• Tag results for HD Devegowda

ಮರುಕಳಿಸಿದ 1994ರ ಇತಿಹಾಸ: ಚುನಾವಣೆಗೆ ಪರಸ್ಪರ ಆಸರೆಯಾದ ರಾಜಕೀಯ ಪಕ್ಷಗಳು!

ಈ ಬಾರಿಯ ರಾಜ್ಯಸಭೆ ಚುನಾವಣೆ ಸಂದರ್ಭ 1994ರಲ್ಲಿನ ರಾಜ್ಯ ರಾಜಕೀಯ ಪರಿಸ್ಥಿತಿಗೆ ಸಾಕಷ್ಟು ಹೋಲಿಕೆಯಾಗುತ್ತಿದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

published on : 10th June 2020

ಮನಸು ಗಟ್ಟಿಮಾಡಿ ರಾಜ್ಯಸಭೆಗೆ ಸ್ಪರ್ಧೆ: ಹೆಚ್.ಡಿ. ದೇವೇಗೌಡ

ಮನಸು ಗಟ್ಟಿಮಾಡಿ ರಾಜ್ಯಸಭೆಗೆ ಸ್ಪರ್ಧಿಸಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಅವರ ಒತ್ತಡಕ್ಕಾಗಿ ತಾವು ಸ್ಪರ್ಧಿಸದೇ ಪಕ್ಷದ ಶಾಸಕರ ಅಭಿಪ್ರಾಯಕ್ಕೆ ಮನ್ನಣೆಕೊಟ್ಟು ಜೂನ್ 5 ರಂದು ನಡೆದ ಶಾಸಕಾಂಗ ಪಕ್ಷದಲ್ಲಿ ಕೈಗೊಂಡ ತೀರ್ಮಾನದಂತೆ ಕಣಕ್ಕಿಳಿದಿದ್ದೇನೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

published on : 9th June 2020

ರಾಜ್ಯಸಭೆ ಚುನಾವಣೆ: ಸೋಲಿನ ಆತಂಕದಲ್ಲಿ ದೇವೇಗೌಡರು; ದೊಡ್ಡಗೌಡರ ನಡೆ ಇನ್ನೂ ನಿಗೂಢ!

ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆ ಚುನಾವಣಾ ಅಖಾಡ ಪ್ರವೇಶಿಸುವ ಅಸಕ್ತಿ ಹೊಂದಿರುವ ಗೌಡರು, ಚುನಾವಣಾ ಕಣ ಪ್ರವೇಶಿಸುವುದನ್ನು ಇನ್ನೂ ಖಚಿತಪಡಿಸಿಲ್ಲ. ವಿಧಾನಪರಿಷತ್ತಿನ ಚುನಾವಣೆ ಹಾಗೂ ರಾಜ್ಯಸಭೆ ಚುನಾವಣೆ ಎರಡೂ ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿವೆ. ಕಾಂಗ್ರೆಸ್ ಬೆಂಬಲವಿಲ್ಲದೇ ರಾಜ್ಯಸಭೆ ಪ್ರವೇಶಿಸುವುದು ಸುಲಭ ಸಾಧ್ಯವಲ್ಲ.

published on : 3rd June 2020

ಸೋನಿಯಾ ಗಾಂಧಿ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಭಾಗಿ!

ವಿಪಕ್ಷ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಭಾಗವಹಿಸಿದ್ದರು.

published on : 22nd May 2020

ಮರೆಯಾದ ವೈರತ್ವ: ಡಿಕೆ ಶಿವಕುಮಾರ್ ಜೊತೆ ಹುಟ್ಟುಹಬ್ಬದ ಊಟ ಸವಿದ ದೇವೇಗೌಡರು!

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೆಡಿಎಸ್ ಪರಮೋಚ್ಚ ನಾಯಕ ಎಚ್.ಡಿ ದೇವೇಗೌಡ ಈ ಬಾರಿ ಹುಟ್ಟುಹಬ್ಬ ಸರಳವಾಗಿ ಆಚರಿಸಿಕೊಂಡರು.  ಈ ಬಾರಿ ತಾವು ಹುಟ್ಟು ಹಬ್ಬ ಆಚರಿಸಿಕೊಳ್ಳುವುದಿಲ್ಲ, ಹೀಗಾಗಿ ಬೆಂಬಲಿಗರು ಮತ್ತು ಅಭಿಮಾನಿಗಳು ಮನೆ ಹತ್ತಿರ ಬರಬಾರದೆಂದು ದೇವೇಗೌಡರು  ಪತ್ರದ ಮೂಲಕ ಮನವಿ ಮಾಡಿದ್ದರು.

published on : 19th May 2020

ಹಣ್ಣು, ತರಕಾರಿ, ಹೂವು ಬೆಳೆದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು: ಎಚ್.ಡಿ. ದೇವೇಗೌಡ

ಲಾಕ್ ಡೌನ್ ನಿಂದಾಗಿ‌‌ ರಾಜ್ಯದಲ್ಲಿ ಹಣ್ಣು, ತರಕಾರಿ, ಹೂವು ಬೆಳೆದು ನಷ್ಟಗೊಂಡಿರುವ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಮಂತ್ರಿ ಎಚ್. ಡಿ. ದೇವೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ

published on : 27th April 2020

ಕೊರೋನಾ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ; ಪ್ರಧಾನಿ ನಿರ್ಧಾರಕ್ಕೆ ಬೆಂಬಲ: ಎಚ್.ಡಿ.ದೇವೇಗೌಡ

ಕೊರೋನಾ ವಿಷಯದಲ್ಲಿ ರಾಜಕಾರಣ ಮಾಡುವುದಿಲ್ಲ. ಇದರ ವಿರುದ್ಧ ಹೋರಾಡುತ್ತಿರುವ ಪ್ರಧಾನಿ‌ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ನಿರ್ಧಾರಗಳಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ

published on : 14th April 2020

ಕೋವಿಡ್‌-19 ಸಮಸ್ಯೆ ಮುಗಿದ ನಂತರ ಮತ್ತಷ್ಟು ಸಮಸ್ಯೆ: ದೇವೇಗೌಡ ಎಚ್ಚರಿಕೆ

ಕೋವಿಡ್‌-19 ಕಾಯಿಲೆ ಕತೆ ಮುಗಿದ ನಂತರ ಇದಕ್ಕಿಂತ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ. ನಮ್ಮ ರೈತರು ಬೀದಿಗೆ ಬೀಳಬೇಕಾದ ಸಂದರ್ಭ ಎದುರಾಗಬೇಕಾಗುತ್ತದೆ. ಆದ್ದರಿಂದ ಈಗಿನಿಂದಲೇ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಒತ್ತಾಯಿಸಿದ್ದಾರೆ.

published on : 13th April 2020

ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ ದೇವೇಗೌಡ: ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ

ಕೊರೋನಾ ಸೋಂಕಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಮ್ಮ ಪಿಂಚಣಿ ಹಣದಿಂದ 1 ಲಕ್ಷ ರೂ. ದೇಣಿಗೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.

published on : 12th April 2020

ಪ್ರಧಾನಿ ನಿಧಿ, ಕೇರಳ, ಕರ್ನಾಟಕ ಸಿಎಂ ಪರಿಹಾರ ನಿಧಿಗಳಿಗೆ ತಲಾ 1 ಲಕ್ಷ ರೂ. ನೀಡಿದ ದೇವೇಗೌಡ

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ತಮ್ಮ ಪಿಂಚಣಿಯ 3 ಲಕ್ಷ ರೂ. ಹಣವನ್ನು ನೀಡಿದ್ದಾರೆ.

published on : 11th April 2020

ಲಾಕ್‌ಡೌನ್‌ ಚಿಂತಿಸದೆ ತರಾತುರಿಯಲ್ಲಿ ತೆಗೆದುಕೊಂಡ ಆತುರದ ನಿರ್ಧಾರ: ದೇವೇಗೌಡ ಆಕ್ರೋಶ

ಲಾಕ್‌ಡೌನ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಇದು ಮುಂದಾಲೋಚನೆ ಇಲ್ಲದೆ ಸರಿಯಾಗಿ ಚಿಂತಿಸದೆ ತರಾತುರಿಯಲ್ಲಿ ತೆಗೆದುಕೊಂಡ ಆತುರದ ನಿರ್ಧಾರವಾಗಿದ. ಇದರಿಂದ ರೈತರು ಅತೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ/ದೇಶದಲ್ಲಿ ಆಹಾರ ಪದಾರ್ಥಗಳ ಅಭಾವವು ಉಂಟಾಗಿ ಜನ ದಂಗೆ ಏಳಬಹುದು ಎಂದು ಎಚ್ಚರಿಸಿದ್ದಾರೆ.

published on : 10th April 2020

ಐಕ್ಯತೆ ಪ್ರದರ್ಶನ ಓಕೆ, ಜೊತೆಗೆ ಕೊರೋನಾ ಸೋಂಕು ಪರೀಕ್ಷಾ ಕಿಟ್‌ಗಳನ್ನು ಹೆಚ್ಚೆಚ್ಚು ಒದಗಿಸಿ: ಮಾಜಿ ಪ್ರಧಾನಿ ದೇವೇಗೌಡ

ಇದೇ 5ರಂದು ರಾತ್ರಿ ದೀಪ ಆರಿಸಿ ಕೊರೋನಾ ವಿರುದ್ಧದ ಹೋರಾಟದಲ್ಲಿ ಐಕ್ಯತೆ ಪ್ರದರ್ಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವುದನ್ನು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸ್ವಾಗತಿಸಿದ್ದಾರೆ.

published on : 3rd April 2020

ಮಹಿಳಾ ಮೀಸಲಾತಿಗೆ ಆಗ್ರಹಿಸಿ ಶೀಘ್ರವೇ ದೆಹಲಿಯಲ್ಲಿ ಧರಣಿ: ದೇವೇಗೌಡ

ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವಂತೆ ಆಗ್ರಹಿಸಿ ಶೀಘ್ರವೇ ದೆಹಲಿಯ ಜಂತರ್ ಮಂಥರ್ ನಲ್ಲಿ ಧರಣಿ ಆರಂಭಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

published on : 9th March 2020

'ನಮ್ಮ ವಂಶಕ್ಕೆ ರಾಜಕೀಯ ಶಕ್ತಿ ಕೊಟ್ಟ ರಾಮನಗರದಿಂದಲೇ ನಿಖಿಲ್ ರಾಜಕೀಯ ಪುನರಾರಂಭ'

ಮಂಡ್ಯ ಲೋಕಸಭಾ ಚುನಾವಣೆ ಸೋಲಿನ ಕಹಿ ಬಳಿಕ ನಿಖಿಲ್​ ಕುಮಾರಸ್ವಾಮಿ ರಾಜಕೀಯ ಭವಿಷ್ಯ, ಈಗ ಮದುವೆ ಮೂಲಕ ರಾಮನಗರ ಕ್ಷೇತ್ರದಿಂದ ಪುನರ್​ ಆರಂಭವಾಗಲಿದೆ ಎಂದು ಜೆಡಿಎಸ್​ ವರಿಷ್ಠ ಎಚ್.ಡಿ.  ದೇವೇಗೌಡ ಭವಿಷ್ಯ ನುಡಿದಿದ್ದಾರೆ. 

published on : 4th March 2020

ರಾಜ್ಯಸಭೆ ಚುನಾವಣೆ ಸಂಬಂಧ ಸಭೆ: ಇಬ್ಬರು ಶಾಸಕರು ಗೈರು, ಆತಂಕದಲ್ಲಿ ಜೆಡಿಎಸ್ ವರಿಷ್ಠರು! 

ರಾಜ್ಯ ಸಭೆಗೆ ಜೆಡಿಎಸ್ ನಿಂದ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಭ್ಯರ್ಥಿಯಾಗಿದ್ದಾರೆ. ಒಂದು ವೇಳೆ ಜೆಡಿಎಸ್ ಪ್ಲಾನ್ ಕೈ ಕೊಟ್ಟರೇ ಬಹಳ ಹಿನ್ನಡೆಯಾಗುತ್ತದೆ.  

published on : 25th February 2020
1 2 3 4 5 6 >