• Tag results for HD Kumaraswamy

ಅಧಿವೇಶನಕ್ಕೆ ಸ್ಕಿಪ್: ಹಾಸನದ ರೆಸಾರ್ಟ್ ನಲ್ಲಿ ಕುಟುಂಬಸ್ಥರ ಜೊತೆ ಕುಮಾರಸ್ವಾಮಿ ರಿಲ್ಯಾಕ್ಸ್!

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹಾಸನದ ಹೊರವಲಯದ ರೆಸಾರ್ಟ್ ನಲ್ಲಿ ತಮ್ಮ ಕುಟುಂಬ ಸದಸ್ಯರ ಜೊತೆ ತಂಗಿದ್ದು, ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದಾರೆ. 

published on : 22nd September 2020

ಸಿದ್ಧರಾಮಯ್ಯ ಊಸರವಳ್ಳಿ ರಾಜಕಾರಣದ ನಿಜ ಬಣ್ಣ ಬಯಲು: ಎಚ್.ಡಿ.ಕುಮಾರಸ್ವಾಮಿ

ಅಧಿಕಾರದ ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಸಿದ್ದರಾಮಯ್ಯ ಅವರು 'ಜೆಡಿ ಎಸ್ ಅವಕಾಶವಾದಿ ಪಕ್ಷ' ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿ ಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯನ ವಿರುದ್ಧ ಲೇವಡಿ ಮಾಡಿದ್ದಾರೆ.

published on : 20th September 2020

ರೈತರ ತೀರ್ಮಾನದಂತೆ ಭೂಸ್ವಾಧೀನ ಕೈಬಿಡಿಸುವುದು ನನ್ನ ಹೊಣೆ: ಮಾಜಿ ಸಿಎಂ ಕುಮಾರಸ್ವಾಮಿ

ಕೈಗಾರಿಕೋಧ್ಯಮಕ್ಕಾಗಿ ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರೈತರ ಭೂಮಿಯನ್ನು ರೈತರಿಗೆ ಉಳಿಸಿಕೊಡುವುದು ನನ್ನ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ವಾಧೀನಕ್ಕೊಳಪಟ್ಟಿರುವ ಭೂಪ್ರದೇಶದ ರೈತರಿಗೆ ಭರವಸೆ ನೀಡಿದರು.

published on : 20th September 2020

ಕನ್ನಡಕ್ಕೆ ಹಿಂದಿಯಂತೆ ಸ್ಥಾನಮಾನ ತರಲು ಸಾಂವಿಧಾನಿಕ ತಿದ್ದುಪಡಿ ಅಗತ್ಯ: ಎಚ್ ಡಿ ಕುಮಾರಸ್ವಾಮಿ

ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರವನ್ನು ಆಗ್ರಹಿಸಿದ್ದಾರೆ.

published on : 17th September 2020

ಭಾರತ ಸಂಸ್ಕೃತಿ ಅಧ್ಯಯನಕ್ಕೆ ತಜ್ಞರ ಸಮಿತಿ ರಚನೆ: ದಕ್ಷಿಣ ರಾಜ್ಯಗಳ ತಜ್ಞರು, ಮಹಿಳೆಯರ ಕಡೆಗಣನೆ- ಕುಮಾರಸ್ವಾಮಿ ಪ್ರಶ್ನೆ

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.

published on : 16th September 2020

ಕೊಲಂಬೋ ಪ್ರವಾಸ ಮಾಡಿದ್ದುನಿಜ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ: ಕುಮಾರಸ್ವಾಮಿ

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ 'ಕೊಲಂಬೋ ಯಾತ್ರೆ' ಮಾಡಿರಲಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ

published on : 12th September 2020

ಕುಮಾರಸ್ವಾಮಿ ಜೊತೆ ರಾಜಕೀಯ ವಿಷಯದ ಚರ್ಚೆ ನಡೆದಿಲ್ಲ; ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ

ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ಯಾವುದೇ ರಾಜಕೀಯ ವಿಚಾರಗಳ ಚರ್ಚೆ ಆಗಲಿಲ್ಲ. ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಖಚಿತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 12th September 2020

ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಹೆಚ್.ಡಿ ಕುಮಾರಸ್ವಾಮಿ; ಕುತೂಹಲ ಮೂಡಿಸಿದ ಭೇಟಿ

ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ‌ ಬಳಿಕ ಇದೇ ಮೊದಲ‌ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ‌ ಮೂಡಿಸಿದೆ.

published on : 11th September 2020

ಊಸರವಳ್ಳಿಯಂತೆ ಕುಮಾರಸ್ವಾಮಿ ಪದೇ ಪದೇ ಬಣ್ಣ ಬದಲಾಯಿಸುತ್ತಿರುತ್ತಾರೆ: ಕೃಷಿ ಸಚಿವ ಬಿಸಿ ಪಾಟೀಲ್ ಟೀಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಊಸರವಳ್ಳಿಯಂತೆ ಪದೇ ಪದೇ ಬಣ್ಣ ಬದಲಾಯಿಸುತ್ತಿರುತ್ತಾರೆ ಎಂದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟೀಕಿಸಿದರು.

published on : 8th September 2020

ಡ್ರಗ್ಸ್ ವಿಚಾರ: ಕುಮಾರಸ್ವಾಮಿಯನ್ನು ಮೊದಲಿಗೆ ವಿಚಾರಣೆಗೊಳಪಡಿಸಿ - ಪ್ರಮೋದ್ ಮುತಾಲಿಕ್

ಡ್ರಗ್ಸ್ ಆರೋಪ ವಿಚಾರದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆಗೊಳಪಡಿಸಿದಂತೆ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ.

published on : 3rd September 2020

ರಾಜ್ಯ ಹಣಕಾಸು ಸ್ಥಿತಿಯ ಶ್ವೇತಪತ್ರ ಹೊರಡಿಸಿ: ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಹಣಕಾಸು ಸ್ಥಿತಿಯ ಕುರಿತು ರಾಜ್ಯ ಸರ್ಕಾರ ಶೀಘ್ರಗತಿಯಲ್ಲಿ ಶ್ವೇತಪತ್ರ ಹೊರಡಿಸಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ. 

published on : 2nd September 2020

ಮಾಜಿ ಸಿಎಂ  ಎಚ್.ಡಿ ಕುಮಾರಸ್ವಾಮಿ ಮತ್ತಿನಲ್ಲಿ ಹೇಳಿಕೆ ನೀಡಿದ್ದಾರಾ? ಸಿ.ಟಿ ರವಿ ತಿರುಗೇಟು!

ಡ್ರಗ್ಸ್‌ ಮಾಫಿಯಾದ ಹಣದಿಂದ ಸಮ್ಮಿಶ್ರ ಸರ್ಕಾರ ಪತನವಾಗಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

published on : 1st September 2020

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ?

ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 1೫ ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? 

published on : 1st September 2020

“ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ'

ಕೊಟ್ಟವ ಕೋಡಂಗಿ; ಇಸ್ಕೊಂಡವ ಈರಭದ್ರ” ಎಂಬಂತೆ ರಾಜ್ಯ ಸರ್ಕಾರಗಳು ಕಣ್ಣುಬಾಯಿ ಬಿಡುತ್ತಿವೆ. ಈಗ ಕೊರೊನಾ ನೆಪ ಮುಂದಿಟ್ಟು ಅನ್ಯಾಯ ಮಾಡಿಬಿಟ್ಟರೆ ರಾಜ್ಯಸರ್ಕಾರಗಳು ಏನು ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ

published on : 29th August 2020

ರಾಯಣ್ಣ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ: ಹೆಚ್‌ಡಿ ಕುಮಾರಸ್ವಾಮಿ

ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.

published on : 28th August 2020
1 2 3 4 5 6 >