಂಬಲ

ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ರಾಜ್ಯಪಾಲರು, ಪಕ್ಷದ  ಹೈಕಮಾಂಡ್'ಗೆ ದೂರು ನೀಡಿದ ಸಚಿವ ಈಶ್ವರಪ್ಪ ವಿರುದ್ಧ ಬಿಜೆಪಿಯ ಮತ್ತಷ್ಟು ಸಚಿವರು, ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದ್ದಾರೆ. 

published on : 3rd April 2021

ಜೆಪಿ ಎಸ್‌ಸಿ/ಎಸ್‌ಟಿ ಮೋರ್ಚಾ ಕೋರ್ ಸಮಿತಿಯಲ್ಲಿ ಉಪ ಮುಖ್ಯಮಂತ್ರಿ ಕಾರಜೋಳ ಸೇರಿ ರಾಜ್ಯದ ಆರು ನಾಯಕರಿಗೆ ಸ್ಥಾನ 

ಉಪಮುಖ್ಯಮಂತ್ರಿ ಗೋವಿಂಫ಼ ಕಾರಜೋಳ ಸೇರಿದಂತೆ ರಾಜ್ಯ ಬಿಜೆಪಿಯ ಐವರು ನಾಯಕರನ್ನು ಪಕ್ಷದ ರಾಷ್ಟ್ರೀಯ ಎಸ್‌ಸಿ / ಎಸ್‌ಟಿ ಮೋರ್ಚಾ ಕೋರ್ ಸಮಿತಿಯ ವಿಶೇಷ ಮತ್ತು ಶಾಶ್ವತ ಆಹ್ವಾನಿತರಾಗಿ ನೇಮಕ ಮಾಡಲಾಗಿದೆ. ಇದರೊಡನೆ ಇನ್ನೊಬ್ಬ ನಾಯಕನನ್ನು ಸದಸ್ಯರಾಗಿ ನೇಮಿಸಲಾಗಿದೆ.

published on : 29th March 2021

3500 ಕೋಟಿ ರೂ.ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಡಿಪಿಆರ್ ಸಿದ್ಧಪಡಿಸಲು ಸೂಚನೆ- ಕಾರಜೋಳ

 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ  ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಅಭಿವೃದ್ಧಿಪಡಿಸಲು ಡಿಪಿಆರ್ ಸಿದ್ದಪಡಿಸಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.

published on : 28th February 2021

ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ನಾಲ್ಕು ಸೈನಿಕ ಶಾಲೆ: ಡಿಸಿಎಂ ಕಾರಜೋಳ 

ನಾಲ್ಕು ಕಂದಾಯ ವಿಭಾಗದಲ್ಲೂ ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನದಡಿಯಲ್ಲಿ ನಾಲ್ಕು ಸೈನಿಕ ವಸತಿ ಶಾಲೆ ಆರಂಭಿಸುವ ಚಿಂತನೆ ಇದ್ದು, ಇದಕ್ಕಾಗಿ ಬೇಕಾದ ಭೂಮಿ ಮತ್ತು ಅನುದಾನವನ್ನು ಸರ್ಕಾರ ನೀಡಲಿದೆ.

published on : 3rd February 2021

ಶಿವಾಜಿ ಮೂಲವೇ ಕನ್ನಡ, ಉದ್ಧವ್ ಠಾಕ್ರೆಗೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಗೋವಿಂದ ಕಾರಜೋಳ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಇತಿಹಾಸ ಗೊತ್ತಿಲ್ಲ. ಶಿವಾಜಿ ಮಹಾರಾಜರ ಮೂಲವೇ ಕರ್ನಾಟಕ ಎಂದು ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ ಅವರು ಭಾನುವಾರ ತಿರುಗೇಟು ನೀಡಿದ್ದಾರೆ.

published on : 31st January 2021

ಯತ್ನಾಳ್, ಕತ್ತಿ ಹೊರತು ಎಲ್ಲರೂ ಯಡಿಯೂರಪ್ಪ ನಾಯಕತ್ವಕ್ಕೆ ಬೆಂಬಲ: ಡಿಸಿಎಂ ಗೋವಿಂದ ಕಾರಜೋಳ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೊರತುಪಡಿಸಿ ಉಳಿದ 118 ಬಿಜೆಪಿ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವಕ್ಕೆ ಬೆಂಬಲಿಸಿದ್ದು, ಅವರ ಕಾರ್ಯಕ್ಕೆ ಸಮಾ ಧಾನ ವ್ಯಕ್ತಪಡಿಸಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 

published on : 5th January 2021

ಸರ್ಕಾರಿ ಕಚೇರಿಗಳಿಗಾಗಿ 50 ಮಹಡಿಗಳ ಅವಳಿಗೋಪುರ ನಿರ್ಮಾಣ: ಗೋವಿಂದ ಕಾರಜೋಳ

ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವ ಸದುದ್ದೇಶದಿಂದ ರಾಜಧಾನಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಆನಂದರಾವ್ ಸರ್ಕಲ್ ಬಳಿ 50 ಮಹಡಿಗಳ ಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. 

published on : 11th December 2020

ಬಂಗಾರದ ಕಿರೀಟವನ್ನು ಸರ್ಕಾರಕ್ಕೆ ಒಪ್ಪಿಸಿದ ಗೋವಿಂದ ಕಾರಜೋಳ

ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಕಾರಜೋಳ ಗ್ರಾಮಸ್ಥರು ತಮಗೆ ನೀಡಿದ್ದ ಬಂಗಾರದ ಕಿರೀಟವನ್ನು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಗುರುವಾರ ವಿಧಾನಸೌಧದಲ್ಲಿ ಮುಖ್ಯಕಾರ್ಯದರ್ಶಿಯರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

published on : 10th December 2020

ರಾಷ್ಟ್ರೀಯ ಹೆದ್ದಾರಿಗಳು ಸ್ಥಳೀಯ ಸಂಸ್ಥೆಯ ಜವಾಬ್ದಾರಿಯಾಗಿದೆ: ಗೋವಿಂದ ಕಾರಜೋಳ

ರಾಷ್ಟ್ರೀಯ ಹೆದ್ದಾರಿ ನಿರ್ವಹಣೆ ಕುರಿತು ಮೂಡಿದ್ದ ಗೊಂದಲಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸೋಮವಾರ ತೆರೆ ಎಳೆದಿದ್ದಾರೆ. 

published on : 8th December 2020