• Tag results for HD kumaraswamy

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಕಣಕ್ಕೆ; ಕಾಂಗ್ರೆಸ್- ಬಿಜೆಪಿಗೆ ಬೆಂಬಲವಿಲ್ಲ: ಎಚ್ ಡಿಕೆ

ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಜೆಡಿಎಸ್ ಸಮಾನ ಅಂತರ ಕಾಯ್ದುಕೊಳ್ಳಲಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 18th May 2022

ಮಿತ್ರಪಕ್ಷಗಳನ್ನೇ ನುಂಗಿಹಾಕುವುದು ಸೈದ್ಧಾಂತಿಕ ರಾಜಕಾರಣವಾ? ಕಾಂಗ್ರೆಸ್ 10 ವರ್ಷ ಅಧಿಕಾರದ ಸುಖ ಅನುಭವಿಸಿದ್ದು ಪ್ರಾದೇಶಿಕ ಪಕ್ಷಗಳ ದಾಕ್ಷಿಣ್ಯದಿಂದ!

ಮೈತ್ರಿ ಸರ್ಕಾರ ಮಾಡೋಣ ಎಂದು ಮನೆ ಬಾಗಿಲಿಗೆ ಬಂದು, ಸರ್ಕಾರವನ್ನು ಮಾಡಿ ಹಿಂಬಾಗಿಲಿನಿಂದ ಆಪರೇಷನ್‌ ಕಮಲವೆಂಬ ಅನೈತಿಕ ರಾಜಕಾರಣಕ್ಕೆ ʼಕೈʼಜೋಡಿಸಿದ್ದು ಸೈದ್ಧಾಂತಿಕ ಬದ್ಧತೆಯಾ?

published on : 16th May 2022

ಡಿಜಿಪಿ ರವೀಂದ್ರನಾಥ್‌ ರಾಜಿನಾಮೆ ಅಂಗೀಕರಿಸಬೇಡಿ: ಹೆಚ್ ಡಿ ಕುಮಾರಸ್ವಾಮಿ

ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಯಮಬಾಹಿರ ವರ್ಗಾವಣೆ ಮಾಡಿದ್ದರಿಂದ ಬೇಸತ್ತು ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಅವರು ನೀಡಿರುವ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 11th May 2022

ಬಿ.ಎಲ್ ಶಂಕರ್ ಕಾಂಗ್ರೆಸ್ ಗೆ ಹೋಗಿ ಏನಾದ್ರು? ಪಕ್ಷಕ್ಕೆ ಡ್ಯಾಮೇಜ್ ಮಾಡಲು ಹೋದರೆ ಅವರೇ ಬೀದಿಪಾಲಾಗುತ್ತಾರೆ: ಎಚ್ ಡಿಕೆ

ಹಣ ಇದ್ದವರಿಗೆ ಮಣೆ ಹಾಕಲಾಗುತ್ತಿದೆ ಎಂಬ ಮರಿತಿಬ್ಬೇಗೌಡ ಆರೊಪ ವಿಚಾರವಾಗಿ ಮಾತನಾಡಿದ ಅವರು ಪಕ್ಷವನ್ನ ಉಳಿಸಲು ನಾವು ಹಲವು ಭಾರಿ ತಲೆ ಕೊಟ್ಟಿದ್ದೇವೆ. ಮರಿತಿಬ್ಬೇಗೌಡ ಮಾತನಾಡಿರೋದನ್ನ ಗಮನಿಸಿದ್ದೇನೆ. ನಮ್ಮ‌ಪಕ್ಷಕ್ಕೆ ಅವರು ಎಷ್ಟು ಹಣ ಸಂದಾಯ ಮಾಡಿದ್ದಾರೆ.

published on : 10th May 2022

ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದಾರೆ, ಸಂಘಟನೆ ನಿಷೇಧಿಸಿ: ಎಚ್ ಡಿ ಕುಮಾರಸ್ವಾಮಿ ಆಕ್ರೋಶ

ಬೆಳಗಾವಿ ವಿಚಾರವಾಗಿ ಬಿಜೆಪಿ ಸರ್ಕಾರದ ಅಸಡ್ಡೆಯಿಂದ ಎಂಇಎಸ್ ಪುಂಡರು ಮತ್ತೆ ಬಾಲ ಬಿಚ್ಚಿದ್ದು, ಕೂಡಲೇ ಆ ಸಂಘಟನೆಯನ್ನು ನಿಷೇಧಿಸಬೇಕು ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

published on : 2nd May 2022

ಮಹಾರಾಷ್ಟ್ರದಲ್ಲೂ ಕನ್ನಡ ಭಾಷಿಕರಿದ್ದಾರೆ; ಚೀನಾ ಮನಃಸ್ಥಿತಿಯಿಂದ ಅಜಿತ್‌ ಪವಾರ್‌ ಹೊರಬರಲಿ: ಹೆಚ್ ಡಿ ಕುಮಾರಸ್ವಾಮಿ ತಿರುಗೇಟು

ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಕರ್ನಾಟಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. 

published on : 1st May 2022

ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿ

ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಕಿಡಿಕಾರಿದ್ದಾರೆ.

published on : 28th April 2022

ಹಾಲು ಒಕ್ಕೂಟದ ‌ನೇಮಕಾತಿಯಲ್ಲೂ ಭಾರಿ ಭ್ರಷ್ಟಾಚಾರ: ಒಂದು ಹುದ್ದೆಗೆ 25 ರಿಂದ 50 ಲಕ್ಷ ರೂ. ಲಂಚ: ಕುಮಾರಸ್ವಾಮಿ

ಪಿಎಸ್‌ಐ ನೇಮಕಾತಿಯಲ್ಲಿ ಅಷ್ಟೇ ಅಲ್ಲ, ಹಾಲು ಒಕ್ಕೂಟದಲ್ಲಿ ಪ್ರತಿಯೊಂದು ಹುದ್ದೆಯ ನೇಮಕಾತಿಯಲ್ಲೂ ಭಾರಿ ಭ್ರಷ್ಟಾಚಾರ ನಡೆಯುತ್ತದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

published on : 23rd April 2022

ಕರ್ನಾಟಕದಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ: ಹೆಚ್‌ಡಿಕೆ ಭರವಸೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಕುಟುಂಬದಲ್ಲಿ ಒಬ್ಬರಿಗೆ ಉದ್ಯೋಗ ನೀಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭರವಸೆ ನೀಡಿದ್ದಾರೆ.

published on : 23rd April 2022

ಹಾಸನದಲ್ಲಿ ಜೆಡಿಎಸ್ ಜನತಾ ಜಲಧಾರೆ: ಇಬ್ಬರು ಶಾಸಕರ ಗೈರು, ಹೆಚ್'ಡಿಕೆ, ಹೆಚ್'ಡಿಡಿ ಅಸಮಾಧಾನ

ಜೆಡಿಎಸ್ ಪಕ್ಷದ ಜನತಾ ಜಲಧಾರೆ ಸಮಾವೇಶಕ್ಕೆ ಗೈರು ಹಾಜರಾಗಿದ್ದ ಇಬ್ಬರು ಶಾಸಕರ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ.

published on : 22nd April 2022

ಈಶ್ವರಪ್ಪ ಪ್ರಕರಣ ಮುಗಿದ ಅಧ್ಯಾಯ, ಬಂಧನದ ಅಗತ್ಯವೇನಿದೆ?: ಹೆಚ್​.ಡಿ. ಕುಮಾರಸ್ವಾಮಿ

ಈಶ್ವರಪ್ಪ ಪ್ರಕರಣ ಈಗ ಮುಗಿದ ಅಧ್ಯಾಯವಾಗಿದ್ದು, ಕಾಂಗ್ರೆಸ್ ಅವರ ಬಂಧನಕ್ಕೆ ಆಗ್ರಹಿಸುತ್ತಿದೆ.. ಆದರೆ ಅಗತ್ಯವೇನಿದೆ? ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 17th April 2022

ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ: ಹೆಚ್.ಡಿ.ಕುಮಾರಸ್ವಾಮಿ

ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಕಹಿ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ಕರ್ನಾಟಕದ ಶಾಂತಿ, ಸಾಮರಸ್ಯ ಹಾಳು ಮಾಡುವ ದುಷ್ಪ್ರಯತ್ನಗಳು ಕಳವಳಕಾರಿ. ಧರ್ಮ ಧರ್ಮಗಳ ನಡುವೆ ಬೆಂಕಿ ಹಾಕಿ ಬೇಳೆ ಬೇಯಿಸಿಕೊಳ್ಳುವ ಕೆಟ್ಟ ಪ್ರವೃತ್ತಿ ಸರಿಯಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಹೇಳಿದ್ದಾರೆ.

published on : 17th April 2022

ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ನಿಂದ ದಲಿತ ಸಿಎಂ ಮಾಡುವೆ: ಎಚ್‌ಡಿಕೆ ಭಾವುಕ ನುಡಿ

ಜೆಡಿಎಸ್‌ ಪಕ್ಷದಿಂದ ನನ್ನ ಜೀವಿತಾವಧಿಯೊಳಗೆ ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 15th April 2022

ಈಶ್ವರಪ್ಪ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ, ಮೊದಲು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಎಚ್‌ಡಿಕೆ

ಸಚಿವ ಕೆ.ಎಸ್.ಈಶ್ವರಪ್ಪ ಅವರ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ತಾವು ಹೊಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

published on : 14th April 2022

ಪಂಚ ರಾಜ್ಯ ಚುನಾವಣೆಗಳಲ್ಲಿ ಜನರಿಂದ ರಾಷ್ಟ್ರೀಯ ಪಕ್ಷ ತಿರಸ್ಕಾರ: ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್!

ರಾಜ್ಯದಲ್ಲಿ ಜೆಡಿಎಸ್ ಅನಿವಾರ್ಯ ಎಂಬ ಟ್ರೆಂಡ್ ಇದೀಗ ಸೃಷ್ಟಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 13th April 2022
1 2 3 4 5 6 > 

ರಾಶಿ ಭವಿಷ್ಯ