• Tag results for HDK

ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂದಿದ್ದಾರೆ. 

published on : 18th January 2022

ಕಾಂಗ್ರೆಸ್ ಗೆ ಸೆಡ್ಡು: ಜ.26 ರಿಂದ ಜೆಡಿಎಸ್ ನಿಂದ 'ಜನತಾ ಜಲಧಾರೆ' ಆಂದೋಲನ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.

published on : 7th January 2022

ಮೇಕೆದಾಟು ಯೋಜನೆ: ಕೇವಲ ಮತಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ- ಕುಮಾರಸ್ವಾಮಿ

ಮೇಕೆದಾಟು ವಿಚಾರದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದು, ಕಾಂಗ್ರೆಸ್ ಪಾದಯಾತ್ರೆ ಕೇವಲ ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 30th December 2021

ನೀಟ್ ಸೀಟು ಹಂಚಿಕೆ: ಸುಪ್ರೀಂಗೆ ಕೂಡಲೇ ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಎಚ್ ಡಿಕೆ ಒತ್ತಾಯ

ನೀಟ್ ಸೀಟು ಹಂಚಿಕೆ ಪ್ರಕ್ರಿಯೆ ನೆಗೆಗುದಿಗೆ ಬಿದ್ದಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

published on : 20th December 2021

ಎಂಇಎಸ್ ಪುಂಡರಿಂದ ಪೊಲೀಸ್ ವಾಹನಗಳಿಗೆ ಬೆಂಕಿ ಅಕ್ಷಮ್ಯ, ದುರುಳರಿಗೆ ಕನ್ನಡಿಗರ ಶಕ್ತಿ ತೋರಿಸಬೇಕು: ಎಚ್ ಡಿಕೆ

ಬೆಳಗಾವಿಯಲ್ಲಿ ಕಳೆದ ರಾತ್ರಿ ಪುಂಡರು ಪೊಲೀಸ್ ವಾಹನಗಳಿಗೆ ಹಾನಿ ಮಾಡಿ ಬೆಂಕಿ ಹಚ್ಚಿರುವುದು ಅಕ್ಷಮ್ಯವಾಗಿದೆ. ಕನ್ನಡಿಗರ ಹೆಮ್ಮೆ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಹಾಳು ಮಾಡಿರುವುದು ಕ್ಷಮಾರ್ಹವಲ್ಲದ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

published on : 18th December 2021

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಿಎಸ್‌ವೈ, ಹೆಚ್‌ಡಿಕೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ: ಸಿಎಂ ಬೊಮ್ಮಾಯಿ

ಡಿಸೆಂಬರ್ 10 ರಂದು ನಡೆಯಲಿರುವ ಎಂಎಲ್‌ಸಿ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ನಡುವೆ ಚುನಾವಣಾ ಪೂರ್ವ ಮೈತ್ರಿ ಕುರಿತು ಪಕ್ಷದ ಹಿರಿಯ ನಾಯಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

published on : 3rd December 2021

ಕಾಂಗ್ರೆಸ್ ಅಪಪ್ರಚಾರಕ್ಕೆ ಜನತೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಜೆಡಿಎಸ್‌  ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌  ನಾಯಕರು ಚುನಾವಣಾ ಸಮಯದಲ್ಲಿ ಮಾಡಿದ  ದುರುದ್ದೇಶಪೂರಿತ, ಸಲ್ಲದ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಸೂಕ್ತ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ. 

published on : 2nd November 2021

ಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ: ಕುಮಾರಸ್ವಾಮಿ

ಸಿದ್ದಕಲೆʼಯ ನಿಷ್ಣಾತರಿಗೆ ಹೊಸ ಕನಸು ಬಿದ್ದ ಹಾಗಿದೆ ಎಂದು ಹೇಳುವ ಮೂಲಕ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ  ವಾಗ್ದಾಳಿ ಮುಂದುವರೆಸಿದ್ದಾರೆ. 

published on : 10th October 2021

ಸಾರಿಗೆ ನೌಕರರ ಬಗ್ಗೆ ಹಗೆತನ ಬೇಡ: ಸರಣಿ 'ಕೂ' ಮಾಡಿದ ಕುಮಾರಸ್ವಾಮಿ

'ಕೋರೋನ ಮಹಾಮಾರಿಯಿಂದ ತತ್ತರಿಸಿರುವ ಕೆಎಸ್ಆರ್ ಟಿಸಿ ಮತ್ತು ಬಿಎಂಟಿಸಿ ನೌಕರರ ಮೇಲೆ ಸರಕಾರಕ್ಕೆ ಅನಾದರ ಏಕೆ? ಈ ನೌಕರರಿಗೆ ಅಗಸ್ಟ್ ತಿಂಗಳಲ್ಲಿ ಅರ್ಧ ಸಂಬಳವೇ ಆಗಿದ್ದು, ಸೆಪ್ಟೆಂಬರ್ ತಿಂಗಳ ಪೂರ್ಣ ಸಂಬಳ ಆಗಿಲ್ಲ ಎನ್ನುವ ಮಾಹಿತಿ ನನಗೆ ಬಂದಿದೆ' ಎಂದು ಎಚ್ ಡಿ ಕೆ ಸ್ವದೇಶಿ ಸಾಮಾಜಿಕ ಜಾಲತಾಣ 'ಕೂ' ನಲ್ಲಿ ಬರೆದುಕೊಂಡಿದ್ದಾರೆ. 

published on : 5th October 2021

ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆ: ಎಚ್ ಡಿಕೆ ತೀವ್ರ ಅಸಮಾಧಾನ

ಪಕ್ಷ ತೊರೆಯುವ ಬಗ್ಗೆ ಕೆಲ ಜೆಡಿಎಸ್ ಶಾಸಕರ ಬಹಿರಂಗ ಹೇಳಿಕೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 3rd October 2021

ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಸರತ್ತು: ಎಚ್ ಡಿಕೆ, ಅಶೋಕ್ ಭೇಟಿ; ಸೋಮವಾರ ಜೆಡಿಎಸ್ ಶಾಸಕಾಂಗ ಸಭೆ

ಕಲಬುರ್ಗಿ ಮಹಾನಗರ ಪಾಲಿಕೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿಗೆ ಮುಂದಾಗಿರುವಂತೆಯೇ, ಕಂದಾಯ ಸಚಿವ ಆರ್, ಅಶೋಕ್  ಇಂದು   ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

published on : 11th September 2021

ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ವೈಎಸ್ ವಿ ದತ್ತಾ ಆಕ್ಷೇಪ; ಭಾಷಾ ಪ್ರಯೋಗದ ಪಾಠ!

ಕೆ ಆರ್ ಎಸ್ ಡ್ಯಾಂಗೆ ಸಂಸದೆ ಸುಮಲತಾ ಅವರನ್ನು ಅಡ್ಡಡ್ಡ ಮಲಗಿಸಬೇಕೆಂಬ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಜೆಡಿಎಸ್ ಮುಖಂಡ ವೈ.ಸಿ.ವಿ.ದತ್ತಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 7th July 2021

ಬಿಡದಿ ತೋಟದ ಮನೆಯೇ ನನ್ನ ಖಾಯಂ ಆಸ್ತಿ: ಎಚ್.ಡಿ. ಕುಮಾರಸ್ವಾಮಿ

"ಬಿಡದಿಯ ತೋಟದ ಮನೆಯೇ ನನ್ನ ಖಾಯಂ ಆಸ್ತಿ. ಬದುಕಿರುವವರೆಗೂ ಇದೇ ನನ್ನ ಆಸ್ತಿ"ಹೀಗೆಂದು ಹೇಳಿದವರು ಬೇರೆ ಯಾರೂ ಅಲ್ಲ, ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ. ನಾನೀಗ ಬಿಡದಿ ತೋಟದ ಮನೆಯಲ್ಲಿಯೇ ಇದ್ದೇನೆ. ಯಾವುದೇ ವೆಸ್ಟ್ ಯಂಡ್ ಇಲ್ಲ, ರೈಟ್ ಯಂಡ್ ಇಲ್ಲ. ಈಗ ಯಾರೂ ದೂರಲು ಆಗುವುದಿಲ್ಲ ಎಂದಿದ್ದಾರೆ. 

published on : 2nd July 2021

ಹೆಸರು ಬದಲಾವಣೆ ಕೈಬಿಡಿ: ಕೇರಳ ಸಿಎಂಗೆ ಎಚ್ ಡಿಕೆ ಆಗ್ರಹ

ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

published on : 29th June 2021

ನೀರಾವರಿ ಯೋಜನೆಯಲ್ಲಿ 2000 ಕೋಟಿ ರೂ. ಕಿಕ್‌ಬ್ಯಾಕ್‌ ಆರೋಪ: ತನಿಖೆಗೆ ಎಚ್ ಡಿಕೆ ಆಗ್ರಹ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ  ವಿರುದ್ಧ ಸ್ವಪಕ್ಷೀಯರೇ 2000 ಕೋಟಿ ರೂ. ನೀರಾವರಿ ಕಿಕ್‌ಬ್ಯಾಕ್‌ ಆರೋಪ ಮಾಡಿದ್ದು, ಈ ಬಗ್ಗೆ ತನಿಖೆ ನಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

published on : 19th June 2021
1 2 3 > 

ರಾಶಿ ಭವಿಷ್ಯ